ಅಪೊಸ್ತಲರ ಕೃತ್ಯಗಳು 13:6 - ಪರಿಶುದ್ದ ಬೈಬಲ್6 ಅವರು ಆ ದ್ವೀಪದಲ್ಲೆಲ್ಲಾ ಪ್ರಯಾಣ ಮಾಡುತ್ತಾ ಪಾಫೋಸ್ ಎಂಬ ಊರಿಗೆ ಹೋದರು. ಮಂತ್ರತಂತ್ರಗಳನ್ನು ಮಾಡುತ್ತಿದ್ದ ಒಬ್ಬ ಯೆಹೂದ್ಯನನ್ನು ಅವರು ಪಾಫೋಸಿನಲ್ಲಿ ಕಂಡರು. ಅವನ ಹೆಸರು “ಬಾರ್ ಯೇಸು.” ಅವನೊಬ್ಬ ಸುಳ್ಳುಪ್ರವಾದಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅವರು ದ್ವೀಪದಲ್ಲೆಲ್ಲಾ ಸಂಚಾರಮಾಡಿ ಪಾಫೋಸ್ ಎಂಬ ಊರಿನ ತನಕ ಬಂದು ಅಲ್ಲಿ ಸುಳ್ಳುಪ್ರವಾದಿಯೂ, ಮಂತ್ರವಾದಿಯೂ ಆಗಿದ್ದ ‘ಬಾರ್‍ಯೇಸು’ ಎಂಬ ಒಬ್ಬ ಯೆಹೂದ್ಯ ಮನುಷ್ಯನನ್ನು ಕಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅವರು ಆ ದ್ವೀಪದಲ್ಲೆಲ್ಲಾ ಪ್ರಯಾಣಮಾಡುತ್ತಾ ಪಾಫೊಸ್ ಎಂಬ ಊರಿಗೆ ಹೋದರು. ಅಲ್ಲಿ ‘ಬಾರ್‍ಯೇಸು’ ಎಂಬ ಮಂತ್ರವಾದಿಯನ್ನು ಕಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅವರು ದ್ವೀಪದಲ್ಲೆಲ್ಲಾ ಸಂಚಾರಮಾಡಿ ಪಾಫೋಸ್ ಎಂಬ ಊರಿನ ತನಕ ಬಂದು ಅಲ್ಲಿ ಸುಳ್ಳುಪ್ರವಾದಿಯೂ ಮಂತ್ರವಾದಿಯೂ ಆಗಿದ್ದ ಬಾರ್‍ಯೇಸು ಎಂಬ ಒಬ್ಬ ಯೆಹೂದ್ಯ ಮನುಷ್ಯನನ್ನು ಕಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅವರು ಆ ದ್ವೀಪದಲ್ಲೆಲ್ಲಾ ಪ್ರಯಾಣಮಾಡಿ ಪಾಫೋಸ್ ಎಂಬಲ್ಲಿಗೆ ಬಂದರು. ಅಲ್ಲಿ ಮಂತ್ರವಾದಿಯೂ ಸುಳ್ಳುಪ್ರವಾದಿಯೂ ಆಗಿದ್ದ “ಬಾರ್ ಯೇಸು” ಎಂಬ ಹೆಸರಿನ ಒಬ್ಬ ಯೆಹೂದ್ಯನನ್ನು ಕಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ತೆನಿ ತ್ಯಾ ದ್ವಿಪಾತ್ ಫಿರುಂಗೆತ್ ಪಾಫೊಸ್ ಮನ್ತಲ್ಯಾ ಗಾಂವಾಕ್ ಜಾವ್ನ್ ಮೊಡಿ ಮಂತ್ರಾ ಕರ್‍ತಲ್ಯಾ ಜುದೆವಾಂಚೊ ಝುಟೊ ಪ್ರವಾದಿ ಹೊಲ್ಲೊ ಬಾರ್ ಜೆಜು ಮನ್ತಲ್ಯಾಕ್ ಬಗ್ಲ್ಯಾನಿ. ಅಧ್ಯಾಯವನ್ನು ನೋಡಿ |
ಆದರೆ ಆ ಮೃಗವನ್ನೂ ಸುಳ್ಳುಪ್ರವಾದಿಯನ್ನೂ ಸೆರೆಹಿಡಿಯಲಾಯಿತು. ಈ ಸುಳ್ಳುಪ್ರವಾದಿಯೇ ಮೃಗಕ್ಕಾಗಿ ಅದ್ಭುತಗಳನ್ನು ಮಾಡಿದವನು. ಈ ಸುಳ್ಳುಪ್ರವಾದಿಯು ಮೃಗದ ಗುರುತು ಹಾಕಿಸಿಕೊಂಡಿರುವ ಮತ್ತು ಅದರ ವಿಗ್ರಹವನ್ನು ಆರಾಧಿಸಿದ ಜನರನ್ನು ಮರುಳು ಮಾಡಲು ಈ ಅದ್ಭುತಗಳನ್ನು ಬಳಸಿದ್ದನು. ಈ ಸುಳ್ಳುಪ್ರವಾದಿಯನ್ನೂ ಮೃಗವನ್ನೂ, ಬೆಂಕಿ ಮತ್ತು ಗಂಧಕಗಳಿಂದ ಉರಿಯುವ ಕೆರೆಯಲ್ಲಿ ಜೀವಂತವಾಗಿ ಎಸೆಯಲಾಯಿತು.
ಯೆಹೋವನು, ‘ರಾಜನಾದ ಅಹಾಬನನ್ನು ನೀನು ಹೇಗೆ ಪ್ರೇರೇಪಿಸುವೆ?’ ಎಂದು ಉತ್ತರಿಸಿದಾಗ, ದೂತನು, ‘ಅಹಾಬನ ಎಲ್ಲಾ ಪ್ರವಾದಿಗಳು ಗಲಿಬಿಲಿಗೊಳ್ಳುವಂತೆ ಮಾಡುತ್ತೇನೆ. ರಾಜನಾದ ಅಹಾಬನಿಗೆ ಪ್ರವಾದಿಗಳು ಸುಳ್ಳುಹೇಳುವಂತೆ ನಾನು ಮಾಡುತ್ತೇನೆ. ಪ್ರವಾದಿಗಳ ಸಂದೇಶವೆಲ್ಲವೂ ಸುಳ್ಳಾಗಿರುವುದು’ ಎಂದನು. ಆದ್ದರಿಂದ ಯೆಹೋವನು, ‘ಸರಿ, ಹೋಗಿ ರಾಜನಾದ ಅಹಾಬನನ್ನು ಪ್ರೇರೇಪಿಸು. ನೀನು ಸಫಲನಾಗುವೆ’” ಎಂದು ಹೇಳಿದನು.