ಅಪೊಸ್ತಲರ ಕೃತ್ಯಗಳು 14:26 - ಪರಿಶುದ್ದ ಬೈಬಲ್26 ಅಲ್ಲಿಂದ ಅವರು ಸಿರಿಯಾದ ಅಂತಿಯೋಕ್ಯಕ್ಕೆ ನೌಕಾಯಾನ ಮಾಡಿದರು. ಈವರೆಗೆ ಮಾಡಿಮುಗಿಸಿದ್ದ ಸೇವಾಕಾರ್ಯಕ್ಕಾಗಿ ದೇವರ ಕೈಗೆ ಒಪ್ಪಿಸಿ ಕಳುಹಿಸಿಕೊಟ್ಟಿದ್ದವರು ಈ ಪಟ್ಟಣದ ವಿಶ್ವಾಸಿಗಳೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅವರು ಈವರೆಗೆ ನೆರವೇರಿಸಿ ಬಂದಿರುವ ಕೆಲಸಕ್ಕೋಸ್ಕರ ತಮ್ಮನ್ನೇ ದೇವರ ಕೃಪಾಶ್ರಯಕ್ಕೆ ಮೊದಲು ಒಪ್ಪಿಸಿಕೊಟ್ಟದ್ದು ಈ ಊರಿನಲ್ಲಿಯೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಅಲ್ಲಿಂದ ನೌಕಾಯಾನಮಾಡಿ ಅವರು ಅಂತಿಯೋಕ್ಯಕ್ಕೆ ಮರಳಿದರು. ಈವರೆಗೆ ಮಾಡಿ ಮುಗಿಸಿದ್ದ ಸೇವಾಕಾರ್ಯಕ್ಕಾಗಿ ಅವರು ದೇವರ ಕೃಪಾಶ್ರಯಕ್ಕೆ ಮೊದಲು ಸಮರ್ಪಿತರಾದದ್ದು ಇಲ್ಲಿಯೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಅವರು ನೆರವೇರಿಸಿ ಬಂದ ಕೆಲಸಕ್ಕೋಸ್ಕರ ದೇವರ ಕೃಪಾಶ್ರಯಕ್ಕೆ ಒಪ್ಪಿಸಲ್ಪಟ್ಟವರಾಗಿ ಆ ಊರಿಂದಲೇ ಹೊರಟಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಅತ್ತಾಲಿಯದಿಂದ ನೌಕೆಯಲ್ಲಿ ಪ್ರಯಾಣಮಾಡಿ ಅಂತಿಯೋಕ್ಯಕ್ಕೆ ಬಂದರು. ಅವರು ಪೂರೈಸಿದ ಸೇವೆಗಾಗಿ ದೇವರ ಕೃಪೆಗೆ ತಮ್ಮನ್ನು ಸಮರ್ಪಿಸಿಕೊಂಡದ್ದು ಈ ಪಟ್ಟಣದಿಂದಲೇ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ತೆಚ್ಯಾ ಮಾನಾ ತೆನಿ ಥೈತ್ನಾ ಸಿರಿಯಾತ್ಲ್ಯಾ ಅಂತಿಯೊಕ್ ಮನ್ತಲ್ಯಾ ಶಾರಾಕ್ ಸಮುಂದರಾಚ್ಯಾ ವಾಟೆನಿ ಗೆಲೆ, ಅತ್ತಾ ಪಾತರ್ ಕರುನ್ ಸಾರಲ್ಲ್ಯಾ ಸೆವಾಚ್ಯಾ ಕಾಮಾಕ್ನಿ ದೆವಾಚ್ಯಾ ಕುರ್ಪೆಚ್ಯಾ ಹಾತಿತ್ ಒಪ್ಸುನ್ ದಿವ್ನ್ ಧಾಡಲ್ಲೆ ಹ್ಯಾ ಶಾರಾತ್ಲ್ಯಾ ಲೊಕಾಕ್ನಿಚ್. ಅಧ್ಯಾಯವನ್ನು ನೋಡಿ |
ನಾವು ಈ ವಿಷಯದಲ್ಲಿ ಹೆಮ್ಮೆಪಡುತ್ತೇವೆ ಮತ್ತು ಇದು ಸತ್ಯವೆಂದು ನಾನು ಹೃದಯಪೂರ್ವಕವಾಗಿ ಹೇಳಬಲ್ಲೆನು. ಅದೇನೆಂದರೆ ಈ ಲೋಕದಲ್ಲಿ ಮಾಡಿದ ಎಲ್ಲಾ ಕಾರ್ಯಗಳನ್ನು ದೇವರಿಂದ ಕೊಡಲ್ಪಟ್ಟ ಯಥಾರ್ಥವಾದ ಮತ್ತು ಪರಿಶುದ್ಧವಾದ ಹೃದಯದಿಂದ ಮಾಡಿದೆವು. ನಾವು ನಿಮ್ಮ ಮಧ್ಯದಲ್ಲಿ ಮಾಡಿದ ಕಾರ್ಯಗಳಲ್ಲಂತೂ ಇದು ಮತ್ತಷ್ಟು ಸತ್ಯವಾಗಿದೆ. ನಾವು ಇದನ್ನು ಮಾಡಿದ್ದು ದೇವರ ಕೃಪೆಯಿಂದಲೇ ಹೊರತು ಲೋಕದ ಜ್ಞಾನದಿಂದಲ್ಲ.
ಬಾರ್ನಬನು ಒಳ್ಳೆಯ ಮನುಷ್ಯನಾಗಿದ್ದನು. ಅವನು ಪವಿತ್ರಾತ್ಮಭರಿತನಾಗಿದ್ದನು ಮತ್ತು ಪೂರ್ಣನಂಬಿಕೆಯುಳ್ಳವನಾಗಿದ್ದನು. ಬಾರ್ನಬನು ಅಂತಿಯೋಕ್ಯಕ್ಕೆ ಹೋದಾಗ, ದೇವರು ಆ ಜನರನ್ನು ಅಧಿಕವಾಗಿ ಆಶೀರ್ವದಿಸಿರುವುದನ್ನು ಕಂಡನು. ಇದರಿಂದ ಬಾರ್ನಬನಿಗೆ ತುಂಬಾ ಸಂತೋಷವಾಯಿತು. ಅಂತಿಯೋಕ್ಯದಲ್ಲಿದ್ದ ವಿಶ್ವಾಸಿಗಳನ್ನೆಲ್ಲ ಅವನು ಪ್ರೋತ್ಸಾಹಿಸಿದನು. ಅವನು ಅವರಿಗೆ, “ನಿಮ್ಮ ನಂಬಿಕೆಯನ್ನು ಎಂದಿಗೂ ಕಳೆದುಕೊಳ್ಳಬೇಡಿ. ಪ್ರಭುವಿಗೆ ನಿಮ್ಮ ಪೂರ್ಣಹೃದಯಗಳಿಂದ ಯಾವಾಗಲೂ ವಿಧೇಯರಾಗಿರಿ” ಎಂದು ಹೇಳಿದನು. ಅನೇಕ ಜನರು ಪ್ರಭುವಾದ ಯೇಸುವಿನ ಹಿಂಬಾಲಕರಾದರು.