ಅಪೊಸ್ತಲರ ಕೃತ್ಯಗಳು 13:27 - ಪರಿಶುದ್ದ ಬೈಬಲ್27 ಜೆರುಸಲೇಮಿನಲ್ಲಿ ವಾಸವಾಗಿದ್ದ ಯೆಹೂದ್ಯರು ಮತ್ತು ಯೆಹೂದ್ಯನಾಯಕರು ಯೇಸುವೇ ರಕ್ಷಕನೆಂಬುದನ್ನು ಅರ್ಥಮಾಡಿಕೊಳ್ಳಲಿಲ್ಲ. ಪ್ರವಾದಿಗಳು ಯೇಸುವಿನ ಬಗ್ಗೆ ಬರೆದಿದ್ದ ಮಾತುಗಳನ್ನು ಪ್ರತಿ ಸಬ್ಬತ್‌ದಿನದಂದು ಓದಲಾಗುತ್ತಿತ್ತು. ಆದರೆ ಅವರು ಅರ್ಥಮಾಡಿಕೊಳ್ಳಲಿಲ್ಲ. ಆ ಯೆಹೂದ್ಯರು ಯೇಸುವನ್ನು ಅಪರಾಧಿಯೆಂದು ತೀರ್ಪುಮಾಡಿದರು. ಹೀಗೆ ಮಾಡುವುದರ ಮೂಲಕವಾಗಿ ಅವರು ಪ್ರವಾದಿಗಳ ನುಡಿಗಳನ್ನು ನೆರವೇರಿಸಿದರು! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಯೆರೂಸಲೇಮಿನಲ್ಲಿ ವಾಸವಾಗಿರುವವರೂ, ಅವರ ಅಧಿಕಾರಿಗಳೂ, ಆತನನ್ನಾಗಲಿ, ಪ್ರತಿ ಸಬ್ಬತ್ ದಿನದಲ್ಲಿ ಪಾರಾಯಣವಾಗುವ ಪ್ರವಾದಿಗಳ ಮಾತುಗಳನ್ನಾಗಲಿ ಗ್ರಹಿಸದೆ, ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ಮಾತುಗಳನ್ನೇ ನೆರವೇರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಜೆರುಸಲೇಮಿನ ನಿವಾಸಿಗಳು ಮತ್ತು ಅವರ ಅಧಿಕಾರಿಗಳು ಯೇಸು ಲೋಕೋದ್ಧಾರಕನೆಂದು ಅರಿತುಕೊಳ್ಳಲಿಲ್ಲ. ಪ್ರತಿ ಸಬ್ಬತ್‍ದಿನ ಓದಲಾದ ಪ್ರವಾದಿಗಳ ವಾಕ್ಯಗಳನ್ನು ಅವರು ಗ್ರಹಿಸಿಕೊಳ್ಳಲಿಲ್ಲ. ಯೇಸುವಿಗೆ ಮರಣದಂಡನೆಯನ್ನು ವಿಧಿಸಿ ಆ ಪ್ರವಾದನೆಗಳು ನಿಜವಾಗಲು ಕಾರಣರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಯೆರೂಸಲೇವಿುನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿಗಳೂ ಆತನನ್ನಾಗಲಿ ಪ್ರತಿ ಸಬ್ಬತ್ ದಿನದಲ್ಲಿ ಪಾರಾಯಣವಾಗುವ ಪ್ರವಾದಿಗಳ ವಾಕ್ಯಗಳನ್ನಾಗಲಿ ಗ್ರಹಿಸದೆ ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ವಾಕ್ಯಗಳನ್ನೇ ನೆರವೇರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಯೆರೂಸಲೇಮಿನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿಗಳೂ ಯೇಸುವನ್ನು ಯಾರೆಂದು ಗುರುತಿಸಿಲಿಲ್ಲ. ಆದರೂ ಅವರು ಪ್ರತಿ ಸಬ್ಬತ್ ದಿನದಲ್ಲಿ ಪಾರಾಯಣವಾಗುವ ಪ್ರವಾದಿಗಳ ವಾಕ್ಯಗಳನ್ನೂ ಗ್ರಹಿಸಲಿಲ್ಲ. ಅವರು ಯೇಸುವನ್ನು ಅಪರಾಧಿಯೆಂದು ತೀರ್ಪು ಮಾಡಿ, ಪ್ರವಾದಿಗಳ ವಾಕ್ಯಗಳನ್ನು ನೆರವೇರಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್27 ಜೆರುಜಲೆಮಾತ್ ಹೊತ್ತ್ಯಾ ಜುದೆವಾನಿ ಅನಿ ಜುದೆವಾಂಚ್ಯಾ ಮುಂಖಡಾನಿ ಜೆಜುಚ್ ಅರ್ಥ್ ಕರುನ್ ಘೆವ್ಕ್ ನಾತ್, ಹರ್ ಎಕ್ ಸಬ್ಬತಾಚ್ಯಾ ದಿಸಾಬಿ ಪ್ರವಾದ್ಯಾಚಿ ಗೊಸ್ಟಿಯಾ ಪುರಾ ಹೊಲಿ. ಅಧ್ಯಾಯವನ್ನು ನೋಡಿ |
ಪೌಲನು ಮತ್ತು ಯೆಹೂದ್ಯರು ಸಭೆಸೇರಲು ಒಂದು ದಿನವನ್ನು ಗೊತ್ತುಮಾಡಿದರು. ಅಂದು ಇನ್ನೂ ಅನೇಕ ಮಂದಿ ಯೆಹೂದ್ಯರು ಪೌಲನ ಮನೆಯಲ್ಲಿ ಸಭೆಸೇರಿದರು. ಪೌಲನು ಬೆಳಗ್ಗೆಯಿಂದ ಸಂಜೆಯವರೆಗೂ ಅವರೊಂದಿಗೆ ಮಾತಾಡಿದನು; ದೇವರ ರಾಜ್ಯದ ಬಗ್ಗೆ ಅವರಿಗೆ ವಿವರಿಸಿದನು. ಯೇಸುವಿನ ವಿಷಯವಾದ ಸಂಗತಿಗಳಲ್ಲಿ ನಂಬಿಕೆ ಇಡುವಂತೆ ಅವರನ್ನು ಒಪ್ಪಿಸಲು ಪ್ರಯತ್ನಿಸಿದನು. ಇದಕ್ಕಾಗಿ ಅವನು ಮೋಶೆಯ ಧರ್ಮಶಾಸ್ತ್ರವನ್ನೂ ಪ್ರವಾದಿಗಳ ಗ್ರಂಥಗಳನ್ನೂ ಬಳಸಿಕೊಂಡನು.