Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 11:5 - ಪರಿಶುದ್ದ ಬೈಬಲ್‌

5 ಪೇತ್ರನು ಅವರಿಗೆ, “ನಾನು ಜೊಪ್ಪ ಪಟ್ಟಣದಲ್ಲಿದ್ದೆನು. ನಾನು ಪ್ರಾರ್ಥಿಸುತ್ತಿದ್ದಾಗ ನನಗೊಂದು ದರ್ಶನವಾಯಿತು. ಆ ದರ್ಶನದಲ್ಲಿ, ಆಕಾಶದಿಂದ ಇಳಿದುಬರುತ್ತಿರುವ ಒಂದು ವಸ್ತುವನ್ನು ಕಂಡೆನು. ಅದು ದೊಡ್ಡ ತಟ್ಟೆಯಂತಿತ್ತು. ಅದರ ನಾಲ್ಕು ಮೂಲೆಗಳಲ್ಲಿ ಹಗ್ಗವನ್ನು ಕಟ್ಟಿ ಭೂಮಿಗೆ ಇಳಿಯಬಿಡಲಾಗಿತ್ತು. ಅದು ಇಳಿದು ಬಂದು ನನ್ನ ಸಮೀಪದಲ್ಲೇ ನಿಂತುಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಹೇಳಿದ್ದೇನಂದರೆ; “ನಾನು ಯೊಪ್ಪ ಎಂಬ ಪಟ್ಟಣದಲ್ಲಿ ಪ್ರಾರ್ಥನೆಮಾಡುತ್ತಾ ಧ್ಯಾನಪರವಶನಾಗಿದ್ದ ನನಗೆ ಒಂದು ದರ್ಶನವಾಯಿತು” ಅದೇನೆಂದರೆ, ಆಕಾಶದಿಂದ ನಾಲ್ಕು ಮೂಲೆಗಳನ್ನು ಹಿಡಿದು ದೊಡ್ಡ ಜೋಳಿಗೆಯಂತಿರುವ ಒಂದು ವಸ್ತುವು ನಾನಿದ್ದಲ್ಲಿಗೆ ಇಳಿದು ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 “ಜೊಪ್ಪ ಪಟ್ಟಣದಲ್ಲಿ ನಾನು ಧ್ಯಾನಪರವಶನಾಗಿದ್ದಾಗ ದರ್ಶನವೊಂದನ್ನು ಕಂಡೆ. ಸ್ವರ್ಗದಿಂದ ದೊಡ್ಡ ದುಪ್ಪಟಿಯಂಥ ವಸ್ತು ಒಂದು ಕೆಳಕ್ಕೆ ಇಳಿಯಿತು. ಅದರ ನಾಲ್ಕು ಮೂಲೆಗಳನ್ನು ಹಿಡಿದು ಕೆಳಕ್ಕೆ ಇಳಿಬಿಡಲಾಗಿತ್ತು. ಅದು ಬಂದು ನನ್ನ ಪಕ್ಕದಲ್ಲೇ ನಿಂತಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಾನು ಯೊಪ್ಪ ಪಟ್ಟಣದಲ್ಲಿ ಪ್ರಾರ್ಥನೆಮಾಡುತ್ತಿದ್ದಾಗ ಧ್ಯಾನಪರವಶನಾಗಿದ್ದ ನನಗೆ ಒಂದು ದರ್ಶನವಾಯಿತು; ಅದೇನಂದರೆ ಆಕಾಶದಿಂದ ನಾಲ್ಕು ಮೂಲೆಗಳನ್ನು ಹಿಡಿದಿದ್ದ ದೊಡ್ಡ ಜೋಳಿಗೆಯಂತಿರುವ ಒಂದು ವಸ್ತುವು ಇಳಿಸಲ್ಪಟ್ಟು ನಾನಿದ್ದಲ್ಲಿಗೆ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ನಾನು ಯೊಪ್ಪ ಪಟ್ಟಣದಲ್ಲಿ ಪ್ರಾರ್ಥನೆ ಮಾಡುತ್ತಿದ್ದೆನು. ಆಗ ನಾನು ಧ್ಯಾನಪರವಶನಾಗಿ ಒಂದು ದರ್ಶನವನ್ನು ಕಂಡೆನು. ನಾಲ್ಕು ಮೂಲೆಗಳನ್ನು ಹಿಡಿದ ದೊಡ್ಡ ಜೋಳಿಗೆಯಂತಿರುವ ಒಂದು ವಸ್ತುವು ಪರಲೋಕದಿಂದ ಕೆಳಗೆ ಇಳಿದು ನಾನಿದ್ದಲ್ಲಿಗೆ ಬರುವುದನ್ನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಪೆದ್ರುನ್ ತೆಂಕಾ, ಮಿಯಾ ಜೊಪ್ಪಾ ಮನ್ತಲ್ಯಾ ಶಾರಾತ್ ಹೊತ್ತ್ಯಾ ತನ್ನಾ, ಮಾಗ್ನಿ ಕರ್‍ತಾನಾ, ಮಾಕಾ ಎಕ್ ದರ್ಶನ್ ದಿಸ್ಲೆ ತ್ಯಾ ದರ್ಶನಾತ್ ಮಳ್ಬಾಕ್ನಾ ಉತ್ರುನ್ ಯೆತಲೊ ಎಕ್ ವಸ್ತ್ ಬಗ್ಲೊ ತೆ ಫಾಂಡ್ರ್ಯಾ ಕಪ್ಡ್ಯಾಚ್ಯಾ ಝೊಳ್ಗಿ ಸಾರ್ಕೆ ಹೊತ್ತೆ ತೆಚ್ಯಾ ಚಾರಿ ಮುಲ್ಲ್ಯಾಕ್ನಿಬಿ ಬಾಂದುನ್ ಮಳಬಾಕ್ನಾ ಖಾಲ್ತಿ ಸೊಡಲ್ಲೆ ಹೊತ್ತೆ ತೆ ಉತ್ರುನ್ ಯೆವ್ನ್ ಮಿಯಾ ಹೊತ್ಯಾಕ್ಡೆ ಜಗೊಳುಚ್ ಇಬೆ ರಾಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 11:5
12 ತಿಳಿವುಗಳ ಹೋಲಿಕೆ  

“ತರುವಾಯ ನಾನು ಜೆರುಸಲೇಮಿಗೆ ಹಿಂತಿರುಗಿದೆನು. ನಾನು ದೇವಾಲಯದ ಅಂಗಳದಲ್ಲಿ ಪ್ರಾರ್ಥಿಸುತ್ತಿದ್ದಾಗ ನನಗೊಂದು ದರ್ಶನವಾಯಿತು.


ದಮಸ್ಕದಲ್ಲಿ ಯೇಸುವಿನ ಶಿಷ್ಯನೊಬ್ಬನಿದ್ದನು. ಅವನ ಹೆಸರು ಅನನೀಯ. ಪ್ರಭುವು ಅನನೀಯನನ್ನು ದರ್ಶನದಲ್ಲಿ “ಅನನೀಯನೇ” ಎಂದು ಕರೆದನು. ಅನನೀಯನು, “ಪ್ರಭುವೇ, ಇಗೋ ಇದ್ದೇನೆ” ಎಂದು ಉತ್ತರಕೊಟ್ಟನು.


ಯೆಹೋವನು ನನಗೆ, “ಆಮೋಸನೇ, ನೀನು ಏನನ್ನು ನೋಡುತ್ತೀ?” ಎಂದು ಕೇಳಿದನು. ಅದಕ್ಕೆ ನಾನು, “ಒಂದು ಪುಟ್ಟಿ ಬೇಸಿಗೆಯ ಹಣ್ಣುಗಳು” ಎಂದು ಹೇಳಿದೆನು. ಆಗ ಯೆಹೋವನು ನನಗೆ, “ನನ್ನ ಜನರಾದ ಇಸ್ರೇಲರಿಗೆ ಅಂತ್ಯಕಾಲವು ಬಂದಿದೆ. ಇನ್ನು ಮೇಲೆ ನಾನು ಅವರನ್ನು ಸುಮ್ಮನೆ ಬಿಡುವುದಿಲ್ಲ.


ಆಗ ನಾನು ಒಂದು ಕೈ ನನ್ನ ಬಳಿಗೆ ಬರುವದನ್ನು ಕಂಡೆನು. ಆ ಕೈ ಒಂದು ಸುರುಳಿಯನ್ನು ಹಿಡುಕೊಂಡಿತ್ತು.


ಜೊಪ್ಪ ಪಟ್ಟಣದಲ್ಲಿ ತಬಿಥಾ ಎಂಬ ಯೇಸುವಿನ ಶಿಷ್ಯಳಿದ್ದಳು. ಗ್ರೀಕ್ ಭಾಷೆಯಲ್ಲಿ ಆಕೆಯ ಹೆಸರು ದೊರ್ಕಾ ಅಂದರೆ “ಜಿಂಕೆ.” ಆಕೆಯು ಜನರಿಗೆ ಯಾವಾಗಲೂ ಒಳ್ಳೆಯ ಕಾರ್ಯಗಳನ್ನು ಮಾಡುತ್ತಿದ್ದಳು. ಆಕೆಯು ಕೊರತೆಯಲ್ಲಿದ್ದ ಜನರಿಗೆ ಯಾವಾಗಲೂ ಹಣಕೊಡುತ್ತಿದ್ದಳು.


ಪೇತ್ರನು ಲುದ್ದದಲ್ಲಿದ್ದಾನೆಂಬ ಸುದ್ದಿಯು ಜೊಪ್ಪದಲ್ಲಿದ್ದ ವಿಶ್ವಾಸಿಗಳಿಗೆ ತಿಳಿಯಿತು. (ಲುದ್ದವು ಜೊಪ್ಪದ ಸಮೀಪದಲ್ಲಿದೆ.) ಆದ್ದರಿಂದ ಅವರು ಇಬ್ಬರನ್ನು ಪೇತ್ರನ ಬಳಿಗೆ ಕಳುಹಿಸಿದರು. ಅವರು, “ತ್ವರೆ ಮಾಡು, ದಯವಿಟ್ಟು ಬೇಗನೆ ಬಾ!” ಎಂದು ಅವನನ್ನು ಬೇಡಿಕೊಂಡರು.


ಜೊಪ್ಪದ ಎಲ್ಲಾ ಕಡೆಗಳಲ್ಲಿಯೂ ಇದ್ದ ಜನರಿಗೆ ಈ ವಿಷಯ ತಿಳಿಯಿತು. ಈ ಜನರಲ್ಲಿ ಅನೇಕರು ಪ್ರಭುವನ್ನು ನಂಬಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು