Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 13:10 - ಪರಿಶುದ್ದ ಬೈಬಲ್‌

10 ಅವನಿಗೆ, “ನೀನು ಸೈತಾನನ ಮಗ! ಪ್ರತಿಯೊಂದು ಒಳ್ಳೆಯದಕ್ಕೂ ನೀನು ಶತ್ರು! ನೀನು ದುಷ್ಟತಂತ್ರಗಳಿಂದಲೂ ಸುಳ್ಳುಗಳಿಂದಲೂ ತುಂಬಿದವನಾಗಿರುವೆ. ಪ್ರಭುವಿನ ಸತ್ಯಗಳನ್ನು ಸುಳ್ಳುಗಳನ್ನಾಗಿ ಪರಿವರ್ತಿಸಲು ನೀನು ಯಾವಾಗಲೂ ಪ್ರಯತ್ನಿಸುತ್ತಿರುವೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವನನ್ನು ದೃಷ್ಟಿಸಿನೋಡಿ; “ಸೈತಾನನ ಮಗನೇ, ಮೋಸದಿಂದಲೂ, ಎಲ್ಲಾ ಕೆಟ್ಟತನದಿಂದಲೂ ತುಂಬಿರುವವನೇ, ಎಲ್ಲಾ ನೀತಿಗೂ ವಿರೋಧಿಯೇ, ನೀನು ಕರ್ತನ ನೇರವಾದ ಮಾರ್ಗಗಳನ್ನು ಡೊಂಕು ಮಾಡುವುದನ್ನು ಬಿಡುವುದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 “ಎಲವೋ ಪಿಶಾಚಿಕೋರನೇ, ಸರ್ವಸನ್ಮಾರ್ಗಕ್ಕೆ ಶತ್ರು ನೀನು; ಎಲ್ಲಾ ತಂತ್ರ ಕುತಂತ್ರಗಳು ನಿನ್ನಲ್ಲಿ ತುಂಬಿವೆ. ಪ್ರಭುವಿನ ಸನ್ಮಾರ್ಗಕ್ಕೆ ಅಡ್ಡಿ ಆತಂಕಗಳನ್ನು ಒಡ್ಡುತ್ತಿರುವೆಯಾ? ಇಗೋ, ಈಗ ಪ್ರಭುವಿನ ಶಾಪ ನಿನ್ನ ಮೇಲಿದೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಎಲೋ, ಎಲ್ಲಾ ಮೋಸದಿಂದಲೂ ಎಲ್ಲಾ ಕೆಟ್ಟತನದಿಂದಲೂ ತುಂಬಿರುವವನೇ, ಸೈತಾನನ ಮಗನೇ, ಎಲ್ಲಾ ನೀತಿಗೂ ವಿರೋಧಿಯೇ, ನೀನು ಕರ್ತನ ನೀಟಾದ ಮಾರ್ಗಗಳನ್ನು ಡೊಂಕುಮಾಡುವದನ್ನು ಬಿಡುವದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ಎಲೈ ಸೈತಾನನ ಮಗನೇ, ನೀತಿಗೆಲ್ಲಾ ವೈರಿಯೇ, ನಿನ್ನಲ್ಲಿ ಎಲ್ಲಾ ತರದ ಮೋಸವೂ ಕುತಂತ್ರವೂ ತುಂಬಿವೆ. ಕರ್ತದೇವರ ಸನ್ಮಾರ್ಗಗಳಿಗೆ ಅಡ್ಡಿಯಾಗುವುದನ್ನು ನೀನೆಂದೂ ನಿಲ್ಲಿಸುವುದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 “ತಿಯಾ ಗಿರ್ಯಾಚೊ ಲೆಕ್!” ಬರೆ ಹೊತಲ್ಯಾ ಹರ್ ಎಕ್ಲ್ಯಾಕ್ಬಿ ತಿಯಾ ದುಶ್ಮನ್ ಹೊವ್ನ್ ಹಾಸ್ ! ಧನಿಯಾಚ್ಯಾ ಖರೆ ಪಾನಾಕ್ ಝುಟೆ ಕರುಚೆ ಮನುನ್ ತಿಯಾ ಕನ್ನಾಬಿ ಕಟ್ಪಟ್ ಕರಿತ್ ರಾತೈ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 13:10
23 ತಿಳಿವುಗಳ ಹೋಲಿಕೆ  

ಸೈತಾನನೇ ನಿಮ್ಮ ತಂದೆ. ನೀವು ಅವನಿಗೆ ಹುಟ್ಟಿದವರಾಗಿದ್ದೀರಿ. ಅವನ ದುರಿಚ್ಛೆಗಳನ್ನು ಮಾಡಬಯಸುತ್ತೀರಿ. ಅವನು ಆರಂಭದಿಂದಲೂ ಕೊಲೆಗಾರನಾಗಿದ್ದು ಸತ್ಯಕ್ಕೆ ವಿರೋಧವಾಗಿದ್ದನು. ಅವನಲ್ಲಿ ಸತ್ಯವು ಇಲ್ಲವೇ ಇಲ್ಲ. ಅವನು ಸ್ವಭಾವಾನುಸಾರವಾಗಿ ಸುಳ್ಳಾಡುತ್ತಾನೆ. ಅವನು ಸುಳ್ಳುಗಾರನೂ ಸುಳ್ಳಿಗೆ ತಂದೆಯೂ ಆಗಿದ್ದಾನೆ.


ನಿಜವಾಗಿ ಹೇಳಬೇಕಾದರೆ, ಬೇರೊಂದು ಸತ್ಯಸುವಾರ್ತೆಯು ಇಲ್ಲವೇ ಇಲ್ಲ. ಆದರೆ ಕೆಲವು ಜನರು ನಿಮ್ಮನ್ನು ಗಲಿಬಿಲಿಗೊಳಿಸುತ್ತಿದ್ದಾರೆ. ಅವರು ಕ್ರಿಸ್ತನ ಸುವಾರ್ತೆಯನ್ನು ಬದಲಾಯಿಸಬೇಕೆಂದಿದ್ದಾರೆ.


ಹವ್ವಳು ಸರ್ಪದ ಕುಯುಕ್ತಿಯಿಂದ ಮೋಸಗೊಂಡಂತೆ ನಿಮ್ಮ ಮನಸ್ಸು ಕ್ರಿಸ್ತನ ವಿಷಯದಲ್ಲಿ ಇರಬೇಕಾದ ಯಥಾರ್ಥತೆಯನ್ನೂ ಪರಿಶುದ್ಧತೆಯನ್ನೂ ಬಿಟ್ಟು ಕೆಟ್ಟುಹೋದೀತೆಂಬ ಭಯ ನನಗಿದೆ.


ಆ ಹೊಲ ಈ ಲೋಕವಾಗಿದೆ. ಒಳ್ಳೆಯ ಕಾಳುಗಳೇ ಪರಲೋಕರಾಜ್ಯಕ್ಕೆ ಸೇರಿದ ದೇವರ ಮಕ್ಕಳು. ಕೆಡುಕನಿಗೆ ಸಂಬಂಧಪಟ್ಟವರೇ ಹಣಜಿಗಳು.


ಬುದ್ಧಿವಂತ ಮನುಷ್ಯನು ಇವುಗಳನ್ನು ಅರ್ಥಮಾಡಿಕೊಳ್ಳುತ್ತಾನೆ. ಜಾಣನು ಇದನ್ನು ಕಲಿತುಕೊಳ್ಳುತ್ತಾನೆ. ಯೆಹೋವನ ಮಾರ್ಗವು ಸರಿಯಾದದ್ದು. ಒಳ್ಳೆಯ ಜನರು ಅವರೊಂದಿಗೆ ಜೀವಿಸುವರು. ಪಾಪಿಗಳು ಅವುಗಳಿಂದ ಸಾಯುವರು.


ಸೈತಾನನು ಆರಂಭದಿಂದಲೂ ಪಾಪಗಳನ್ನು ಮಾಡುತ್ತಿದ್ದಾನೆ. ಪಾಪಗಳನ್ನು ಮಾಡುತ್ತಲೇ ಇರುವವನು ಸೈತಾನನಿಗೆ ಸೇರಿದವನಾಗಿದ್ದಾನೆ. ದೇವರ ಮಗನಾದ ಕ್ರಿಸ್ತನು ಸೈತಾನನ ಕಾರ್ಯವನ್ನು ನಾಶಪಡಿಸುವುದಕ್ಕಾಗಿಯೇ ಬಂದನು.


“ಧರ್ಮೋಪದೇಶಕರೇ, ನಿಮ್ಮ ಗತಿಯನ್ನು ಏನು ಹೇಳಲಿ! ದೇವರ ಕುರಿತಾಗಿ ಕಲಿಯಲು ಸಾಧನವಾಗಿರುವ ಬೀಗದ ಕೈಯನ್ನು ನೀವು ಬಚ್ಚಿಟ್ಟಿದ್ದೀರಿ. ನೀವೂ ಕಲಿಯುವುದಿಲ್ಲ, ಬೇರೆಯವರಿಗೂ ಕಲಿಯಲು ಬಿಡುವುದಿಲ್ಲ” ಎಂದು ಹೇಳಿದನು.


ಈ ಸುಳ್ಳುಬೋಧಕರು ಸರಿಯಾದ ಮಾರ್ಗವನ್ನು ತೊರೆದು, ಕೆಟ್ಟಮಾರ್ಗವನ್ನು ಅನುಸರಿಸಿದ್ದಾರೆ. ಬಿಳಾಮನು ಬೆಯೋರನ ಮಗ. ಅವನು ಅಧರ್ಮದಿಂದ ದೊರೆಯುವ ಲಾಭವನ್ನು ಪ್ರೀತಿಸಿದನು.


ಅಲ್ಲದೆ, ನಿಮ್ಮ ಸಭೆಯ ಕೆಲವು ಜನರೇ ದುರ್ಬೋಧಕರಾಗಿ ಯೇಸುವಿನ ಶಿಷ್ಯರಲ್ಲಿ ಕೆಲವರನ್ನು ಸತ್ಯದಿಂದ ದೂರಕ್ಕೆ ನಡೆಸುವರು.


“ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ಜನರು ಪರಲೋಕರಾಜ್ಯಕ್ಕೆ ಪ್ರವೇಶಿಸುವ ದಾರಿಯನ್ನು ನೀವು ಮುಚ್ಚಿಬಿಡುತ್ತೀರಿ. ನೀವೂ ಪ್ರವೇಶಿಸುವುದಿಲ್ಲ ಮತ್ತು ಪ್ರವೇಶಿಸುವುದಕ್ಕೆ ಪ್ರಯತ್ನಿಸುವ ಜನರಿಗೂ ಬಿಡುವುದಿಲ್ಲ.


ಮನುಷ್ಯನ ಮನಸ್ಸಿನಲ್ಲಿ ದುರಾಲೋಚನೆ, ಕೊಲೆ, ವ್ಯಭಿಚಾರ, ಸೂಳೆಗಾರಿಕೆ, ಕಳ್ಳತನ, ಸುಳ್ಳುಸಾಕ್ಷಿ ಮತ್ತು ಬೈಗಳು ಹೊರಟುಬರುತ್ತವೆ.


ಅನೇಕ ಫರಿಸಾಯರು ಮತ್ತು ಸದ್ದುಕಾಯರು ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಲು ಬಂದರು. ಯೋಹಾನನು ಅವರನ್ನು ನೋಡಿ, “ನೀವೆಲ್ಲರು ಸರ್ಪಗಳು! ಬರಲಿರುವ ದೇವರ ಕೋಪದಿಂದ ತಪ್ಪಿಸಿಕೊಳ್ಳಲು ನಿಮಗೆ ಎಚ್ಚರಿಸಿದವರು ಯಾರು?


ಅದಕ್ಕೆ ಯೋಹಾನನು, “‘ಪ್ರಭುವಿಗಾಗಿ ನೇರವಾದ ದಾರಿಯನ್ನು ಸಿದ್ಧಗೊಳಿಸಿರಿ’ ಎಂದು ಅಡವಿಯಲ್ಲಿ ಕೂಗುವವನ ಸ್ವರವೇ ನಾನು” ಎಂದು ಪ್ರವಾದಿಯಾದ ಯೆಶಾಯನ ಮಾತುಗಳಲ್ಲೇ ಉತ್ತರಕೊಟ್ಟನು.


ಪ್ರಭುವು (ಯೇಸು) ಅವನಿಗೆ ಹೇಳಿದ್ದೇನೆಂದರೆ: “ಫರಿಸಾಯರಾದ ನೀವು ಪಾತ್ರೆಯ ಮತ್ತು ಬಟ್ಟಲಿನ ಹೊರಭಾಗವನ್ನು ಶುಚಿಮಾಡುತ್ತೀರಿ. ಆದರೆ ನಿಮ್ಮ ಒಳಭಾಗವು ಮೋಸದಿಂದಲೂ ಕೆಟ್ಟತನದಿಂದಲೂ ತುಂಬಿಹೋಗಿದೆ.


ನೀವು ಪುನಃ ಎಂದಿಗೂ ‘ಯೆಹೋವನ ಭಾರ’ ಎಂಬ ಮಾತನ್ನು ಉಪಯೋಗಿಸಕೂಡದು. ಏಕೆಂದರೆ ಯೆಹೋವನ ಸಂದೇಶವು ಯಾರಿಗೂ ಭಾರವಾಗಬೇಕಾಗಿಲ್ಲ. ಆದರೆ ನೀವು ನಿಮ್ಮ ದೇವರ ಮಾತುಗಳನ್ನು ತಲೆಕೆಳಗೆ ಮಾಡಿದ್ದೀರಿ. ಆತನು ಸರ್ವಶಕ್ತನಾಗಿದ್ದಾನೆ ಮತ್ತು ಜೀವಸ್ವರೂಪನಾದ ದೇವರಾಗಿದ್ದಾನೆ.


ಈ ಲೋಕದ ಎಲ್ಲಾ ಕಾರ್ಯಗಳಲ್ಲಿ ಎಲ್ಲಕ್ಕಿಂತಲೂ ದುಃಖಕರವಾದದ್ದೇನೆಂದರೆ, ಎಲ್ಲರೂ ಒಂದೇ ರೀತಿಯಲ್ಲಿ ಅಂತ್ಯವಾಗುವರು. ಆದರೆ ಜನರು ದುಷ್ಟತನವನ್ನೂ ಮೂರ್ಖತನವನ್ನೂ ಆಲೋಚಿಸುತ್ತಲೇ ಇರುವುದು ಅಪಾಯಕರ. ಆಲೋಚನೆಗಳು ಅವರನ್ನು ಮರಣಕ್ಕೆ ನಡೆಸುತ್ತವೆ.


ಅವನ ಹೃದಯವು ಯೆಹೋವನ ಮಾರ್ಗಗಳಲ್ಲಿ ಆನಂದವನ್ನು ಕಂಡುಕೊಂಡಿತು. ಯೆಹೂದ ಪ್ರಾಂತ್ಯದಲ್ಲಿ ವಿಗ್ರಹಗಳ ಪೂಜಾಸ್ಥಳಗಳನ್ನೆಲ್ಲಾ ತೆಗೆದುಹಾಕಿಸಿ ಅಶೇರಸ್ತಂಭಗಳನ್ನು ಕಡಿದುಹಾಕಿಸಿ ಅವುಗಳನ್ನು ನಿರ್ಮೂಲ ಮಾಡಿದನು.


ನಾನು ಅವನೊಡನೆ ವಿಶೇಷವಾದ ಒಡಂಬಡಿಕೆಯನ್ನು ಮಾಡಿಕೊಂಡಿದ್ದೇನೆ. ಅವನು ತನ್ನ ಮಕ್ಕಳಿಗೂ ಸಂತತಿಯವರಿಗೂ ನನಗೆ ವಿಧೇಯರಾಗುವಂತೆ ಮತ್ತು ನ್ಯಾಯನೀತಿಗಳಿಂದ ಜೀವಿಸುವಂತೆ ಆಜ್ಞಾಪಿಸಲೆಂದು ನಾನು ಅವನೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡೆನು. ಅವರು ಹೀಗೆ ಜೀವಿಸಿದರೆ, ನನ್ನ ವಾಗ್ದಾನಗಳನ್ನೆಲ್ಲಾ ನೆರವೇರಿಸುವೆನು.”


ನೀನು ಮತ್ತು ಸ್ತ್ರೀಯು ಒಬ್ಬರಿಗೊಬ್ಬರು ವೈರಿಗಳಾಗಿರುವಂತೆ ಮಾಡುವೆನು. ನಿನ್ನ ಮಕ್ಕಳು ಮತ್ತು ಅವಳ ಮಕ್ಕಳು ಒಬ್ಬರಿಗೊಬ್ಬರು ವೈರಿಗಳಾಗಿರುವರು. ನೀನು ಆಕೆಯ ಮಗನ ಪಾದವನ್ನು ಕಚ್ಚುವೆ. ಆದರೆ ಅವನು ನಿನ್ನ ತಲೆಯನ್ನು ಜಜ್ಜಿ ಹಾಕುವನು” ಎಂದನು.


ನಾವು ಇನ್ನು ಮೇಲೆ ಕೂಸುಗಳಾಗಿರಬಾರದು. ಸಮುದ್ರದ ಅಲೆಗಳಿಂದ ಅತ್ತಿಂದಿತ್ತ ಚಲಿಸುವ ಹಡಗಿನಂತೆ ಚಂಚಲರಾಗಿರಬಾರದು. ನಮ್ಮನ್ನು ವಂಚಿಸುವುದಕ್ಕಾಗಿ ಜನರು ಹೇಳುವ ಯಾವುದೇ ಹೊಸ ಉಪದೇಶದಿಂದಾಗಲಿ ನಾವು ಚಂಚಲರಾಗಬಾರದು. ಜನರನ್ನು ಮೋಸಗೊಳಿಸಿ ಕೆಟ್ಟದಾರಿಗೆ ನಡೆಸಬೇಕೆಂಬ ಉದ್ದೇಶದಿಂದ ಆ ದುರ್ಬೋಧಕರು ನಾನಾ ಬಗೆಯ ಕುತಂತ್ರವನ್ನು ಮಾಡುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು