ಅಪೊಸ್ತಲರ ಕೃತ್ಯಗಳು 14:27 - ಪರಿಶುದ್ದ ಬೈಬಲ್27 ಪೌಲ ಬಾರ್ನಬರು ಇಲ್ಲಿಗೆ ತಲುಪಿದಾಗ, ಸಭಿಕರನ್ನೆಲ್ಲ ಒಟ್ಟುಗೂಡಿಸಿ, ದೇವರು ತಮ್ಮೊಂದಿಗಿದ್ದು ಮಾಡಿದ ಎಲ್ಲಾ ಕಾರ್ಯಗಳ ಬಗ್ಗೆ ಅವರಿಗೆ ತಿಳಿಸಿದರು. ಮತ್ತು “ಇತರ ಜನಾಂಗಗಳವರು ಸಹ ನಂಬಿಕೊಳ್ಳುವಂತೆ ದೇವರು ಬಾಗಿಲನ್ನು ತೆರೆದಿದ್ದಾನೆ!” ಎಂದು ವಿವರಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಅಲ್ಲಿ ಸಭೆಯನ್ನು ಕೂಡಿಸಿ, ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳೆಲ್ಲವನ್ನೂ, ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲು ತೆರೆದದ್ದನ್ನೂ ವಿವರವಾಗಿ ಅವರಿಗೆ ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಇಲ್ಲಿಗೆ ತಲುಪಿದ ಕೂಡಲೇ ಅವರು ಕ್ರೈಸ್ತಸಭೆಯನ್ನು ಒಟ್ಟುಗೂಡಿಸಿದರು. ದೇವರು ತಮ್ಮೊಡನೆ ಇದ್ದು ಸಾಧಿಸಿದ್ದೆಲ್ಲವನ್ನೂ ವರದಿಮಾಡಿದರು; ಅದೂ ಅಲ್ಲದೆ, ದೇವರು ಅನ್ಯಧರ್ಮೀಯರಿಗೆ ವಿಶ್ವಾಸದ ದ್ವಾರವನ್ನು ಹೇಗೆ ತೆರೆದರೆಂದು ವಿವರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಅಲ್ಲಿ ಸಭೆಯನ್ನು ಕೂಡಿಸಿ ದೇವರು ತಮ್ಮೊಂದಿಗಿದ್ದು ಮಾಡಿದ್ದೆಲ್ಲವನ್ನೂ ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲನ್ನು ತೆರೆದದ್ದನ್ನೂ ವಿವರವಾಗಿ ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಇಲ್ಲಿಗೆ ತಲುಪಿದಾಗ, ಅವರು ಸಭೆಯನ್ನು ಒಟ್ಟುಕೂಡಿಸಿದರು. ದೇವರು ಅವರಿಗೆ ತಮ್ಮ ಮುಖಾಂತರವಾಗಿ ಮಾಡಿದ್ದನ್ನೂ ಯೆಹೂದ್ಯರಲ್ಲದವರಿಗೂ ದೇವರು ವಿಶ್ವಾಸದ ದ್ವಾರವನ್ನು ತೆರೆದಿರುವುದನ್ನೂ ವರದಿಮಾಡಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್27 ಪಾವ್ಲು ಅನಿ ಬಾರ್ನಾಬಾಸ್ ಹಿತ್ತೆ ಪಾವಲ್ಲ್ಯಾ ತನ್ನಾ ತಾಂಡ್ಯಾಚ್ಯಾ ಲೊಕಾಕ್ನಿ ಸಗ್ಳೆ ಗೊಳಾ ಕರುನ್, ದೆವಾನ್ ಅಪ್ನಾ ವಾಂಗ್ಡಾ ಕರಲ್ಲ್ಯಾ ಸಗ್ಳ್ಯಾ ಕಾಮಾಂಚ್ಯಾ ವಿಶಯಾತ್ ತೆಂಕಾ ಕಳ್ವುಲ್ಯಾನಿ, ಅನಿ “ಜುದೆವಾಂಚೆ ನ್ಹಯ್ ಹೊಲ್ಲ್ಯಾ ಲೊಕಾನಿಬಿ ವಿಶ್ವಾಸ್ ಕರಿಸಾರ್ಕೆ ದೆವಾನ್ ದಾರಾ ಉಗಡ್ಲಾ!” ಮನುನ್ ಸಾಂಗ್ಲ್ಯಾನಿ. ಅಧ್ಯಾಯವನ್ನು ನೋಡಿ |