Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 15:3 - ಪರಿಶುದ್ದ ಬೈಬಲ್‌

3 ಅಂತೆಯೇ ಸಭೆಯು ಇವರನ್ನು ಕಳುಹಿಸಿತು. ಇವರು ಫೆನಿಷ್ಯ ಮತ್ತು ಸಮಾರ್ಯದ ಮಾರ್ಗವಾಗಿ ಪ್ರಯಾಣಮಾಡಿದರು. ಯೆಹೂದ್ಯರಲ್ಲದ ಜನರು ನಿಜದೇವರ ಕಡೆಗೆ ತಿರುಗಿಕೊಂಡಿದ್ದರ ಬಗ್ಗೆ ಈ ನಾಡುಗಳಲ್ಲಿ ವಿವರಿಸಿದರು. ಇದನ್ನು ಕೇಳಿ ಸಹೋದರರಿಗೂ ಬಹಳ ಸಂತೋಷವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆದುದರಿಂದ ಸಭೆಯವರು ಅವರನ್ನು ಸಾಗ ಕಳುಹಿಸಲು, ಅವರು ಫೊಯಿನಿಕೆ ಮತ್ತು ಸಮಾರ್ಯ ಸೀಮೆಗಳನ್ನು ಹಾದು ಹೋಗುತ್ತಿರುವಾಗ ಅನ್ಯಜನರು ಕರ್ತನ ಕಡೆಗೆ ತಿರುಗಿಕೊಂಡ ಸಂಗತಿಯನ್ನು ಅಲ್ಲಿದ್ದ ಸಹೋದರರಿಗೆ ವಿವರವಾಗಿ ಹೇಳಿ ಅವರೆಲ್ಲರನ್ನು ಬಹಳವಾಗಿ ಸಂತೋಷಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅಂತೆಯೇ ಕ್ರೈಸ್ತಸಭೆ ಅವರನ್ನು ಬೀಳ್ಕೊಟ್ಟಿತು. ಅವರು ಫೆನಿಷ್ಯ ಹಾಗೂ ಸಮಾರಿಯದ ಮಾರ್ಗವಾಗಿ ಪ್ರಯಾಣಮಾಡುತ್ತಾ ಅಲ್ಲಿಯ ಭಕ್ತವಿಶ್ವಾಸಿಗಳಿಗೆ ಅನ್ಯಧರ್ಮೀಯರು ಹೇಗೆ ಕ್ರೈಸ್ತರಾದರೆಂಬುದನ್ನು ವಿವರಿಸಿದರು. ಇದನ್ನು ಕೇಳಿದ ಭಕ್ತಾದಿಗಳು ಸಂತೋಷಭರಿತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಸಭೆಯವರು ಅವರನ್ನು ಸಾಗಕಳುಹಿಸಿದ ಮೇಲೆ ಅವರು ಫೊಯಿನಿಕೆ ಸಮಾರ್ಯ ಸೀಮೆಗಳನ್ನು ಹಾದು ಹೋಗುತ್ತಿರುವಾಗ ಅನ್ಯಜನರು ಕರ್ತನ ಕಡೆಗೆ ತಿರುಗಿಕೊಂಡ ಸಂಗತಿಯನ್ನು ಅಲ್ಲಿದ್ದ ಸಹೋದರರಿಗೆ ವಿವರವಾಗಿ ಹೇಳಿ ಅವರೆಲ್ಲರನ್ನು ಬಹಳವಾಗಿ ಸಂತೋಷಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆದ್ದರಿಂದ ಸಭೆಯವರು ಅವರನ್ನು ಸಾಗಕಳುಹಿಸಲು, ಅವರು ಫೊಯಿನಿಕೆಯ ಮತ್ತು ಸಮಾರ್ಯದ ಮಾರ್ಗವಾಗಿ ಪ್ರಯಾಣ ಮಾಡುವಾಗ, ಯೆಹೂದ್ಯರಲ್ಲದವರ ಪರಿವರ್ತನೆಯನ್ನು ವಿವರವಾಗಿ ಅಲ್ಲಿಯವರೆಗೆ ತಿಳಿಸುತ್ತಾ ಸಹೋದರರೆಲ್ಲರಿಗೂ ಮಹಾಸಂತೋಷವನ್ನುಂಟುಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತಸೆಚ್ ತಾಂಡ್ಯಾಚ್ಯಾ ಲೊಕಾನಿ ಹೆಂಕಾ ಧಾಡುನ್ ದಿಲ್ಯಾನಿ, ತೆನಿ ಪೊಯಿನಿಕ್ಯಾ ಅನಿ ಸಮರ್ಯಾ ಮನ್ತಲ್ಯಾ ಗಾಂವಾಂಚ್ಯಾ ವಾಟೆನ್ ಗೆಲೆ, ತೆನಿ ಹ್ಯಾ ಗಾಂವಾತ್ನಿ ಜುದೆವಾಂಚಿ ನ್ಹಯ್ ಹೊಲ್ಲಿ ಲೊಕಾಬಿ ದೆವಾಕ್ಡೆ ಪರ್ತುನ್ ಯೆಲ್ಲ್ಯಾ ವಿಶಯಾತ್ ಸಾಂಗ್ಲ್ಯಾನಿ, ಹೆ ಆಯ್ಕುನ್ ಭಾವಾಕ್ನಿಬಿ ಲೈ ಕುಶಿ ಹೊಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 15:3
27 ತಿಳಿವುಗಳ ಹೋಲಿಕೆ  

ಪೌಲ ಬಾರ್ನಬರು ಇಲ್ಲಿಗೆ ತಲುಪಿದಾಗ, ಸಭಿಕರನ್ನೆಲ್ಲ ಒಟ್ಟುಗೂಡಿಸಿ, ದೇವರು ತಮ್ಮೊಂದಿಗಿದ್ದು ಮಾಡಿದ ಎಲ್ಲಾ ಕಾರ್ಯಗಳ ಬಗ್ಗೆ ಅವರಿಗೆ ತಿಳಿಸಿದರು. ಮತ್ತು “ಇತರ ಜನಾಂಗಗಳವರು ಸಹ ನಂಬಿಕೊಳ್ಳುವಂತೆ ದೇವರು ಬಾಗಿಲನ್ನು ತೆರೆದಿದ್ದಾನೆ!” ಎಂದು ವಿವರಿಸಿದರು.


ಆದರೆ ನಮ್ಮ ಸಂದರ್ಶನವು ಮುಗಿದ ಮೇಲೆ ನಾವು ಅಲ್ಲಿಂದ ಹೊರಟು ಪ್ರಯಾಣವನ್ನು ಮುಂದುವರಿಸಿದೆವು. ಯೇಸುವಿನ ಎಲ್ಲಾ ಶಿಷ್ಯರು, ಸ್ತ್ರೀಯರು ಮತ್ತು ಮಕ್ಕಳು ಸಹ ನಮ್ಮನ್ನು ಬೀಳ್ಕೊಡುವುದಕ್ಕಾಗಿ ನಮ್ಮೊಂದಿಗೆ ಪಟ್ಟಣದಿಂದ ಹೊರಗೆ ಬಂದರು. ನಾವೆಲ್ಲರೂ ಸಮುದ್ರ ತೀರದಲ್ಲಿ ಮೊಣಕಾಲೂರಿ ಪ್ರಾರ್ಥಿಸಿದೆವು.


ವಕೀಲನಾದ ಜೇನನೂ ಅಪೊಲ್ಲೋಸನೂ ಅಲ್ಲಿಂದ ಪ್ರಯಾಣ ಮಾಡುತ್ತಾರೆ. ಅವರ ಪ್ರಯಾಣಕ್ಕೆ ನಿನ್ನಿಂದ ಸಾಧ್ಯವಾದಷ್ಟು ಸಹಾಯಮಾಡು. ಅವರಿಗೆ ಯಾವ ಕೊರತೆಯೂ ಆಗದಂತೆ ನೋಡಿಕೊ.


ಆದ್ದರಿಂದ ನಿಮ್ಮಲ್ಲಿ ಯಾರೂ ಅವನನ್ನು ತಿರಸ್ಕರಿಸಬಾರದು. ಅವನನ್ನು ನನ್ನ ಬಳಿಗೆ ಸಮಾಧಾನದಿಂದ ಕಳುಹಿಸಿಕೊಡಿರಿ. ಅವನು ಸಹೋದರರೊಂದಿಗೆ ಬರುವುದನ್ನು ನಾನು ಎದುರು ನೋಡುತ್ತಿದ್ದೇನೆ.


ನಾನು ನಿಮ್ಮೊಂದಿಗೆ ಸ್ವಲ್ಪಕಾಲ ಇಳಿದುಕೊಳ್ಳಬಹುದು. ಒಂದುವೇಳೆ ಚಳಿಗಾಲವನ್ನು ಪೂರ್ತಿಯಾಗಿ ನಿಮ್ಮಲ್ಲಿ ಕಳೆಯಬೇಕಾಗಬಹುದು. ಬಳಿಕ ನಾನು ಹೋಗಬೇಕಾದ ಸ್ಥಳಕ್ಕೆ ನೀವು ನನ್ನನ್ನು ಕಳುಹಿಸಿಕೊಡಬೇಕು.


ಆದ್ದರಿಂದ ನಾನು ಸ್ಪೇನಿಗೆ ಹೋಗುವಾಗ ನಿಮ್ಮನ್ನು ಸಂದರ್ಶಿಸುತ್ತೇನೆ. ಹೌದು, ನಾನು ಸ್ಪೇನಿಗೆ ಪ್ರಯಾಣ ಮಾಡುವಾಗ ನಿಮ್ಮನ್ನು ಸಂದರ್ಶಿಸಿ, ಸ್ವಲ್ಪಕಾಲ ನಿಮ್ಮೊಂದಿಗೆ ಸಂತೋಷವಾಗಿ ತಂಗಿರುತ್ತೇನೆಂಬ ನಿರೀಕ್ಷೆ ನನಗಿದೆ. ಬಳಿಕ ನೀವು ನನ್ನ ಪ್ರಯಾಣಕ್ಕೆ ಸಹಾಯ ಮಾಡಬಹದು.


ಆಗ ಇಡೀ ಸಭೆಯು ಮೌನವಾಯಿತು. ಅವರು ಪೌಲ ಬಾರ್ನಬರಿಗೆ ಕಿವಿಗೊಟ್ಟರು. ಯೆಹೂದ್ಯರಲ್ಲದ ಜನರ ಮಧ್ಯದಲ್ಲಿ ದೇವರು ತಮ್ಮ ಮೂಲಕವಾಗಿ ಮಾಡಿದ ಎಲ್ಲಾ ಅದ್ಭುತಕಾರ್ಯಗಳ ಮತ್ತು ಸೂಚಕಕಾರ್ಯಗಳ ಬಗ್ಗೆ ಪೌಲ ಬಾರ್ನಬರು ಹೇಳಿದರು.


ನಾನು ಮಕೆದೋನಿಯಕ್ಕೆ ಹೋಗುವಾಗಲೂ ಬಳಿಕ ಅಲ್ಲಿಂದ ಹಿಂತಿರುಗಿ ಬರುವಾಗಲೂ ನಿಮ್ಮ ಬಳಿಗೆ ಬರಬೇಕೆಂದಿದ್ದೆ. ಜುದೇಯಕ್ಕೆ ಪ್ರವಾಸ ಕೈಕೊಳ್ಳಲು ನಿಮ್ಮಿಂದ ಸಹಾಯವನ್ನು ಪಡೆದುಕೊಳ್ಳಬೇಕೆಂದಿದ್ದೆ.


ನಾವು ಇಲ್ಲಿರುವುದು ರೋಮಿನಲ್ಲಿದ್ದ ವಿಶ್ವಾಸಿಗಳಿಗೆ ತಿಳಿಯಿತು. ಅವರು ನಮ್ಮನ್ನು ಭೇಟಿಯಾಗುವುದಕ್ಕಾಗಿ “ಅಪ್ಪಿಯ” ಮಾರುಕಟ್ಟೆಗೂ ಮತ್ತು “ತ್ರಿಛತ್ರ” ಎಂಬ ಸ್ಥಳಕ್ಕೂ ಬಂದರು. ಈ ವಿಶ್ವಾಸಿಗಳನ್ನು ಕಂಡಾಗ ಪೌಲನು ಧೈರ್ಯಗೊಂಡು ದೇವರಿಗೆ ಸ್ತೋತ್ರ ಸಲ್ಲಿಸಿದನು.


ಆದರೆ ಯೇಸುವಿನ ಶಿಷ್ಯರು ಸಂತೋಷವಾಗಿದ್ದರು ಮತ್ತು ಪವಿತ್ರಾತ್ಮಭರಿತರಾಗಿದ್ದರು.


ಪೌಲನ ಈ ಮಾತುಗಳನ್ನು ಕೇಳಿದ ಯೆಹೂದ್ಯರಲ್ಲದ ಜನರು ಬಹು ಸಂತೋಷಪಟ್ಟು ಪ್ರಭುವಿನ ಸಂದೇಶಕ್ಕಾಗಿ ಸ್ತುತಿಸಿದರು. ನಿತ್ಯಜೀವವನ್ನು ಹೊಂದಿಕೊಳ್ಳಲು ಆಯ್ಕೆಯಾಗಿದ್ದವರೆಲ್ಲರೂ ನಂಬಿಕೊಂಡರು.


ಅಪೊಸ್ತಲರು ಇನ್ನೂ ಜೆರುಸಲೇಮಿನಲ್ಲಿದ್ದರು. ಸಮಾರ್ಯದ ಜನರು ದೇವರ ವಾಕ್ಯವನ್ನು ಸ್ವೀಕರಿಸಿಕೊಂಡರೆಂಬುದು ಅವರಿಗೆ ತಿಳಿಯಿತು. ಆದ್ದರಿಂದ ಅಪೊಸ್ತಲರು ಪೇತ್ರ ಮತ್ತು ಯೋಹಾನರನ್ನು ಸಮಾರ್ಯದ ಜನರ ಬಳಿಗೆ ಕಳುಹಿಸಿದರು.


ನಾವು ಸಂತೋಷಪಡಬೇಕು. ಉಲ್ಲಾಸಪಡಬೇಕು, ಏಕೆಂದರೆ ನಿನ್ನ ತಮ್ಮನು ಸತ್ತುಹೋಗಿದ್ದನು, ಈಗಲಾದರೋ ಮತ್ತೆ ಜೀವಂತವಾಗಿ ಬಂದಿದ್ದಾನೆ. ಅವನು ಕಳೆದುಹೋಗಿದ್ದನು, ಈಗಲಾದರೋ ಮತ್ತೆ ಸಿಕ್ಕಿದ್ದಾನೆ’ ಅಂದನು.”


ಕೆಲವು ದಿನಗಳಾದ ಮೇಲೆ ವಿಶ್ವಾಸಿಗಳು ಸಭೆ ಸೇರಿದ್ದರು. (ಅಲ್ಲಿ ಸುಮಾರು ನೂರಿಪ್ಪತ್ತು ಮಂದಿ ಇದ್ದರು.) ಪೇತ್ರನು ಎದ್ದುನಿಂತುಕೊಂಡು ಹೀಗೆಂದನು:


ಬಳಿಕ ಕೆಲವು ಜನರು ಜುದೇಯದಿಂದ ಅಂತಿಯೋಕ್ಯಕ್ಕೆ ಬಂದರು. “ನೀವು ಸುನ್ನತಿ ಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗುವುದಿಲ್ಲ. ಸುನ್ನತಿ ಮಾಡಿಸಿಕೊಳ್ಳಬೇಕೆಂದು ಮೋಶೆಯೇ ಹೇಳಿದ್ದಾನೆ” ಎಂದು ಅವರು ಯೆಹೂದ್ಯರಲ್ಲದ ವಿಶ್ವಾಸಿಗಳಿಗೆ ಉಪದೇಶಿಸತೊಡಗಿದರು.


ಪೌಲ ಬಾರ್ನಬರು ಮತ್ತು ಇತರರು ಜೆರುಸಲೇಮನ್ನು ತಲುಪಿದರು. ಅಪೊಸ್ತಲರು, ಹಿರಿಯರು ಮತ್ತು ಸಭೆಯವರು ಇವರನ್ನು ಸ್ವಾಗತಿಸಿದರು. ದೇವರು ತಮ್ಮೊಂದಿಗಿದ್ದು ಮಾಡಿದ ಎಲ್ಲಾ ಕಾರ್ಯಗಳ ಬಗ್ಗೆ ಪೌಲ ಬಾರ್ನಬರು ಮತ್ತು ಇತರರು ವಿವರಿಸಿದರು.


ಅಪೊಸ್ತಲರು, ಹಿರಿಯರು ಮತ್ತು ಇಡೀ ಸಭೆಯವರು ಪೌಲ ಬಾರ್ನಬರೊಂದಿಗೆ ಕೆಲವು ಜನರನ್ನು ಅಂತಿಯೋಕ್ಯಕ್ಕೆ ಕಳುಹಿಸಬಯಸಿದರು. ತಮ್ಮವರೇ ಆದ ಕೆಲವರನ್ನು ಆರಿಸಿಕೊಳ್ಳಲು ಸಭೆಯು ನಿರ್ಧರಿಸಿತು. ಅವರು ಯೂದನನ್ನು (ಬಾರ್ಸಬನೆಂದೂ ಕರೆಯುತ್ತಿದ್ದರು) ಮತ್ತು ಸೀಲನನ್ನು ಆರಿಸಿಕೊಂಡರು. ಇವರು ಜೆರುಸಲೇಮಿನ ಸಭೆಯವರಲ್ಲಿ ಪ್ರಮುಖರಾಗಿದ್ದರು.


ಯೂದ ಸೀಲರು ಸಹ ಪ್ರವಾದಿಗಳಾಗಿದ್ದರು. ಅವರು ಅನೇಕ ಸಂಗತಿಗಳನ್ನು ಸಹೋದರರಿಗೆ ತಿಳಿಸಿ ಅವರನ್ನು ಬಲಪಡಿಸಿದರು.


ಪೌಲನೊಂದಿಗೆ ಹೋದ ವಿಶ್ವಾಸಿಗಳು ಅವನನ್ನು ಅಥೆನ್ಸ್ ಪಟ್ಟಣಕ್ಕೆ ಕರೆದುಕೊಂಡು ಹೋದರು. ಈ ಸಹೋದರರು ಪೌಲನಿಂದ ಸೀಲ ತಿಮೊಥೆಯರಿಗೆ ಒಂದು ಸಂದೇಶವನ್ನು ತೆಗೆದುಕೊಂಡು ಹಿಂತಿರುಗಿ ಬಂದರು. “ಸಾಧ್ಯವಾದಷ್ಟು ಬೇಗನೆ ನನ್ನ ಬಳಿಗೆ ಬನ್ನಿರಿ” ಎಂಬುದೇ ಆ ಸಂದೇಶ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು