ಅಪೊಸ್ತಲರ ಕೃತ್ಯಗಳು 15:23 - ಪರಿಶುದ್ದ ಬೈಬಲ್23 ಸಭೆಯು ಇವರ ಕೈಯಲ್ಲಿ ಪತ್ರವನ್ನು ಕಳುಹಿಸಿಕೊಟ್ಟಿತು. ಆ ಪತ್ರದಲ್ಲಿ ಹೀಗೆ ಬರೆದಿತ್ತು: ಅಂತಿಯೋಕ್ಯ ಪಟ್ಟಣದಲ್ಲಿಯೂ ಸಿರಿಯ ಮತ್ತು ಸಿಲಿಸಿಯ ನಾಡುಗಳಲ್ಲಿಯೂ ಇರುವ ಯೆಹೂದ್ಯರಲ್ಲದ ಸಹೋದರರಿಗೆಲ್ಲಾ, ನಿಮ್ಮ ಸಹೋದರರಾದ ಅಪೊಸ್ತಲರೂ ಹಿರಿಯರೂ ಬರೆಯುವುದೇನೆಂದರೆ: ಪ್ರಿಯ ಸಹೋದರರೇ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಅವರ ಕೈಯಲ್ಲಿ ಬರೆದುಕೊಟ್ಟದ್ದೇನಂದರೆ; “ಸಹೋದರರೂ, ಅಪೊಸ್ತಲರೂ ಮತ್ತು ಹಿರಿಯರೂ, ಅಂತಿಯೋಕ್ಯ, ಸಿರಿಯ, ಕಿಲಿಕ್ಯ ಸೀಮೆಗಳಲ್ಲಿ ವಾಸಿಸುವ ಅನ್ಯಜನರೊಳಗಿಂದ ಸಹೋದರರಾದವರಿಗೂ ಮಾಡುವ ವಂದನೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 “ಅಂತಿಯೋಕ್ಯ, ಸಿರಿಯ ಮತ್ತು ಸಿಲಿಸಿಯಗಳಲ್ಲಿ ವಾಸಿಸುವ ಯೆಹೂದ್ಯೇತರ ಸಹೋದರರಿಗೆ - ಪ್ರೇಷಿತರೂ ಸಭಾಪ್ರಮುಖರೂ ನಿಮ್ಮ ಸಹೋದರರೂ ಆದ ನಮ್ಮ ಶುಭಾಶಯಗಳು! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಅವರ ಕೈಯಲ್ಲಿ ಬರೆದುಕೊಟ್ಟದ್ದೇನಂದರೆ - ಸಹೋದರರಾಗಿರುವ ಅಪೊಸ್ತಲರೂ ಹಿರಿಯರೂ ಅಂತಿಯೋಕ್ಯ ಸಿರಿಯ ಕಿಲಿಕ್ಯ ಸೀಮೆಗಳಲ್ಲಿ ವಾಸಿಸುವ ಅನ್ಯಜನರೊಳಗಿಂದ ಸಹೋದರರಾದವರಿಗೆ ಮಾಡುವ ವಂದನೆ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಅವರ ಕೈಯಿಂದ ಬರೆದು ಕೊಟ್ಟದ್ದೇನೆಂದರೆ: ಅಪೊಸ್ತಲರು ಹಾಗೂ ಹಿರಿಯ ಸಹೋದರರು, ಅಂತಿಯೋಕ್ಯ, ಸಿರಿಯ ಮತ್ತು ಕಿಲಿಕ್ಯದಲ್ಲಿ ವಾಸಿಸುವ ಯೆಹೂದ್ಯರಲ್ಲದವರೊಳಗಿನ ಸಹೋದರರಿಗೆ: ವಂದನೆಗಳು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ತಾಂಡ್ಯಾಚ್ಯಾ ಲೊಕಾನಿ ಹೆಂಚ್ಯಾ ಹಾತಿತ್ ಚಿಟ್ ದಿವ್ನ್ ಧಾಡ್ಲ್ಯಾನಿ, ತ್ಯಾ ಚಿಟಿತ್ ಅಶೆ ಲಿವಲ್ಲೆ ಹೊತ್ತೆ; ಅಂತಿಯೊಕ್ ಮನ್ತಲ್ಯಾ ಶಾರಾತ್, ಅನಿ ಸಿರಿಯ, ಸಿಲಿಸಿಯಾ ಮನ್ತಲ್ಯಾ ಗಾಂವಾತ್ನಿ ರ್‍ಹಾತಲ್ಯಾ ಜುದೆವ್ ನ್ಹಯ್ ಹೊಲ್ಲ್ಯಾ ಭಾವಾಕ್ನಿ ಅನಿ ಭೆನಿಯಾಕ್ನಿ ಸಗ್ಳಿ ತುಮ್ಚಿ ಭಾವಾ ಹೊವ್ನ್ ಹೊತ್ತಿ, ಅಪೊಸ್ತಲಾ ಅನಿ ಜಾಂನ್ತ್ಯಿ ಲೊಕಾ ಕರ್‍ತಲೊ ನಮಸ್ಕಾರ್, ಪ್ರೆಮಾಚ್ಯಾ ಭಾವಾನು, ಅಧ್ಯಾಯವನ್ನು ನೋಡಿ |
ಯೇಸುವಿನ ವಿಷಯವಾದ ಸುದ್ದಿಯು ಸಿರಿಯ ದೇಶದಲ್ಲೆಲ್ಲಾ ಹರಡಿತು. ಜನರು ಕಾಯಿಲೆಯವರನ್ನೆಲ್ಲ ಯೇಸುವಿನ ಬಳಿಗೆ ತಂದರು. ಅವರು ನಾನಾ ವಿಧವಾದ ವ್ಯಾಧಿಗಳಿಂದ ಮತ್ತು ನೋವಿನಿಂದ ಬಾಧೆಪಡುತ್ತಿದ್ದರು. ಕೆಲವರು ತೀವ್ರವಾದ ನೋವಿನಿಂದ ನರಳುತ್ತಿದ್ದರು. ಕೆಲವರು ದೆವ್ವಗಳಿಂದ ಪೀಡಿತರಾಗಿದ್ದರು. ಕೆಲವರು ಮೂರ್ಛಾರೋಗಿಗಳಾಗಿದ್ದರು. ಕೆಲವರು ಪಾರ್ಶ್ವವಾಯು ರೋಗಿಗಳಾಗಿದ್ದರು. ಯೇಸು ಇವರನ್ನೆಲ್ಲಾ ಗುಣಪಡಿಸಿದನು.
ಆದರೆ ಕೆಲವು ಯೆಹೂದ್ಯರು ಬಂದು ಅವನೊಂದಿಗೆ ವಾದಿಸಿದರು. ಈ ಯೆಹೂದ್ಯರು ಸಭಾಮಂದಿರಕ್ಕೆ ಸೇರಿದವರು. ಅದಕ್ಕೆ “ಬಿಡುಗಡೆ ಹೊಂದಿದವರ ಸಭಾಮಂದಿರ” ಎಂದು ಕರೆಯುತ್ತಿದ್ದರು. (ಸಿರೇನ್ ಮತ್ತು ಅಲೆಕ್ಸಾಂಡ್ರಿಯದಿಂದ ಬಂದ ಯೆಹೂದ್ಯರಿಗೋಸ್ಕರವಾಗಿಯೂ ಈ ಸಭಾಮಂದಿರವಿತ್ತು.) ಸಿಲಿಸಿಯ ಮತ್ತು ಏಷ್ಯಾದಿಂದ ಬಂದ ಯೆಹೂದ್ಯರೂ ಅವರೊಂದಿಗಿದ್ದರು. ಅವರೆಲ್ಲರೂ ಬಂದು ಅವನೊಂದಿಗೆ ವಾದಮಾಡಿದರು.