Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 11:23 - ಪರಿಶುದ್ದ ಬೈಬಲ್‌

23-24 ಬಾರ್ನಬನು ಒಳ್ಳೆಯ ಮನುಷ್ಯನಾಗಿದ್ದನು. ಅವನು ಪವಿತ್ರಾತ್ಮಭರಿತನಾಗಿದ್ದನು ಮತ್ತು ಪೂರ್ಣನಂಬಿಕೆಯುಳ್ಳವನಾಗಿದ್ದನು. ಬಾರ್ನಬನು ಅಂತಿಯೋಕ್ಯಕ್ಕೆ ಹೋದಾಗ, ದೇವರು ಆ ಜನರನ್ನು ಅಧಿಕವಾಗಿ ಆಶೀರ್ವದಿಸಿರುವುದನ್ನು ಕಂಡನು. ಇದರಿಂದ ಬಾರ್ನಬನಿಗೆ ತುಂಬಾ ಸಂತೋಷವಾಯಿತು. ಅಂತಿಯೋಕ್ಯದಲ್ಲಿದ್ದ ವಿಶ್ವಾಸಿಗಳನ್ನೆಲ್ಲ ಅವನು ಪ್ರೋತ್ಸಾಹಿಸಿದನು. ಅವನು ಅವರಿಗೆ, “ನಿಮ್ಮ ನಂಬಿಕೆಯನ್ನು ಎಂದಿಗೂ ಕಳೆದುಕೊಳ್ಳಬೇಡಿ. ಪ್ರಭುವಿಗೆ ನಿಮ್ಮ ಪೂರ್ಣಹೃದಯಗಳಿಂದ ಯಾವಾಗಲೂ ವಿಧೇಯರಾಗಿರಿ” ಎಂದು ಹೇಳಿದನು. ಅನೇಕ ಜನರು ಪ್ರಭುವಾದ ಯೇಸುವಿನ ಹಿಂಬಾಲಕರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅವನು ಒಳ್ಳೆಯವನೂ, ಪವಿತ್ರಾತ್ಮ ಭರಿತನೂ, ನಂಬಿಕೆಯಿಂದ ತುಂಬಿದವನೂ ಆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಬಾರ್ನಬನು ಅಲ್ಲಿಗೆ ಬಂದು ದೇವರ ಕೃಪಾಕಾರ್ಯವನ್ನು ಕಂಡು ಸಂತೋಷಪಟ್ಟನು. ಪ್ರಭುವಿಗೆ ದೃಢಮನಸ್ಸಿನಿಂದ ಪ್ರಾಮಾಣಿಕರಾಗಿರುವಂತೆ ಪ್ರೋತ್ಸಾಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23-24 ಅವನು ಒಳ್ಳೆಯವನೂ ಪವಿತ್ರಾತ್ಮಭರಿತನೂ ನಂಬಿಕೆಯಿಂದ ತುಂಬಿದವನೂ ಆಗಿದ್ದನು. ಆದಕಾರಣ ಅಲ್ಲಿಗೆ ಬಂದು ದೇವರ ಕೃಪಾಕಾರ್ಯವನ್ನು ನೋಡಿದಾಗ ಸಂತೋಷಪಟ್ಟು - ನೀವು ದೃಢಮನಸ್ಸಿನಿಂದ ಕರ್ತನಲ್ಲಿ ನೆಲೆಗೊಂಡಿರ್ರಿ ಎಂದು ಅವರೆಲ್ಲರಿಗೆ ಬುದ್ಧಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅವನು ಅಲ್ಲಿಗೆ ಬಂದು ದೇವರ ಕೃಪೆಯನ್ನು ಕಂಡು ಹರ್ಷಭರಿತನಾಗಿ, ಅವರೆಲ್ಲರೂ ಕರ್ತನಿಗೆ ಹೃದಯಪೂರ್ವಕವಾಗಿ ಭಯಭಕ್ತಿ ಉಳ್ಳವರಾಗಿರಬೇಕೆಂದು ಅವರನ್ನು ಪ್ರೋತ್ಸಾಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಬಾರ್ನಾಬಾಸ್ ಅಂತಿಯೊಕಾಕ್ ಪಾವಲ್ಯಾ ತನ್ನಾ ದೆವಾನ್ ತ್ಯಾ ಲೊಕಾಕ್ನಿ ಲೈ ಆಶಿರ್ವಾದ್ ಕರಲ್ಲೆ ಬಗಟ್ಲ್ಯಾನ್, ಹೆಚ್ಯಾ ವೈನಾ ತೆಕಾ ಲೈ ಖುಶಿ ಹೊಲಿ, ಅನಿ ತೆನಿ ಅಂತಿಯೊಕ್ಯಾತ್ ಹೊತ್ತ್ಯಾ ದೆವಾಚ್ಯಾ ಲೊಕಾಕ್ನಿ ಸಗ್ಳೆ ಪುರಾ ಮನಾನಿ ಧನಿಯಾಚೆರ್ ವಿಶ್ವಾಸಾನ್ ವಾಡ್ವಳ್ಕಿ ಹೊಯ್ ಸಾರ್ಕೆ ಉಮ್ಮೆದ್ ಭರ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 11:23
37 ತಿಳಿವುಗಳ ಹೋಲಿಕೆ  

ಆದ್ದರಿಂದ, ನನ್ನ ಪ್ರಿಯ ಸಹೋದರ ಸಹೋದರಿಯರೇ, ದೃಢವಾಗಿರಿ, ನಿಶ್ಚಲರಾಗಿರಿ. ಪ್ರಭುವಿನ ಸೇವೆಗಾಗಿ ನಿಮ್ಮನ್ನು ಯಾವಾಗಲೂ ಸಂಪೂರ್ಣವಾಗಿ ಪ್ರತಿಷ್ಠಿಸಿಕೊಳ್ಳಿರಿ. ನೀವು ಪ್ರಭುವಿಗಾಗಿ ಪಡುವ ಪ್ರಯಾಸವು ಎಂದಿಗೂ ವ್ಯರ್ಥವಾಗುವುದಿಲ್ಲ.


ಯೇಸುವಿನ ಶಿಷ್ಯರನ್ನು ಬಲಗೊಳಿಸಿ, ನಂಬಿಕೆಯಲ್ಲಿ ದೃಢವಾಗಿರಲು ಅವರಿಗೆ ಪ್ರೋತ್ಸಾಹಿಸಿದರು, “ನಾವು ದೇವರ ರಾಜ್ಯಕ್ಕೆ ಅನೇಕ ಕಷ್ಟಗಳ ಮೂಲಕ ಹೋಗಬೇಕಾಗಿದೆ” ಎಂದು ಬೋಧಿಸಿದರು.


ಸಭೆಯು ಮುಗಿದ ಮೇಲೆ ಅನೇಕ ಯೆಹೂದ್ಯರು ಪೌಲ ಬಾರ್ನಬರನ್ನು ಆ ಸ್ಥಳದಿಂದ ಹಿಂಬಾಲಿಸಿದರು. ಯೆಹೂದ್ಯರ ಧರ್ಮಕ್ಕೆ ಸೇರಿಕೊಂಡಿದ್ದ ಅನೇಕ ಅನ್ಯಮತೀಯರೂ ಆ ಯೆಹೂದ್ಯರೊಂದಿಗಿದ್ದರು. ಮತಾಂತರಗೊಂಡಿದ್ದ ಇವರು ಸಹ ನಿಜದೇವರನ್ನು ಆರಾಧಿಸುತ್ತಿದ್ದರು. ಪೌಲ ಬಾರ್ನಬರು ಅವರೊಂದಿಗೆ ಮಾತಾಡಿ, ದೇವರ ಕೃಪೆಯಲ್ಲೇ ಭರವಸವಿಟ್ಟು ಮುಂದುವರಿಯಬೇಕೆಂದು ಪ್ರೋತ್ಸಾಹಪಡಿಸಿದರು.


ಹೌದು, ನನ್ನ ಪ್ರಿಯ ಮಕ್ಕಳೇ, ಆತನಲ್ಲಿಯೇ ನೆಲೆಗೊಂಡಿರೋಣ. ನಾವು ಹೀಗೆ ಮಾಡಿದರೆ, ಕ್ರಿಸ್ತನು ಮರಳಿ ಬರುವ ದಿನದಂದು ನಾವು ಭಯಪಡಬೇಕಾಗಿಲ್ಲ; ಅಡಗಿಕೊಳ್ಳುವ ಅಗತ್ಯವಿರುವುದಿಲ್ಲ; ನಾಚಿಕೆಪಡುವ ಅಗತ್ಯವೂ ಇರುವುದಿಲ್ಲ.


ಆದರೆ ನನ್ನನ್ನು ಕುರಿತು ನಿನಗೆ ಎಲ್ಲವೂ ತಿಳಿದಿದೆ. ನನ್ನ ಬೋಧನೆ, ನಡತೆ, ಉದ್ದೇಶ, ನಂಬಿಕೆ, ತಾಳ್ಮೆ, ಪ್ರೀತಿ, ಸೈರಣೆ ನಿನಗೆ ತಿಳಿದಿವೆ.


ನಾನು ನನ್ನ ಸ್ವಂತ ಪ್ರಾಣದ ಬಗ್ಗೆ ಚಿಂತಿಸುವುದಿಲ್ಲ. ಪ್ರಭುವಾದ ಯೇಸು ನನಗೆ ಕೊಟ್ಟಿರುವ ಕೆಲಸವನ್ನು ಪೂರೈಸುವುದೇ ನನಗೆ ಅತ್ಯಂತ ಮುಖ್ಯವಾಗಿದೆ. ದೇವರ ಕೃಪೆಯ ವಿಷಯವಾದ ಸುವಾರ್ತೆಯ ಬಗ್ಗೆ ಸಾಕ್ಷಿ ನೀಡುವುದೇ ನನ್ನ ಕೆಲಸವಾಗಿದೆ. ಆ ಕೆಲಸವನ್ನು ಮಾಡಿ ಪೂರೈಸುವುದೇ ನನ್ನ ಅಪೇಕ್ಷೆಯಾಗಿದೆ.


ನನ್ನ ಮಕ್ಕಳು ಸತ್ಯಮಾರ್ಗದಲ್ಲಿ ನಡೆಯುತ್ತಿದ್ದಾರೆ ಎಂಬುದನ್ನು ಕೇಳುವಾಗಲೆಲ್ಲಾ ನನಗೆ ಬಹಳ ಸಂತೋಷವಾಗುತ್ತದೆ.


ಅಲ್ಲಿಂದ ಅವರು ಸಿರಿಯಾದ ಅಂತಿಯೋಕ್ಯಕ್ಕೆ ನೌಕಾಯಾನ ಮಾಡಿದರು. ಈವರೆಗೆ ಮಾಡಿಮುಗಿಸಿದ್ದ ಸೇವಾಕಾರ್ಯಕ್ಕಾಗಿ ದೇವರ ಕೈಗೆ ಒಪ್ಪಿಸಿ ಕಳುಹಿಸಿಕೊಟ್ಟಿದ್ದವರು ಈ ಪಟ್ಟಣದ ವಿಶ್ವಾಸಿಗಳೇ.


ನಿಮ್ಮ ದೇವರಾದ ಯೆಹೋವನನ್ನೇ ಅನುಸರಿಸಿಕೊಂಡಿರಿ. ಈವರೆಗೆ ನೀವು ಹೇಗಿದ್ದಿರೋ ಅದೇ ರೀತಿಯಲ್ಲಿ ಮುಂದೆಯೂ ಇರಿ.


ನೀವು ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ ಆತನಿಗೆ ವಿಧೇಯರಾಗಬೇಕು. ಯೆಹೋವನು ನಿಮ್ಮ ಜೀವವಾಗಿದ್ದಾನೆ. ನಿಮ್ಮ ಪೂರ್ವಿಕರಾದ ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ಕೊಡುವುದಾಗಿ ವಾಗ್ದಾನ ಮಾಡಿದ್ದ ದೇಶದಲ್ಲಿ ನಿಮಗೆ ದೀರ್ಘವಾದ ಆಯುಷ್ಯನ್ನು ಅನುಗ್ರಹಿಸುತ್ತಾನೆ.”


“ನೀವು ನಿಮ್ಮ ದೇವರಾದ ಯೆಹೋವನನ್ನು ಗೌರವಿಸಿ ಆತನೊಬ್ಬನನ್ನೇ ಆರಾಧಿಸಬೇಕು. ಆತನನ್ನು ಬಿಟ್ಟು ತೊಲಗದಿರಿ. ವಾಗ್ದಾನ, ಒಡಂಬಡಿಕೆಗಳನ್ನು ಮಾಡುವಾಗ ಆತನ ಹೆಸರಿನಲ್ಲಿಯೇ ಮಾಡಿರಿ.


ನೀವು ನನ್ನಲ್ಲಿ ನೆಲೆಗೊಂಡಿರಿ, ಆಗ ನಾನೂ ನಿಮ್ಮಲ್ಲಿ ನೆಲೆಗೊಂಡಿರುವೆನು. ಯಾವ ಕವಲೂ ತನ್ನಷ್ಟಕ್ಕೆ ತಾನೇ ಫಲಕೊಡಲಾರದು. ಅದು ದ್ರಾಕ್ಷಿಬಳ್ಳಿಯಲ್ಲಿ ನೆಲೆಗೊಂಡಿರಬೇಕು. ಇದು ನಿಮಗೂ ಅನ್ವಯಿಸುತ್ತದೆ. ನೀವು ನಿಮ್ಮಷ್ಟಕ್ಕೇ ಫಲಕೊಡಲಾರಿರಿ. ನೀವು ನನ್ನಲ್ಲಿ ನೆಲೆಗೊಂಡಿರಬೇಕು.


ಬಳಿಕ ಯೇಸು ತನ್ನ ಶಿಷ್ಯರಿಗೆ, “ನನ್ನನ್ನು ಹಿಂಬಾಲಿಸಲು ಅಪೇಕ್ಷಿಸುವವನು ತನಗೆ ಇಷ್ಟವಾದದ್ದನ್ನು ತ್ಯಜಿಸಬೇಕು. ಅವನು ತನಗೆ ಕೊಟ್ಟಿರುವ ಶಿಲುಬೆಯನ್ನು (ಸಂಕಟ) ಸ್ವೀಕರಿಸಿಕೊಂಡು ನನ್ನನ್ನು ಹಿಂಬಾಲಿಸಬೇಕು.


ಆದರೆ ಮೋಶೆಯು ನಿಮಗೆ ಕೊಟ್ಟ ಧರ್ಮೋಪದೇಶವನ್ನು ಮತ್ತು ವಿಧಿಗಳನ್ನು ಪಾಲಿಸಬೇಕೆಂಬುದನ್ನು ಜ್ಞಾಪಕದಲ್ಲಿಡಿ. ನೀವು ನಿಮ್ಮ ದೇವರಾದ ಯೆಹೋವನನ್ನು ನಿಮ್ಮ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪ್ರೀತಿಸಬೇಕು ಮತ್ತು ಆತನ ಸೇವೆ ಮಾಡಬೇಕು. ನೀವು ಆತನನ್ನು ಅನುಸರಿಸುತ್ತಾ ನಿಮ್ಮಿಂದ ಸಾಧ್ಯವಾದಷ್ಟು ಆತನ ಸೇವೆ ಮಾಡಬೇಕು” ಎಂದು ಹೇಳಿದನು.


ನಾನು ಆ ಯೋಜನೆಗಳನ್ನು ಮಾಡಿದಾಗ ನಿಮ್ಮ ಬಳಿಗೆ ಬರುವ ಉದ್ದೇಶ ನಿಜವಾಗಿಯೂ ನನಗಿರಲಿಲ್ಲವೆಂದು ಯೋಚಿಸುತ್ತೀರಾ? ನಾನು ಪ್ರಾಪಂಚಿಕರಂತೆ ಯೋಜನೆಗಳನ್ನು ಮಾಡಿದೆನೋ? ಅವರಾದರೋ ಯೋಜನೆಗಳನ್ನು ಮಾಡುವಾಗ “ಹೌದು, ಹೌದು” ಎಂತಲೂ ಅದೇ ಸಮಯದಲ್ಲಿ “ಇಲ್ಲ, ಇಲ್ಲ” ಎಂತಲೂ ಹೇಳುತ್ತಾರೆ.


“ಈಗ ನಾನು ನಿಮ್ಮನ್ನು ದೇವರಿಗೂ ಆತನ ಕೃಪಾವಾಕ್ಯಕ್ಕೂ ಒಪ್ಪಿಸಿಕೊಡುತ್ತಿದ್ದೇನೆ. ಆತನ ಕೃಪಾವಾಕ್ಯವು ನಿಮ್ಮ ಭಕ್ತಿಯನ್ನು ವೃದ್ಧಿಪಡಿಸಿ ಪರಿಶುದ್ಧರ ಬಾಧ್ಯತೆಯಲ್ಲಿ ಪಾಲುಗಾರರನ್ನಾಗಿ ಮಾಡುವುದು.


ಪೌಲನು ತನ್ನೊಂದಿಗೆ ಸೀಲನನ್ನು ಕರೆದುಕೊಂಡು ಹೋದನು. ಅಂತಿಯೋಕ್ಯದ ಸಹೋದರರು ಪೌಲನನ್ನು ಪ್ರಭುವಿನ ಆಶ್ರಯಕ್ಕೆ ಒಪ್ಪಿಸಿ ಕಳುಹಿಸಿಕೊಟ್ಟರು.


ಈ ಜನರ ದೊಡ್ಡ ನಂಬಿಕೆಯನ್ನು ಕಂಡ ಯೇಸು ರೋಗಿಗೆ, “ಯುವಕನೇ, ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಎಂದು ಹೇಳಿದನು.


ದಾನಿಯೇಲನು ಅರಸನ ಪುಷ್ಟಿದಾಯಕ ಆಹಾರವನ್ನು ಮತ್ತು ಪಾನೀಯವನ್ನು ಇಷ್ಟಪಡಲಿಲ್ಲ. ಆ ಆಹಾರ ಮತ್ತು ಪಾನೀಯಗಳಿಂದ ತನ್ನನ್ನು ಅಶುದ್ಧಗೊಳಿಸಿಕೊಳ್ಳಲು ದಾನಿಯೇಲನಿಗೆ ಇಷ್ಟವಿರಲಿಲ್ಲ. ಆದ್ದರಿಂದ ಈ ರೀತಿ ತನ್ನನ್ನು ಅಶುದ್ಧಗೊಳಿಸಿಕೊಳ್ಳದೆ ಇರುವದಕ್ಕಾಗಿ ಅಶ್ಪೆನಜನ ಅಪ್ಪಣೆಯನ್ನು ಕೇಳಿದನು.


ಕೆಟ್ಟಹೆಂಗಸು ಕಳ್ಳನಂತೆ ನಿನಗಾಗಿ ಕಾದಿರುವಳು. ಅನೇಕ ಗಂಡಸರ ಪಾಪಕ್ಕೆ ಅವಳೇ ಕಾರಣ.


ನನ್ನ ಮಗನೇ, ನೀನು ಜ್ಞಾನಿಯಾಗಿದ್ದರೆ, ನನಗೆ ಬಹು ಸಂತೋಷ.


ನೀನು ನನ್ನ ಅಂತರಾಳವನ್ನು ರಾತ್ರಿಯೆಲ್ಲಾ ಪರೀಕ್ಷಿಸಿರುವೆ. ನೀನು ನನ್ನನ್ನು ಪುಟಕ್ಕೆ ಹಾಕಿ ಶೋಧಿಸಿದಾಗ ನನ್ನಲ್ಲಿ ಯಾವ ದೋಷವೂ ಕಂಡುಬರಲಿಲ್ಲ. ನಾನು ಯಾವ ತಪ್ಪನ್ನೂ ಮಾಡಿರಲಿಲ್ಲ.


ಆ ವಿಶ್ವಾಸಿಗಳಲ್ಲಿ ಯೋಸೇಫ ಎಂಬವನೂ ಇದ್ದನು. ಅಪೊಸ್ತಲರು ಅವನನ್ನು ಬಾರ್ನಬ ಎಂದು ಕರೆಯುತ್ತಿದ್ದರು. (ಬಾರ್ನಬ ಅಂದರೆ “ಧೈರ್ಯದಾಯಕ.”) ಸೈಪ್ರಸ್‌ನಲ್ಲಿ ಹುಟ್ಟಿದ ಇವನು ಲೇವಿಯನಾಗಿದ್ದನು.


ಉಪದೇಶಮಾಡುವ ವರವನ್ನು ಹೊಂದಿರುವವನು ಉಪದೇಶ ಮಾಡಬೇಕು. ಸಂತೈಸುವ ವರವನ್ನು ಹೊಂದಿರುವವನು ಬೇರೆಯವರನ್ನು ಸಂತೈಸಬೇಕು. ದಾನಮಾಡುವ ವರವನ್ನು ಹೊಂದಿರುವವನು ಉದಾರವಾಗಿ ಕೊಡಬೇಕು. ನಾಯಕತ್ವದ ವರವನ್ನು ಹೊಂದಿರುವವನು ನಾಯಕತ್ವವನ್ನು ವಹಿಸಿಕೊಂಡಿರುವಾಗ ಕಷ್ಟಪಟ್ಟು ದುಡಿಯಬೇಕು. ಕನಿಕರವನ್ನು ತೋರುವ ವರವನ್ನು ಹೊಂದಿರುವವನು ಆನಂದದಿಂದ ಆ ಕಾರ್ಯವನ್ನು ಮಾಡಬೇಕು.


ನಾವು ದೇವರ ಜೊತೆಕೆಲಸದವರಾಗಿದ್ದೇವೆ. ಆದ್ದರಿಂದ ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ನೀವು ದೇವರಿಂದ ಹೊಂದಿಕೊಂಡ ಕೃಪೆಯು ವ್ಯರ್ಥವಾಗದಂತೆ ನೋಡಿಕೊಳ್ಳಿ.


ನಾನು ಈ ಕಿರುಪತ್ರವನ್ನು ಸಿಲ್ವಾನನ ನೆರವಿನಿಂದ ಬರೆದೆನು. ಅವನು ಕ್ರಿಸ್ತನಲ್ಲಿ ನಂಬಿಗಸ್ತನಾದ ಸಹೋದರನೆಂಬುದು ನನಗೆ ತಿಳಿದಿದೆ. ನಾನು ನಿಮ್ಮನ್ನು ಸಂತೈಸಲು ಮತ್ತು ಪ್ರೋತ್ಸಾಹಿಸಲು ಈ ಪತ್ರವನ್ನು ಬರೆದೆನು. ಇದುವೇ ದೇವರ ನಿಜವಾದ ಕೃಪೆ ಎಂಬುದನ್ನು ನಿಮಗೆ ತಿಳಿಸಬೇಕೆಂಬುದೇ ನನ್ನ ಅಪೇಕ್ಷೆಯಾಗಿತ್ತು. ಆ ಕೃಪೆಯಲ್ಲಿ ಸ್ಥಿರತೆಯಿಂದಿರಿ.


ಕೆಲವು ಜನರು ರಹಸ್ಯವಾಗಿ ನಿಮ್ಮ ಸಭೆಯಲ್ಲಿ ಪ್ರವೇಶಿಸಿದ್ದಾರೆ. ಇವರಿಗಾಗುವ ದಂಡನೆಯ ಕುರಿತು ಬಹುಕಾಲದ ಹಿಂದೆಯೇ ಪ್ರವಾದಿಗಳು ಬರೆದಿದ್ದಾರೆ. ಈ ಜನರು ದೇವರಿಗೆ ವಿರುದ್ಧವಾಗಿದ್ದಾರೆ. ಅವರು ಪಾಪಕೃತ್ಯಗಳನ್ನು ಮಾಡುವುದಕ್ಕಾಗಿ ನಮ್ಮ ದೇವರ ಕೃಪೆಯನ್ನು ನೆವಮಾಡಿಕೊಂಡು ಅವರು ನಮ್ಮ ಒಬ್ಬನೇ ಒಡೆಯನಾದ ಮತ್ತು ಪ್ರಭುವಾದ ಯೇಸು ಕ್ರಿಸ್ತನನ್ನು ಹಿಂಬಾಲಿಸದವರಾಗಿದ್ದಾರೆ.


ಹಿಜ್ಕೀಯನು ಯೆಹೋವನಿಗೆ ಬಹಳ ನಂಬಿಕೆಯುಳ್ಳವನಾಗಿದ್ದನು. ಅವನು ಯೆಹೋವನನ್ನು ಅನುಸರಿಸುವುದನ್ನು ನಿಲ್ಲಿಸಲೇ ಇಲ್ಲ. ಯೆಹೋವನು ಮೋಶೆಗೆ ನೀಡಿದ ಆಜ್ಞೆಗಳಿಗೆ ಅವನು ವಿಧೇಯನಾಗಿ ಅನುಸರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು