ಸಮುವೇಲನು ವಿಶೇಷವಾದ ಎಣ್ಣೆಯ ಕುಪ್ಪಿಯನ್ನು ತೆಗೆದುಕೊಂಡು ಸೌಲನ ತಲೆಯ ಮೇಲೆ ಆ ಎಣ್ಣೆಯನ್ನು ಸುರಿದನು. ಸಮುವೇಲನು ಸೌಲನಿಗೆ ಮುದ್ದಿಟ್ಟು, “ಯೆಹೋವನು ತನ್ನ ಜನರನ್ನು ಮುಂದೆ ನಡೆಸಲು ನಿನ್ನನ್ನು ಅವರಿಗೆ ನಾಯಕನನ್ನಾಗಿ ಅಭಿಷೇಕಿಸಿದ್ದಾನೆ. ನೀನು ಯೆಹೋವನ ಜನರನ್ನು ಆಳುವೆ; ಅವರನ್ನು ಸುತ್ತುವರೆದಿರುವ ಶತ್ರುಗಳಿಂದ ರಕ್ಷಿಸುವೆ. ಯೆಹೋವನು ತನ್ನ ಜನರನ್ನು ಆಳುವುದಕ್ಕಾಗಿ ನಿನ್ನನ್ನು ಅಭಿಷೇಕಿಸಿದ್ದಾನೆ. ಇದು ನಿಜವೆಂಬುದಕ್ಕೆ ಸಾಕ್ಷಿಯೇನೆಂದರೆ:
ಜನರೆಲ್ಲ ಗಿಲ್ಗಾಲಿಗೆ ಹೋದರು. ಅಲ್ಲಿ ಯೆಹೋವನ ಸಮ್ಮುಖದಲ್ಲಿ ಜನರೆಲ್ಲ ಸೌಲನನ್ನು ರಾಜನನ್ನಾಗಿ ಮಾಡಿದರು. ಅವರೆಲ್ಲರು ಯೆಹೋವನಿಗೆ ಸಮಾಧಾನಯಜ್ಞಗಳನ್ನು ಅರ್ಪಿಸಿದರು. ಸೌಲನು ಮತ್ತು ಇಸ್ರೇಲರೆಲ್ಲಾ ಒಂದು ದೊಡ್ಡ ಉತ್ಸವವನ್ನೇ ಮಾಡಿದರು.
ಹಿರಿಯರು ಸಮುವೇಲನಿಗೆ, “ನೀನು ಮುದುಕನಾಗಿರುವೆ ಮತ್ತು ನಿನ್ನ ಮಕ್ಕಳು ಒಳ್ಳೆಯ ಮಾರ್ಗದಲ್ಲಿ ನಡೆಯುತ್ತಿಲ್ಲ, ಅವರು ನಿನ್ನಂತಲ್ಲ. ಈಗ, ಬೇರೆ ದೇಶಗಳಂತೆ ಒಬ್ಬ ರಾಜನನ್ನು ನಮ್ಮನ್ನಾಳಲು ನೇಮಿಸು” ಎಂದು ಹೇಳಿದರು.