ಅಪೊಸ್ತಲರ ಕೃತ್ಯಗಳು 12:6 - ಪರಿಶುದ್ದ ಬೈಬಲ್6 ಪೇತ್ರನು ಇಬ್ಬರು ಸೈನಿಕರ ಮಧ್ಯೆ ನಿದ್ರೆಮಾಡುತ್ತಿದ್ದನು. ಅವನನ್ನು ಎರಡು ಸರಪಣಿಗಳಿಂದ ಕಟ್ಟಲಾಗಿತ್ತು. ಅನೇಕ ಸೈನಿಕರು ಸೆರೆಮನೆಯ ಬಾಗಿಲನ್ನು ಕಾಯುತ್ತಿದ್ದರು. ಆಗ ರಾತ್ರಿಯಾಗಿತ್ತು. ಮರುದಿನ ಪೇತ್ರನನ್ನು ಜನರ ಮುಂದೆ ತರಬೇಕೆಂದು ಹೆರೋದನು ಯೋಚಿಸಿಕೊಂಡಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಹೆರೋದನು ಅವನನ್ನು ಜನರ ಮುಂದೆ ತರಿಸಬೇಕೆಂದಿದ್ದ ದಿನದ ಹಿಂದಿನ ರಾತ್ರಿಯಲ್ಲಿ, ಪೇತ್ರನು ಎರಡು ಸರಪಣಿಗಳಿಂದ ಕಟ್ಟಲ್ಪಟ್ಟವನಾಗಿ, ಇಬ್ಬರು ಸಿಪಾಯಿಗಳ ನಡುವೆ ನಿದ್ದೆಮಾಡುತ್ತಿದ್ದನು. ಕಾವಲುಗಾರರು ಬಾಗಿಲ ಮುಂದೆ ನಿಂತು ಸೆರೆಮನೆಯನ್ನು ಕಾಯುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಹೆರೋದನು ಪೇತ್ರನನ್ನು ಜನರ ಮುಂದೆ ತರಬೇಕೆಂದಿದ್ದ ಹಿಂದಿನ ರಾತ್ರಿ ಅದು. ಪೇತ್ರನು ಇಬ್ಬರು ಸೈನಿಕರ ನಡುವೆ ನಿದ್ರಿಸುತ್ತಿದ್ದನು. ಅವನನ್ನು ಎರಡು ಸರಪಣಿಗಳಿಂದ ಕಟ್ಟಲಾಗಿತ್ತು. ಪಹರೆಯವರು ಸೆರೆಮನೆಯ ದ್ವಾರದಲ್ಲಿ ಕಾವಲಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಹೆರೋದನು ಅವನನ್ನು ಜನರ ಮುಂದೆ ತರಿಸಬೇಕೆಂದಿದ್ದ ದಿವಸದ ಹಿಂದಿನ ರಾತ್ರಿಯಲ್ಲಿ ಪೇತ್ರನು ಎರಡು ಸರಪಣಿಗಳಿಂದ ಕಟ್ಟಲ್ಪಟ್ಟವನಾಗಿ ಇಬ್ಬರು ಸಿಪಾಯಿಗಳ ನಡುವೆ ನಿದ್ದೆ ಮಾಡುತ್ತಿದ್ದನು. ಕಾವಲುಗಾರರು ಬಾಗಿಲ ಮುಂದೆ ನಿಂತು ಸೆರೆಮನೆಯನ್ನು ಕಾಯುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಹೆರೋದನು ಅವನನ್ನು ವಿಚಾರಣೆಗೆ ತರಲಿಕ್ಕಿದ್ದ ದಿನದ ಹಿಂದಿನ ರಾತ್ರಿ ಪೇತ್ರನು ಸರಪಣಿಗಳಿಂದ ಬಂಧಿಸಲಾಗಿ ಇಬ್ಬರು ಸಿಪಾಯಿಗಳ ಮಧ್ಯೆ ನಿದ್ರಿಸುತ್ತಿದ್ದನು. ಕಾವಲುಗಾರರು ದ್ವಾರದ ಬಳಿಯಲ್ಲಿ ಕಾಯುತ್ತಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ಪೆದ್ರು ದೊನ್ ಸೈನಿಕಾಂಚ್ಯಾ ಮದ್ದಿ ನಿಜಲೊ ಹೊತ್ತೊ, ಅನಿ ತೆಕಾ ದೊನ್ ಸರ್ಪೊಳಿಯಾನಿ ಭಾಂದಲೆ ಹೊತ್ತೆ, ತನ್ನಾ ರಾತ್ ಹೊಲ್ಲಿ ಅನಿ ಲೈ ಲೊಕಾ ಸೈನಿಕಾ ಧಾರಾತ್ ಬಿ ರಾಕಿತ್ ಹೊತ್ತಿ, ದುಸ್ರೆಂದಿಸಾ ಪೆದ್ರುಕ್ ಲೊಕಾಂಚ್ಯಾ ಇದ್ರಾಕ್ ಹಾನುಚೆ ಮನುನ್ ಹೆರೊದಾನ್ ಯೆವ್ವುನ್ ಘೆವ್ನ್ ಹೊತ್ತ್ಯಾನ್. ಅಧ್ಯಾಯವನ್ನು ನೋಡಿ |
ರಾಮನಗರದ ಹತ್ತಿರ ಅವನ ಬಿಡುಗಡೆಯಾದ ಮೇಲೆ ಯೆರೆಮೀಯನಿಗೆ ಯೆಹೋವನಿಂದ ಒಂದು ಸಂದೇಶ ಬಂದಿತು. ಬಾಬಿಲೋನಿನ ರಾಜನ ವಿಶೇಷ ರಕ್ಷಕ ದಳದ ಅಧಿಪತಿಯಾದ ನೆಬೂಜರದಾನನು ಯೆರೆಮೀಯನನ್ನು ರಾಮದಲ್ಲಿ ನೋಡಿದನು. ಯೆರೆಮೀಯನನ್ನು ಸಂಕೋಲೆಗಳಿಂದ ಬಿಗಿಯಲಾಗಿತ್ತು. ಅವನು ಜೆರುಸಲೇಮ್ ಮತ್ತು ಯೆಹೂದದ ಎಲ್ಲಾ ಸೆರೆಯಾಳುಗಳ ಜೊತೆಗಿದ್ದನು. ಆ ಸೆರೆಯಾಳುಗಳನ್ನು ಸೆರೆಹಿಡಿದು ಬಾಬಿಲೋನಿಗೆ ತೆಗೆದುಕೊಂಡು ಹೋಗಲಾಗುತ್ತಿತ್ತು.