Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 13:48 - ಪರಿಶುದ್ದ ಬೈಬಲ್‌

48 ಪೌಲನ ಈ ಮಾತುಗಳನ್ನು ಕೇಳಿದ ಯೆಹೂದ್ಯರಲ್ಲದ ಜನರು ಬಹು ಸಂತೋಷಪಟ್ಟು ಪ್ರಭುವಿನ ಸಂದೇಶಕ್ಕಾಗಿ ಸ್ತುತಿಸಿದರು. ನಿತ್ಯಜೀವವನ್ನು ಹೊಂದಿಕೊಳ್ಳಲು ಆಯ್ಕೆಯಾಗಿದ್ದವರೆಲ್ಲರೂ ನಂಬಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ಅಲ್ಲಿದ್ದ ಅನ್ಯಜನರು ಆ ಮಾತನ್ನು ಕೇಳಿ ಸಂತೋಷಪಟ್ಟು, ದೇವರ ವಾಕ್ಯವನ್ನು ಹೊಗಳಿದರು. ಮತ್ತು ನಿತ್ಯಜೀವಕ್ಕೆ ನೇಮಿಸಲ್ಪಟ್ಟವರೆಲ್ಲರೂ ನಂಬಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

48 ಇದನ್ನು ಕೇಳಿದ ಅನ್ಯಧರ್ಮೀಯರು ಸಂತೋಷಪಟ್ಟು ದೇವರ ಸಂದೇಶಕ್ಕಾಗಿ ಸ್ತುತಿಸಿದರು. ಅಮರಜೀವಕ್ಕೆ ಆಯ್ಕೆಯಾದವರೆಲ್ಲರೂ ವಿಶ್ವಾಸಿಗಳಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

48 ಅಲ್ಲಿದ್ದ ಅನ್ಯಜನರು ಆ ಮಾತನ್ನು ಕೇಳಿ ಸಂತೋಷಪಟ್ಟು ದೇವರ ವಾಕ್ಯವನ್ನು ಹೊಗಳಿದರು; ಮತ್ತು ನಿತ್ಯಜೀವಕ್ಕೆ ನೇವಿುಸಲ್ಪಟ್ಟವರೆಲ್ಲರು ನಂಬಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

48 ಯೆಹೂದ್ಯರಲ್ಲದವರು ಇದನ್ನು ಕೇಳಿದಾಗ, ಬಹಳ ಹರ್ಷಗೊಂಡು ಕರ್ತದೇವರ ವಾಕ್ಯವನ್ನು ಘನಪಡಿಸಿದರು. ನಿತ್ಯಜೀವಕ್ಕೆ ನೇಮಕರಾದ ಎಲ್ಲರೂ ವಿಶ್ವಾಸವನ್ನಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

48 ಹೆ ಆಯ್ಕುನ್ ಜುದೆವ್ ನ್ಹಯ್ ಹೊತ್ತ್ಯಾ ಲೊಕಾನಿ ಲೈ ಕುಶಿ ಹೊವ್ನ್ ಧನಿಯಾಚ್ಯಾ ಬರ್‍ಯಾ ಖಬ್ರೆಸಾಟ್ನಿ ಸ್ತುತಿ ಕರ್‍ಲ್ಯಾನಿ, ನಾಸ್ ಹೊಯ್ ನಸಲ್ಲ್ಯಾ ಜಿವಾಕ್ ಎಚುನ್ ಕಾಡುನ್ ಹೊಲ್ಲ್ಯಾ ಸಗ್ಳ್ಯಾನಿ ವಿಶ್ವಾಸ್ ಕರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 13:48
31 ತಿಳಿವುಗಳ ಹೋಲಿಕೆ  

ಜಗತ್ತು ಸೃಷ್ಟಿಯಾಗುವುದಕ್ಕಿಂತ ಮೊದಲೇ ದೇವರು ನಮ್ಮನ್ನು ಕ್ರಿಸ್ತನಲ್ಲಿ ಆರಿಸಿಕೊಂಡನು. ತನ್ನ ಸನ್ನಿಧಿಯಲ್ಲಿ ನಾವು ಪರಿಶುದ್ಧರೂ ನಿರ್ದೋಷಿಗಳೂ ಆಗಿರಬೇಕೆಂಬುದು ಆತನ ಉದ್ದೇಶವಾಗಿತ್ತು.


ಆದ್ದರಿಂದ ನಡೆದ ಸಂಗತಿಯಿಷ್ಟೆ: ಇಸ್ರೇಲಿನ ಜನರು ನೀತಿವಂತರಾಗಲು ಪ್ರಯತ್ನಿಸಿದರು. ಆದರೆ ಅವರಿಂದ ಸಾಧ್ಯವಾಗಲಿಲ್ಲ. ಹೀಗಿರಲು, ದೇವರಿಂದ ಆರಿಸಲ್ಪಟ್ಟಿದ್ದ ಜನರು ನೀತಿವಂತರಾದರು. ಆದರೆ ಉಳಿದ ಜನರು ಕಠಿಣರಾಗಿ ದೇವರಿಗೆ ಕಿವಿಗೊಡಲಿಲ್ಲ.


ನನಗೆ ಬೇರೆ ಕುರಿಗಳು ಸಹ ಇವೆ. ಅವುಗಳು ಇಲ್ಲಿರುವ ಈ ಮಂದೆಯಲ್ಲಿಲ್ಲ. ನಾನು ಅವುಗಳನ್ನು ಸಹ ಒಳಗೆ ನಡೆಸಬೇಕು. ಅವುಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಮುಂದಿನ ಕಾಲದಲ್ಲಿ ಒಂದೇ ಮಂದೆಯಿರುವುದು ಮತ್ತು ಒಬ್ಬನೇ ಕುರುಬನಿರುವನು.


ಹೌದು, ಯೆಹೂದ್ಯರಿಗಾಗಿಯೂ ಲೋಕದಲ್ಲೆಲ್ಲಾ ಚದರಿಹೋಗಿರುವ ದೇವರ ಮಕ್ಕಳನ್ನೆಲ್ಲ ಒಂದುಗೂಡಿಸುವುದಕ್ಕಾಗಿಯೂ ಆತನು ಸಾಯಲಿದ್ದನು.


ನಂಬಿಕೆಯಿಡುವಂಥ ನಮಗೆ ದೇವರ ಶಕ್ತಿಯು ಎಷ್ಟು ಮಹತ್ವವುಳ್ಳದ್ದಾಗಿದೆ ಎಂಬುದನ್ನೂ ಆಗ ನೀವು ತಿಳಿದುಕೊಳ್ಳುವಿರಿ. ಕ್ರಿಸ್ತನನ್ನು ಮರಣದಿಂದ ಜೀವಂತನಾಗಿ ಎಬ್ಬಿಸಲು ದೇವರು ಉಪಯೋಗಿಸಿದ ಮಹಾಶಕ್ತಿ ಅದೇ.


ಪೇತ್ರನು ಹೇಳಿದ್ದನ್ನು ಸ್ವೀಕರಿಸಿಕೊಂಡ ಜನರು ದೀಕ್ಷಾಸ್ನಾನ ಮಾಡಿಸಿಕೊಂಡರು. ಆ ದಿನ ಸುಮಾರು ಮೂರುಸಾವಿರ ಜನರು ವಿಶ್ವಾಸಿಗಳ ಗುಂಪಿಗೆ ಸೇರಿದರು.


“ನಾನು, ‘ಪ್ರಭುವೇ, ನಾನೇನು ಮಾಡಲಿ’ ಎಂದೆನು. ಪ್ರಭುವು ‘ಎದ್ದು ದಮಸ್ಕದೊಳಗೆ ಹೋಗು. ನಾನು ನಿನಗೆ ನೇಮಿಸಿರುವ ಕೆಲಸಗಳನ್ನೆಲ್ಲಾ ಅಲ್ಲಿ ನಿನಗೆ ತಿಳಿಸಲಾಗುವುದು’ ಎಂದು ಉತ್ತರಕೊಟ್ಟನು.


ನಿನ್ನ ಅಧಿಕಾರವನ್ನು ನಾನು ತಿಳಿದುಕೊಂಡಿದ್ದೇನೆ. ನಾನೂ ಮತ್ತೊಬ್ಬರ ಅಧೀನದಲ್ಲಿದ್ದೇನೆ. ನನ್ನ ಅಧೀನದಲ್ಲಿಯೂ ಸೈನಿಕರಿದ್ದಾರೆ. ನಾನು ಒಬ್ಬ ಸೈನಿಕನಿಗೆ, ‘ಹೋಗು’ ಎಂದು ಹೇಳಿದರೆ, ಅವನು ಹೋಗುತ್ತಾನೆ. ಇನ್ನೊಬ್ಬ ಸೈನಿಕನಿಗೆ, ‘ಬಾ’ ಎಂದು ಹೇಳಿದರೆ, ಅವನು ಬರುತ್ತಾನೆ. ನನ್ನ ಆಳಿಗೆ, ‘ಇದನ್ನು ಮಾಡು’ ಎಂದು ಹೇಳಿದರೆ, ಅವನು ನನಗೆ ವಿಧೇಯನಾಗುತ್ತಾನೆ” ಎಂದು ಯೇಸುವಿಗೆ ಹೇಳಲು ಕಳುಹಿಸಿದನು.


ನೀವೆಲ್ಲರೂ ಸರ್ಕಾರದ ಅಧಿಕಾರಿಗಳಿಗೆ ವಿಧೇಯರಾಗಿರಬೇಕು. ಪ್ರತಿಯೊಬ್ಬ ಅಧಿಕಾರಿಗೆ ಅಧಿಕಾರವನ್ನು ಕೊಟ್ಟಿರುವವನು ದೇವರೇ. ಈಗಿರುವ ಎಲ್ಲಾ ಅಧಿಕಾರಿಗಳಿಗೆ ದೇವರೇ ಅಧಿಕಾರವನ್ನು ಕೊಟ್ಟಿದ್ದಾನೆ.


ಪೌಲನು ಮತ್ತು ಯೆಹೂದ್ಯರು ಸಭೆಸೇರಲು ಒಂದು ದಿನವನ್ನು ಗೊತ್ತುಮಾಡಿದರು. ಅಂದು ಇನ್ನೂ ಅನೇಕ ಮಂದಿ ಯೆಹೂದ್ಯರು ಪೌಲನ ಮನೆಯಲ್ಲಿ ಸಭೆಸೇರಿದರು. ಪೌಲನು ಬೆಳಗ್ಗೆಯಿಂದ ಸಂಜೆಯವರೆಗೂ ಅವರೊಂದಿಗೆ ಮಾತಾಡಿದನು; ದೇವರ ರಾಜ್ಯದ ಬಗ್ಗೆ ಅವರಿಗೆ ವಿವರಿಸಿದನು. ಯೇಸುವಿನ ವಿಷಯವಾದ ಸಂಗತಿಗಳಲ್ಲಿ ನಂಬಿಕೆ ಇಡುವಂತೆ ಅವರನ್ನು ಒಪ್ಪಿಸಲು ಪ್ರಯತ್ನಿಸಿದನು. ಇದಕ್ಕಾಗಿ ಅವನು ಮೋಶೆಯ ಧರ್ಮಶಾಸ್ತ್ರವನ್ನೂ ಪ್ರವಾದಿಗಳ ಗ್ರಂಥಗಳನ್ನೂ ಬಳಸಿಕೊಂಡನು.


ಅವರು ದೇವರನ್ನು ಕೊಂಡಾಡುತ್ತಿದ್ದರು ಮತ್ತು ಜನರೆಲ್ಲರೂ ಅವರನ್ನು ಇಷ್ಟಪಡುತ್ತಿದ್ದರು. ಪ್ರತಿದಿನವೂ ಹೆಚ್ಚುಹೆಚ್ಚು ಜನರು ರಕ್ಷಣೆ ಹೊಂದುತ್ತಿದ್ದರು; ಪ್ರಭುವು ಅವರನ್ನೆಲ್ಲಾ ವಿಶ್ವಾಸಿಗಳ ಸಭೆಗೆ ಸೇರಿಸುತ್ತಿದ್ದನು.


ನಾವು ಪೌಲನಿಗಿಂತ ಮುಂಚಿತವಾಗಿಯೇ ಅಸ್ಸೊಸಿ ಎಂಬ ಪಟ್ಟಣಕ್ಕೆ ನೌಕಾಯಾನ ಮಾಡಿದೆವು. ತಾನು ಭೂಮಾರ್ಗವಾಗಿ ಬರುವುದಾಗಿಯೂ ಅಸ್ಸೊಸಿನಲ್ಲಿ ನಮ್ಮನ್ನು ಸಂಧಿಸಿ ಅಲ್ಲಿಂದ ನಮ್ಮೊಂದಿಗೆ ಹಡಗಿನಲ್ಲಿ ಪ್ರಯಾಣ ಮಾಡುವುದಾಗಿಯೂ ಪೌಲನು ನಮಗೆ ತಿಳಿಸಿದ್ದನು.


ಹನ್ನೊಂದು ಮಂದಿ ಶಿಷ್ಯರು ಗಲಿಲಾಯಕ್ಕೆ ಹೊರಟು ಯೇಸು ತಿಳಿಸಿದ್ದ ಬೆಟ್ಟಕ್ಕೆ ಬಂದರು.


ನಾನು ನಿನ್ನ ಪರಿಶುದ್ಧಾಲಯದ ಕಡೆಗೆ ಅಡ್ಡಬೀಳುವೆನು. ನಾನು ನಿನ್ನ ಹೆಸರನ್ನೂ ನಿನ್ನ ಪ್ರೀತಿಯನ್ನೂ ನಿನ್ನ ನಂಬಿಗಸ್ತಿಕೆಯನ್ನೂ ಕೊಂಡಾಡುವೆನು. ನೀನು ನಿನ್ನ ವಾಕ್ಯವನ್ನು ನೆರವೇರಿಸಿ ನಿನ್ನ ನಾಮಮಹತ್ವವನ್ನು ಹೆಚ್ಚಿಸಿರುವೆ.


ಸಹೋದರ ಸಹೋದರಿಯರೇ, ನಮಗೋಸ್ಕರ ಪ್ರಾರ್ಥಿಸಿರಿ. ಪ್ರಭುವಿನ ಉಪದೇಶವು ತ್ವರಿತಗತಿಯಲ್ಲಿ ಹಬ್ಬಲೆಂದು ಪ್ರಾರ್ಥಿಸಿ. ನಿಮ್ಮಂತೆಯೇ ಇತರ ಜನರು ಈ ಉಪದೇಶವನ್ನು ಗೌರವಿಸುವಂತೆ ಪ್ರಾರ್ಥಿಸಿ.


ಅಖಾಯದಲ್ಲಿ ಪ್ರಥಮ ವಿಶ್ವಾಸಿಗಳಾದ ಸ್ತೆಫನನನ್ನು ಮತ್ತು ಅವನ ಕುಟುಂಬದವರನ್ನು ನೀವು ಬಲ್ಲಿರಿ. ಅವರು ದೇವರ ಸೇವೆಗಾಗಿ ತಮ್ಮನ್ನು ಒಪ್ಪಿಸಿಕೊಂಡಿದ್ದಾರೆ. ಸಹೋದರ ಸಹೋದರಿಯರೇ, ನಾನು ನಿಮ್ಮನ್ನು ಕೇಳಿಕೊಳ್ಳುವುದೇನೆಂದರೆ,


ವಿಶ್ವಾಸಿಗಳು ಅದನ್ನು ಓದಿ ಬಹು ಸಂತೋಷಪಟ್ಟರು. ಆ ಪತ್ರವು ಅವರನ್ನು ಸಂತೈಸಿತು.


ಪೌಲ ಬಾರ್ನಬರು ಈ ಉಪದೇಶಕ್ಕೆ ತಮ್ಮ ವಿರೋಧವನ್ನು ವ್ಯಕ್ತಪಡಿಸಿ ಅವರೊಂದಿಗೆ ವಾದ ಮಾಡಿದರು. ಈ ಸಮಸ್ಯೆಯ ಬಗ್ಗೆ ಅಪೊಸ್ತಲರೊಡನೆ ಮತ್ತು ಹಿರಿಯರೊಡನೆ ಚರ್ಚಿಸಲು ಪೌಲ ಬಾರ್ನಬರನ್ನು ಮತ್ತು ಇತರ ಕೆಲವರನ್ನು ಜೆರುಸಲೇಮಿಗೆ ಕಳುಹಿಸಲು ಸಭೆ ನಿರ್ಧರಿಸಿತು.


ಪೌಲ ಮತ್ತು ಬಾರ್ನಬ ಸಭಾಮಂದಿರದಿಂದ ಹೋಗುವಾಗ, ಈ ಸಂಗತಿಗಳ ಬಗ್ಗೆ ಇನ್ನೂ ಹೆಚ್ಚಿಗೆ ತಿಳಿಸುವುದಕ್ಕಾಗಿ ಮುಂದಿನ ಸಬ್ಬತ್‌ದಿನದಂದು ಮತ್ತೆ ಬರಬೇಕೆಂದು ಜನರು ಅವರನ್ನು ಕೇಳಿಕೊಂಡರು.


ಇದರಿಂದಾಗಿ ಆ ಪಟ್ಟಣದಲ್ಲಿದ್ದ ಜನರು ಬಹು ಸಂತೋಷಗೊಂಡರು.


“ಆಗ ಕೆಟ್ಟಜನರು ಅಲ್ಲಿಂದ ಹೊರಟುಹೋಗುವರು. ಅವರಿಗೆ ನಿತ್ಯದಂಡನೆಯಾಗುವುದು. ಒಳ್ಳೆಯ ಜನರಾದರೋ ನಿತ್ಯಜೀವವನ್ನು ಹೊಂದುವರು.”


ಇದನ್ನು ಕಂಡ ರಾಜ್ಯಪಾಲನು ಪ್ರಭುವನ್ನು ನಂಬಿಕೊಂಡನು. ಪ್ರಭುವಿನ ವಿಷಯವಾದ ಉಪದೇಶವನ್ನು ಕೇಳಿ ವಿಸ್ಮಿತನಾದನು.


ದೇವರು ತನ್ನನ್ನು ಪ್ರೀತಿಸುವವರ ಒಳ್ಳೆಯದಕ್ಕಾಗಿ ಪ್ರತಿಯೊಂದು ಕಾರ್ಯವನ್ನೂ ಅನುಕೂಲ ಮಾಡುತ್ತಾನೆಂದು ನಮಗೆ ಗೊತ್ತಿದೆ. ಆ ಜನರನ್ನು ದೇವರೇ ಆರಿಸಿಕೊಂಡನು, ಏಕೆಂದರೆ ಅದು ಆತನ ಯೋಜನೆಯಾಗಿತ್ತು.


ನಮ್ಮ ಮೇಲಿನ ಪ್ರೀತಿಯಿಂದ ಕ್ರಿಸ್ತ ಯೇಸುವಿನ ಮೂಲಕ ನಮ್ಮನ್ನು ತನ್ನ ಸ್ವಂತ ಮಕ್ಕಳನ್ನಾಗಿ ಮಾಡಿಕೊಳ್ಳಲು ಆತನು ಆಗಲೇ ನಿರ್ಧರಿಸಿದ್ದನು. ಅದು ಆತನ ಚಿತ್ತವಾಗಿತ್ತು ಮತ್ತು ಆತನಿಗೆ ಮೆಚ್ಚಿಕೆಕರವಾಗಿತ್ತು.


ನಾವು ದೇವರ ಮಕ್ಕಳಾಗಿರಬೇಕೆಂದು ಕ್ರಿಸ್ತನಲ್ಲಿ ನಮ್ಮನ್ನು ಆರಿಸಿಕೊಳ್ಳಲಾಯಿತು. ನಾವು ತನ್ನ ಮಕ್ಕಳಾಗಿರಬೇಕೆಂದು ದೇವರು ತನ್ನ ಚಿತ್ತಾನುಸಾರವಾಗಿ ಮೊದಲೇ ಯೋಜನೆ ಮಾಡಿದ್ದನು. ತನ್ನ ನಿರ್ಧಾರ ಮತ್ತು ಇಷ್ಟಗಳಿಗನುಸಾರವಾಗಿ ಪ್ರತಿಯೊಂದನ್ನು ನೆರವೇರಿಸುವಾತನು ದೇವರೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು