Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 13:31 - ಪರಿಶುದ್ದ ಬೈಬಲ್‌

31 ಇದಾದ ಮೇಲೆ ಗಲಿಲಾಯದಿಂದ ಯೇಸುವಿನೊಂದಿಗೆ ಜೆರುಸಲೇಮಿಗೆ ಬಂದಿದ್ದವರು, ಅನೇಕ ದಿನಗಳವರೆಗೆ ಆತನನ್ನು ನೋಡಿದರು. ಈಗ ಅವರೇ ಜನರಿಗೆ ಸಾಕ್ಷಿಗಳಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಮತ್ತು ಆತನು ಗಲಿಲಾಯದಿಂದ ಯೆರೂಸಲೇಮಿಗೆ ತನ್ನ ಜೊತೆಯಲ್ಲಿ ಬಂದವರಿಗೆ ಅನೇಕ ದಿನಗಳವರೆಗೂ ಕಾಣಿಸಿಕೊಂಡನು; ಈಗ ಅವರು ಜನರಿಗೆ ಆತನ ಸಾಕ್ಷಿಗಳಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಹೀಗೆ ಪುನರುತ್ಥಾನ ಹೊಂದಿದ ಯೇಸು, ಗಲಿಲೇಯದಿಂದ ತಮ್ಮೊಡನೆ ಜೆರುಸಲೇಮಿಗೆ ಬಂದಿದ್ದವರಿಗೆ ಕಾಣಿಸಿಕೊಂಡರು. ಆ ವ್ಯಕ್ತಿಗಳೇ ಈಗ ನಮ್ಮ ಜನರ ಮಧ್ಯೆ ಇರುವ ಯೇಸುವಿನ ಪರವಾದ ಸಾಕ್ಷಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಮತ್ತು ಆತನು ಗಲಿಲಾಯದಿಂದ ಯೆರೂಸಲೇವಿುಗೆ ತನ್ನ ಜೊತೆಯಲ್ಲಿ ಬಂದವರಿಗೆ ಅನೇಕ ದಿವಸಗಳ ಪರಿಯಂತರ ಕಾಣಿಸಿಕೊಂಡನು. ಅವರು ಈಗ ಜನರ ಮುಂದೆ ಆತನಿಗೆ ಸಾಕ್ಷಿಗಳಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಯೇಸುವಿನೊಡನೆ ಗಲಿಲಾಯದಿಂದ ಯೆರೂಸಲೇಮಿನವರೆಗೆ ಮುಂಚೆ ಬಂದಿದ್ದವರಿಗೆ ಯೇಸು ಅನೇಕ ದಿನಗಳವರೆಗೆ ಕಾಣಿಸಿಕೊಂಡರು. ಈಗ ಅವರೇ ನಮ್ಮ ಜನರಿಗೆ ಯೇಸುವಿನ ಸಾಕ್ಷಿಗಳಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ಹೆ ಹೊಲ್ಲ್ಯಾ ಮಾನಾ ಜೆಜು ವಾಂಗ್ಡಾ ಗಲಿಲಾಯಾಕ್ನಾ ಜೆರುಜಲೆಮಾಕ್ ಯೆಲ್ಲ್ಯಾ ಲೊಕಾನಿ ತೆಕಾ ಲೈ ದಿಸಾಂಚ್ಯಾ ಪಾತರ್ ಬಗ್ಲ್ಯಾನಿ, ಅತ್ತಾ ತೆನಿಚ್ ತೆಚ್ಯಾ ವಿಶಯಾತ್ ಅಮ್ಚ್ಯಾ ಲೊಕಾಂಚ್ಯಾ ಫಿಡ್ಯಾತ್ ಸಾಕ್ಷಿ ಹೊವ್ನ್ ಹಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 13:31
18 ತಿಳಿವುಗಳ ಹೋಲಿಕೆ  

ಇದು ಆತನ ಮರಣಾನಂತರ ನಡೆದ ಸಂಗತಿ. ತಾನು ಜೀವಂತವಾಗಿರುವುದನ್ನು ಆತನು ಅಪೊಸ್ತಲರಿಗೆ ತೋರ್ಪಡಿಸಿದನು ಮತ್ತು ಶಕ್ತಿಯುತವಾದ ಅನೇಕ ಕಾರ್ಯಗಳನ್ನು ಮಾಡುವುದರ ಮೂಲಕ ಅದನ್ನು ನಿರೂಪಿಸಿದನು. ಯೇಸು ಜೀವಂತವಾಗಿ ಎದ್ದುಬಂದ ನಂತರದ ನಲವತ್ತು ದಿನಗಳ ಅವಧಿಯಲ್ಲಿ ಅಪೊಸ್ತಲರು ಆತನನ್ನು ಅನೇಕ ಸಲ ನೋಡಿದರು. ಯೇಸು ದೇವರ ರಾಜ್ಯದ ಕುರಿತು ಅಪೊಸ್ತಲರೊಂದಿಗೆ ಮಾತಾಡಿದನು.


“ಗಲಿಲಾಯದವರೇ, ಏಕೆ ಆಕಾಶವನ್ನೇ ನೋಡುತ್ತಾ ನಿಂತುಕೊಂಡಿದ್ದೀರಿ? ಯೇಸು ನಿಮ್ಮ ಕಣ್ಣೆದುರಿನಲ್ಲಿ ಪರಲೋಕಕ್ಕೆ ಹೇಗೆ ಏರಿ ಹೋದನೋ ಅದೇ ರೀತಿಯಲ್ಲಿ ಹಿಂತಿರುಗಿ ಬರುತ್ತಾನೆ” ಎಂದು ಹೇಳಿದರು.


ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬಂದಾಗ ನೀವು ಬಲಹೊಂದಿ ಜೆರುಸಲೇಮಿನಲ್ಲಿಯೂ ಇಡೀ ಜುದೇಯದಲ್ಲಿಯೂ ಸಮಾರ್ಯದಲ್ಲಿಯೂ ಮತ್ತು ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರುವಿರಿ” ಎಂದನು.


ಹನ್ನೊಂದು ಮಂದಿ ಶಿಷ್ಯರು ಗಲಿಲಾಯಕ್ಕೆ ಹೊರಟು ಯೇಸು ತಿಳಿಸಿದ್ದ ಬೆಟ್ಟಕ್ಕೆ ಬಂದರು.


ಆದರೆ ಯೇಸುವು ಎಲ್ಲಾ ಜನರಿಗೆ ಕಾಣಿಸಿಕೊಳ್ಳಲಿಲ್ಲ. ದೇವರಿಂದ ಮೊದಲೇ ಸಾಕ್ಷಿಗಳಾಗಿ ಆಯ್ಕೆಗೊಂಡಿದ್ದವರು ಮಾತ್ರ ಆತನನ್ನು ಕಂಡರು! ನಾವೇ ಆ ಸಾಕ್ಷಿಗಳು! ಯೇಸು ಜೀವಂತವಾಗಿ ಎದ್ದುಬಂದ ಮೇಲೆ ನಾವು ಆತನೊಂದಿಗೆ ಊಟ ಮಾಡಿದೆವು ಮತ್ತು ಪಾನ ಮಾಡಿದೆವು.


“ಜುದೇಯದಲ್ಲಿ ಮತ್ತು ಜೆರುಸಲೇಮಿನಲ್ಲಿ ಯೇಸು ಮಾಡಿದ ಎಲ್ಲಾ ಕಾರ್ಯಗಳನ್ನು ನಾವು ನೋಡಿದೆವು. ಆ ಕಾರ್ಯಗಳಿಗೆ ನಾವು ಸಾಕ್ಷಿಗಳಾಗಿದ್ದೇವೆ. ಆದರೆ ಯೇಸು ಕೊಲ್ಲಲ್ಪಟ್ಟನು. ಅವರು ಆತನನ್ನು ಮರದ ಶಿಲುಬೆಗೆ ಏರಿಸಿದರು.


ಈ ಘಟನೆಗಳಿಗೆ ನಾವೇ ಸಾಕ್ಷಿಗಳು. ನಾವು ಮಾತ್ರವಲ್ಲದೆ ವಿಧೇಯರಾಗುವ ಎಲ್ಲಾ ಜನರಿಗೆ ದೇವರು ದಯಪಾಲಿಸಿರುವ ಪವಿತ್ರಾತ್ಮನೂ ಸಾಕ್ಷಿಯಾಗಿದ್ದಾನೆ” ಎಂದನು.


ಹೀಗೆ ನೀವು ಜೀವದಾಯಕನನ್ನೇ ಕೊಂದುಹಾಕಿದಿರಿ! ಆದರೆ ದೇವರು ಆತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು. ಇದಕ್ಕೆ ನಾವೇ ಸಾಕ್ಷಿಗಳು. ಇದನ್ನು ನಾವು ಕಣ್ಣಾರೆ ಕಂಡಿದ್ದೇವೆ.


ಆದ್ದರಿಂದ ದೇವರು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದು ಯೇಸುವನ್ನೇ ಹೊರತು ದಾವೀದನನ್ನಲ್ಲ! ಇದಕ್ಕೆ ನಾವೆಲ್ಲರೂ ಸಾಕ್ಷಿಗಳಾಗಿದ್ದೇವೆ. ನಾವು ಆತನನ್ನು ಕಂಡೆವು!


ಮತ್ತು ನೀವು ಮೊದಲಿಂದಲೂ ನನ್ನೊಂದಿಗೆ ಇದ್ದಕಾರಣ ನೀವು ಸಹ ನನ್ನ ಬಗ್ಗೆ ಜನರಿಗೆ ಹೇಳುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು