Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 13:22 - ಪರಿಶುದ್ದ ಬೈಬಲ್‌

22 ದೇವರು ಸೌಲನನ್ನು ತೆಗೆದುಹಾಕಿದ ಮೇಲೆ ದಾವೀದನನ್ನು ಅವರ ರಾಜನನ್ನಾಗಿ ಮಾಡಿದನು. ‘ಇಷಯನ ಮಗನಾದ ದಾವೀದನು ನನಗೆ ಮೆಚ್ಚಿಗೆಯಾದವನು. ಅವನು ನನ್ನ ಅಪೇಕ್ಷೆಗೆ ತಕ್ಕಂತೆ ಕಾರ್ಯಗಳನ್ನು ಮಾಡುತ್ತಾನೆ’ ಎಂದು ದೇವರು ದಾವೀದನ ಬಗ್ಗೆ ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆ ಮೇಲೆ ದೇವರು ಅವನನ್ನು ತೆಗೆದುಹಾಕಿ ದಾವೀದನನ್ನು ಅವರ ಮೇಲೆ ಅರಸನನ್ನಾಗಿ ನೇಮಕಮಾಡಿ; ‘ಇಷಯನ ಮಗನಾದ ದಾವೀದನು ನನಗೆ ಸಿಕ್ಕಿದನು, ಅವನು ನನ್ನ ಹೃದಯಕ್ಕೆ ಒಪ್ಪುವ ಮನುಷ್ಯನು, ಅವನು ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸುವನು’ ಎಂಬುದಾಗಿ ಅವನ ವಿಷಯವಾಗಿ ಸಾಕ್ಷಿಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅನಂತರ ದೇವರು ಸೌಲನನ್ನು ತ್ಯಜಿಸಿ ದಾವೀದನನ್ನು ಅರಸನನ್ನಾಗಿ ನೇಮಿಸಿದರು. ಇವನ ಬಗ್ಗೆ ದೇವರು, “ಜೆಸ್ಸೆಯನ ಮಗ ದಾವೀದನು ನನಗೆ ಮೆಚ್ಚುಗೆಯಾದ ವ್ಯಕ್ತಿ; ಇವನು ನನ್ನ ಆಶೆ ಆಕಾಂಕ್ಷೆಗಳನ್ನೆಲ್ಲಾ ಪೂರೈಸುವನು,” ಎಂದು ತಮ್ಮ ಒಪ್ಪಿಗೆಯನ್ನು ಸೂಚಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆಮೇಲೆ ದೇವರು ಅವನನ್ನು ತೆಗೆದುಹಾಕಿ ದಾವೀದನನ್ನು ಅವರ ಮೇಲೆ ಅರಸನನ್ನಾಗಿ ಮಾಡಿ - ಇಷಯನ ಮಗನಾದ ದಾವೀದನು ನನಗೆ ಸಿಕ್ಕಿದನು, ಅವನು ನನಗೆ ಒಪ್ಪುವ ಮನುಷ್ಯನು, ಅವನು ನನ್ನ ಇಷ್ಟವನ್ನೆಲ್ಲಾ ನೆರವೇರಿಸುವನು ಎಂಬದಾಗಿ ಅವನ ವಿಷಯದಲ್ಲಿ ಸಾಕ್ಷಿಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ದೇವರು ಸೌಲನನ್ನು ಅರಸುತನದಿಂದ ತೆಗೆದುಹಾಕಿ, ದೇವರು ದಾವೀದನನ್ನು ಅವರ ಅರಸನನ್ನಾಗಿ ಎಬ್ಬಿಸಿದರು. ಇವನನ್ನು ಕುರಿತು, ‘ಇಷಯನ ಮಗ ದಾವೀದನು ನನಗೆ ಸಿಕ್ಕಿದನು. ನನ್ನ ಹೃದಯಕ್ಕೆ ತಕ್ಕಂಥ ಮನುಷ್ಯನು; ಇವನು ನಾನು ಅಪೇಕ್ಷಿಸುವುದೆಲ್ಲವನ್ನೂ ಮಾಡುವನು,’ ಎಂದು ದೇವರು ತಾವೇ ಸಾಕ್ಷಿಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಸಾವ್ಲಾಕ್ ಕಾಡುನ್ ಘಾಟ್ಲ್ಯಾ ಮಾನಾ ದಾವಿದಾಕ್ ದೆವಾನ್ ತೆಂಚೊ ರಾಜಾ ಕರ್‍ಲ್ಯಾನ್, “ಕಿಸಿಯಾಚೊ ಲೆಕ್ ದಾವಿದ್ ಮಾಜ್ಯಾ ಮನಾ ಸಾರ್ಕೊ ಹೊವ್ನ್ ಹಾಯ್, ಅನಿ ತೊ ಮಾಜ್ಯಾ ಇಚ್ಚ್ಯಾ ಸಾರ್ಕೆಚ್ ಕಾಮಾ ಕರ್‍ತಾ” ಮನುನ್ ದೆವಾನ್ ದಾವಿದಾಚ್ಯಾ ವಿಶಯಾತ್ ಸಾಂಗ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 13:22
32 ತಿಳಿವುಗಳ ಹೋಲಿಕೆ  

ಯೆಹೋವನು ಇಚ್ಛಿಸಿದ ಕಾರ್ಯಗಳನ್ನು ದಾವೀದನು ಯಾವಾಗಲೂ ಮಾಡುತ್ತಿದ್ದನು. ಯೆಹೋವನ ಆಜ್ಞೆಗಳಿಗೆ ಅವನು ಯಾವಾಗಲೂ ವಿಧೇಯತೆಯಿಂದಿದ್ದನು. ದಾವೀದನು ಹಿತ್ತಿಯನಾದ ಊರೀಯನ ವಿಷಯದಲ್ಲಿ ಮಾತ್ರ ಯೆಹೋವನಿಗೆ ಅವಿಧೇಯನಾದನು.


ಸಮುವೇಲನು ಎಣ್ಣೆಯಿದ್ದ ಕೊಂಬನ್ನು ತೆಗೆದುಕೊಂಡು, ಅದರಲ್ಲಿದ್ದ ವಿಶೇಷವಾದ ಎಣ್ಣೆಯನ್ನು ಇಷಯನ ಕಿರಿಮಗನ ಮೇಲೆ, ಅವನ ಸೋದರರ ಎದುರಿನಲ್ಲೇ ಸುರಿದನು. ಆ ದಿನದಿಂದ ಯೆಹೋವನ ಆತ್ಮವು ಮಹಾಶಕ್ತಿಯೊಡನೆ ದಾವೀದನಲ್ಲಿ ನೆಲೆಸಿತು. ಅನಂತರ ಸಮುವೇಲನು ರಾಮಕ್ಕೆ ಹಿಂದಿರುಗಿದನು.


ಯೆಹೋವನು ಸಮುವೇಲನಿಗೆ, “ನೀನು ಸೌಲನಿಗಾಗಿ ಎಷ್ಟುಕಾಲ ಶೋಕಿಸುವೆ? ನಾನು ಸೌಲನನ್ನು ಇಸ್ರೇಲರ ರಾಜತ್ವದಿಂದ ತಿರಸ್ಕರಿಸಿರುತ್ತೇನೆ. ನೀನು ಕೊಂಬಿನಲ್ಲಿ ಎಣ್ಣೆಯನ್ನು ತುಂಬಿಕೊಂಡು ಬಾ. ನಾನು ನಿನ್ನನ್ನು ಇಷಯನೆಂಬ ಮನುಷ್ಯನ ಬಳಿಗೆ ಕಳುಹಿಸುತ್ತೇನೆ. ಇಷಯನು ಬೆತ್ಲೆಹೇಮಿನಲ್ಲಿ ವಾಸಿಸುತ್ತಿದ್ದನು. ನಾನು ಅವನ ಮಕ್ಕಳಲ್ಲಿ ಒಬ್ಬನನ್ನು ಹೊಸ ರಾಜನನ್ನಾಗಿ ಆರಿಸಿದ್ದೇನೆ” ಎಂದು ಹೇಳಿದನು.


ಆಗ ಸಮುವೇಲನು ಸೌಲನಿಗೆ, “ನೀನು ನನ್ನ ಮೇಲಂಗಿಯನ್ನು ಹರಿದುಹಾಕಿದೆ. ಇದೇರೀತಿ ಯೆಹೋವನು ಈ ದಿನ ನಿನ್ನಿಂದ ಇಸ್ರೇಲ್ ರಾಜ್ಯವನ್ನು ಹರಿದುಹಾಕಿದನು. ನಿನ್ನ ಸ್ನೇಹಿತರಲ್ಲಿ ಒಬ್ಬನಿಗೆ ಯೆಹೋವನು ರಾಜ್ಯಾಧಿಕಾರವನ್ನು ಕೊಟ್ಟಿದ್ದಾನೆ. ಅವನು ನಿನಗಿಂತ ಉತ್ತಮ ವ್ಯಕ್ತಿ.


ಆದರೆ ಸಮುವೇಲನು ಸೌಲನಿಗೆ, “ನಾನು ಹಿಂದಿರುಗಿ ನಿನ್ನ ಜೊತೆಯಲ್ಲಿ ಬರುವುದಿಲ್ಲ; ನೀನು ಯೆಹೋವನ ಆಜ್ಞೆಯನ್ನು ನಿರಾಕರಿಸಿರುವೆ. ಈಗ ಆತನೂ ನಿನ್ನನ್ನು ಇಸ್ರೇಲಿನ ರಾಜತ್ವದಿಂದ ನಿರಾಕರಿಸುತ್ತಾನೆ” ಎಂದು ಹೇಳಿದನು.


ದೇವರು ದಾವೀದನನ್ನು ಬಹಳವಾಗಿ ಮೆಚ್ಚಿಕೊಂಡನು. ‘ಯಾಕೋಬನ ದೇವರಾದ ನಿನಗಾಗಿ ಒಂದು ಆಲಯವನ್ನು ಕಟ್ಟಲು ನನಗೆ ಅವಕಾಶಕೊಡು’ ಎಂದು ದಾವೀದನು ದೇವರನ್ನು ಕೇಳಿಕೊಂಡನು.


ಅವನಿಗಿಂತಲೂ ಮುಂಚೆ ಅವನ ತಂದೆಯು ಮಾಡಿದ ಪಾಪಗಳನ್ನೇ ಅವನೂ ಮಾಡಿದನು. ಅವನ ಪಿತೃವಾದ ದಾವೀದನು ತನ್ನ ದೇವರಾದ ಯೆಹೋವನಿಗೆ ನಂಬಿಗಸ್ತನಾಗಿದ್ದಂತೆ ಅಬೀಯಾಮನು ನಂಬಿಗಸ್ತನಾಗಿರಲಿಲ್ಲ.


“ನೀನು ಇದನ್ನು ನನ್ನ ಸೇವಕನಾದ ದಾವೀದನಿಗೆ ಹೇಳಲೇಬೇಕು: ‘ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, ಹುಲ್ಲುಗಾವಲಿನಲ್ಲಿ ಕುರಿಕಾಯುತ್ತಿದ್ದ ನಿನ್ನನ್ನು ನಾನು ನನ್ನ ಜನರಾದ ಇಸ್ರೇಲರಿಗೆ ನಾಯಕನಾಗಿ ಮಾಡಲು ಕರೆತಂದೆನು.


ಯೆಹೂದದ ಜನರು ಬಂದು ದಾವೀದನನ್ನು ಯೆಹೂದದ ರಾಜನನ್ನಾಗಿ ಅಭಿಷೇಕಿಸಿದರು. ಬಳಿಕ ಅವರು ದಾವೀದನಿಗೆ, “ಸೌಲನ ಸಮಾಧಿ ಮಾಡಿದವರು ಯಾಬೇಷ್ ಗಿಲ್ಯಾದಿನವರೇ” ಎಂದು ಹೇಳಿದರು.


ಅವಿಧೇಯತೆಯು ಮಾಟಮಂತ್ರಗಳಷ್ಟೇ ಪಾಪಪೂರಿತವಾದುದು. ಮೊಂಡುತನದಿಂದ ತನ್ನ ಇಷ್ಟದಂತೆ ಮಾಡುವುದು ವಿಗ್ರಹಾರಾಧನೆಯಷ್ಟೇ ಪಾಪಪೂರಿತವಾದುದು. ನೀನು ಯೆಹೋವನ ಆಜ್ಞೆಗಳಿಗೆ ವಿಧೇಯನಾಗಲಿಲ್ಲ. ಈ ಕಾರಣದಿಂದ ಈಗ ಯೆಹೋವನು ನಿನ್ನನ್ನು ರಾಜನನ್ನಾಗಿ ಸ್ವೀಕರಿಸಿಕೊಳ್ಳುವುದಿಲ್ಲ” ಎಂದು ಸೌಲನಿಗೆ ಉತ್ತರಿಸಿದನು.


ಎಲ್ಲಾ ಜನರ ಆಲೋಚನೆಗಳನ್ನು ಬಲ್ಲ ದೇವರು ಯೆಹೂದ್ಯರಲ್ಲದ ಜನರನ್ನೂ ಸ್ವೀಕರಿಸಿಕೊಂಡನು. ದೇವರು ನಮಗೆ ಪವಿತ್ರಾತ್ಮನನ್ನು ಕೊಟ್ಟಂತೆಯೇ ಅವರಿಗೂ ಪವಿತ್ರಾತ್ಮನನ್ನು ಕೊಟ್ಟು ಇದನ್ನು ರುಜುವಾತುಪಡಿಸಿದ್ದಾನೆ.


ಹೀಗೆ ಇದ್ದ ಬಳಿಕ ಇಸ್ರೇಲರು ಹಿಂತಿರುಗಿ ಬರುವರು. ಆಗ ಅವರು ತಮ್ಮ ದೇವರಾದ ಯೆಹೋವನನ್ನೂ ಅವರ ಅರಸನಾದ ದಾವೀದನನ್ನೂ ಹುಡುಕುವರು. ಕೊನೆಯ ದಿವಸಗಳಲ್ಲಿ ತಮ್ಮ ದೇವರಾದ ಯೆಹೋವನನ್ನೂ ಆತನ ಒಳ್ಳೆಯತನವನ್ನೂ ಗೌರವಿಸಲು ಬರುವರು.


ಅವರನ್ನು ತ್ಯಜಿಸಬಹುದೇನೋ! ಯಾಕೋಬನ ಸಂತಾನದವರನ್ನು ತ್ಯಜಿಸಿ ದಾವೀದನ ವಂಶದವರು ಅಬ್ರಹಾಮ, ಇಸಾಕ ಮತ್ತು ಯಾಕೋಬರ ಸಂತತಿಯವರನ್ನು ಆಳದಂತೆ ಮಾಡಬಹುದೇನೋ! ಆದರೆ ದಾವೀದನು ನನ್ನ ಸೇವಕ. ನಾನು ಅವರಿಗೆ ಕರುಣೆ ತೋರೇ ತೋರುವೆನು; ಅವರಿಗೆ ಒಳ್ಳೆಯದಾಗುವಂತೆ ಮಾಡೇ ಮಾಡುವೆನು.”


ಸೌಲನು ಯೆಹೋವನಿಗೆ ಅವಿಧೇಯನಾಗಿದ್ದರಿಂದ ಸತ್ತನು. ಅವನು ಯೆಹೋವನ ಮಾತನ್ನು ಕೇಳದೆ ಹೋದನು.


ಆದರೆ ನಾನು ಅವನನ್ನು ಪ್ರೀತಿಸುವುದನ್ನು ನಿಲ್ಲಿಸುವುದಿಲ್ಲ. ಅವನು ಯಾವಾಗಲೂ ನನ್ನ ಕರುಣಾಶ್ರಯದಲ್ಲಿರುವನು. ಸೌಲನ ಮೇಲಿಟ್ಟಿದ್ದ ಪ್ರೀತಿಯನ್ನು ಮತ್ತು ದಯೆಯನ್ನು ಹಿಂತೆಗೆದುಕೊಂಡೆನು. ಸೌಲನನ್ನು ನಿನ್ನ ಎದುರಿನಿಂದ ನಾನು ದೂರ ತಳ್ಳಿದೆನು. ನಾನು ನಿನ್ನ ಕುಟುಂಬಕ್ಕೆ ಹಾಗೆ ಮಾಡುವುದಿಲ್ಲ.


ಹೀಗೆ ಸೌಲನು ಮತ್ತು ಅವನ ಮೂವರು ಗಂಡುಮಕ್ಕಳೂ ಮತ್ತು ಸೌಲನ ಆಯುಧವಾಹಕನೂ ಅದೇ ದಿನ ಸತ್ತುಹೋದರು.


ಯೆಹೋವನು ಸಮುವೇಲನಿಗೆ, “ಸೌಲನು ನನ್ನ ಮಾರ್ಗವನ್ನು ತ್ಯಜಿಸಿದನು. ನಾನು ಸೌಲನನ್ನು ರಾಜನನ್ನಾಗಿ ಮಾಡಿದ್ದಕ್ಕಾಗಿ ಪಶ್ಚಾತ್ತಾಪಪಡುತ್ತೇನೆ. ನಾನು ಆಜ್ಞಾಪಿಸಿದ ಕಾರ್ಯಗಳನ್ನು ಅವನು ಮಾಡುತ್ತಿಲ್ಲ” ಎಂದು ಹೇಳಿದನು. ಸಮುವೇಲನು ತಳಮಳಗೊಂಡನು. ಅವನು ರಾತ್ರಿಯೆಲ್ಲ ಅಳುತ್ತಾ ಯೆಹೋವನಲ್ಲಿ ಮೊರೆಯಿಟ್ಟನು.


ಆದರೆ ನೀವು ಮೊಂಡರಾಗಿ ಕೆಟ್ಟಕಾರ್ಯಗಳನ್ನು ಮಾಡಿದ್ದಾದರೆ ಯೆಹೋವನು ನಿಮ್ಮನ್ನು ಮತ್ತು ನಿಮ್ಮ ರಾಜನನ್ನು ನಾಶಪಡಿಸುತ್ತಾನೆ” ಎಂದು ಹೇಳಿದನು.


ಆಮೇಲೆ ನಾನು ಅವರಿಗೆ ಒಬ್ಬ ಕುರುಬನನ್ನು ನೇಮಿಸುವೆನು. ಅವನು ನನ್ನ ಸೇವಕನಾದ ದಾವೀದನು; ಅವನು ಅವರನ್ನು ಮೇಯಿಸುವನು ಮತ್ತು ಅವರಿಗೆ ಕುರುಬನಾಗುವನು.


ನೀವು ದಾವೀದನ ಮತ್ತು ಲೇವಿಯರ ಜೊತೆ ನಾನು ಮಾಡಿಕೊಂಡ ಒಡಂಬಡಿಕೆಯನ್ನೂ ಬದಲಾಯಿಸಬಹುದು. ಆಗ ದಾವೀದನ ವಂಶದವರು ರಾಜರಾಗಲಾರರು ಮತ್ತು ಲೇವಿಯರ ವಂಶದವರು ಯಾಜಕರಾಗಲಾರರು.


ಸಮುವೇಲನು, “ಯೆಹೋವನು ನಿನ್ನನ್ನು ತ್ಯಜಿಸಿದ್ದಾನೆ. ಈಗ ಆತನು ನಿನ್ನ ವಿರೋಧಿಯಾಗಿದ್ದಾನೆ. ಆದ್ದರಿಂದ ನನ್ನನ್ನೇಕೆ ಕರೆಯುವೆ?


“ದಾವೀದನು ತನ್ನ ಜೀವಮಾನಕಾಲದಲ್ಲಿ ದೇವರ ಚಿತ್ತಕ್ಕನುಸಾರವಾಗಿ ಬಾಳಿದನು. ಬಳಿಕ ಅವನು ಸತ್ತುಹೋದನು. ದಾವೀದನನ್ನು ಅವನ ಪಿತೃಗಳೊಂದಿಗೆ ಸಮಾಧಿಮಾಡಲಾಯಿತು. ಅವನ ದೇಹ ಸಮಾಧಿಯಲ್ಲಿ ಕೊಳೆತುಹೋಯಿತು!


ಬೋವಜನು ಓಬೇದನ ತಂದೆ. ಓಬೇದನು ಇಷಯನ ತಂದೆ. ಇಷಯನು ಎಲೀಯಾಬನ ತಂದೆ. ಎಲೀಯಾಬನು ಇಷಯನ ಚೊಚ್ಚಲಮಗನು; ಎರಡನೆಯವನು ಅಬೀನಾದಾಬ್; ಮೂರನೆಯವನು ಶಿಮ್ಮ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು