Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 13:50 - ಪರಿಶುದ್ದ ಬೈಬಲ್‌

50 ಆದರೆ ಯೆಹೂದ್ಯರು ಕೆಲವು ಧಾರ್ಮಿಕ ಸ್ತ್ರೀಯರನ್ನೂ ನಗರದ ನಾಯಕರನ್ನೂ ಪ್ರಚೋಧಿಸಿ, ಪೌಲ ಬಾರ್ನಬರ ಮೇಲೆ ಅವರು ಕೋಪಗೊಳ್ಳುವಂತೆಯೂ ಅವರಿಗೆ ವಿರೋಧಿಗಳಾಗುವಂತೆಯೂ ಮಾಡಿ ಪೌಲ ಬಾರ್ನಬರನ್ನು ಪಟ್ಟಣದಿಂದ ಹೊರಗಟ್ಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

50 ಆದರೆ ಯೆಹೂದ್ಯರು ತಮ್ಮ ಮತಕ್ಕೆ ಸೇರಿದ್ದ ಭಕ್ತೆಯರಾದ ಕುಲೀನ ಸ್ತ್ರೀಯರನ್ನೂ, ಊರಿನ ಪ್ರಮುಖರನ್ನೂ, ಹುರಿದುಂಬಿಸಿ ಪೌಲ ಮತ್ತು ಬಾರ್ನಬರ ವಿರೋಧವಾಗಿ ಹಿಂಸೆಯನ್ನೆಬ್ಬಿಸಿ ಅವರನ್ನು ತಮ್ಮ ಪ್ರದೇಶದಿಂದ ಆಚೆಗೆ ಅಟ್ಟಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

50 ಯೆಹೂದ್ಯರಾದರೋ ದೇವಭಕ್ತೆಯರಾದ ಕುಲೀನ ಸ್ತ್ರೀಯರನ್ನೂ ಪಟ್ಟಣದ ಪ್ರಮುಖ ಜನರನ್ನೂ ಪ್ರಚೋದಿಸಿದರು: ಪೌಲ ಮತ್ತು ಬಾರ್ನಬರನ್ನು ಹಿಂಸಿಸುವಂತೆ ಹುರಿದುಂಬಿಸಿ, ಅವರನ್ನು ಆ ಪ್ರದೇಶದಿಂದ ಹೊರಗಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

50 ಆದರೆ ಯೆಹೂದ್ಯರು ತಮ್ಮ ಮತಕ್ಕೆ ಸೇರಿದ್ದ ಕುಲೀನ ಸ್ತ್ರೀಯರನ್ನೂ ಊರಿನ ಪ್ರಮುಖರನ್ನೂ ಪ್ರೇರಿಸಿ ಪೌಲ ಬಾರ್ನಬರ ಮೇಲೆ ಹಿಂಸೆಯನ್ನು ಎಬ್ಬಿಸಿ ಅವರನ್ನು ತಮ್ಮ ಮೇರೆಯಿಂದ ಆಚೆಗೆ ಅಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

50 ಆದರೆ ಯೆಹೂದ್ಯರು, ಆರಾಧಕರಾಗಿದ್ದ ಮಾನ್ಯರಾದ ಸ್ತ್ರೀಯರನ್ನೂ ನಗರದ ಗಣ್ಯ ನಾಯಕರನ್ನೂ ಪ್ರೇರೇಪಿಸಿ, ಪೌಲ, ಬಾರ್ನಬರ ಮೇಲೆ ಹಿಂಸೆಯನ್ನು ಎಬ್ಬಿಸಿ ತಮ್ಮ ಪ್ರದೇಶದಿಂದ ಹೊರಗೋಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

50 ಖರೆ ಜುದೆವಾನಿ ಥೈತ್ಲ್ಯಾ ಉಲ್ಲ್ಯಾ ಘವ್ಮಾನ್ಸಾಕ್ನಿ ಅನಿ ಬಾಯ್ಕಾ ಮಾನ್ಸಾಕ್ನಿ ಝಗ್ಡ್ಯಾಕ್ ಉಟಿ ಸಾರ್ಕೆ ಕರುನ್ ಸಮಾಜ್ಯಾತ್ ಗೌರವಾನ್ ಹೊತ್ತ್ಯಾ ಬಾಯ್ಕಾ ಮಾನ್ಸಾಕ್ನಿ ಅನಿ ಉಲ್ಲ್ಯಾ ಲೊಕಾಕ್ನಿ ಧಾಡುನ್ ಪಾವ್ಲು ಅನಿ ಬಾರ್ನಾಬಾಕ್ ವಿರೊದ್ ಬುರ್ಶೆ ಕರುನ್ ತೆಂಕಾ ಪ್ರಾಂತ್ಯಾಕ್ನಾ ಭಾಯ್ರ್ ಘಾಲಿ ಸಾರ್ಕೆ ಕರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 13:50
31 ತಿಳಿವುಗಳ ಹೋಲಿಕೆ  

ನನಗೆ ಸಂಭವಿಸಿದ ಹಿಂಸೆ ಮತ್ತು ಸಂಕಟಗಳ ಬಗ್ಗೆಯೂ ನಿನಗೆ ತಿಳಿದಿದೆ. ಅಂತಿಯೋಕ್ಯ, ಇಕೋನ್ಯ, ಲುಸ್ತ್ರಗಳಲ್ಲಿ ನನಗೆ ಸಂಭವಿಸಿದ ಸಂಗತಿಗಳೆಲ್ಲವೂ ನಿನಗೆ ತಿಳಿದಿವೆ. ನಾನು ಆ ಸ್ಥಳಗಳಲ್ಲಿ ಅನುಭವಿಸಿದ ಹಿಂಸೆಯು ನಿನಗೆ ತಿಳಿದಿದೆ. ಆದರೆ ಆ ಎಲ್ಲ ತೊಂದರೆಗಳಿಂದ ಪ್ರಭುವು ನನ್ನನ್ನು ಕಾಪಾಡಿದನು.


ಬಳಿಕ ಕೆಲವು ಯೆಹೂದ್ಯರು ಅಂತಿಯೋಕ್ಯದಿಂದ ಮತ್ತು ಇಕೋನಿಯದಿಂದ ಬಂದು ಪೌಲನಿಗೆ ವಿರೋಧವಾಗಿ ಜನರನ್ನು ಹುರಿದುಂಬಿಸಿ ಪೌಲನಿಗೆ ಕಲ್ಲೆಸೆದು, ಅವನು ಸತ್ತನೆಂದು ಭಾವಿಸಿ ಪಟ್ಟಣದಿಂದ ಹೊರಗೆ ಎಳೆದುಹಾಕಿದರು.


ಆದರೆ ಯೆಹೂದ್ಯರಲ್ಲಿ ನಂಬದೆ ಹೋದ ಕೆಲವರು ಯೆಹೂದ್ಯರಲ್ಲದವರನ್ನು ಪ್ರಚೋಧಿಸಿ ಸಹೋದರರ ವಿರುದ್ಧ ಜನರನ್ನು ಎಬ್ಬಿಸಿದರು.


ಇದನ್ನು ಕಂಡ ಯೆಹೂದ್ಯರಿಗೆ ಬಹಳ ಅಸೂಯೆಯಾಯಿತು. ಅವರು ಪೌಲನ ಮಾತುಗಳನ್ನು ಕಟುವಾಗಿ ದೂಷಿಸಿ ಅವುಗಳಿಗೆ ವಿರೋಧವಾಗಿ ವಾದಿಸಿದರು.


ಆ ಏಳು ದಿನಗಳ ಅವಧಿ ಮುಗಿಯುವುದರಲ್ಲಿತ್ತು. ಆದರೆ ಏಷ್ಯಾದಿಂದ ಬಂದಿದ್ದ ಕೆಲವು ಯೆಹೂದ್ಯರು ಪೌಲನನ್ನು ಕಂಡು ಜನಸಮೂಹವನ್ನು ಉದ್ದೇಶಿಸಿ,


ಆದರೆ ಪೌಲನು ಬೆರೋಯದಲ್ಲಿ ದೇವರ ವಾಕ್ಯವನ್ನು ಹೇಳುತ್ತಿದ್ದಾನೆ ಎಂಬ ವಾರ್ತೆಯನ್ನು ಕೇಳಿದ ಥೆಸಲೋನಿಕದ ಯೆಹೂದ್ಯರು ಬೆರೋಯಕ್ಕೂ ಬಂದು ಅಲ್ಲಿಯ ಜನರನ್ನು ಗಲಿಬಿಲಿಗೊಳಿಸಿ ಗಲಭೆ ಮಾಡಿದರು.


ನಾನು ಯೆಹೂದ್ಯರ ಬಗ್ಗೆ ಹೀಗೆ ಹೇಳಬಲ್ಲೆನು: ಅವರು ದೇವರನ್ನು ಹಿಂಬಾಲಿಸಲು ನಿಜವಾಗಿಯೂ ಪ್ರಯತ್ನಿಸುತ್ತಾರೆ. ಆದರೆ ಅವರಿಗೆ ಸರಿಯಾದ ಮಾರ್ಗ ಗೊತ್ತಿಲ್ಲ.


ಸಭೆಯು ಮುಗಿದ ಮೇಲೆ ಅನೇಕ ಯೆಹೂದ್ಯರು ಪೌಲ ಬಾರ್ನಬರನ್ನು ಆ ಸ್ಥಳದಿಂದ ಹಿಂಬಾಲಿಸಿದರು. ಯೆಹೂದ್ಯರ ಧರ್ಮಕ್ಕೆ ಸೇರಿಕೊಂಡಿದ್ದ ಅನೇಕ ಅನ್ಯಮತೀಯರೂ ಆ ಯೆಹೂದ್ಯರೊಂದಿಗಿದ್ದರು. ಮತಾಂತರಗೊಂಡಿದ್ದ ಇವರು ಸಹ ನಿಜದೇವರನ್ನು ಆರಾಧಿಸುತ್ತಿದ್ದರು. ಪೌಲ ಬಾರ್ನಬರು ಅವರೊಂದಿಗೆ ಮಾತಾಡಿ, ದೇವರ ಕೃಪೆಯಲ್ಲೇ ಭರವಸವಿಟ್ಟು ಮುಂದುವರಿಯಬೇಕೆಂದು ಪ್ರೋತ್ಸಾಹಪಡಿಸಿದರು.


ಸ್ತೆಫನನ ಕೊಲೆಗೆ ಸೌಲನ ಸಮ್ಮತಿಯಿತ್ತು. ಕೆಲವು ಭಕ್ತರು ಸ್ತೆಫನನನ್ನು ಸಮಾಧಿ ಮಾಡಿದರು. ಅವರು ಅವನಿಗೋಸ್ಕರ ಬಹಳವಾಗಿ ಗೋಳಾಡಿದರು. ಜೆರುಸಲೇಮಿನಲ್ಲಿದ್ದ ವಿಶ್ವಾಸಿಗಳ ಸಮುದಾಯವನ್ನು ಹಿಂಸಿಸಲು ಯೆಹೂದ್ಯರು ಅಂದೇ ಆರಂಭಿಸಿ ಅವರನ್ನು ಬಹಳವಾಗಿ ಸಂಕಟಪಡಿಸಿದರು. ಆ ಸಭೆಯನ್ನು ನಾಶಮಾಡಲು ಸೌಲನು ಮನೆಗಳಿಗೆ ನುಗ್ಗಿ ಗಂಡಸರನ್ನೂ ಹೆಂಗಸರನ್ನೂ ಎಳೆದೊಯ್ದು ಸೆರೆಮನೆಗೆ ಹಾಕಿದನು. ವಿಶ್ವಾಸಿಗಳೆಲ್ಲಾ ಜೆರುಸಲೇಮನ್ನು ಬಿಟ್ಟುಹೋದರು. ಅಪೊಸ್ತಲರು ಮಾತ್ರ ಅಲ್ಲೇ ಇದ್ದರು. ವಿಶ್ವಾಸಿಗಳು ಜುದೇಯ ಮತ್ತು ಸಮಾರ್ಯದ ಬೇರೆಬೇರೆ ಸ್ಥಳಗಳಿಗೆ ಹೊರಟುಹೋದರು.


ಹೀಗೆ ಈ ಯೆಹೂದ್ಯರು ಜನರನ್ನೂ ಯೆಹೂದ್ಯರ ಹಿರಿಯನಾಯಕರನ್ನೂ ಧರ್ಮೋಪದೇಶಕರನ್ನೂ ಗಲಿಬಿಲಿಗೊಳಿಸಿದರು. ಅವರು ಬಹು ಸಿಟ್ಟಿನಿಂದ ಬಂದು ಸ್ತೆಫನನನ್ನು ಬಂಧಿಸಿ ಯೆಹೂದ್ಯನಾಯಕರ ಸಭೆಗೆ ಕೊಂಡೊಯ್ದರು.


ಬಹು ಧಾರ್ಮಿಕರಾದ ಅನೇಕ ಯೆಹೂದ್ಯರು ಆ ಸಮಯದಲ್ಲಿ ಜೆರುಸಲೇಮಿನಲ್ಲಿದ್ದರು. ಇವರಲ್ಲಿ ಪ್ರಪಂಚದ ಪ್ರತಿಯೊಂದು ದೇಶದಿಂದ ಬಂದ ಜನರಿದ್ದರು.


ಆಗ ಜನರು ತಮ್ಮ ಪ್ರಾಂತ್ಯವನ್ನು ಬಿಟ್ಟುಹೋಗಬೇಕೆಂದು ಯೇಸುವನ್ನು ಬೇಡಿಕೊಂಡರು.


ಒಂದು ಊರಿನಲ್ಲಿ ನಿಮ್ಮನ್ನು ಹಿಂಸಿಸಿದರೆ ಮತ್ತೊಂದು ಊರಿಗೆ ಹೋಗಿ. ಮನುಷ್ಯಕುಮಾರನು ಪುನಃ ಬರುವುದಕ್ಕಿಂತ ಮುಂಚೆ ನೀವು ಇಸ್ರೇಲರ ಊರುಗಳಿಗೆಲ್ಲಾ ಹೋಗುವುದನ್ನು ಮುಗಿಸಿರುವುದಿಲ್ಲ ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಅಮಚ್ಯನು ಆಮೋಸನಿಗೆ ಹೇಳಿದ್ದೇನೆಂದರೆ, “ಭವಿಷ್ಯವಾದಿಯೇ, ನೀನು ಯೆಹೂದಕ್ಕೆ ಹೋಗಿ ಅಲ್ಲಿ ನಿನ್ನ ಹೊಟ್ಟೆ ತುಂಬಿಸಿಕೊ. ನಿನ್ನ ಪ್ರಸಂಗವನ್ನು ಅಲ್ಲಿಯೇ ಮಾಡು.


ಯೆಹೋವನ ಆಜ್ಞೆಗಳನ್ನು ಪರಿಪಾಲಿಸುವ ನೀವು ಆತನು ಹೇಳುವ ಸಂಗತಿಗಳನ್ನು ಕಿವಿಗೊಟ್ಟು ಕೇಳಬೇಕು. ಆತನು ಹೇಳುವುದೇನೆಂದರೆ, “ನಿಮ್ಮ ಸಹೋದರರು ನಿಮ್ಮನ್ನು ದ್ವೇಷಿಸಿದರು. ನೀವು ನನ್ನನ್ನು ಅನುಸರಿಸಿದ್ದರಿಂದ ನಿಮ್ಮ ಮೇಲೆರಗಿದರು. ‘ಯೆಹೋವನು ಸನ್ಮಾನ ಹೊಂದಿದ ಬಳಿಕ ನಿಮ್ಮ ಬಳಿಗೆ ಬರುತ್ತೇವೆ. ಆಮೇಲೆ ನಿಮ್ಮ ಆನಂದವನ್ನು ಅನುಭವಿಸುತ್ತೇವೆ’ ಎಂದು ನಿಮ್ಮ ಸಹೋದರರು ಅಂದರು. ಆ ದುಷ್ಟ ಜನರು ಶಿಕ್ಷಿಸಲ್ಪಡುವರು.”


ಅಹಾಬನು ಮಾಡಿದಷ್ಟು ಪಾಪಗಳನ್ನು, ಇಲ್ಲವೆ ಕೆಟ್ಟಕಾರ್ಯಗಳನ್ನು ಮಾಡಿದ ಮನುಷ್ಯರು ಬೇರೆ ಯಾರೂ ಇಲ್ಲ. ಅವನು ಆ ಕಾರ್ಯಗಳನ್ನು ಮಾಡುವುದಕ್ಕೆ ಅವನ ಪತ್ನಿಯಾದ ಈಜೆಬೆಲಳು ಅವನನ್ನು ಒತ್ತಾಯಪಡಿಸಿದಳು.


ಅರಿಮಥಾಯ ಊರಿನ ಯೋಸೇಫ ಎಂಬವನು ಪಿಲಾತನ ಬಳಿಗೆ ಹೋಗಿ, ಯೇಸುವಿನ ದೇಹವನ್ನು ತನಗೆ ಕೊಡಬೇಕೆಂದು ಧೈರ್ಯದಿಂದ ಕೇಳಿದನು. ಯೋಸೇಫನು ಯೆಹೂದ್ಯರ ಸಮಿತಿಯಲ್ಲಿ ಒಬ್ಬ ಮುಖ್ಯ ಸದಸ್ಯನಾಗಿದ್ದನು. ದೇವರರಾಜ್ಯ ಬರಲೆಂದು ಬಯಸಿದ ಜನರಲ್ಲಿ ಇವನೂ ಒಬ್ಬನಾಗಿದ್ದನು.


ಆದರೆ ಪಟ್ಟಣದ ಜನರಲ್ಲಿ ಕೆಲವರು ಯೆಹೂದ್ಯರ ಮಾತನ್ನೂ ಇನ್ನು ಕೆಲವರು ಪೌಲ ಬಾರ್ನಬರ ಮಾತನ್ನೂ ನಂಬಿಕೊಂಡದ್ದರಿಂದ ಅವರಲ್ಲಿಯೇ ಎರಡು ಪಂಗಡವಾಯಿತು.


ಯೆಹೂದ್ಯರಲ್ಲದವರಲ್ಲಿ ಮತ್ತು ಯೆಹೂದ್ಯರಲ್ಲಿ ಕೆಲವರು ತಮ್ಮ ನಾಯಕರೊಡನೆ ಸೇರಿಕೊಂಡು ಪೌಲ ಬಾರ್ನಬರನ್ನು ಕಲ್ಲೆಸೆದು ಕೊಲ್ಲಬೇಕೆಂದಿದ್ದರು.


ಅಲ್ಲಿ ಲಿಡಿಯಾ ಎಂಬ ಒಬ್ಬ ಹೆಂಗಸಿದ್ದಳು. ಆಕೆಯು ಥುವತೈರ ಪಟ್ಟಣದವಳು. ಕೆನ್ನೇರಳೆ ಬಣ್ಣದ ಬಟ್ಟೆಗಳನ್ನು ಮಾರುವುದು ಆಕೆಯ ಕಸುಬಾಗಿತ್ತು. ಆಕೆಯು ನಿಜ ದೇವರನ್ನು ಆರಾಧಿಸುತ್ತಿದ್ದಳು. ಪೌಲನ ಮಾತನ್ನು ಲಿಡಿಯಾ ಆಲಿಸುತ್ತಿದ್ದಳು. ಪ್ರಭುವು ಆಕೆಯ ಹೃದಯವನ್ನು ತೆರೆದನು. ಪೌಲನು ಹೇಳಿದ ಸಂಗತಿಗಳನ್ನು ಆಕೆ ನಂಬಿಕೊಂಡಳು.


ನಿಜದೇವರನ್ನು ಪ್ರೀತಿಸುತ್ತಿದ್ದ ಕೆಲವು ಮಂದಿ ಗ್ರೀಕರು ಮತ್ತು ಕೆಲವು ಮಂದಿ ಪ್ರಮುಖ ಸ್ತ್ರೀಯರು ಅಲ್ಲಿದ್ದರು. ಅವರಲ್ಲಿ ಅನೇಕರಿಗೆ ಮನವರಿಕೆಯಾಗಿ ಪೌಲ ಸೀಲರನ್ನು ಸೇರಿಕೊಂಡರು.


ಈ ಯೆಹೂದ್ಯರಲ್ಲಿ ಅನೇಕರು ನಂಬಿದರು. ಅತಿ ಪ್ರಮುಖರಾದ ಗ್ರೀಕ್ ಸ್ತ್ರೀಯರು ಮತ್ತು ಪುರುಷರು ನಂಬಿಕೊಂಡರು.


ಸಭಾಮಂದಿರದಲ್ಲಿ ಪೌಲನು ಯೆಹೂದ್ಯರೊಂದಿಗೆ ಮತ್ತು ಯೆಹೂದ್ಯರಾಗಿದ್ದ ಗ್ರೀಕರೊಂದಿಗೆ ಚರ್ಚಿಸಿದನು. ಪಟ್ಟಣದ ವ್ಯಾಪಾರಸ್ಥಳದಲ್ಲಿಯೂ ಪೌಲನು ಕೆಲವು ಜನರೊಂದಿಗೆ ಪ್ರತಿದಿನ ಚರ್ಚಿಸಿದನು.


ಪೌಲನು ಸಭಾಮಂದಿರವನ್ನು ಬಿಟ್ಟು ತೀತಯುಸ್ತ ಎಂಬುವನ ಮನೆಗೆ ಹೋದನು. ಈ ಮನುಷ್ಯನು ನಿಜದೇವರನ್ನು ಆರಾಧಿಸುತ್ತಿದ್ದನು. ಇವನ ಮನೆ ಸಭಾಮಂದಿರದ ಪಕ್ಕದಲ್ಲಿತ್ತು.


ಮೂರು ದಿನಗಳಾದ ಮೇಲೆ ಪೌಲನು ಯೆಹೂದ್ಯರಲ್ಲಿ ಪ್ರಧಾನರಾಗಿದ್ದವರನ್ನು ಕರೆಯಿಸಿದನು. ಅವರು ಬಂದು ಒಟ್ಟಾಗಿ ಸೇರಿದಾಗ ಪೌಲನು ಅವರಿಗೆ, “ನನ್ನ ಯೆಹೂದ್ಯ ಸಹೋದರರೇ, ನಮ್ಮ ಜನರಿಗೂ ನಮ್ಮ ಪಿತೃಗಳ ಸಂಪ್ರದಾಯಗಳಿಗೂ ವಿರುದ್ಧವಾಗಿ ನಾನೇನೂ ಮಾಡಿಲ್ಲ. ಆದರೆ ನನ್ನನ್ನು ಜೆರುಸಲೇಮಿನಲ್ಲಿ ಬಂಧಿಸಿ ರೋಮಿನವರಿಗೆ ಒಪ್ಪಿಸಲಾಗಿದೆ.


ಅನೇಕ ಪ್ರಯಾಣಗಳನ್ನು ಮಾಡಿದೆನು. ನದಿಗಳಿಂದಲೂ ಕಳ್ಳರಿಂದಲೂ ನನ್ನ ಸ್ವಂತ ಜನರಾದ ಯೆಹೂದ್ಯರಿಂದಲೂ ಮತ್ತು ಯೆಹೂದ್ಯರಲ್ಲದವರಿಂದಲೂ ಅಪಾಯಕ್ಕೀಡಾಗಿದ್ದೆನು. ಪಟ್ಟಣಗಳಲ್ಲಿಯೂ ಜನರು ವಾಸವಾಗಿಲ್ಲದ ಸ್ಥಳಗಳಲ್ಲಿಯೂ ಸಮುದ್ರಗಳಲ್ಲಿಯೂ ಸುಳ್ಳುಸಹೋದರರ ಮಧ್ಯದಲ್ಲಿಯೂ ಅಪಾಯಕ್ಕೀಡಾಗಿದ್ದೆನು.


ಸಹೋದರ ಸಹೋದರಿಯರೇ, ನೀವು ಜುದೇಯದಲ್ಲಿರುವ ದೇವರ ಸಭೆಗಳಂತಿದ್ದೀರಿ. ಕ್ರಿಸ್ತ ಯೇಸುವಿನಲ್ಲಿ ವಿಶ್ವಾಸವಿಟ್ಟಿರುವ ಅವರು ಇತರ ಯೆಹೂದ್ಯರಿಂದ ಹಿಂಸಿಸಲ್ಪಟ್ಟರು. ಅದೇ ರೀತಿಯಲ್ಲಿ ನೀವೂ ನಿಮ್ಮ ದೇಶದ ಇತರ ಜನರಿಂದ ಹಿಂಸಿಸಲ್ಪಟ್ಟವರಾಗಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು