Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 13:15 - ಪರಿಶುದ್ದ ಬೈಬಲ್‌

15 ಮೋಶೆಯ ಧರ್ಮಶಾಸ್ತ್ರವನ್ನು ಮತ್ತು ಪ್ರವಾದಿಗಳ ಗ್ರಂಥಗಳನ್ನು ಓದಲಾಯಿತು. ಬಳಿಕ ಸಭಾಮಂದಿರದ ನಾಯಕರು ಪೌಲ ಬಾರ್ನಬರಿಗೆ, “ಸಹೋದರರೇ, ಇಲ್ಲಿರುವ ಜನರಿಗೆ ಸಹಾಯವಾಗುವಂತೆ ಏನನ್ನಾದರೂ ನೀವು ಹೇಳಬೇಕೆಂದಿದ್ದರೆ, ದಯವಿಟ್ಟು ಹೇಳಿ!” ಎಂಬ ಸಂದೇಶವನ್ನು ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಧರ್ಮಶಾಸ್ತ್ರ ಮತ್ತು ಪ್ರವಾದಿಗಳ ಗ್ರಂಥ ಇವುಗಳ ಪಾರಾಯಣವಾದ ಮೇಲೆ ಸಭಾಮಂದಿರದ ನಾಯಕರು; “ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿಮಾತೇನಾದರೂ ನಿಮಗಿದ್ದರೆ ಹೇಳಿರಿ” ಎಂದು ಅವರಿಗೆ ಹೇಳಿ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಧರ್ಮಶಾಸ್ತ್ರ ಮತ್ತು ಪ್ರವಾದಿಗಳ ಗ್ರಂಥಗಳಿಂದ ವಾಚನವಾದ ನಂತರ ಪ್ರಾರ್ಥನಾಮಂದಿರದ ಅಧಿಕಾರಿಗಳು ಅವರಿಗೆ, “ಸಹೋದರರೇ, ಜನರಿಗೆ ಉಪಯುಕ್ತವಾದ ಹಿತೋಕ್ತಿ ಏನಾದರೂ ಇದ್ದರೆ ಉಪದೇಶಮಾಡಿ,” ಎಂದು ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಧರ್ಮಶಾಸ್ತ್ರವು ಪ್ರವಾದಿಗಳ ಗ್ರಂಥವು ಇವುಗಳ ಪಾರಾಯಣವಾದ ಮೇಲೆ ಸಭಾಮಂದಿರದ ಯಜಮಾನರು - ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿ ಮಾತೇನಾದರೂ ನಿಮಗಿದ್ದರೆ ಹೇಳಿರಿ ಎಂದು ಅವರಿಗೆ ಹೇಳಿ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನಿಯಮ ಮತ್ತು ಪ್ರವಾದಿಗಳ ಗ್ರಂಥವು ಪಾರಾಯಣವಾದ ತರುವಾಯ, ಸಭಾಮಂದಿರದ ಅಧಿಕಾರಿಗಳು ಅವರಿಗೆ, “ಸಹೋದರರೇ, ಜನರಿಗೆ ಪ್ರೋತ್ಸಾಹ ಕೊಡುವ ಸಂದೇಶ ನಿಮ್ಮಲ್ಲಿದ್ದರೆ, ಮಾತನಾಡಿರಿ,” ಎಂದು ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಥೈ ಮೊಯ್ಜೆಚ್ಯಾ ಖಾಯ್ದ್ಯಾಂಚೆ ಪುಸ್ತಕ್ ಅನಿ ಪ್ರವಾದ್ಯಾಂಚೆ ಪುಸ್ತಕ್ ವಾಚುನ್ ಹೊಲೆ ಮಾನಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಚ್ಯಾ ಮುಖಂಡಾನ್ ಪಾವ್ಲುಕ್, ಅನಿ ಬಾರ್ನಾಬಾಸಾಕ್ ಭಾವಾನು, ಹಿತ್ತೆ ಹೊತ್ತ್ಯಾ ಲೊಕಾಕ್ನಿ ಉಮ್ಮೆದ್ ಬರಿ ಸಾರ್ಕೆ ತುಮಿ ಕಾಯ್‍ ತರಿಬಿ ಸಾಂಗುಚೆ ಮನುನ್ ರ್‍ಹಾಲ್ಯಾರ್ ದಯಾ ಕರುನ್ ಸಾಂಗಾ! ಮನುನ್ ಖಬರ್ ಧಾಡ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 13:15
21 ತಿಳಿವುಗಳ ಹೋಲಿಕೆ  

ನನ್ನ ಸಹೋದರ ಸಹೋದರಿಯರೇ, ನಾನು ಹೇಳಿದ ಈ ಸಂಗತಿಗಳನ್ನು ನೀವು ತಾಳ್ಮೆಯಿಂದ ಆಲಿಸಬೇಕೆಂದು ನಿಮ್ಮಲ್ಲಿ ಬೇಡಿಕೊಳ್ಳುತ್ತೇನೆ. ನಿಮ್ಮನ್ನು ಬಲಪಡಿಸುವುದಕ್ಕಾಗಿ ಈ ಪತ್ರವನ್ನು ಬರೆದಿರುವೆನು. ಈ ಪತ್ರವು ಬಹುದೀರ್ಘವಾದದ್ದೇನೂ ಅಲ್ಲ.


ಅವರು ಇವುಗಳನ್ನು ಮಾಡಕೂಡದು. ಏಕೆಂದರೆ ಮೋಶೆಯ ಧರ್ಮಶಾಸ್ತ್ರವನ್ನು ಬೋಧಿಸುವಂಥ ಜನರು ಪ್ರತಿಯೊಂದು ಪಟ್ಟಣದಲ್ಲಿ ಇನ್ನೂ ಇದ್ದಾರೆ. ಅನೇಕ ವರ್ಷಗಳಿಂದ ಪ್ರತಿ ಸಬ್ಬತ್ ದಿನದಲ್ಲಿ ಮೋಶೆಯ ಮಾತುಗಳನ್ನು ಓದಲಾಗುತ್ತಿದೆ” ಎಂದು ಹೇಳಿದನು.


ಸಭಾಮಂದಿರದ ಅಧಿಕಾರಿಯೊಬ್ಬನು ಆ ಸ್ಥಳಕ್ಕೆ ಬಂದನು. ಅವನ ಹೆಸರು ಯಾಯಿರ. ಅವನು ಯೇಸುವನ್ನು ಕಂಡು, ಆತನ ಮುಂದೆ ಅಡ್ಡಬಿದ್ದು ನಮಸ್ಕರಿಸಿ,


ಆದರೆ ಪ್ರವಾದಿಸುವವನು ಜನರೊಂದಿಗೆ ಮಾತಾಡುತ್ತಾನೆ. ಅವನು ಜನರಿಗೆ ಶಕ್ತಿಯನ್ನು, ಪ್ರೋತ್ಸಾಹವನ್ನು ಮತ್ತು ಆದರಣೆಯನ್ನು ಕೊಡುತ್ತಾನೆ.


ಉಪದೇಶಮಾಡುವ ವರವನ್ನು ಹೊಂದಿರುವವನು ಉಪದೇಶ ಮಾಡಬೇಕು. ಸಂತೈಸುವ ವರವನ್ನು ಹೊಂದಿರುವವನು ಬೇರೆಯವರನ್ನು ಸಂತೈಸಬೇಕು. ದಾನಮಾಡುವ ವರವನ್ನು ಹೊಂದಿರುವವನು ಉದಾರವಾಗಿ ಕೊಡಬೇಕು. ನಾಯಕತ್ವದ ವರವನ್ನು ಹೊಂದಿರುವವನು ನಾಯಕತ್ವವನ್ನು ವಹಿಸಿಕೊಂಡಿರುವಾಗ ಕಷ್ಟಪಟ್ಟು ದುಡಿಯಬೇಕು. ಕನಿಕರವನ್ನು ತೋರುವ ವರವನ್ನು ಹೊಂದಿರುವವನು ಆನಂದದಿಂದ ಆ ಕಾರ್ಯವನ್ನು ಮಾಡಬೇಕು.


ಪೌಲನು, “ನನ್ನ ಸಹೋದರರೇ, ನನ್ನ ತಂದೆಗಳೇ, ನನ್ನ ಪ್ರತಿವಾದವನ್ನು ಕೇಳಿರಿ!” ಎಂದನು.


ಬಳಿಕ ಅವರೆಲ್ಲರೂ ಸೋಸ್ಥೆನನನ್ನು ಹಿಡಿದುಕೊಂಡು ನ್ಯಾಯಾಲಯದ ಮುಂದೆಯೇ ಹೊಡೆದರು. (ಸೋಸ್ಥೆನನು ಆಗ ಸಭಾಮಂದಿರದ ಅಧ್ಯಕ್ಷನಾಗಿದ್ದನು.) ಆದರೆ ಗಲ್ಲಿಯೋನ ಅದನ್ನು ತನ್ನ ಗಮನಕ್ಕೆ ತೆಗೆದುಕೊಳ್ಳಲಿಲ್ಲ.


ಜೆರುಸಲೇಮಿನಲ್ಲಿ ವಾಸವಾಗಿದ್ದ ಯೆಹೂದ್ಯರು ಮತ್ತು ಯೆಹೂದ್ಯನಾಯಕರು ಯೇಸುವೇ ರಕ್ಷಕನೆಂಬುದನ್ನು ಅರ್ಥಮಾಡಿಕೊಳ್ಳಲಿಲ್ಲ. ಪ್ರವಾದಿಗಳು ಯೇಸುವಿನ ಬಗ್ಗೆ ಬರೆದಿದ್ದ ಮಾತುಗಳನ್ನು ಪ್ರತಿ ಸಬ್ಬತ್‌ದಿನದಂದು ಓದಲಾಗುತ್ತಿತ್ತು. ಆದರೆ ಅವರು ಅರ್ಥಮಾಡಿಕೊಳ್ಳಲಿಲ್ಲ. ಆ ಯೆಹೂದ್ಯರು ಯೇಸುವನ್ನು ಅಪರಾಧಿಯೆಂದು ತೀರ್ಪುಮಾಡಿದರು. ಹೀಗೆ ಮಾಡುವುದರ ಮೂಲಕವಾಗಿ ಅವರು ಪ್ರವಾದಿಗಳ ನುಡಿಗಳನ್ನು ನೆರವೇರಿಸಿದರು!


ಅವನು ಆ ಪ್ರದೇಶದಲ್ಲಿ ಪ್ರಯಾಣ ಮಾಡುತ್ತಾ ಅನೇಕ ಊರುಗಳಿಗೆ ಭೇಟಿನೀಡಿ, ಯೇಸುವಿನ ಶಿಷ್ಯರಿಗೆ ಅನೇಕ ಸಂಗತಿಗಳನ್ನು ತಿಳಿಸಿ ಬಲಪಡಿಸಿದನು. ಬಳಿಕ ಪೌಲನು ಗ್ರೀಸಿಗೆ (ಅಖಾಯ) ಹೋದನು.


ಕ್ರಿಸ್ಪನು ಸಭಾಮಂದಿರದ ಅಧ್ಯಕ್ಷನಾಗಿದ್ದನು. ಕ್ರಿಸ್ಪನು ಮತ್ತು ಅವನ ಮನೆಯಲ್ಲಿ ವಾಸವಾಗಿದ್ದ ಎಲ್ಲಾ ಜನರು ಪ್ರಭುವಿನಲ್ಲಿ ನಂಬಿಕೆಯಿಟ್ಟರು. ಕೊರಿಂಥದಲ್ಲಿ ಇತರ ಅನೇಕ ಜನರು ಪೌಲನಿಗೆ ಕಿವಿಗೊಟ್ಟರು ಮತ್ತು ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡರು.


ದೀರ್ಘಚರ್ಚೆಯಾಯಿತು. ಬಳಿಕ ಪೇತ್ರ ಎದ್ದುನಿಂತು ಅವರಿಗೆ, “ನನ್ನ ಸಹೋದರರೇ, ನಿಮಗೇ ತಿಳಿದಿರುವಂತೆ, ಯೆಹೂದ್ಯರಲ್ಲದ ಜನರಿಗೆ ಸುವಾರ್ತೆಯನ್ನು ಬೋಧಿಸುವುದಕ್ಕಾಗಿ ನಿಮ್ಮ ಮಧ್ಯದೊಳಗಿಂದ ದೇವರು ನನ್ನನ್ನು ಬಹುದಿನಗಳ ಹಿಂದೆ ಆರಿಸಿಕೊಂಡನು. ಅವರು ನನ್ನಿಂದ ಸುವಾರ್ತೆಯನ್ನು ಕೇಳಿ ನಂಬಿಕೊಂಡರು.


ಪ್ರತ್ಯುತ್ತರವಾಗಿ ಅವನು ಹೀಗೆಂದನು: “ನನ್ನ ಯೆಹೂದ್ಯತಂದೆಗಳೇ, ಸಹೋದರರೇ, ನನಗೆ ಕಿವಿಗೊಡಿರಿ. ನಮ್ಮ ಪಿತೃವಾದ ಅಬ್ರಹಾಮನಿಗೆ ನಮ್ಮ ಪ್ರಭಾವಸ್ವರೂಪನಾದ ದೇವರು ಕಾಣಸಿಕೊಂಡನು. ಅಬ್ರಹಾಮನು ಹಾರಾನಿನಲ್ಲಿ ವಾಸಮಾಡುವ ಮೊದಲು ಮೆಸಪೊಟೇಮಿಯದಲ್ಲಿದ್ದನು.


ಇದನ್ನು ಕೇಳಿದಾಗ, ಅವರ ಹೃದಯದಲ್ಲಿ ಅಲಗು ನೆಟ್ಟಂತಾಯಿತು. ಅವರು ಪೇತ್ರನನ್ನು ಮತ್ತು ಉಳಿದ ಅಪೊಸ್ತಲರನ್ನು, “ಈಗ ನಾವೇನು ಮಾಡಬೇಕು?” ಎಂದು ಕೇಳಿದರು.


“ನನ್ನ ಸಹೋದರರೇ, ನಮ್ಮ ಪಿತೃವಾದ ದಾವೀದನ ಬಗ್ಗೆ ನಾನು ನಿಮಗೆ ನಿಜವಾಗಿಯೂ ಹೇಳಬಲ್ಲೆನು. ಅವನು ಸತ್ತುಹೋದನು ಮತ್ತು ಅವನಿಗೆ ಸಮಾಧಿಯಾಯಿತು. ಅವನ ಸಮಾಧಿಯು ನಮ್ಮ ಮಧ್ಯದಲ್ಲಿ ಇಂದಿನವರೆಗೂ ಇದೆ.


ಅವರೆಲ್ಲರೂ ಪವಿತ್ರಾತ್ಮಭರಿತರಾದರು ಮತ್ತು ವಿವಿಧ ಭಾಷೆಗಳಲ್ಲಿ ಮಾತಾಡತೊಡಗಿದರು. ಪವಿತ್ರಾತ್ಮನೇ ಅವರಿಗೆ ಆ ಶಕ್ತಿಯನ್ನು ಕೊಟ್ಟನು.


“ಸಹೋದರರೇ, ಪವಿತ್ರಾತ್ಮನು ದಾವೀದನ ಮೂಲಕವಾಗಿ ಪವಿತ್ರ ಗ್ರಂಥದಲ್ಲಿ ಮುಂತಿಳಿಸಿದ್ದ ಸಂಗತಿ ನೆರವೇರಬೇಕಿತ್ತು. ನಮ್ಮ ಸ್ವಂತ ಗುಂಪಿನವರಲ್ಲಿ ಒಬ್ಬನಾದ ಯೂದನ ಬಗ್ಗೆ ದಾವೀದನು ಹೇಳಿದ್ದಾನೆ. ಯೂದನು ನಮ್ಮೊಂದಿಗೆ ಸೇವೆ ಮಾಡಿದನು. ಯೇಸುವನ್ನು ಬಂಧಿಸುವವರಿಗೆ ಯೂದನು ಮಾರ್ಗದರ್ಶಕನಾಗುತ್ತಾನೆಂದು ಪವಿತ್ರಾತ್ಮನು ತಿಳಿಸಿದ್ದನು.”


“ಜನರು ಮೋಶೆಯ ಧರ್ಮಶಾಸ್ತ್ರಕ್ಕೂ ಪ್ರವಾದಿಗಳ ಗ್ರಂಥಗಳಿಗೂ ಅನುಸಾರವಾಗಿ ಜೀವಿಸಬೇಕೆಂಬುದು ದೇವರ ಅಪೇಕ್ಷೆಯಾಗಿತ್ತು. ಸ್ನಾನಿಕನಾದ ಯೋಹಾನನು ಬಂದ ಕಾಲದಿಂದ ದೇವರ ರಾಜ್ಯದ ಸುವಾರ್ತೆಯು ತಿಳಿಸಲ್ಪಡುತ್ತಿದೆ. ಅನೇಕ ಜನರು ದೇವರ ರಾಜ್ಯದೊಳಗೆ ಹೋಗಲು ಬಹಳ ಪ್ರಯಾಸಪಡುತ್ತಿದ್ದಾರೆ.


ಆ ವಿಶ್ವಾಸಿಗಳಲ್ಲಿ ಯೋಸೇಫ ಎಂಬವನೂ ಇದ್ದನು. ಅಪೊಸ್ತಲರು ಅವನನ್ನು ಬಾರ್ನಬ ಎಂದು ಕರೆಯುತ್ತಿದ್ದರು. (ಬಾರ್ನಬ ಅಂದರೆ “ಧೈರ್ಯದಾಯಕ.”) ಸೈಪ್ರಸ್‌ನಲ್ಲಿ ಹುಟ್ಟಿದ ಇವನು ಲೇವಿಯನಾಗಿದ್ದನು.


ಆದರೆ ಅವರ ಬುದ್ಧಿಗೆ ಮಂಕು ಕವಿದಿದ್ದರಿಂದ ಅವರು ಅರ್ಥಮಾಡಿಕೊಳ್ಳಲಾಗಲಿಲ್ಲ. ಅವರು ಹಳೆ ಒಡಂಬಡಿಕೆಯನ್ನು ಓದುವಾಗ ಇಂದಿಗೂ ಅದೇ ಮುಸುಕು ಅರ್ಥವನ್ನು ಮರೆಮಾಡುತ್ತದೆ. ಆ ಮುಸುಕನ್ನು ತೆಗೆದು ಹಾಕಲಿಲ್ಲ. ಏಕೆಂದರೆ ಕ್ರಿಸ್ತನ ಮೂಲಕವಾಗಿ ಮಾತ್ರ ಅದು ತೆಗೆದುಹಾಕಲ್ಪಡುತ್ತದೆ.


ನಮ್ಮ ಬೋಧನೆಯು ತಪ್ಪೂ ಅಲ್ಲ ಮತ್ತು ಅಶುದ್ಧವಾದ ಉದ್ದೇಶವನ್ನು ಹೊಂದಿಯೂ ಇಲ್ಲ ಮತ್ತು ನಿಮ್ಮನ್ನು ಮೋಸಗೊಳಿಸುವ ಪ್ರಯತ್ನವೂ ಅಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು