ಅಪೊಸ್ತಲರ ಕೃತ್ಯಗಳು 15:21 - ಪರಿಶುದ್ದ ಬೈಬಲ್21 ಅವರು ಇವುಗಳನ್ನು ಮಾಡಕೂಡದು. ಏಕೆಂದರೆ ಮೋಶೆಯ ಧರ್ಮಶಾಸ್ತ್ರವನ್ನು ಬೋಧಿಸುವಂಥ ಜನರು ಪ್ರತಿಯೊಂದು ಪಟ್ಟಣದಲ್ಲಿ ಇನ್ನೂ ಇದ್ದಾರೆ. ಅನೇಕ ವರ್ಷಗಳಿಂದ ಪ್ರತಿ ಸಬ್ಬತ್ ದಿನದಲ್ಲಿ ಮೋಶೆಯ ಮಾತುಗಳನ್ನು ಓದಲಾಗುತ್ತಿದೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಏಕೆಂದರೆ ಪುರಾತನಕಾಲದಿಂದ ಎಲ್ಲಾ ಪಟ್ಟಣಗಳಲ್ಲಿ ಮೋಶೆಯ ಧರ್ಮಶಾಸ್ತ್ರವನ್ನು ಬೋಧಿಸುವವರು ಇದ್ದಾರೆ; ಅದು ಪ್ರತಿ ಸಬ್ಬತ್ ದಿನವೂ ಸಭಾಮಂದಿರಗಳಲ್ಲಿ ಪಾರಾಯಣವಾಗುತ್ತದಲ್ಲಾ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಏಕೆಂದರೆ ಪುರಾತನ ಕಾಲದಿಂದಲೂ ಪ್ರತಿಯೊಂದು ಸಬ್ಬತ್‍ದಿನ ಮೋಶೆಯ ಧರ್ಮಶಾಸ್ತ್ರವನ್ನು ಪ್ರಾರ್ಥನಾಮಂದಿರಗಳಲ್ಲಿ ಓದಲಾಗುತ್ತಿದೆ ಮತ್ತು ಆತನ ಬೋಧನೆಯನ್ನು ಪ್ರತಿ ನಗರದಲ್ಲೂ ಸಾರಲಾಗುತ್ತಿದೆ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಯಾಕಂದರೆ ಪುರಾತನಕಾಲದಿಂದ ಎಲ್ಲಾ ಪಟ್ಟಣಗಳಲ್ಲಿ ಮೋಶೆಯ ಗ್ರಂಥವನ್ನು ಬೋಧಿಸುವವರು ಇದ್ದಾರೆ; ಅದು ಪ್ರತಿ ಸಬ್ಬತ್‍ದಿನವೂ ಸಭಾಮಂದಿರಗಳಲ್ಲಿ ಪಾರಾಯಣವಾಗುತ್ತದಲ್ಲಾ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಏಕೆಂದರೆ ಆರಂಭ ಕಾಲದಿಂದಲೂ ಪ್ರತಿಯೊಂದು ಪಟ್ಟಣದಲ್ಲಿ ಮೋಶೆಯ ಗ್ರಂಥವನ್ನು ಬೋಧಿಸಲಾಗುತ್ತದೆ ಹಾಗೂ ಪ್ರತಿ ಸಬ್ಬತ್ ದಿನ ಸಭಾಮಂದಿರಗಳಲ್ಲಿ ಓದಲಾಗುತ್ತದೆ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ಕಶ್ಯಾಕ್ ಮಟ್ಲ್ಯಾರ್, ಮೊಯ್ಜೆಚ್ಯಾ ಖಾಯ್ದ್ಯಾಂಚೆ ಪುಸ್ತಕ್ ಶಿಕಾಪ್ ಕರ್‍ತಲಿ ಲೊಕಾ ಹರ್ ಎಕ್ ಶಾರಾತ್ಬಿ ಹಾತ್, ಲೈ ವರ್ಸಾಂತ್ನಾ ಹರ್ ಎಕ್ ಆರಾಮ್ ಕರ್‍ತಲ್ಯಾ ದಿಸಾ ದಿಸಿ ಮೊಯ್ಜೆಚಿ ಕರಾರಾ ವಾಚುನ್ ಹೊತ್ಯಾತ್ ಮನುನ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿ |
ಜೆರುಸಲೇಮಿನಲ್ಲಿ ವಾಸವಾಗಿದ್ದ ಯೆಹೂದ್ಯರು ಮತ್ತು ಯೆಹೂದ್ಯನಾಯಕರು ಯೇಸುವೇ ರಕ್ಷಕನೆಂಬುದನ್ನು ಅರ್ಥಮಾಡಿಕೊಳ್ಳಲಿಲ್ಲ. ಪ್ರವಾದಿಗಳು ಯೇಸುವಿನ ಬಗ್ಗೆ ಬರೆದಿದ್ದ ಮಾತುಗಳನ್ನು ಪ್ರತಿ ಸಬ್ಬತ್‌ದಿನದಂದು ಓದಲಾಗುತ್ತಿತ್ತು. ಆದರೆ ಅವರು ಅರ್ಥಮಾಡಿಕೊಳ್ಳಲಿಲ್ಲ. ಆ ಯೆಹೂದ್ಯರು ಯೇಸುವನ್ನು ಅಪರಾಧಿಯೆಂದು ತೀರ್ಪುಮಾಡಿದರು. ಹೀಗೆ ಮಾಡುವುದರ ಮೂಲಕವಾಗಿ ಅವರು ಪ್ರವಾದಿಗಳ ನುಡಿಗಳನ್ನು ನೆರವೇರಿಸಿದರು!