Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 12:17 - ಪರಿಶುದ್ದ ಬೈಬಲ್‌

17 ಪೇತ್ರನು ಅವರಿಗೆ ಸುಮ್ಮನಿರಬೇಕೆಂದು ಸನ್ನೆ ಮಾಡಿದನು. ಪ್ರಭುವು ತನ್ನನ್ನು ಸೆರೆಮನೆಯಿಂದ ಬಿಡಿಸಿದ ರೀತಿಯನ್ನು ಅವನು ಅವರಿಗೆ ವಿವರಿಸಿ, “ಯಾಕೋಬನಿಗೂ ಮತ್ತು ಸಹೋದರರಿಗೂ ಈ ಸಂಗತಿಯನ್ನು ತಿಳಿಸಿರಿ” ಎಂದು ಹೇಳಿದನು. ಬಳಿಕ ಪೇತ್ರನು ಬೇರೊಂದು ಸ್ಥಳಕ್ಕೆ ಅಲ್ಲಿಂದ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅವನು ಸುಮ್ಮನಿರಿ ಎಂದು ಅವರಿಗೆ ಕೈಸನ್ನೆ ಮಾಡಿ ತನ್ನನ್ನು ಕರ್ತನು ಸೆರೆಮನೆಯೊಳಗಿಂದ ಹೊರಗೆ ಕರೆದುಕೊಂಡು ಬಂದ ರೀತಿಯನ್ನು ವಿವರಿಸಿ; “ಈ ಸಂಗತಿಗಳನ್ನು ಯಾಕೋಬನಿಗೂ, ಸಹೋದರರೆಲ್ಲರಿಗೂ ತಿಳಿಸಿರೆಂದು” ಹೇಳಿ ಬೇರೆ ಸ್ಥಳಕ್ಕೆ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಪೇತ್ರನು ನಿಶ್ಯಬ್ದರಾಗಿರುವಂತೆ ಅವರಿಗೆ ಕೈಸನ್ನೆ ಮಾಡಿದನು. ಪ್ರಭು ತನ್ನನ್ನು ಹೇಗೆ ಸೆರೆಮನೆಯಿಂದ ಹೊರಗೆ ಕರೆತಂದರೆಂದು ವಿವರಿಸಿದನು. ಈ ವಿಷಯವನ್ನು ಯಕೋಬನಿಗೂ ಇತರ ಸಹೋದರರಿಗೂ ತಿಳಿಸಲು ಹೇಳಿ ಅಲ್ಲಿಂದ ಹೊರಟು ಬೇರೆ ಸ್ಥಳಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆದರೆ ಅವನು ಸುಮ್ಮಗಿರ್ರಿ ಎಂದು ಅವರಿಗೆ ಕೈಸನ್ನೆ ಮಾಡಿ ತನ್ನನ್ನು ಕರ್ತನು ಸೆರೆಮನೆಯೊಳಗಿಂದ ಹೊರಗೆ ಕರೆದುಕೊಂಡು ಬಂದ ರೀತಿಯನ್ನು ವಿವರಿಸಿ ಈ ಸಂಗತಿಗಳನ್ನು ಯಾಕೋಬನಿಗೂ ಸಹೋದರರೆಲ್ಲರಿಗೂ ತಿಳಿಸಿರೆಂದು ಹೇಳಿ ಬೇರೆ ಸ್ಥಳಕ್ಕೆ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಸುಮ್ಮನಿರಬೇಕೆಂದು ಪೇತ್ರನು ಅವರಿಗೆ ಕೈಸನ್ನೆ ಮಾಡಿ ಕರ್ತದೇವರು ಹೇಗೆ ತನ್ನನ್ನು ಸೆರೆಮನೆಯಿಂದ ಬಿಡಿಸಿ ಹೊರಗೆ ಕರೆದುಕೊಂಡು ಬಂದರು ಎಂಬುದನ್ನು ವಿವರಿಸಿದನು. “ಇದನ್ನು ಯಾಕೋಬನಿಗೆ ಹಾಗೂ ಸಹೋದರರಿಗೆ ತಿಳಿಸಿರಿ,” ಎಂದು ಹೇಳಿ ಬೇರೆ ಸ್ಥಳಕ್ಕೆ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಪೆದ್ರುನ್ ತೆಂಕಾ ಗಪ್ಪ್ ರ್‍ಹಾಯ್ ಸಾರ್ಕೆ ಸೊನ್ನಾಯ್ ಕರ್‍ಲ್ಯಾನ್, ಅನಿ ಧನಿಯಾನ್ ಅಪ್ನಾಕ್ ಬಂದಿಖಾನ್ಯಾತ್ನಾ ಸೊಡ್ವುನ್ ಹಾನಲೆ ಕಶೆ ಮನ್ತಲೆ ತೆಂಕಾ ಸಾಂಗುನ್, ಜಾಕೊಬಾಕ್ ಅನಿ ಹುರಲ್ಲ್ಯಾ ಭಾವಾಕ್ನಿಬಿ ಹಿ ಸಂಗ್ತಿಯಾ ಕಳ್ವಾ ಮನುನ್ ಸಾಂಗ್ಲ್ಯಾನ್, ಮಾನಾ ಪೆದ್ರು ಥೈತ್ನಾ ದುಸ್ರ್ಯಾಕ್ಡೆ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 12:17
28 ತಿಳಿವುಗಳ ಹೋಲಿಕೆ  

ಜನರೊಂದಿಗೆ ಮಾತಾಡಲು ಸೇನಾಧಿಪತಿ ಪೌಲನಿಗೆ ಅಪ್ಪಣೆಕೊಟ್ಟನು. ಆದ್ದರಿಂದ ಪೌಲನು ಮೆಟ್ಟಿಲುಗಳ ಮೇಲೆ ನಿಂತುಕೊಂಡನು. ಬಳಿಕ, ಮೌನವಾಗಿರುವಂತೆ ಜನರಿಗೆ ಕೈಸನ್ನೆ ಮಾಡಿದನು. ಜನರು ಮೌನವಾದರು. ಆಗ ಪೌಲನು ಅವರೊಂದಿಗೆ ಯೆಹೂದ್ಯರ ಭಾಷೆಯಲ್ಲಿ ಮಾತಾಡಿದನು.


ಯೆಹೂದ್ಯರು ಅಲೆಕ್ಸಾಂಡರ್ ಎಂಬವನನ್ನು ಜನರ ಮುಂದೆ ನೂಕಿ ಮಾತಾಡಲು ಪುಸಲಾಯಿಸಿದರು. ಅವನು ಜನರಿಗೆ ಮೌನವಾಗಿರುವಂತೆ ಕೈಸನ್ನೆಮಾಡಿ ಜನರ ಪರವಾಗಿ ವಾದಿಸಬೇಕೆಂದಿದ್ದನು.


ಪೌಲನು ಎದ್ದುನಿಂತುಕೊಂಡು ತನ್ನ ಮಾತುಗಳನ್ನು ಕೇಳಬೇಕೆಂದು ಜನರಿಗೆ ಕೈಸನ್ನೆ ಮಾಡಿ ಹೀಗೆಂದನು: “ನನ್ನ ಯೆಹೂದ್ಯ ಸಹೋದರರೇ, ನಿಜ ದೇವರನ್ನು ಆರಾಧಿಸುವ ಇತರ ಜನರೇ, ದಯವಿಟ್ಟು ನನಗೆ ಕಿವಿಗೊಡಿರಿ!


ಮರುದಿನ ಯಾಕೋಬನನ್ನು ಸಂದರ್ಶಿಸಲು ಪೌಲನು ನಮ್ಮನ್ನು ಕರೆದುಕೊಂಡು ಹೋದನು. ಹಿರಿಯರೆಲ್ಲರು ಅಲ್ಲಿದ್ದರು.


ಬಳಿಕ ಯಾಕೋಬನು, “ನನ್ನ ಸಹೋದರರೇ, ನನಗೆ ಕಿವಿಗೊಡಿರಿ.


ನಡೆದ ಸಂಗತಿ ಏನೆಂದರೆ: ಪೇತ್ರನು ಮೊದಲು ಅಂತಿಯೋಕ್ಯಕ್ಕೆ ಬಂದಾಗ ಅವನು ಯೆಹೂದ್ಯರಲ್ಲದವರೊಂದಿಗೆ ಊಟಮಾಡಿದನು ಮತ್ತು ಅನ್ಯೋನ್ಯತೆಯಿಂದಿದ್ದನು. ಆ ಬಳಿಕ ಯಾಕೋಬನಿಂದ ಕಳುಹಿಸಲ್ಪಟ್ಟಿದ್ದ ಕೆಲವು ಯೆಹೂದ್ಯರು ಬಂದರು. ಆಗ, ಪೇತ್ರನು ಯೆಹೂದ್ಯರಲ್ಲದವರೊಂದಿಗೆ ಊಟಮಾಡುವುದನ್ನು ನಿಲ್ಲಿಸಿದನು. ಪೇತ್ರನು ತನ್ನನ್ನು ಯೆಹೂದ್ಯರಲ್ಲದವರಿಂದ ಬೇರ್ಪಡಿಸಿಕೊಂಡನು. ಯೆಹೂದ್ಯರಲ್ಲದವರೆಲ್ಲರೂ ಸುನ್ನತಿ ಮಾಡಿಸಿಕೊಳ್ಳಬೇಕೆಂದು ನಂಬಿಕೊಂಡಿದ್ದ ಯೆಹೂದ್ಯರಿಗೆ ಅವನು ಹೆದರಿಕೊಂಡನು.


ದೇವರು ನನಗೆ ಈ ವಿಶೇಷವಾದ ವರವನ್ನು ಕೊಟ್ಟಿದ್ದಾನೆಂಬುದನ್ನು ನಾಯಕರೆನಿಸಿಕೊಂಡಿದ್ದ ಯಾಕೋಬ, ಪೇತ್ರ, ಯೋಹಾನರು ಕಂಡುಕೊಂಡರು. ಆದ್ದರಿಂದ ಅವರು ಬಾರ್ನಬನನ್ನು ಮತ್ತು ನನ್ನನ್ನು ಸ್ವೀಕರಿಸಿಕೊಂಡರು. ಅವರು ನಮಗೆ, “ಪೌಲ ಮತ್ತು ಬಾರ್ನಬರೇ, ನೀವು ಯೆಹೂದ್ಯರಲ್ಲದವರ ಬಳಿಗೆ ಹೋಗಿರಿ. ನಾವು ಯೆಹೂದ್ಯರ ಬಳಿಗೆ ಹೋಗುತ್ತೇವೆ” ಎಂದು ತಿಳಿಸಿದರು.


ಪ್ರಭುವಿನ (ಯೇಸು) ಸಹೋದರನಾದ ಯಾಕೋಬನನ್ನು ಹೊರತು ಬೇರೆ ಯಾವ ಅಪೊಸ್ತಲರನ್ನೂ ನಾನು ಭೇಟಿಯಾಗಲಿಲ್ಲ.


ಬಳಿಕ ಕ್ರಿಸ್ತನು ಯಾಕೋಬನಿಗೆ ಕಾಣಿಸಿಕೊಂಡನು. ಅನಂತರ ಮತ್ತೊಮ್ಮೆ ಎಲ್ಲಾ ಅಪೊಸ್ತಲರಿಗೆ ಕಾಣಿಸಿಕೊಂಡನು.


ಆದ್ದರಿಂದ ಯೇಸುವು ಯೆಹೂದ್ಯರ ಮಧ್ಯದಲ್ಲಿ ಬಹಿರಂಗವಾಗಿ ಸಂಚರಿಸುವುದನ್ನು ಬಿಟ್ಟುಬಿಟ್ಟನು. ಆತನು ಜೆರುಸಲೇಮನ್ನು ಬಿಟ್ಟು ಮರುಭೂಮಿಯ ಸಮೀಪದಲ್ಲಿದ್ದ ಸ್ಥಳಕ್ಕೆ ಹೋಗಿ ಎಫ್ರಾಯಿಮ್ ಎಂಬ ಊರಿನಲ್ಲಿ ತನ್ನ ಶಿಷ್ಯರ ಸಂಗಡ ಇಳಿದುಕೊಂಡನು.


ಇದನ್ನು ಕೇಳಿದ ಕೂಡಲೇ ಜನರು ಆತನತ್ತ ಬೀರಲು ಕಲ್ಲುಗಳನ್ನು ತೆಗೆದುಕೊಂಡರು. ಆದರೆ ಯೇಸು ಅಡಗಿಕೊಂಡು ದೇವಾಲಯದಿಂದ ಹೊರಟುಹೋದನು.


ಒಂದು ಊರಿನಲ್ಲಿ ನಿಮ್ಮನ್ನು ಹಿಂಸಿಸಿದರೆ ಮತ್ತೊಂದು ಊರಿಗೆ ಹೋಗಿ. ಮನುಷ್ಯಕುಮಾರನು ಪುನಃ ಬರುವುದಕ್ಕಿಂತ ಮುಂಚೆ ನೀವು ಇಸ್ರೇಲರ ಊರುಗಳಿಗೆಲ್ಲಾ ಹೋಗುವುದನ್ನು ಮುಗಿಸಿರುವುದಿಲ್ಲ ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.


ದೇವರ ಮತ್ತು ಪ್ರಭುವಾದ ಯೇಸು ಕ್ರಿಸ್ತನ ಸೇವಕನಾದ ಯಾಕೋಬನು ಲೋಕದಲ್ಲೆಲ್ಲಾ ಚದರಿಹೋಗಿರುವ (ಇಸ್ರೇಲಿನ) ಹನ್ನೆರಡು ಕುಲದವರಿಗೆ ಬರೆದ ಪತ್ರ. ನಿಮಗೆ ಶುಭವಾಗಲಿ.


ಆದರೆ ಪೌಲ ಸೀಲರು ಸೆರೆಮನೆಯಿಂದ ಹೊರಟು ಲಿಡಿಯಾಳ ಮನೆಗೆ ಹೋದರು. ಅಲ್ಲಿ ಅವರು ಕೆಲವು ವಿಶ್ವಾಸಿಗಳನ್ನು ಕಂಡು ಅವರನ್ನು ಸಂತೈಸಿದರು. ಬಳಿಕ ಪೌಲ ಸೀಲರು ಅಲ್ಲಿಂದ ಹೊರಟುಹೋದರು.


ಸೀಮೋನ್ ಪೇತ್ರನು ಈ ಶಿಷ್ಯನಿಗೆ, ಯಾರನ್ನು ಕುರಿತು ಯೇಸು ಹೇಳುತ್ತಿದ್ದಾನೆಂದು ಕೇಳಿ ತಿಳಿದುಕೊಳ್ಳಲು ಸನ್ನೆ ಮಾಡಿದನು.


ಬಳಿಕ ಯೇಸು ಜೋರ್ಡನ್ ನದಿಯ ಆಚೆಯ ದಡಕ್ಕೆ ಹೋದನು. ಯೋಹಾನನು ಮೊದಲು ದೀಕ್ಷಾಸ್ನಾನ ಕೊಡುತ್ತಿದ್ದ ಸ್ಥಳಕ್ಕೆ ಯೇಸು ಹೋಗಿ ಅಲ್ಲಿ ತಂಗಿದನು.


ಇದಾದ ಮೇಲೆ, ಯೇಸು ಗಲಿಲಾಯ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿದನು. ಜುದೇಯದಲ್ಲಿ ಸಂಚರಿಸಲು ಯೇಸುವಿಗೆ ಇಷ್ಟವಿರಲಿಲ್ಲ. ಏಕೆಂದರೆ ಅಲ್ಲಿನ ಯೆಹೂದ್ಯರು ಆತನನ್ನು ಕೊಲ್ಲಲು ಅವಕಾಶಕ್ಕಾಗಿ ಕಾಯುತ್ತಿದ್ದರು.


ಬಳಿಕ ಜಕರೀಯನು ಹೊರಗೆ ಬಂದಾಗ, ಅವನಿಗೆ ಅವರೊಡನೆ ಮಾತಾಡಲಾಗಲಿಲ್ಲ. ಆದ್ದರಿಂದ ಅವನಿಗೆ ದೇವಾಲಯದಲ್ಲಿ ದರ್ಶನವಾಗಿರಬೇಕೆಂದು ಅವರು ತಿಳಿದುಕೊಂಡರು. ಅಂದಿನಿಂದ ಅವನು ಮಾತಾಡಲಾಗದೆ ಕೇವಲ ಸನ್ನೆಗಳ ಮೂಲಕ ತಿಳಿಸುತ್ತಿದ್ದನು.


ಹಿಂಸೆಗೆ ಗುರಿಯಾಗಿರುವವರಿಗೆ ನ್ಯಾಯವನ್ನೂ; ಹಸಿದವರಿಗೆ ಆಹಾರವನ್ನೂ ಕೊಡುವವನು ಆತನೇ. ಯೆಹೋವನು ಸೆರೆಯಲ್ಲಿರುವವರನ್ನು ಬಿಡಿಸುವನು.


ದೇವಭಕ್ತರೆಲ್ಲರೂ ಬನ್ನಿರಿ, ದೇವರು ನನಗೋಸ್ಕರ ಮಾಡಿರುವುದನ್ನು ನಿಮಗೆ ತಿಳಿಸುವೆನು.


ಇವನು ಕೇವಲ ಬಡಗಿಯಲ್ಲವೋ? ಇವನ ತಾಯಿ ಮರಿಯಳು. ಇವನು ಯಾಕೋಬ, ಯೋಸೆ, ಯೂದ ಮತ್ತು ಸಿಮೋನರ ಅಣ್ಣ. ಇವನ ತಂಗಿಯರು ಇಲ್ಲಿ ನಮ್ಮೊಂದಿಗಿದ್ದಾರೆ” ಎಂದು ಹೇಳಿ ಆತನನ್ನು ತಾತ್ಸಾರ ಮಾಡಿದರು.


ಕೆಲವು ದಿನಗಳಾದ ಮೇಲೆ ವಿಶ್ವಾಸಿಗಳು ಸಭೆ ಸೇರಿದ್ದರು. (ಅಲ್ಲಿ ಸುಮಾರು ನೂರಿಪ್ಪತ್ತು ಮಂದಿ ಇದ್ದರು.) ಪೇತ್ರನು ಎದ್ದುನಿಂತುಕೊಂಡು ಹೀಗೆಂದನು:


ಆದರೆ ಪೇತ್ರನು ಬಾಗಿಲನ್ನು ತಟ್ಟುತ್ತಲೇ ಇದ್ದನು. ಆ ವಿಶ್ವಾಸಿಗಳು ಬಾಗಿಲನ್ನು ತೆರೆದಾಗ ಅವರು ಪೇತ್ರನನ್ನು ಕಂಡು ವಿಸ್ಮಿತರಾದರು.


ಮರುದಿನ, ಪೇತ್ರನು ಏನಾದನೆಂದು ಸೈನಿಕರ ನಡುವೆ ದೊಡ್ಡ ಗೊಂದಲವೇ ಎದ್ದಿತು.


ನಾವು ಇಲ್ಲಿರುವುದು ರೋಮಿನಲ್ಲಿದ್ದ ವಿಶ್ವಾಸಿಗಳಿಗೆ ತಿಳಿಯಿತು. ಅವರು ನಮ್ಮನ್ನು ಭೇಟಿಯಾಗುವುದಕ್ಕಾಗಿ “ಅಪ್ಪಿಯ” ಮಾರುಕಟ್ಟೆಗೂ ಮತ್ತು “ತ್ರಿಛತ್ರ” ಎಂಬ ಸ್ಥಳಕ್ಕೂ ಬಂದರು. ಈ ವಿಶ್ವಾಸಿಗಳನ್ನು ಕಂಡಾಗ ಪೌಲನು ಧೈರ್ಯಗೊಂಡು ದೇವರಿಗೆ ಸ್ತೋತ್ರ ಸಲ್ಲಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು