ಅಪೊಸ್ತಲರ ಕೃತ್ಯಗಳು 11:28 - ಪರಿಶುದ್ದ ಬೈಬಲ್28 ಈ ಪ್ರವಾದಿಗಳಲ್ಲಿ “ಅಗಬ” ಎಂಬ ಒಬ್ಬನಿದ್ದನು. ಅಗಬನು ಅಂತಿಯೋಕ್ಯದಲ್ಲಿ ಪವಿತ್ರಾತ್ಮನ ಪ್ರೇರಣೆಯಿಂದ, “ಇಡೀ ಪ್ರಪಂಚಕ್ಕೆ ಭೀಕರ ಕ್ಷಾಮ ಬರಲಿದೆ” ಎಂದು ಹೇಳಿದನು. (ಈ ಬರಗಾಲವು ಕ್ಲಾಡಿಯಸ್ ಚಕ್ರವರ್ತಿಯ ಕಾಲದಲ್ಲಿ ಬಂದಿತು.) ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಅವರಲ್ಲಿ ಅಗಬನೆಂಬ ಒಬ್ಬನು ಎದ್ದು ಲೋಕಕ್ಕೆಲ್ಲಾ ದೊಡ್ಡ ಕ್ಷಾಮ ಬರುವುದು ಎಂದು ಪವಿತ್ರಾತ್ಮನ ಪ್ರೇರಣೆಯಿಂದ ಸೂಚಿಸಿದನು. ಅದು ಕ್ಲೌದ್ಯ ಚಕ್ರವರ್ತಿಯ ಕಾಲದಲ್ಲಿ ಉಂಟಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಅವರಲ್ಲಿ ಅಗಬ ಎಂಬವನು ಒಬ್ಬನು. ಇವನು ಪವಿತ್ರಾತ್ಮ ಪ್ರೇರಿತನಾಗಿ ಜಗತ್ತಿನಲ್ಲೆಲ್ಲಾ ಭೀಕರ ಕ್ಷಾಮ ಬರಲಿದೆಯೆಂದು ಮುಂತಿಳಿಸಿದನು. (ಇದು ಬಂದೊದಗಿದುದು ಕ್ಲಾಡಿಯಸ್ ಚಕ್ರವರ್ತಿಯ ಕಾಲದಲ್ಲಿ) ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಅವರಲ್ಲಿ ಅಗಬನೆಂಬವನೊಬ್ಬನು ಎದ್ದು ಲೋಕಕ್ಕೆಲ್ಲಾ ದೊಡ್ಡ ಕ್ಷಾಮ ಬರುವದು ಎಂದು ಪವಿತ್ರಾತ್ಮ ಪ್ರೇರಣೆಯಿಂದ ಸೂಚಿಸಿದನು. ಅದು ಕ್ಲೌದ್ಯಚಕ್ರವರ್ತಿಯ ಕಾಲದಲ್ಲಿ ಉಂಟಾಯಿತು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಅವರಲ್ಲೊಬ್ಬ ಅಗಬ ಎಂಬವನು ಪವಿತ್ರಾತ್ಮ ಪ್ರೇರಿತನಾಗಿ ಎದ್ದು ನಿಂತುಕೊಂಡು ಲೋಕಕ್ಕೆಲ್ಲಾ ಭೀಕರ ಕ್ಷಾಮ ಬರುವುದೆಂದು ತಿಳಿಸಿದನು. ಇದು ಕ್ಲೌದ್ಯನ ಆಳ್ವಿಕೆಯಲ್ಲಿ ಸಂಭವಿಸಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್28 ಹ್ಯಾ ಪ್ರವಾದ್ಯಾತ್ನಿ ಅಗಬ್! ಮನ್ತಲೊ ಎಕ್ಲೊ ಹೊತ್ತೊ, ಹೆನಿ ಅಂತಿಯೊಕ್ಯಾತ್ ಪವಿತ್ರ್ ಆತ್ಮ್ಯಾನ್ ಭರುನ್ ಸಗ್ಳ್ಯಾ ಜಗಾಕುಚ್ ಲೈ ಮೊಟೊ ಬರ್ಗಾಲ್ ಯೆತಲೊ ಹಾಯ್ ಮನುನ್ ಸಾಂಗ್ಲ್ಯಾನ್, ತೊ ಬರ್ಗಾಲ್ ಕ್ಲಾಡಿಸ್ ಮನ್ತಲ್ಯಾ ರಾಜಾಚ್ಯಾ ಎಳಾರ್ ಯೆಲೊ. ಅಧ್ಯಾಯವನ್ನು ನೋಡಿ |
ಕೊರಿಂಥದಲ್ಲಿ ಪೌಲನು ಅಕ್ವಿಲ ಎಂಬ ಯೆಹೂದ್ಯನನ್ನು ಕಂಡನು. ಅಕ್ವಿಲನು ಪೊಂತ ಎಂಬ ನಾಡಿನವನು. ಆದರೆ ಅಕ್ವಿಲ ಮತ್ತು ಅವನ ಹೆಂಡತಿ ಪ್ರಿಸ್ಕಿಲ್ಲ ಇಟಲಿಯಿಂದ ಕೊರಿಂಥಕ್ಕೆ ಇತ್ತೀಚಿಗೆ ಬಂದಿದ್ದರು. ಎಲ್ಲಾ ಯೆಹೂದ್ಯರು ರೋಮನ್ನು ಬಿಟ್ಟುಹೋಗಬೇಕೆಂದು ಕ್ಲಾಡಿಯಸನು ಆಜ್ಞಾಪಿಸಿದ್ದರಿಂದ ಅವರು ಇಟಲಿಯನ್ನು ಬಿಟ್ಟುಬಂದಿದ್ದರು. ಪೌಲನು ಅಕ್ವಿಲ ಮತ್ತು ಪ್ರಿಸ್ಕಿಲ್ಲರನ್ನು ಭೇಟಿಯಾಗಲು ಹೋದನು.