Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 15:22 - ಪರಿಶುದ್ದ ಬೈಬಲ್‌

22 ಅಪೊಸ್ತಲರು, ಹಿರಿಯರು ಮತ್ತು ಇಡೀ ಸಭೆಯವರು ಪೌಲ ಬಾರ್ನಬರೊಂದಿಗೆ ಕೆಲವು ಜನರನ್ನು ಅಂತಿಯೋಕ್ಯಕ್ಕೆ ಕಳುಹಿಸಬಯಸಿದರು. ತಮ್ಮವರೇ ಆದ ಕೆಲವರನ್ನು ಆರಿಸಿಕೊಳ್ಳಲು ಸಭೆಯು ನಿರ್ಧರಿಸಿತು. ಅವರು ಯೂದನನ್ನು (ಬಾರ್ಸಬನೆಂದೂ ಕರೆಯುತ್ತಿದ್ದರು) ಮತ್ತು ಸೀಲನನ್ನು ಆರಿಸಿಕೊಂಡರು. ಇವರು ಜೆರುಸಲೇಮಿನ ಸಭೆಯವರಲ್ಲಿ ಪ್ರಮುಖರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆಗ ಅಪೊಸ್ತಲರೂ, ಸಭೆಯ ಹಿರಿಯರೂ ಸರ್ವಸಭೆಯ ಅನುಮತಿಯಿಂದ ತಮ್ಮಲ್ಲಿ ಕೆಲವರನ್ನು ಆರಿಸಿಕೊಂಡು ಪೌಲ ಮತ್ತು ಬಾರ್ನಬರ ಜೊತೆಯಲ್ಲಿ ಅಂತಿಯೋಕ್ಯಕ್ಕೆ ಕಳುಹಿಸುವುದು ಯುಕ್ತವೆಂದು ತೀರ್ಮಾನಿಸಿದರು. ಆದಕಾರಣ ಸಹೋದರರಲ್ಲಿ ಮುಖ್ಯರಾಗಿದ್ದ ಬಾರ್ಸಬ್ಬನೆನಿಸಿಕೊಳ್ಳುವ ಯೂದನನ್ನೂ, ಸೀಲನನ್ನೂ ಆರಿಸಿಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅನಂತರ ಪ್ರೇಷಿತರೂ ಸಭಾಪ್ರಮುಖರೂ ಇಡೀ ಧರ್ಮಸಭೆಯ ಸಮ್ಮತಿಪಡೆದು, ತಮ್ಮಲ್ಲಿ ಕೆಲವರನ್ನು ಆರಿಸಿ, ಪೌಲ ಮತ್ತು ಬಾರ್ಸಬರೊಂದಿಗೆ ಅಂತಿಯೋಕ್ಯಕ್ಕೆ ಕಳುಹಿಸಬೇಕೆಂದು ನಿರ್ಧರಿಸಿದರು. ಅಂತೆಯೇ, ಸಹೋದರರಲ್ಲಿ ಬಹು ಗೌರವಾನ್ವಿತರಾದ ಬಾರ್ನಬ ಎಂದು ಕರೆಯಲಾದ ಯೂದ ಮತ್ತು ಸೀಲ ಎಂಬ ಇಬ್ಬರನ್ನು ಆರಿಸಿದರು. ಈ ಕೆಳಗಿನ ಪತ್ರವನ್ನು ಬರೆದು ಅವರ ಕೈಯಲ್ಲಿ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆಗ ಅಪೊಸ್ತಲರೂ ಸಭೆಯ ಹಿರಿಯರೂ ಸರ್ವಸಭೆಯ ಸಮ್ಮತಿಯಿಂದ ತಮ್ಮಲ್ಲಿ ಕೆಲವರನ್ನು ಆರಿಸಿಕೊಂಡು ಪೌಲ ಬಾರ್ನಬರ ಜೊತೆಯಲ್ಲಿ ಅಂತಿಯೋಕ್ಯಕ್ಕೆ ಕಳುಹಿಸುವದು ಯುಕ್ತವೆಂದು ತೀರ್ಮಾನಿಸಿದರು. ಆದಕಾರಣ ಸಹೋದರರಲ್ಲಿ ಮುಖ್ಯರಾಗಿದ್ದ ಬಾರ್ಸಬ್ಬನೆನಿಸಿಕೊಳ್ಳುವ ಯೂದನನ್ನೂ ಸೀಲನನ್ನೂ ಆರಿಸಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆಗ ಅಪೊಸ್ತಲರು ಮತ್ತು ಹಿರಿಯರು ಇಡೀ ಸಭೆಯ ಸಮ್ಮತಿ ಪಡೆದು, ಸಹೋದರರಲ್ಲಿ ನಾಯಕರಾಗಿದ್ದ ಬಾರ್ಸಬನೆಂದು ಕರೆಯಲಾದ ಯೂದ ಮತ್ತು ಸೀಲ ಎಂಬಿಬ್ಬರನ್ನು ಆಯ್ದುಕೊಂಡರು. ಅವರನ್ನು ಪೌಲ ಮತ್ತು ಬಾರ್ನಬರೊಂದಿಗೆ ಅಂತಿಯೋಕ್ಯಕ್ಕೆ ಕಳುಹಿಸಲು ನಿರ್ಧರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಅಪೊಸ್ತಲಾನಿ, ಜಾಂನ್ತ್ಯಾ ಲೊಕಾನಿ ಅನಿ ಸಗ್ಳ್ಯಾ ತಾಂಡ್ಯಾಚ್ಯಾ ಲೊಕಾನಿ ಪಾವ್ಲು ಅನಿ ಬಾರ್ನಾಬಾಸಾಚ್ಯಾ ವಾಂಗ್ಡಾ ಥೊಡ್ಯಾ ಲೊಕಾಕ್ನಿ ಅಂತಿಯೊಕಾಕ್ ಧಾಡುಚೆ ಮನುನ್ ಚಿಂತ್ಲ್ಯಾನಿ, ಅಪ್ಲ್ಯಾ ಉಲ್ಲ್ಯಾ ಲೊಕಾಕ್ನಿ ಎಚುನ್ ಘೆವ್ಚೆ ಮನುನ್ ನಿರ್ಧಾರ್ ಕರ್‍ಲ್ಯಾನಿ, ತೆನಿ ಬಾರ್ಸಬ್ ಮನ್ತಲ್ಯಾ ಜುದಾಕ್ ಅನಿ ಸಿಲಾಸ್ ಮನ್ತಲ್ಯಾಕ್ ಎಚುನ್ ಘೆಟ್ಲ್ಯಾನಿ, ಹೆನಿ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾತ್ ಪ್ರಮುಖ್ ಹೊವ್ನ್ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 15:22
29 ತಿಳಿವುಗಳ ಹೋಲಿಕೆ  

ಆದ್ದರಿಂದ ನಾವು ಯೂದನನ್ನು ಮತ್ತು ಸೀಲನನ್ನು ಅವರೊಂದಿಗೆ ಕಳುಹಿಸಿದ್ದೇವೆ. ಕೆಳಕಂಡ ಸಂಗತಿಗಳನ್ನೆಲ್ಲ ಅವರು ನಿಮಗೆ ತಿಳಿಸುವರು.


ಪೌಲನು ತನ್ನೊಂದಿಗೆ ಸೀಲನನ್ನು ಕರೆದುಕೊಂಡು ಹೋದನು. ಅಂತಿಯೋಕ್ಯದ ಸಹೋದರರು ಪೌಲನನ್ನು ಪ್ರಭುವಿನ ಆಶ್ರಯಕ್ಕೆ ಒಪ್ಪಿಸಿ ಕಳುಹಿಸಿಕೊಟ್ಟರು.


ನಾನು ಈ ಕಿರುಪತ್ರವನ್ನು ಸಿಲ್ವಾನನ ನೆರವಿನಿಂದ ಬರೆದೆನು. ಅವನು ಕ್ರಿಸ್ತನಲ್ಲಿ ನಂಬಿಗಸ್ತನಾದ ಸಹೋದರನೆಂಬುದು ನನಗೆ ತಿಳಿದಿದೆ. ನಾನು ನಿಮ್ಮನ್ನು ಸಂತೈಸಲು ಮತ್ತು ಪ್ರೋತ್ಸಾಹಿಸಲು ಈ ಪತ್ರವನ್ನು ಬರೆದೆನು. ಇದುವೇ ದೇವರ ನಿಜವಾದ ಕೃಪೆ ಎಂಬುದನ್ನು ನಿಮಗೆ ತಿಳಿಸಬೇಕೆಂಬುದೇ ನನ್ನ ಅಪೇಕ್ಷೆಯಾಗಿತ್ತು. ಆ ಕೃಪೆಯಲ್ಲಿ ಸ್ಥಿರತೆಯಿಂದಿರಿ.


ತಂದೆಯಾದ ದೇವರಲ್ಲಿಯೂ ಮತ್ತು ಪ್ರಭುವಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೋನಿಕದವರ ಸಭೆಗೆ ಪೌಲನು, ಸಿಲ್ವಾನನು ಮತ್ತು ತಿಮೊಥೆಯನು ಬರೆಯುವ ಪತ್ರ.


ತಂದೆಯಾದ ದೇವರಲ್ಲಿಯೂ ಮತ್ತು ಪ್ರಭುವಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೋನಿಕದವರ ಸಭೆಗೆ ಪೌಲ, ಸಿಲ್ವಾನ ಮತ್ತು ತಿಮೊಥೆ ಬರೆಯುವ ಪತ್ರ. ದೇವರ ಕೃಪೆಯೂ ಶಾಂತಿಯೂ ನಿಮಗಿರಲಿ.


ಕೊರಿಂಥದಲ್ಲಿದ್ದ ಪೌಲನ ಬಳಿಗೆ ಸೀಲ ತಿಮೊಥೆಯರು ಮಕೆದೋನಿಯದಿಂದ ಬಂದರು. ಅನಂತರ, ಜನರಿಗೆ ಸುವಾರ್ತೆಯನ್ನು ತಿಳಿಸುವುದರಲ್ಲೇ ಪೌಲನು ತನ್ನ ಸಮಯವನ್ನೆಲ್ಲ ಕಳೆದನು. ಯೇಸುವೇ ಕ್ರಿಸ್ತನೆಂಬುದನ್ನು ಅವನು ಯೆಹೂದ್ಯರಿಗೆ ತೋರಿಸಿಕೊಟ್ಟನು.


ಯೂದ ಸೀಲರು ಸಹ ಪ್ರವಾದಿಗಳಾಗಿದ್ದರು. ಅವರು ಅನೇಕ ಸಂಗತಿಗಳನ್ನು ಸಹೋದರರಿಗೆ ತಿಳಿಸಿ ಅವರನ್ನು ಬಲಪಡಿಸಿದರು.


ಅಪೊಸ್ತಲರು ಇಬ್ಬರನ್ನು ಸಭೆಯ ಮುಂದೆ ನಿಲ್ಲಿಸಿದರು. ಒಬ್ಬನು ಬಾರ್ಸಬನೆಂಬ ಯೋಸೇಫ. ಇವನನ್ನು ಯೂಸ್ತನೆಂದೂ ಕರೆಯುತ್ತಿದ್ದರು. ಮತ್ತೊಬ್ಬನು ಮತ್ತೀಯ.


ಆದ್ದರಿಂದ ವಿಶ್ವಾಸಿಗಳು ಪೌಲನನ್ನು ಸಮುದ್ರತೀರಕ್ಕೆ ಆ ಕೂಡಲೇ ಕಳುಹಿಸಿದರು. ಆದರೆ ಸೀಲ ತಿಮೊಥೆಯರು ಬೆರೋಯದಲ್ಲಿ ಉಳಿದುಕೊಂಡರು.


ಅದೇ ರಾತ್ರಿಯಲ್ಲಿ ವಿಶ್ವಾಸಿಗಳು ಪೌಲ ಸೀಲರನ್ನು ಬೆರೋಯ ಎಂಬ ಮತ್ತೊಂದು ಪಟ್ಟಣಕ್ಕೆ ಕಳುಹಿಸಿದರು. ಬೆರೋಯದಲ್ಲಿ ಪೌಲ ಸೀಲರು ಯೆಹೂದ್ಯರ ಸಭಾಮಂದಿರಕ್ಕೆ ಹೋದರು.


ನಿಜದೇವರನ್ನು ಪ್ರೀತಿಸುತ್ತಿದ್ದ ಕೆಲವು ಮಂದಿ ಗ್ರೀಕರು ಮತ್ತು ಕೆಲವು ಮಂದಿ ಪ್ರಮುಖ ಸ್ತ್ರೀಯರು ಅಲ್ಲಿದ್ದರು. ಅವರಲ್ಲಿ ಅನೇಕರಿಗೆ ಮನವರಿಕೆಯಾಗಿ ಪೌಲ ಸೀಲರನ್ನು ಸೇರಿಕೊಂಡರು.


ಸೆರೆಮನೆಯ ಅಧಿಕಾರಿಯು ಒಬ್ಬನಿಗೆ ದೀಪವನ್ನು ತರಬೇಕೆಂದು ಹೇಳಿದನು. ಬಳಿಕ ಅವನು ಒಳಗೆ ಓಡಿಹೋದನು. ಅವನು ನಡುಗುತ್ತಾ ಪೌಲ ಸೀಲರ ಮುಂದೆ ಕುಸಿದುಬಿದ್ದನು.


ಸುಮಾರು ಮಧ್ಯರಾತ್ರಿಯಲ್ಲಿ ಪೌಲ ಸೀಲರು ಪ್ರಾರ್ಥನೆ ಮಾಡುತ್ತಾ ದೇವರಿಗೆ ಸ್ತುತಿಗೀತೆಗಳನ್ನು ಹಾಡುತ್ತಾ ಇದ್ದರು. ಇತರ ಕೈದಿಗಳೆಲ್ಲರೂ ಆಲಿಸುತ್ತಿದ್ದರು.


ಇದನ್ನು ಕಂಡ ಅವಳ ಯಜಮಾನರು ಈಗ ಆಕೆಯಿಂದ ಹಣಗಳಿಸಲು ಸಾಧ್ಯವಿಲ್ಲವೆಂದು ಅರಿತುಕೊಂಡರು. ಆದ್ದರಿಂದ ಅವರು ಪೌಲ ಸೀಲರನ್ನು ಹಿಡಿದು ಪಟ್ಟಣದ ನ್ಯಾಯಸ್ಥಾನಕ್ಕೆ ಎಳೆದುಕೊಂಡು ಹೋದರು. ನಗರಾಧಿಕಾರಿಗಳು ಅಲ್ಲಿದ್ದರು.


ಆದ್ದರಿಂದ ನಾವೆಲ್ಲರೂ ಕೆಲವರನ್ನು ಸರ್ವಾನುಮತದಿಂದ ಆರಿಸಿ ನಿಮ್ಮ ಬಳಿಗೆ ಕಳುಹಿಸಲು ನಿರ್ಧರಿಸಿದೆವು. ನಮ್ಮ ಪ್ರಿಯ ಸಹೋದರರಾದ ಬಾರ್ನಬ ಮತ್ತು ಪೌಲರೊಂದಿಗೆ ಅವರು ಬರುತ್ತಿದ್ದಾರೆ.


ಸಭೆಯು ಇವರ ಕೈಯಲ್ಲಿ ಪತ್ರವನ್ನು ಕಳುಹಿಸಿಕೊಟ್ಟಿತು. ಆ ಪತ್ರದಲ್ಲಿ ಹೀಗೆ ಬರೆದಿತ್ತು: ಅಂತಿಯೋಕ್ಯ ಪಟ್ಟಣದಲ್ಲಿಯೂ ಸಿರಿಯ ಮತ್ತು ಸಿಲಿಸಿಯ ನಾಡುಗಳಲ್ಲಿಯೂ ಇರುವ ಯೆಹೂದ್ಯರಲ್ಲದ ಸಹೋದರರಿಗೆಲ್ಲಾ, ನಿಮ್ಮ ಸಹೋದರರಾದ ಅಪೊಸ್ತಲರೂ ಹಿರಿಯರೂ ಬರೆಯುವುದೇನೆಂದರೆ: ಪ್ರಿಯ ಸಹೋದರರೇ,


ಅಂತಿಯೋಕ್ಯದಲ್ಲಿದ್ದ ಈ ಹೊಸ ವಿಶ್ವಾಸಿಗಳ ಬಗ್ಗೆ ಜೆರುಸಲೇಮಿನ ಸಭೆಯವರಿಗೆ ತಿಳಿಯಿತು. ಆದ್ದರಿಂದ ಜೆರುಸಲೇಮಿನ ವಿಶ್ವಾಸಿಗಳು ಬಾರ್ನಬನನ್ನು ಅಂತಿಯೋಕ್ಯಕ್ಕೆ ಕಳುಹಿಸಿದರು.


ಅಪೊಸ್ತಲರು ಇನ್ನೂ ಜೆರುಸಲೇಮಿನಲ್ಲಿದ್ದರು. ಸಮಾರ್ಯದ ಜನರು ದೇವರ ವಾಕ್ಯವನ್ನು ಸ್ವೀಕರಿಸಿಕೊಂಡರೆಂಬುದು ಅವರಿಗೆ ತಿಳಿಯಿತು. ಆದ್ದರಿಂದ ಅಪೊಸ್ತಲರು ಪೇತ್ರ ಮತ್ತು ಯೋಹಾನರನ್ನು ಸಮಾರ್ಯದ ಜನರ ಬಳಿಗೆ ಕಳುಹಿಸಿದರು.


ಇದಲ್ಲದೆ, ದೇವರ ಶಕ್ತಿಯು ಯೆಹೂದದ ಜನರನ್ನು ಒಂದಾಗಿ ಮಾಡಿತು. ಆದ್ದರಿಂದ ಅವರು ಅರಸನಿಗೆ ಮತ್ತು ಅಧಿಕಾರಿಗಳಿಗೆ ವಿಧೇಯರಾದರು. ಹೀಗೆ ಜನರು ಯೆಹೋವನ ಕಟ್ಟಳೆಗಳಿಗೆ ವಿಧೇಯರಾದರು.


ಈ ನಿರ್ಧಾರವು ಅರಸನಾದ ಹಿಜ್ಕೀಯನಿಗೂ ಜನರಿಗೂ ಸರಿಕಂಡಿತು.


ಇದನ್ನು ಕೇಳಿದ ಜನರೆಲ್ಲರೂ ರಾಜನಾದ ದಾವೀದನ ಈ ಕಾರ್ಯವನ್ನು ಮೆಚ್ಚಿಕೊಂಡರು.


ಸ್ತೆಫನನು ಕೊಲ್ಲಲ್ಪಟ್ಟ ನಂತರ ಉಂಟಾದ ಹಿಂಸೆಯಿಂದಾಗಿ ವಿಶ್ವಾಸಿಗಳು ಚದರಿಹೋದರು. ವಿಶ್ವಾಸಿಗಳಲ್ಲಿ ಕೆಲವರು ಬಹು ದೂರದ ಸ್ಥಳಗಳಾದ ಫೆನಿಷ್ಯ, ಸೈಪ್ರಸ್ ಮತ್ತು ಅಂತಿಯೋಕ್ಯಗಳಿಗೆ ಹೋದರು. ವಿಶ್ವಾಸಿಗಳು ಈ ಸ್ಥಳಗಳಲ್ಲಿ ಸುವಾರ್ತೆಯನ್ನು ತಿಳಿಸಿದರು. ಆದರೆ ಅವರು ಯೆಹೂದ್ಯರಿಗೆ ಮಾತ್ರ ತಿಳಿಸಿದರು.


ಈ ವಿಶ್ವಾಸಿಗಳಲ್ಲಿ ಕೆಲವರು ಸೈಪ್ರಸ್ ಮತ್ತು ಸಿರೇನ್ ಸ್ಥಳಗಳವರಾಗಿದ್ದರು. ಈ ಜನರು ಅಂತಿಯೋಕ್ಯಕ್ಕೆ ಬಂದಾಗ ಅವರು, ಪ್ರಭುವಾದ ಯೇಸುವಿನ ವಿಷಯವಾದ ಸುವಾರ್ತೆಯನ್ನು ಅಲ್ಲಿಯ ಗ್ರೀಕ್ ಜನರಿಗೆ ತಿಳಿಸಿದರು.


ಆ ಕಾಲದಲ್ಲಿ ಕೆಲವು ಪ್ರವಾದಿಗಳು ಜೆರುಸಲೇಮಿನಿಂದ ಅಂತಿಯೋಕ್ಯಕ್ಕೆ ಹೋದರು.


ಅಂತೆಯೇ ಸಭೆಯು ಇವರನ್ನು ಕಳುಹಿಸಿತು. ಇವರು ಫೆನಿಷ್ಯ ಮತ್ತು ಸಮಾರ್ಯದ ಮಾರ್ಗವಾಗಿ ಪ್ರಯಾಣಮಾಡಿದರು. ಯೆಹೂದ್ಯರಲ್ಲದ ಜನರು ನಿಜದೇವರ ಕಡೆಗೆ ತಿರುಗಿಕೊಂಡಿದ್ದರ ಬಗ್ಗೆ ಈ ನಾಡುಗಳಲ್ಲಿ ವಿವರಿಸಿದರು. ಇದನ್ನು ಕೇಳಿ ಸಹೋದರರಿಗೂ ಬಹಳ ಸಂತೋಷವಾಯಿತು.


ಆದ್ದರಿಂದ ಪೌಲ ಬಾರ್ನಬರು ಮತ್ತು ಯೂದ ಸೀಲರು ಜೆರುಸಲೇಮಿನಿಂದ ಹೊರಟರು. ಅವರು ಅಂತಿಯೋಕ್ಯಕ್ಕೆ ಹೋಗಿ, ಅಲ್ಲಿ ವಿಶ್ವಾಸಿಗಳ ಸಭೆಸೇರಿಸಿ ಅವರಿಗೆ ಪತ್ರವನ್ನು ಕೊಟ್ಟರು.


ಸೀಲನು, ತಿಮೊಥೆಯನು ಮತ್ತು ನಾನು ನಿಮಗೆ ಬೋಧಿಸಿದ ದೇವರ ಮಗನಾದ ಯೇಸುಕ್ರಿಸ್ತನು ಹೌದೆಂತಲೂ ಅಲ್ಲವೆಂತಲೂ ಎರಡು ರೀತಿಯಲ್ಲಿರಲಿಲ್ಲ. ಕ್ರಿಸ್ತನಲ್ಲಿ ಯಾವಾಗಲೂ ಇರುವಂಥದ್ದು “ಹೌದು” ಎಂಬುದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು