ಅಪೊಸ್ತಲರ ಕೃತ್ಯಗಳು 14:18 - ಪರಿಶುದ್ದ ಬೈಬಲ್18 ಪೌಲ ಬಾರ್ನಬರು ಇಷ್ಟೆಲ್ಲಾ ಹೇಳಿದರೂ ಯಜ್ಞವರ್ಪಿಸಿ ಆರಾಧಿಸದಂತೆ ಜನರನ್ನು ತಡೆಯಲು ಬಹಳ ಪ್ರಯಾಸಪಡಬೇಕಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಬಾರ್ನಬ ಮತ್ತು ಪೌಲರು ಈ ಮಾತುಗಳನ್ನು ಹೇಳಿದರೂ ಜನರು ತಮಗೆ ಬಲಿಯರ್ಪಿಸುವುದನ್ನು ತಡೆಯಲು ಆಸಾಧ್ಯವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಪ್ರೇಷಿತರು ಇಷ್ಟು ಹೇಳಿದರೂ ಜನರು ತಮಗೆ ಬಲಿಯರ್ಪಿಸುವುದನ್ನು ತಡೆಯುವುದು ಕಷ್ಟಸಾಧ್ಯವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಅವರು ಈ ಮಾತುಗಳನ್ನು ಹೇಳಿದರೂ ಜನರನ್ನು ತಮಗೆ ಬಲಿಕೊಡದಂತೆ ತಡೆಯುವದು ಕಷ್ಟವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಹೀಗೆ ಹೇಳಿದರೂ ಆ ಜನಸಮೂಹ ಅವರಿಗೆ ಬಲಿಯರ್ಪಿಸುವುದನ್ನು ತಡೆಯಲು ಕಷ್ಟವಾಯಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ಪಾವ್ಲುನ್ ಅನಿ ಬಾರ್ನಾಬಾಸಾನ್ ಯೆವ್ಡೆ ಸಗ್ಳ್ಯೆ ಸಾಂಗ್ಲಾರ್ಬಿ ಬಲಿ ಭೆಟ್ವುನ್ ಆರಾದನ್ ಕರುಚೆ ಮನುನ್ ಯೆಲ್ಲ್ಯಾ ಲೊಕಾಕ್ನಿ ಅಡ್ವುಕ್ ಲೈ ತರಾಸ್ ಹೊಲೊ . ಅಧ್ಯಾಯವನ್ನು ನೋಡಿ |
ಮನೆಯ ಸುತ್ತಲೂ ನಿಂತುಕೊಂಡಿದ್ದ ಗಂಡಸರು ಅವನಿಗೆ, “ದಾರಿಬಿಡು” ಎಂದು ಕೂಗಿದರು. ಆಮೇಲೆ ಅವರು ತಮ್ಮೊಳಗೆ, “ಈ ಲೋಟನು ನಮ್ಮ ನಗರಕ್ಕೆ ಪ್ರವಾಸಿಗನಂತೆ ಬಂದು ಈಗ ನಮಗೇ ನ್ಯಾಯವನ್ನು ಹೇಳಿಕೊಡುತ್ತಿದ್ದಾನೆ” ಎಂದು ಮಾತಾಡಿಕೊಂಡರು. ಆಮೇಲೆ ಅವರು ಲೋಟನಿಗೆ, “ನಾವು ಆ ಪುರುಷರಿಗೆ ಮಾಡುವುದಕ್ಕಿಂತ ನಿನಗೇ ಹೆಚ್ಚು ಕೆಟ್ಟದ್ದನ್ನು ಮಾಡುತ್ತೇವೆ” ಎಂದು ಕೂಗಿಹೇಳಿ ಲೋಟನ ಸಮೀಪಕ್ಕೆ ಬಂದು ಬಾಗಿಲನ್ನು ಮುರಿದುಹಾಕಲು ಸಿದ್ಧರಾದರು.