34 ದೇವರು ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದರಿಂದ ಆತನು ಇನ್ನೆಂದಿಗೂ ಸಮಾಧಿಗೆ ಸೇರಿ ಕೊಳೆಯುವುದಿಲ್ಲ ಎಂಬ ವಿಷಯದಲ್ಲಿ ದೇವರು ಇಂತೆಂದಿದ್ದಾನೆ: ‘ನಾನು ದಾವೀದನಿಗೆ ಮಾಡಿದ ಸತ್ಯವೂ ಪವಿತ್ರವೂ ಆದ ವಾಗ್ದಾನಗಳನ್ನು ನಿನಗೆ ಕೊಡುತ್ತೇನೆ.’
34 “ಇದಲ್ಲದೆ ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ್ದರಿಂದ ಆತನು ಇನ್ನೆಂದಿಗೂ ಕೊಳೆಯುವ ಅವಸ್ಥೆಗೆ ಸೇರತಕ್ಕವನಲ್ಲವೆಂಬುದರ ಕುರಿತು ದೇವರು ಹೇಳಿರುವುದು ಏನೆಂದರೆ; ‘ದಾವೀದನಿಗೆ ಖಂಡಿತವಾಗಿ ವಾಗ್ದಾನಮಾಡಿದ ಕೃಪಾವರಗಳನ್ನು ನಿಮಗೂ ಕೊಡುತ್ತೇನೆ, ಅವು ನಂಬತಕ್ಕವುಗಳೇ’ ಎಂಬುದೆ.
34 “ಯೇಸುವನ್ನು ಸಮಾಧಿಯಲ್ಲೇ ಕೊಳೆತುಹೋಗಲು ಬಿಡದೆ ಮರಣದಿಂದ ಪುನರುತ್ಥಾನಗೊಳಿಸಿದ ದೇವರು ಹೀಗೆಂದಿದ್ದಾರೆ: ‘ನಾನು ದಾವೀದನಿಗೆ ವಾಗ್ದಾನಮಾಡಿದ ಪವಿತ್ರ ಹಾಗೂ ನಿಶ್ಚಿತ ವರಗಳನ್ನು ನಿಮಗೆ ಕೊಡುತ್ತೇನೆ.’
34 ಇದಲ್ಲದೆ ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ್ದರಿಂದ ಆತನು ಇನ್ನೆಂದಿಗೂ ಕೊಳೆಯುವ ಅವಸ್ಥೆಗೆ ಸೇರತಕ್ಕವನಲ್ಲವೆಂಬದರ ವಿಷಯದಲ್ಲಿ ದೇವರು ಹೇಳಿರುವದೇನಂದರೆ - ದಾವೀದನಿಗೆ ಖಂಡಿತವಾಗಿ ವಾಗ್ದಾನ ಮಾಡಿದ ಕೃಪಾವರಗಳನ್ನು ನಿಮಗೆ ಕೊಡುತ್ತೇನೆ, ಅವು ನಂಬಿಕೆಯಾದವುಗಳೇ ಎಂಬದು.
34 ಹೀಗೆ ಯೇಸುವನ್ನು ಸಮಾಧಿಯಲ್ಲಿ ಕೊಳೆಯಲು ಬಿಡದೇ ದೇವರು ಅವರನ್ನು ಜೀವಂತವಾಗಿ ಎಬ್ಬಿಸಿದ ಸತ್ಯವು ಈ ಮಾತುಗಳಲ್ಲಿ ಬಂದಿದೆ: “ ‘ನಾನು ದಾವೀದನಿಗೆ ವಾಗ್ದಾನ ಮಾಡಿದ ಪವಿತ್ರ ಹಾಗೂ ನಿಶ್ಚಯವಾದ ಆಶೀರ್ವಾದಗಳನ್ನು ನಿಮಗೆ ಕೊಡುವೆನು’
ನಾನು ಹೇಳುವ ವಿಷಯಗಳಿಗೆ ಸರಿಯಾಗಿ ಕಿವಿಗೊಡಿರಿ. ನಿಮ್ಮ ಆತ್ಮಗಳು ಜೀವಿಸುವಂತೆ ನನ್ನ ಮಾತುಗಳನ್ನು ಕೇಳಿರಿ. ನನ್ನ ಬಳಿಗೆ ಬನ್ನಿರಿ, ನಾನು ನಿಮ್ಮೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ನಾನು ದಾವೀದನೊಂದಿಗೆ ಮಾಡಿಕೊಂಡ ಒಡಂಬಡಿಕೆಯಂತೆ ಅದಿರುವುದು. ನಾನು ದಾವೀದನಿಗೆ ಅವನನ್ನು ಪ್ರೀತಿಸುವೆನೆಂದೂ ಅವನಿಗೆ ಪ್ರಾಮಾಣಿಕನಾಗಿರುವೆನೆಂದೂ ವಾಗ್ದಾನ ಮಾಡಿದ್ದೆನು. ಆ ಒಡಂಬಡಿಕೆಯನ್ನು ನೀವು ಖಂಡಿತವಾಗಿ ನಂಬಬಹುದು.
ಜೆರುಸಲೇಮಿನಲ್ಲಿ ವಾಸಿಸುವ ಜನರನ್ನು ಯೆಹೋವನು ಕಾಪಾಡುತ್ತಾನೆ. ಬಲಹೀನ ಮನುಷ್ಯನೂ ದಾವೀದನಂತೆ ಶೂರನಾಗುವನು. ದಾವೀದನ ಸಂತತಿಯ ಜನರು ದೇವರುಗಳಂತಿದ್ದು ದೇವರ ಸ್ವಂತ ದೂತರಂತೆ ತಮ್ಮ ಜನರನ್ನು ನಡಿಸುವರು.
“ದಾವೀದನ ಗುಡಾರವು ಕುಸಿದುಬಿದ್ದಿದೆ. ಆದರೆ ಆ ದಿವಸಗಳಲ್ಲಿ ತಿರುಗಿ ಅದನ್ನು ಮೇಲಕ್ಕೆತ್ತುವೆನು. ಗೋಡೆಯಲ್ಲಿರುವ ರಂಧ್ರಗಳನ್ನು ನಾನು ಸರಿಪಡಿಸುವೆನು. ಬಿದ್ದುಹೋದ ಕಟ್ಟಡಗಳನ್ನು ತಿರುಗಿ ಕಟ್ಟುವೆನು. ಮುಂಚೆ ಹೇಗಿತ್ತೋ ಹಾಗೆಯೇ ಇರುವದು.
ಅವರನ್ನು ತ್ಯಜಿಸಬಹುದೇನೋ! ಯಾಕೋಬನ ಸಂತಾನದವರನ್ನು ತ್ಯಜಿಸಿ ದಾವೀದನ ವಂಶದವರು ಅಬ್ರಹಾಮ, ಇಸಾಕ ಮತ್ತು ಯಾಕೋಬರ ಸಂತತಿಯವರನ್ನು ಆಳದಂತೆ ಮಾಡಬಹುದೇನೋ! ಆದರೆ ದಾವೀದನು ನನ್ನ ಸೇವಕ. ನಾನು ಅವರಿಗೆ ಕರುಣೆ ತೋರೇ ತೋರುವೆನು; ಅವರಿಗೆ ಒಳ್ಳೆಯದಾಗುವಂತೆ ಮಾಡೇ ಮಾಡುವೆನು.”
“ಯೆಹೋವನು ನನ್ನ ಕುಟುಂಬವನ್ನು ಸ್ಥಿರಗೊಳಿಸಿದನು. ಆತನು ನನ್ನೊಡನೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಂಡನು. ಆತನು ಈ ಒಡಂಬಡಿಕೆಯನ್ನು ಸಂಪೂರ್ಣವಾಗಿ ಸುಭದ್ರಗೊಳಿಸಿದನು. ಆತನು ನನಗೆ ಎಲ್ಲೆಲ್ಲಿಯೂ ಜಯ ಕೊಡುವನು. ಆತನು ನನಗೆ ಬೇಕಾದದ್ದನ್ನೆಲ್ಲಾ ಕೊಡುವನು.
ಹೀಗೆ ಇದ್ದ ಬಳಿಕ ಇಸ್ರೇಲರು ಹಿಂತಿರುಗಿ ಬರುವರು. ಆಗ ಅವರು ತಮ್ಮ ದೇವರಾದ ಯೆಹೋವನನ್ನೂ ಅವರ ಅರಸನಾದ ದಾವೀದನನ್ನೂ ಹುಡುಕುವರು. ಕೊನೆಯ ದಿವಸಗಳಲ್ಲಿ ತಮ್ಮ ದೇವರಾದ ಯೆಹೋವನನ್ನೂ ಆತನ ಒಳ್ಳೆಯತನವನ್ನೂ ಗೌರವಿಸಲು ಬರುವರು.
ಇಸ್ರೇಲರು ಮತ್ತು ಯೆಹೂದ್ಯರು ಪರದೇಶಿಯರ ಸೇವೆಮಾಡುವುದಿಲ್ಲ. ಅವರು ತಮ್ಮ ದೇವರಾದ ಯೆಹೋವನ ಸೇವೆಯನ್ನೇ ಮಾಡುವರು, ಅವರು ತಮ್ಮ ರಾಜನಾದ ದಾವೀದನ ಸೇವೆಮಾಡುವರು, ನಾನು ಆ ರಾಜನನ್ನು ಕಳುಹಿಸುವೆನು.”
ನಾವು ಅವರ ಸಂತತಿಯವರಾಗಿದ್ದೇವೆ. ದೇವರು ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸುವುದರ ಮೂಲಕ ಆ ವಾಗ್ದಾನವನ್ನು ನಮಗಾಗಿ ನೆರವೇರಿಸಿದ್ದಾನೆ. ಇದರ ಬಗ್ಗೆ ಎರಡನೆ ಕೀರ್ತನೆಯಲ್ಲಿ ಹೀಗೆಂದು ಬರೆದಿದೆ: ‘ನೀನೇ ನನ್ನ ಮಗನು. ಇಂದೇ ನಾನು ನಿನ್ನನ್ನು ಪಡೆದೆನು.’