Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 13:7 - ಪರಿಶುದ್ದ ಬೈಬಲ್‌

7 ಸೆರ್ಗ್ಯಪೌಲನೆಂಬ ರಾಜ್ಯಪಾಲನ ಹತ್ತಿರದಲ್ಲೇ ಅವನು ಯಾವಾಗಲೂ ಇರುತ್ತಿದ್ದನು. ಸೆರ್ಗ್ಯಪೌಲನು ಜ್ಞಾನವಂತನಾಗಿದ್ದನು. ಅವನು ದೇವರ ವಾಕ್ಯವನ್ನು ಕೇಳಲು ಬಾರ್ನಬ ಮತ್ತು ಸೌಲರನ್ನು ಆಮಂತ್ರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವನು ರಾಜ್ಯ ಪಾಲನಾಗಿದ್ದ ಸೆರ್ಗ್ಯ ಪೌಲನೆಂಬ ಅಧಿಪತಿಯ ಜೊತೆಯಲ್ಲಿದ್ದನು. ಆ ಅಧಿಪತಿಯು ಬುದ್ಧಿವಂತನಾಗಿದ್ದು, ಬಾರ್ನಬ ಮತ್ತು ಸೌಲನನ್ನು ತನ್ನ ಬಳಿಗೆ ಕರೆಸಿ ದೇವರ ವಾಕ್ಯವನ್ನು ಕೇಳುವುದಕ್ಕೆ ಅಪೇಕ್ಷೆ ಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ತಾನೊಬ್ಬ ಪ್ರವಾದಿಯೆಂದು ನಟಿಸುತ್ತಿದ್ದ ಯೆಹೂದ್ಯ ಅವನು; ಮಾತ್ರವಲ್ಲ, ಅಲ್ಲಿಯ ರಾಜ್ಯಪಾಲನಾಗಿದ್ದ ಸೆರ್ಗ್ಯಪೌಲನ ಪರಿವಾರಕ್ಕೆ ಸೇರಿದ್ದನು. ಈ ರಾಜ್ಯಪಾಲನೊಬ್ಬ ಜ್ಞಾನಿ. ಇವನು ದೇವರವಾಕ್ಯವನ್ನು ಕೇಳಲಪೇಕ್ಷಿಸಿ ಬಾರ್ನಬ ಮತ್ತು ಸೌಲರನ್ನು ಆಹ್ವಾನಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವನು ಬುದ್ಧಿವಂತನಾಗಿದ್ದ ಸೆರ್ಗ್ಯಪೌಲನೆಂಬ ಅಧಿಪತಿಯ ಹತ್ತಿರದಲ್ಲಿದ್ದನು. ಅಧಿಪತಿಯು ಬಾರ್ನಬ ಸೌಲರನ್ನು ತನ್ನ ಬಳಿಗೆ ಕರಿಸಿ ದೇವರ ವಾಕ್ಯವನ್ನು ಕೇಳುವದಕ್ಕೆ ಅಪೇಕ್ಷೆ ಅದೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವನು ರಾಜ್ಯಪಾಲ ಸೆರ್ಗ್ಯಪೌಲನ ಜೊತೆಗಿದ್ದನು. ಈ ರಾಜ್ಯಪಾಲನು ಬುದ್ಧಿವಂತನಾಗಿದ್ದನು. ಇವನು ದೇವರ ವಾಕ್ಯವನ್ನು ಕೇಳುವ ಉದ್ದೇಶದಿಂದ ಬಾರ್ನಬ ಮತ್ತು ಸೌಲರನ್ನು ಕರೆಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಸೆರ್ಜಿಯೊ ಸಾವ್ಲು ಮನ್ತಲ್ಯಾ ನಾವಾಚೊ ಎಕ್ ಮಾನುಸ್ ರಾಜ್ಯಪಾಲಾಕ್ ವಾಂಗ್ಡಿ ಹೊವ್ನ್ ಹೊತ್ತೊ, ತೊ ಲೈ ಬುದ್ವಂತ್ ಮಾನುಸ್ ಹೊಲ್ಲೊ, ಖರೆ ತೊ ರಾಜ್ಯಪಾಲ್ ಬಾರ್ನಾಬ್ ಮನ್ತಲ್ಯಾ ಭಾವಾಕ್ನಾ ದೆವಾಚಿ ಬರಿ ಖಬರ್ ಆಯ್ಕುಚೆ ಮನುನ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 13:7
11 ತಿಳಿವುಗಳ ಹೋಲಿಕೆ  

ನಮ್ಮಲ್ಲಿ ನ್ಯಾಯಾಲಯಗಳಿವೆ ಮತ್ತು ನ್ಯಾಯಾಧೀಶರುಗಳು ಇದ್ದಾರೆ. ದೇಮೇತ್ರಿಯನಿಗಾಗಲಿ ಮತ್ತು ಅವನೊಂದಿಗೆ ಕೆಲಸ ಮಾಡುವ ಜನರಿಗಾಗಲಿ ಯಾರ ಮೇಲಾದರೂ ದೂರುಗಳಿವೆಯೇ? ದೂರುಗಳಿದ್ದರೆ, ಅವರು ನ್ಯಾಯಾಲಯಗಳಿಗೆ ಹೋಗಬೇಕು! ಅವರು ಪರಸ್ಪರ ವಾದ ಮಾಡಲು ಅದೇ ತಕ್ಕ ಸ್ಥಳ!


ಇದನ್ನು ಕಂಡ ರಾಜ್ಯಪಾಲನು ಪ್ರಭುವನ್ನು ನಂಬಿಕೊಂಡನು. ಪ್ರಭುವಿನ ವಿಷಯವಾದ ಉಪದೇಶವನ್ನು ಕೇಳಿ ವಿಸ್ಮಿತನಾದನು.


ಅಖಾಯ ನಾಡಿಗೆ ಗಲ್ಲಿಯೋನನು ರಾಜ್ಯಪಾಲನಾದಾಗ ಕೆಲವು ಯೆಹೂದ್ಯರು ಪೌಲನಿಗೆ ವಿರೋಧವಾಗಿ ಸೇರಿಬಂದರು. ಅವರು ಪೌಲನನ್ನು ನ್ಯಾಯಾಲಯಕ್ಕೆ ಕರದೊಯ್ದು,


ಜ್ಞಾನಿಗೆ ಹೆಚ್ಚು ಕಲಿತುಕೊಳ್ಳುವುದಕ್ಕೆ ಇಷ್ಟ; ಆದ್ದರಿಂದ ಅವನು ಗಮನವಿಟ್ಟು ಕೇಳುವನು.


ಆದರೆ ಮಂತ್ರವಾದಿಯಾದ ಎಲಿಮನು ಬಾರ್ನಬ ಮತ್ತು ಸೌಲರಿಗೆ ವಿರೋಧವಾಗಿದ್ದನು. (ಬಾರ್ ಯೇಸುವನ್ನು ಗ್ರೀಕ್ ಭಾಷೆಯಲ್ಲಿ ಎಲಿಮ ಎಂದು ಕರೆಯುತ್ತಿದ್ದರು.) ರಾಜ್ಯಪಾಲನು ಯೇಸುವಿನಲ್ಲಿ ನಂಬಿಕೆ ಇಡದ ಹಾಗೆ ಮಾಡಲು ಎಲಿಮನು ಪ್ರಯತ್ನಿಸಿದನು.


ಎಲ್ಲವನ್ನೂ ಪರಿಶೋಧಿಸಿ, ಒಳ್ಳೆಯದನ್ನು ಭದ್ರವಾಗಿ ಹಿಡಿದುಕೊಳ್ಳಿರಿ.


ಬುದ್ಧಿವಂತ ಮನುಷ್ಯನು ಇವುಗಳನ್ನು ಅರ್ಥಮಾಡಿಕೊಳ್ಳುತ್ತಾನೆ. ಜಾಣನು ಇದನ್ನು ಕಲಿತುಕೊಳ್ಳುತ್ತಾನೆ. ಯೆಹೋವನ ಮಾರ್ಗವು ಸರಿಯಾದದ್ದು. ಒಳ್ಳೆಯ ಜನರು ಅವರೊಂದಿಗೆ ಜೀವಿಸುವರು. ಪಾಪಿಗಳು ಅವುಗಳಿಂದ ಸಾಯುವರು.


ದಡ್ಡರಿಗೆ ಮೂಢತನವೇ ಪ್ರತಿಫಲ. ಜಾಣರಾದರೋ ಜ್ಞಾನವೆಂಬ ಕಿರೀಟವನ್ನು ಹೊಂದುವರು.


ಮೂಢನು ತಾನು ಕೇಳಿದ್ದನ್ನೆಲ್ಲ ನಂಬುವನು. ಆದರೆ ಜಾಣನು ಪ್ರತಿಯೊಂದರ ಬಗ್ಗೆ ಎಚ್ಚರಿಕೆಯಿಂದ ಯೋಚಿಸುವನು.


ಜಾಣರು ಜ್ಞಾನಿಗಳಾಗಿದ್ದಾರೆ; ಅವರು ವಿವೇಚಿಸಿ ಕಾರ್ಯಗಳನ್ನು ಮಾಡುತ್ತಾರೆ, ಮೂಢರು ಬುದ್ಧಿಹೀನರಾಗಿದ್ದಾರೆ; ತಾವು ಮೋಸದಿಂದ ಬದುಕಬಲ್ಲೆವು ಎಂದು ಅವರು ಯೋಚಿಸಿಕೊಂಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು