Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 13:38 - ಪರಿಶುದ್ದ ಬೈಬಲ್‌

38-39 ಸಹೋದರರೇ, ಇದು ನಿಮಗೆ ತಿಳಿದಿರಲಿ: ಆತನ ಮೂಲಕವಾಗಿ ನಿಮ್ಮ ಪಾಪಗಳಿಗೆ ಕ್ಷಮೆ ದೊರೆಯುತ್ತದೆ. ಮೋಶೆಯ ಧರ್ಮಶಾಸ್ತ್ರಕ್ಕೆ, ನಿಮ್ಮನ್ನು ನಿಮ್ಮ ಪಾಪಗಳಿಂದ ಬಿಡಿಸಲಾಗಲಿಲ್ಲ. ಆದರೆ ಯೇಸುವಿನಲ್ಲಿ ನಂಬಿಕೆ ಇಡುವ ಪ್ರತಿಯೊಬ್ಬನು ಆತನ ಮೂಲಕವಾಗಿ ತನ್ನ ಎಲ್ಲಾ ಪಾಪಗಳಿಂದ ಬಿಡುಗಡೆಯಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 “ಆದುದರಿಂದ ಸಹೋದರರೇ, ಆತನ ಮೂಲಕವಾಗಿ ಪಾಪ ಕ್ಷಮಾಪಣೆಯು ದೊರೆಯುತ್ತದೆಂಬುದು ನಿಮಗೆ ಸಾರೋಣವಾಗಿತ್ತೆಂದು ನಿಮಗೆ ತಿಳಿದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38-39 “ನನ್ನ ಸಹೋದರರೇ, ನಿಮಗಿದು ತಿಳಿದಿರಲಿ: ಪಾಪಕ್ಷಮೆ ಯೇಸುವಿನ ಮುಖಾಂತರವೇ ಸಾಧ್ಯ ಎಂದು ಸಾರಲಾಗುತ್ತಿದೆ. ಮೋಶೆಯ ನಿಯಮಗಳ ಪಾಲನೆಯ ಮೂಲಕ ಪಾಪಗಳಿಂದ ವಿಮೋಚನೆ ಹೊಂದಲು ನಿಮ್ಮಿಂದಾಗಲಿಲ್ಲ; ಆದರೆ ಯೇಸುವನ್ನು ವಿಶ್ವಾಸಿಸುವ ಪ್ರತಿ ಒಬ್ಬನೂ ಅವೆಲ್ಲವುಗಳಿಂದ ವಿಮೋಚನೆ ಪಡೆಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಆದದರಿಂದ ಸಹೋದರರೇ, ಆತನ ಮೂಲಕವಾಗಿ ಪಾಪಪರಿಹಾರವು ದೊರೆಯುತ್ತದೆಂಬದು ನಿಮಗೆ ಸಾರೋಣವಾಗುತ್ತದೆಂದು ನಿಮಗೆ ತಿಳಿದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 “ಆದ್ದರಿಂದ, ನನ್ನ ಸಹೋದರರೇ, ಯೇಸುವಿನ ಮೂಲಕವೇ ಪಾಪಕ್ಷಮಾಪಣೆ ಸಾಧ್ಯವೆಂದು ನಿಮಗೆ ಸಾರಲಾಗುತ್ತಿದೆಯೆಂದು ನೀವು ತಿಳಿಯಬೇಕೆಂಬುದೇ ನನ್ನ ಅಪೇಕ್ಷೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ತಸೆಹೊವ್ನ್ ಮಾಜ್ಯಾ ಭಾವಾನು ಅನಿ ಭೆನಿಯಾನು ತುಮ್ಕಾ ಜೆಜುಕ್ನಾಚ್ ಪಾಪಾಕ್ ಕ್ಷಮಾ ಗಾವ್ತಾ ಮನುನ್ ಸಾಂಗುನ್ ಹೊಲಾ ಮನ್ತಲೆ ಮಿಯಾ ತುಮ್ಕಾ ಕಳ್ವುತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 13:38
29 ತಿಳಿವುಗಳ ಹೋಲಿಕೆ  

ಈ ಸಂಗತಿಗಳು ನೆರವೇರುವುದನ್ನು ನೀವು ನೋಡಿದಿರಿ. ನೀವೇ ಇದಕ್ಕೆ ಸಾಕ್ಷಿಗಳು. ನೀವು ಜನರ ಬಳಿಗೆ ಹೋಗಿ, ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವವರಿಗೆ ಪಾಪಕ್ಷಮೆಯಾಗುತ್ತದೆ ಎಂದು ತಿಳಿಸಿರಿ. ನೀವು ಈ ಸುವಾರ್ತೆಯನ್ನು ಜೆರುಸಲೇಮಿನಲ್ಲಿ ಪ್ರಾರಂಭಿಸಿ ಲೋಕದ ಜನರೆಲ್ಲರಿಗೂ ನನ್ನ ಹೆಸರಿನಲ್ಲಿ ತಿಳಿಸಬೇಕು.


ಪ್ರಿಯ ಮಕ್ಕಳೇ, ನಿಮ್ಮ ಪಾಪಗಳು ಕ್ರಿಸ್ತನ ಮೂಲಕ ಕ್ಷಮಿಸಲ್ಪಟ್ಟಿರುವುದರಿಂದ ನಾನು ನಿಮಗೆ ಬರೆಯುತ್ತಿದ್ದೇನೆ.


ದೇವರಿಂದ ಆತನ ಬಲಗಡೆಗೆ ಏರಿಸಲ್ಪಟ್ಟಾತನೇ ಯೇಸು. ಎಲ್ಲಾ ಯೆಹೂದ್ಯರು ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವುದರ ಮೂಲಕ ಪಾಪಕ್ಷಮೆ ಹೊಂದಿಕೊಳ್ಳಲೆಂದು ದೇವರು ಯೇಸುವನ್ನು ನಮ್ಮ ನಾಯಕನನ್ನಾಗಿಯೂ ರಕ್ಷಕನನ್ನಾಗಿಯೂ ಮಾಡಿದ್ದಾನೆ.


ಮಗನು ನಮ್ಮ ಪಾಪಗಳಿಗೆ ಪರಿಹಾರ ನೀಡಿದನು. ಆತನಲ್ಲಿಯೇ ನಮ್ಮ ಪಾಪಗಳಿಗೆ ಕ್ಷಮೆ ದೊರೆಯಿತು.


ಕ್ರಿಸ್ತನ ರಕ್ತದ ಮೂಲಕವಾಗಿ ನಮಗೆ ಬಿಡುಗಡೆಯಾಯಿತು. ದೇವರ ಮಹಾ ಕೃಪೆಯಿಂದ ನಮ್ಮ ಪಾಪಗಳು ಕ್ಷಮಿಸಲ್ಪಟ್ಟವು.


“ದೇವರು ತನ್ನ ರಕ್ಷಣೆಯನ್ನು ಯೆಹೂದ್ಯರಲ್ಲದವರಿಗೆ ಕಳುಹಿಸಿದ್ದಾನೆ. ಅವರು ಅದಕ್ಕೆ ಕಿವಿಗೊಡುವರು. ಯೆಹೂದ್ಯರಾದ ನಿಮಗೆ ಇದು ತಿಳಿದಿರಲಿ!”


ಪೇತ್ರನು ಅವರಿಗೆ, “ನಿಮ್ಮಲ್ಲಿ ಪ್ರತಿಯೊಬ್ಬರೂ ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಳ್ಳಿರಿ. ಆಗ ದೇವರು ನಿಮ್ಮ ಪಾಪಗಳನ್ನು ಕ್ಷಮಿಸುವನು. ಅಲ್ಲದೆ ದೇವರು ವಾಗ್ದಾನ ಮಾಡಿರುವ ಪವಿತ್ರಾತ್ಮನನ್ನು ಹೊಂದಿಕೊಳ್ಳುವಿರಿ.


ಯೇಸುವಿನಲ್ಲಿ ನಂಬಿಕೆ ಇಡುವ ಪ್ರತಿಯೊಬ್ಬನ ಪಾಪಗಳನ್ನು ದೇವರು ಯೇಸುವಿನ ಮೂಲಕ ಕ್ಷಮಿಸುವನು. ಇದು ಸತ್ಯವೆಂದು ಪ್ರವಾದಿಗಳು ಹೇಳಿದ್ದಾರೆ” ಅಂದನು.


ಮರುದಿನ ಯೋಹಾನನು, ತನ್ನ ಬಳಿಗೆ ಬರುತ್ತಿದ್ದ ಯೇಸುವನ್ನು ಕಂಡು, “ಇಗೋ, ಯಜ್ಞಕ್ಕಾಗಿ ದೇವರು ನೇಮಿಸಿದ ಕುರಿಮರಿ. ಆತನು ಈ ಲೋಕದ ಪಾಪಗಳನ್ನು ಪರಿಹರಿಸುವನು.


ಬಹುಮಟ್ಟಿಗೆ ಪ್ರತಿಯೊಂದೂ ರಕ್ತದಿಂದ ಪರಿಶುದ್ಧವಾಗಬೇಕೆಂದು ಧರ್ಮಶಾಸ್ತ್ರವು ಹೇಳುತ್ತದೆ. ರಕ್ತವಿಲ್ಲದೆ ಪಾಪಗಳನ್ನು ಕ್ಷಮಿಸಲು ಸಾಧ್ಯವಿಲ್ಲ.


ಒಬ್ಬರಿಗೊಬ್ಬರು ಕರುಣೆ ತೋರಿರಿ. ಒಬ್ಬರನ್ನೊಬ್ಬರು ಪ್ರೀತಿಸಿರಿ. ದೇವರು ಕ್ರಿಸ್ತನಲ್ಲಿ ನಿಮ್ಮನ್ನು ಕ್ಷಮಿಸಿದಂತೆ ನೀವೂ ಒಬ್ಬರನ್ನೊಬ್ಬರು ಕ್ಷಮಿಸಿರಿ.


ನಜರೇತಿನ ಯೇಸು ಕ್ರಿಸ್ತನ ಹೆಸರಿನಿಂದ ಈ ಮನುಷ್ಯನಿಗೆ ಗುಣವಾಯಿತೆಂಬುದನ್ನು ನೀವು ಮತ್ತು ಯೆಹೂದ್ಯರೆಲ್ಲರು ತಿಳಿದುಕೊಳ್ಳಬೇಕೆಂದು ನಾನು ಬಯಸುತ್ತೇನೆ! ನೀವು ಯೇಸುವನ್ನು ಶಿಲುಬೆಗೇರಿಸಿದಿರಿ. ದೇವರು ಆತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು. ಈ ಮನುಷ್ಯನು ಕುಂಟನಾಗಿದ್ದನು, ಆದರೆ ಈಗ ಇವನು ಗುಣಹೊಂದಿದ್ದಾನೆ ಮತ್ತು ಯೇಸುವಿನ ಹೆಸರಿನಿಂದ ನಿಮ್ಮ ಮುಂದೆ ನಿಂತುಕೊಳ್ಳಲು ಶಕ್ತನಾಗಿದ್ದಾನೆ!


ಬಳಿಕ ಪೇತ್ರನು ಉಳಿದ ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಎದ್ದುನಿಂತುಕೊಂಡನು. ಎಲ್ಲಾ ಜನರಿಗೆ ಕೇಳುವಂತೆ ಅವನು ಗಟ್ಟಿಯಾಗಿ ಹೀಗೆಂದನು: “ಯೆಹೂದ್ಯರೇ, ಜೆರುಸಲೇಮಿನಲ್ಲಿ ವಾಸವಾಗಿರುವ ಜನರೇ, ನನಗೆ ಕಿವಿಗೊಡಿರಿ. ನೀವು ತಿಳಿದುಕೊಳ್ಳಬೇಕಾದ ಸಂಗತಿಯನ್ನು ನಾನು ನಿಮಗೆ ಹೇಳುತ್ತೇನೆ.


“ದಾನಿಯೇಲನೇ, ನಿಮ್ಮ ಜನರಿಗೆ ಮತ್ತು ನಿಮ್ಮ ಪವಿತ್ರ ನಗರಕ್ಕೆ ದೇವರು ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತುಮಾಡಿದ್ದಾನೆ. ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತಡೆಯುವುದು, ಅಪರಾಧಗಳನ್ನು ನಿವಾರಿಸುವುದು, ಜನರನ್ನು ಪರಿಶುದ್ಧಗೊಳಿಸುವುದು, ಎಂದೆಂದಿಗೂ ಉಳಿಯುವ ಧರ್ಮವನ್ನು ಸ್ಥಾಪಿಸುವುದು, ದರ್ಶನಗಳಿಗೆ ಮತ್ತು ಪ್ರವಾದಿಯ ನುಡಿಗಳಿಗೆ ಮುದ್ರೆಹಾಕಿ ಕಾರ್ಯರೂಪಕ್ಕೆ ತರುವುದು, ಪವಿತ್ರ ಸ್ಥಳವನ್ನು ಪ್ರತಿಷ್ಠಿಸುವುದು, ಇವೆಲ್ಲವುಗಳಿಗಾಗಿ ಈ ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತು ಮಾಡಲಾಗಿದೆ.


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ನೀವು ಇದನ್ನು ಜ್ಞಾಪಕದಲ್ಲಿಟ್ಟುಕೊಳ್ಳಿರಿ. ನಾನು ಈ ಕಾರ್ಯಗಳನ್ನು ನಿಮಗಾಗಿ ಮಾಡದೆ ನನ್ನ ನಾಮದ ಘನತೆಗಾಗಿ ಮಾಡುತ್ತಿದ್ದೇನೆ. ಇಸ್ರೇಲ್ ಜನರೇ, ನಿಮ್ಮ ಜೀವಿತದ ಕುರಿತಾಗಿ ನೀವು ನಾಚಿಕೆಯಿಂದ ವ್ಯಸನಪಡುವವರಾಗಿರಬೇಕು.”


ತಮ್ಮ ನೆರೆಮನೆಯವರಿಗೂ ತಮ್ಮ ಬಂಧುಬಳಗದವರಿಗೂ ಯಾರೂ ಯೆಹೋವನ ಬಗ್ಗೆ ಹೇಳಿಕೊಡಬೇಕಾಗಿಲ್ಲ. ಯಾಕೆಂದರೆ ಅತಿ ಕನಿಷ್ಠರಿಂದ ಅತಿ ಪ್ರಮುಖರವರೆಗೆ ಎಲ್ಲರೂ ನನ್ನನ್ನು ತಿಳಿದುಕೊಂಡಿರುವರು. ಅವರು ಮಾಡಿದ ದುಷ್ಕೃತ್ಯಗಳಿಗಾಗಿ ನಾನು ಅವರನ್ನು ಕ್ಷಮಿಸುವೆನು. ನಾನು ಅವರ ಪಾಪಗಳನ್ನು ಮರೆತುಬಿಡುವೆನು.” ಇದು ಯೆಹೋವನ ನುಡಿ.


ಇಸ್ರೇಲೇ, ಯೆಹೋವನಲ್ಲಿ ಭರವಸವಿಡು. ಆತನಲ್ಲಿ ಮಾತ್ರ ನಿಜವಾದ ಪ್ರೀತಿಯಿದೆ. ಆತನು ನಮ್ಮನ್ನು ಯಾವಾಗಲೂ ರಕ್ಷಿಸುವನು.


ಯೆಹೋವನೇ, ನಿನ್ನ ಜನರನ್ನು ಕ್ಷಮಿಸು. ಆಗ, ನಿನ್ನನ್ನು ಆರಾಧಿಸುವುದಕ್ಕೆ ಜನರಿರುವರು.


ಯಾವನ ಪಾಪಗಳು ಕ್ಷಮಿಸಲ್ಪಟ್ಟಿವೆಯೋ ಯಾವನ ದ್ರೋಹಗಳು ಅಳಿಸಲ್ಪಟ್ಟಿವೆಯೋ ಅವನೇ ಧನ್ಯನು.


ಆದರೆ ಯೇಸುವಿಗೆ ಕೊಡಲ್ಪಟ್ಟ ಕಾರ್ಯವು ಆ ಯಾಜಕರಿಗೆ ಕೊಡಲ್ಪಟ್ಟ ಕಾರ್ಯಕ್ಕಿಂತ ಅತ್ಯಂತ ಮಹತ್ವದ್ದಾಗಿದೆ. ಇದೇ ರೀತಿಯಲ್ಲಿ ಯೇಸು ತನ್ನ ಜನರಿಗಾಗಿ ದೇವರಿಂದ ತಂದ ಹೊಸ ಒಡಂಬಡಿಕೆಯು ಹಳೆಯದಕ್ಕಿಂತ ಶ್ರೇಷ್ಠವಾಗಿದೆ. ಉತ್ತಮ ಸಂಗತಿಗಳ ವಾಗ್ದಾನದ ಆಧಾರದ ಮೇಲೆ ಹೊಸ ಒಡಂಬಡಿಕೆಯು ಸ್ಥಾಪಿತವಾಗಿದೆ.


ಆದರೆ ಆ ಸಮಯದಲ್ಲಿ ಜೆರುಸಲೇಮಿನಲ್ಲಿ ವಾಸಿಸುವ ಜನರಿಗೂ ದಾವೀದನ ಕುಟುಂಬದವರಿಗೂ ಒಂದು ಹೊಸ ಬುಗ್ಗೆಯ ನೀರು ಚಿಮ್ಮುವದು. ಆ ಬುಗ್ಗೆಯು ಜನರ ಪಾಪಗಳನ್ನು ತೊಳೆದು ಶುದ್ಧಮಾಡುವದಕ್ಕಾಗಿ ಇರುವದು.


ಅರಸನೇ, ಒಂದುವೇಳೆ ದೇವರು ನಮ್ಮನ್ನು ರಕ್ಷಿಸದಿದ್ದರೂ ನಾವು ನಿನ್ನ ದೇವರುಗಳನ್ನು ಪೂಜಿಸುವುದಿಲ್ಲ. ನೀನು ನಿಲ್ಲಿಸಿದ ಬಂಗಾರದ ವಿಗ್ರಹವನ್ನು ಪೂಜಿಸುವುದಿಲ್ಲ. ಇದು ನಿನಗೆ ತಿಳಿದಿರಲಿ” ಎಂದು ಖಂಡಿತವಾಗಿ ಹೇಳಿದರು.


ಆಕೆ ಒಬ್ಬ ಮಗನನ್ನು ಹೆರುವಳು. ನೀನು ಆ ಮಗುವಿಗೆ ಯೇಸು ಎಂದು ಹೆಸರಿಡುವೆ. ನೀನು ಆತನಿಗೆ ಆ ಹೆಸರನ್ನೇ ಇಡು; ಏಕೆಂದರೆ ಆತನು ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸುವನು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು