Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 14:1 - ಪರಿಶುದ್ದ ಬೈಬಲ್‌

1 ಪೌಲ ಬಾರ್ನಬರು ಇಕೋನಿಯಾ ಪಟ್ಟಣಕ್ಕೆ ಹೋದರು. (ಪ್ರತಿಯೊಂದು ಪಟ್ಟಣದಲ್ಲಿಯೂ ಅವರು ಮಾಡುತ್ತಿದ್ದಂತೆ) ಇಲ್ಲಿಯೂ ಯೆಹೂದ್ಯರ ಸಭಾಮಂದಿರದೊಳಗೆ ಹೋಗಿ ಜನರಿಗೆ ಬೋಧಿಸಿದರು. ಪೌಲ ಬಾರ್ನಬರ ಅಮೋಘ ಬೋಧನೆಯನ್ನು ಕೇಳಿ ಅನೇಕ ಯೆಹೂದ್ಯರು ಮತ್ತು ಗ್ರೀಕರು ನಂಬಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇಕೋನ್ಯದಲ್ಲಿ ಪೌಲ ಮತ್ತು ಬಾರ್ನಬರು ಅದೇ ಪ್ರಕಾರವಾಗಿ ಯೆಹೂದ್ಯರ ಸಭಾಮಂದಿರದೊಳಗೆ ಹೋಗಿ ಪ್ರೇರಣಾತ್ಮಕವಾದ ಬೋಧನೆ ನೀಡಿ ಮಾತನಾಡಿದ್ದರಿಂದ ಯೆಹೂದ್ಯರಲ್ಲಿಯೂ, ಗ್ರೀಕರಲ್ಲಿಯೂ ಬಹುಮಂದಿ ಕರ್ತನಾದ ಯೇಸುಕ್ರಿಸ್ತನನ್ನು ನಂಬುವವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇಕೋನಿಯದಲ್ಲೂ ಪೌಲ ಮತ್ತು ಬಾರ್ನಬ ಯೆಹೂದ್ಯರ ಪ್ರಾರ್ಥನಾಮಂದಿರಕ್ಕೆ ಹೋದರು. ಅವರ ಅಮೋಘ ಬೋಧನೆಯನ್ನು ಕೇಳಿ ಯೆಹೂದ್ಯರು ಮತ್ತು ಗ್ರೀಕರು ಬಹುಸಂಖ್ಯೆಯಲ್ಲಿ ಭಕ್ತವಿಶ್ವಾಸಿಗಳಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇಕೋನ್ಯದಲ್ಲಿ ಪೌಲ ಬಾರ್ನಬರು ಅದೇ ಪ್ರಕಾರವಾಗಿ ಯೆಹೂದ್ಯರ ಸಭಾಮಂದಿರದೊಳಗೆ ಹೋಗಿ ಬಲವಾಗಿ ಮಾತಾಡಿದ್ದರಿಂದ ಯೆಹೂದ್ಯರಲ್ಲಿಯೂ ಗ್ರೀಕರಲ್ಲಿಯೂ ಬಹುಮಂದಿ ನಂಬುವವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇಕೋನ್ಯದಲ್ಲಿಯೂ ಪೌಲ ಮತ್ತು ಬಾರ್ನಬರು ವಾಡಿಕೆಯಂತೆ ಯೆಹೂದ್ಯರ ಸಭಾಮಂದಿರಕ್ಕೆ ಹೋದರು. ಅವರು ಅಲ್ಲಿ ಪರಿಣಾಮಕಾರಿಯಾಗಿ ಮಾತನಾಡಿದ್ದರಿಂದ ಬಹು ಸಂಖ್ಯೆಯಲ್ಲಿ ಯೆಹೂದ್ಯರೂ ಗ್ರೀಕರೂ ವಿಶ್ವಾಸವನ್ನಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಪಾವ್ಲು ಅನಿ ಬಾರ್ನಾಬಾಸ್ ಇಕೊನಿಯಾ ಮನ್ತಲ್ಯಾ ಶಾರಾಕ್ ಗೆಲೆ, ಹರ್ ಎಕ್ ಶಾರಾತ್ ತೆನಿ ಕರಲ್ಯಾ ಸಾರ್ಕೆಚ್ ಹಿತ್ತೆಬಿ ಜುದೆವಾಂಚ್ಯಾ ಸಿನಾಗೊತ್ ಜಾವ್ನ್ ದೆವಾಚ್ಯಾ ವಿಶಯಾತ್ ಬೊಲ್ಯಾನಿ, ಪಾವ್ಲುಚೆ ಅನಿ ಬಾರ್ನಾಬಾಸಾಚಿ ಶಿಕಾಪಾ ಆಯ್ಕುನ್ ಜುದೆವಾಂಚ್ಯಾ ಅನಿ ಗ್ರಿಕಾಂಚ್ಯಾ ಲೈ ಲೊಕಾನಿ ದೆವಾಚೆರ್ ವಿಶ್ವಾಸ್ ಥವ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 14:1
33 ತಿಳಿವುಗಳ ಹೋಲಿಕೆ  

ಪ್ರತಿ ಸಬ್ಬತ್‌ದಿನದಂದು ಪೌಲನು ಸಭಾಮಂದಿರದಲ್ಲಿ ಯೆಹೂದ್ಯರೊಂದಿಗೂ ಗ್ರೀಕರೊಂದಿಗೂ ಚರ್ಚಿಸುತ್ತಾ ಯೇಸುವಿನಲ್ಲಿ ನಂಬಿಕೆ ಇಡುವಂತೆ ಅವರನ್ನು ಪ್ರೋತ್ಸಾಹಿಸಿದನು.


ಆದ್ದರಿಂದ ಪೌಲ ಬಾರ್ನಬರು ಅವರ ವಿರೋಧವಾಗಿ ತಮ್ಮ ಕಾಲಿನ ಧೂಳನ್ನು ಝಾಡಿಸಿ, ಇಕೋನಿಯಾ ಪಟ್ಟಣಕ್ಕೆ ಹೋದರು.


ಆದರೆ ಪೌಲ ಬಾರ್ನಬರು ಬಹು ಧೈರ್ಯದಿಂದ ಮಾತಾಡಿ, “ನಾವು ದೇವರ ಸಂದೇಶವನ್ನು ಯೆಹೂದ್ಯರಾದ ನಿಮಗೆ ಮೊದಲು ಹೇಳಬೇಕು. ಆದರೆ ನೀವು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ಎಣಿಸಿಕೊಂಡು ತಿರಸ್ಕರಿಸುತ್ತಿದ್ದೀರಿ. ಆದ್ದರಿಂದ ನಾವು ಅನ್ಯಧರ್ಮದವರ ಬಳಿಗೆ ಹೋಗುತ್ತೇವೆ!


ಪೌಲ ಬಾರ್ನಬರು ದರ್ಬೆ ಪಟ್ಟಣದಲ್ಲೂ ಸುವಾರ್ತೆಯನ್ನು ತಿಳಿಸಿದರು. ಅನೇಕ ಜನರು ಯೇಸುವಿನ ಶಿಷ್ಯರಾದರು. ಪೌಲಬಾರ್ನಬರು ಲುಸ್ತ್ರ, ಇಕೋನಿಯ ಮತ್ತು ಅಂತಿಯೋಕ್ಯ ಪಟ್ಟಣಗಳಿಗೆ ಹಿಂತಿರುಗಿ,


ಈಗ ಕ್ರಿಸ್ತನಲ್ಲಿ ಯೆಹೂದ್ಯನು, ಗ್ರೀಕನು ಎಂಬ ವ್ಯತ್ಯಾಸವಿಲ್ಲ; ಸ್ವತಂತ್ರರು ಮತ್ತು ಗುಲಾಮರು ಎಂಬ ವ್ಯತ್ಯಾಸವಿಲ್ಲ; ಸ್ತ್ರೀಯರು ಮತ್ತು ಪುರುಷರು ಎಂಬ ವ್ಯತ್ಯಾಸವಿಲ್ಲ. ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿದ್ದೀರಿ.


ಏಕೆಂದರೆ ಯೆಹೂದ್ಯರಿಗೂ ಯೆಹೂದ್ಯರಲ್ಲದವರಿಗೂ ಯಾವ ವ್ಯತ್ಯಾಸವೂ ಇಲ್ಲ. ಎಲ್ಲರಿಗೂ ಒಬ್ಬನೇ ಪ್ರಭು. ತನ್ನಲ್ಲಿ ನಂಬಿಕೆಯಿಡುವ ಜನರೆಲ್ಲರಿಗೆ ಪ್ರಭುವು ಅನೇಕ ಆಶೀರ್ವಾದಗಳನ್ನು ಕೊಡುತ್ತಾನೆ.


ನಾನು ಸುವಾರ್ತೆಯ ವಿಷಯದಲ್ಲಿ ಹೆಮ್ಮೆಪಡುತ್ತೇನೆ. ನಂಬುವ ಪ್ರತಿಯೊಬ್ಬರನ್ನು ರಕ್ಷಿಸುವುದಕ್ಕಾಗಿ ಅಂದರೆ ಮೊದಲನೆಯದಾಗಿ, ಯೆಹೂದ್ಯರನ್ನು ಅನಂತರ ಯೆಹೂದ್ಯರಲ್ಲದವರನ್ನು ಸಹ ರಕ್ಷಿಸುವುದಕ್ಕಾಗಿ ದೇವರು ಸುವಾರ್ತೆ ಎಂಬ ಶಕ್ತಿಯನ್ನು ಉಪಯೋಗಿಸುತ್ತಾನೆ.


ಎಫೆಸದಲ್ಲಿದ್ದ ಯೆಹೂದ್ಯರು ಮತ್ತು ಗ್ರೀಕರು ಇದನ್ನು ಕೇಳಿ ಭಯಗ್ರಸ್ತರಾದರು ಮತ್ತು ಪ್ರಭು ಯೇಸುವಿನ ಹೆಸರನ್ನು ಸನ್ಮಾನಿಸಿದರು.


ಅನಂತರ ಮೂರು ತಿಂಗಳ ಕಾಲ ಪೌಲನು ಸಭಾಮಂದಿರಕ್ಕೆ ಹೋಗಿ ಬಹು ಧೈರ್ಯದಿಂದ ಮಾತಾಡಿದನು. ಅವನು ಯೆಹೂದ್ಯರಿಗೆ ದೇವರ ರಾಜ್ಯದ ಸಂಗತಿಗಳನ್ನು ತಿಳಿಸಿ ಅವರನ್ನು ಒಡಂಬಡಿಸಲು ಪ್ರಯತ್ನಿಸಿದನು.


ಕ್ರಿಸ್ಪನು ಸಭಾಮಂದಿರದ ಅಧ್ಯಕ್ಷನಾಗಿದ್ದನು. ಕ್ರಿಸ್ಪನು ಮತ್ತು ಅವನ ಮನೆಯಲ್ಲಿ ವಾಸವಾಗಿದ್ದ ಎಲ್ಲಾ ಜನರು ಪ್ರಭುವಿನಲ್ಲಿ ನಂಬಿಕೆಯಿಟ್ಟರು. ಕೊರಿಂಥದಲ್ಲಿ ಇತರ ಅನೇಕ ಜನರು ಪೌಲನಿಗೆ ಕಿವಿಗೊಟ್ಟರು ಮತ್ತು ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡರು.


ಈ ಯೆಹೂದ್ಯರಲ್ಲಿ ಅನೇಕರು ನಂಬಿದರು. ಅತಿ ಪ್ರಮುಖರಾದ ಗ್ರೀಕ್ ಸ್ತ್ರೀಯರು ಮತ್ತು ಪುರುಷರು ನಂಬಿಕೊಂಡರು.


ನಿಜದೇವರನ್ನು ಪ್ರೀತಿಸುತ್ತಿದ್ದ ಕೆಲವು ಮಂದಿ ಗ್ರೀಕರು ಮತ್ತು ಕೆಲವು ಮಂದಿ ಪ್ರಮುಖ ಸ್ತ್ರೀಯರು ಅಲ್ಲಿದ್ದರು. ಅವರಲ್ಲಿ ಅನೇಕರಿಗೆ ಮನವರಿಕೆಯಾಗಿ ಪೌಲ ಸೀಲರನ್ನು ಸೇರಿಕೊಂಡರು.


ಸಭೆಯು ಮುಗಿದ ಮೇಲೆ ಅನೇಕ ಯೆಹೂದ್ಯರು ಪೌಲ ಬಾರ್ನಬರನ್ನು ಆ ಸ್ಥಳದಿಂದ ಹಿಂಬಾಲಿಸಿದರು. ಯೆಹೂದ್ಯರ ಧರ್ಮಕ್ಕೆ ಸೇರಿಕೊಂಡಿದ್ದ ಅನೇಕ ಅನ್ಯಮತೀಯರೂ ಆ ಯೆಹೂದ್ಯರೊಂದಿಗಿದ್ದರು. ಮತಾಂತರಗೊಂಡಿದ್ದ ಇವರು ಸಹ ನಿಜದೇವರನ್ನು ಆರಾಧಿಸುತ್ತಿದ್ದರು. ಪೌಲ ಬಾರ್ನಬರು ಅವರೊಂದಿಗೆ ಮಾತಾಡಿ, ದೇವರ ಕೃಪೆಯಲ್ಲೇ ಭರವಸವಿಟ್ಟು ಮುಂದುವರಿಯಬೇಕೆಂದು ಪ್ರೋತ್ಸಾಹಪಡಿಸಿದರು.


ಪ್ರಭುವು ವಿಶ್ವಾಸಿಗಳಿಗೆ ಸಹಾಯ ಮಾಡುತ್ತಿದ್ದನು. ಜನರು ಬಹು ಸಂಖ್ಯೆಯಲ್ಲಿ ಪ್ರಭುವನ್ನು ನಂಬಿಕೊಂಡು ಅನುಸರಿಸತೊಡಗಿದರು.


ಅವನು ತಡಮಾಡದೆ ಸಭಾಮಂದಿರಗಳಿಗೆ ಹೋಗಿ “ಯೇಸುವೇ ದೇವಕುಮಾರ”ನೆಂದು ಬೋಧಿಸತೊಡಗಿದನು.


“ಯೆಹೂದ್ಯ ಜನರೇ, ನಮಗೆ ಸಹಾಯಮಾಡಿ! ಮೋಶೆಯ ಧರ್ಮಶಾಸ್ತ್ರಕ್ಕೂ ನಮ್ಮ ಜನರಿಗೂ ಮತ್ತು ಈ ಸ್ಥಳಕ್ಕೂ (ದೇವಾಲಯ) ವಿರೋಧವಾಗಿ ಎಲ್ಲಾ ಕಡೆಗಳಲ್ಲಿ ಜನರಿಗೆ ಉಪದೇಶಿಸುತ್ತಿದ್ದವನು ಇವನೇ. ಈಗ ಇವನು ಕೆಲವು ಗ್ರೀಕರನ್ನು ದೇವಾಲಯದೊಳಕ್ಕೆ ಕರೆದುಕೊಂಡು ಬಂದಿದ್ದಾನೆ! ಈ ಪವಿತ್ರ ಸ್ಥಳವನ್ನು ಇವನು ಅಶುದ್ಧಗೊಳಿಸಿದ್ದಾನೆ!” ಎಂದು ಕೂಗಿಹೇಳಿ ಗಲಿಬಿಲಿ ಮಾಡಿದರು.


ನಿಮ್ಮ ಹೃದಯಗಳನ್ನು ಮಾರ್ಪಡಿಸಿಕೊಂಡು ದೇವರ ಕಡೆಗೆ ತಿರುಗಿಕೊಳ್ಳಬೇಕೆಂದು ನಾನು ಎಲ್ಲಾ ಜನಾಂಗಗಳವರಿಗೆ ಅಂದರೆ ಯೆಹೂದ್ಯರಿಗೂ ಮತ್ತು ಗ್ರೀಕರಿಗೂ ತಿಳಿಸಿದೆನು. ನಮ್ಮ ಪ್ರಭುವಾದ ಯೇಸುವಿನಲ್ಲಿ ನಂಬಿಕೆ ಇಡಬೇಕೆಂದು ನಾನು ಅವರೆಲ್ಲರಿಗೂ ತಿಳಿಸಿದೆನು.


ಸಭಾಮಂದಿರದಲ್ಲಿ ಪೌಲನು ಯೆಹೂದ್ಯರೊಂದಿಗೆ ಮತ್ತು ಯೆಹೂದ್ಯರಾಗಿದ್ದ ಗ್ರೀಕರೊಂದಿಗೆ ಚರ್ಚಿಸಿದನು. ಪಟ್ಟಣದ ವ್ಯಾಪಾರಸ್ಥಳದಲ್ಲಿಯೂ ಪೌಲನು ಕೆಲವು ಜನರೊಂದಿಗೆ ಪ್ರತಿದಿನ ಚರ್ಚಿಸಿದನು.


ಪೌಲನು ದರ್ಬೆ ಮತ್ತು ಲುಸ್ತ್ರ ಪಟ್ಟಣಗಳಿಗೆ ಹೋದನು. ತಿಮೊಥೆ ಎಂಬ ಕ್ರಿಸ್ತನ ಶಿಷ್ಯನೊಬ್ಬನು ಅಲ್ಲಿದ್ದನು. ತಿಮೊಥೆಯನ ತಾಯಿ ಯೆಹೂದ್ಯ ವಿಶ್ವಾಸಿಯಾಗಿದ್ದಳು. ಅವನ ತಂದೆಯು ಗ್ರೀಕನಾಗಿದ್ದನು.


ಆದರೆ ಯೆಹೂದ್ಯರಲ್ಲಿ ನಂಬದೆ ಹೋದ ಕೆಲವರು ಯೆಹೂದ್ಯರಲ್ಲದವರನ್ನು ಪ್ರಚೋಧಿಸಿ ಸಹೋದರರ ವಿರುದ್ಧ ಜನರನ್ನು ಎಬ್ಬಿಸಿದರು.


ಬಾರ್ನಬ ಮತ್ತು ಸೌಲರು ಸಲಾಮಿಸ್ ಪಟ್ಟಣಕ್ಕೆ ಬಂದಾಗ ಯೆಹೂದ್ಯರ ಸಭಾಮಂದಿರದಲ್ಲಿ ದೇವರ ಸಂದೇಶವನ್ನು ಸಾರಿದರು. (ಮಾರ್ಕನೆನಿಸಿಕೊಳ್ಳುವ ಯೋಹಾನನು ಸಹಾಯ ಮಾಡುವುದಕ್ಕಾಗಿ ಅವರೊಂದಿಗಿದ್ದನು.)


ಅಲ್ಲಿ ಗ್ರೀಕ್ ಜನರು ಸಹ ಇದ್ದರು. ಪಸ್ಕಹಬ್ಬದಲ್ಲಿ ಆರಾಧಿಸುವುದಕ್ಕಾಗಿ ಜೆರುಸಲೇಮಿಗೆ ಹೋಗಿದ್ದವರಲ್ಲಿ ಇವರೂ ಸೇರಿದ್ದರು.


ಯೆಹೂದ್ಯರು, “ಇವನನ್ನು ನಾವು ಕಂಡುಕೊಳ್ಳಲಾಗದಂತೆ ಇವನು ಎಲ್ಲಿಗೆ ಹೋಗುವನು? ನಮ್ಮವರು ವಾಸವಾಗಿರುವ ಗ್ರೀಕ್ ಜನರ ಪಟ್ಟಣಗಳಿಗೆ ಹೋಗಿ ಗ್ರೀಕರಿಗೆ ಉಪದೇಶಿಸುವನೇ?


ಈ ಹೊಸ ಜೀವನದಲ್ಲಿ ಗ್ರೀಕರ ಮತ್ತು ಯೆಹೂದ್ಯರ ಮಧ್ಯದಲ್ಲಾಗಲಿ, ಸುನ್ನತಿಯನ್ನು ಮಾಡಿಸಿಕೊಂಡಿರುವ ಮತ್ತು ಮಾಡಿಸಿಕೊಂಡಿಲ್ಲದ ಜನರ ಮಧ್ಯದಲ್ಲಾಗಲಿ ಪರದೇಶದವರ ಅಥವಾ ಅನಾಗರೀಕರ ಮಧ್ಯದಲ್ಲಾಗಲಿ, ಗುಲಾಮರ ಅಥವಾ ಸ್ವತಂತ್ರರಾದ ಜನರ ಮಧ್ಯದಲ್ಲಾಗಲಿ ಯಾವ ಭೇದವೂ ಇಲ್ಲ. ಎಲ್ಲಾ ವಿಶ್ವಾಸಿಗಳಲ್ಲಿಯೂ ಕ್ರಿಸ್ತನಿದ್ದಾನೆ. ಅವರಿಗೆ ಕ್ರಿಸ್ತನೊಬ್ಬನೇ ಅಗತ್ಯ.


ತೀತನು ನನ್ನೊಂದಿಗಿದ್ದನು. ಅವನು ಗ್ರೀಕನಾಗಿದ್ದನು. ಆದರೆ ಅವನು ಸುನ್ನತಿ ಮಾಡಿಸಿಕೊಳ್ಳಬೇಕೆಂದು ಯಾರೂ ಬಲವಂತ ಮಾಡಲಿಲ್ಲ. ಈ ಸಮಸ್ಯೆಗಳ ಬಗ್ಗೆ ನಾವು ಮಾತಾಡಲೇಬೇಕಿತ್ತು. ಏಕೆಂದರೆ ಕೆಲವು ಸುಳ್ಳು ಸಹೋದರರು ಬಂದು ನಮ್ಮ ಸಭೆಯೊಳಗೆ ಸೇರಿಕೊಂಡಿದ್ದರು. ಯೇಸು ಕ್ರಿಸ್ತನಲ್ಲಿ ನಮಗಿರುವ ಸ್ವಾತಂತ್ರ್ಯದ ಬಗ್ಗೆ ರಹಸ್ಯವಾಗಿ ತಿಳಿದುಕೊಳ್ಳಲು ಅವರು ಬಂದಿದ್ದರು.


ಹೀಗೆ ಎರಡು ವರ್ಷಗಳು ಕಳೆದವು. ಇದರಿಂದಾಗಿ, ಏಷ್ಯಾದಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರು ಮತ್ತು ಗ್ರೀಕರು ಪ್ರಭುವಿನ ವಾಕ್ಯವನ್ನು ಕೇಳಿದರು.


ಅವಳು ಸಿರಿಯ ಪ್ರದೇಶದ ಪೊಯಿನಿಕ್ಯದಲ್ಲಿ ಹುಟ್ಟಿದ್ದಳು ಮತ್ತು ಗ್ರೀಕಳಾಗಿದ್ದಳು. ಆ ಸ್ತ್ರೀಯು ತನ್ನ ಮಗಳಲ್ಲಿರುವ ದೆವ್ವವನ್ನು ಹೊರಗಟ್ಟಬೇಕೆಂದು ಯೇಸುವಿನಲ್ಲಿ ಬೇಡಿಕೊಂಡಳು.


ಅವರು ದೇವರನ್ನು ಕೊಂಡಾಡುತ್ತಿದ್ದರು ಮತ್ತು ಜನರೆಲ್ಲರೂ ಅವರನ್ನು ಇಷ್ಟಪಡುತ್ತಿದ್ದರು. ಪ್ರತಿದಿನವೂ ಹೆಚ್ಚುಹೆಚ್ಚು ಜನರು ರಕ್ಷಣೆ ಹೊಂದುತ್ತಿದ್ದರು; ಪ್ರಭುವು ಅವರನ್ನೆಲ್ಲಾ ವಿಶ್ವಾಸಿಗಳ ಸಭೆಗೆ ಸೇರಿಸುತ್ತಿದ್ದನು.


ಬಳಿಕ ಕೆಲವು ಯೆಹೂದ್ಯರು ಅಂತಿಯೋಕ್ಯದಿಂದ ಮತ್ತು ಇಕೋನಿಯದಿಂದ ಬಂದು ಪೌಲನಿಗೆ ವಿರೋಧವಾಗಿ ಜನರನ್ನು ಹುರಿದುಂಬಿಸಿ ಪೌಲನಿಗೆ ಕಲ್ಲೆಸೆದು, ಅವನು ಸತ್ತನೆಂದು ಭಾವಿಸಿ ಪಟ್ಟಣದಿಂದ ಹೊರಗೆ ಎಳೆದುಹಾಕಿದರು.


ಲುಸ್ತ್ರ ಮತ್ತು ಇಕೋನಿಯಾ ಪಟ್ಟಣಗಳ ವಿಶ್ವಾಸಿಗಳು ತಿಮೊಥೆಯನನ್ನು ಗೌರವಿಸುತ್ತಿದ್ದರು; ಮತ್ತು ಅವನ ಬಗ್ಗೆ ಒಳ್ಳೆಯದನ್ನೇ ಹೇಳುತ್ತಿದ್ದರು.


ನನಗೆ ಸಂಭವಿಸಿದ ಹಿಂಸೆ ಮತ್ತು ಸಂಕಟಗಳ ಬಗ್ಗೆಯೂ ನಿನಗೆ ತಿಳಿದಿದೆ. ಅಂತಿಯೋಕ್ಯ, ಇಕೋನ್ಯ, ಲುಸ್ತ್ರಗಳಲ್ಲಿ ನನಗೆ ಸಂಭವಿಸಿದ ಸಂಗತಿಗಳೆಲ್ಲವೂ ನಿನಗೆ ತಿಳಿದಿವೆ. ನಾನು ಆ ಸ್ಥಳಗಳಲ್ಲಿ ಅನುಭವಿಸಿದ ಹಿಂಸೆಯು ನಿನಗೆ ತಿಳಿದಿದೆ. ಆದರೆ ಆ ಎಲ್ಲ ತೊಂದರೆಗಳಿಂದ ಪ್ರಭುವು ನನ್ನನ್ನು ಕಾಪಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು