Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 15:32 - ಪರಿಶುದ್ದ ಬೈಬಲ್‌

32 ಯೂದ ಸೀಲರು ಸಹ ಪ್ರವಾದಿಗಳಾಗಿದ್ದರು. ಅವರು ಅನೇಕ ಸಂಗತಿಗಳನ್ನು ಸಹೋದರರಿಗೆ ತಿಳಿಸಿ ಅವರನ್ನು ಬಲಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಯೂದನೂ, ಸೀಲನೂ ತಾವೇ ಪ್ರವಾದಿಗಳಾಗಿದ್ದುದರಿಂದ ಸಹೋದರರನ್ನು ಅನೇಕ ಮಾತುಗಳಿಂದ ಉತ್ತೇಜಿಸಿ ದೃಢಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಸೀಲ ಮತ್ತು ಯೂದ ಸ್ವತಃ ಪ್ರವಾದಿಗಳಾದುದರಿಂದ ಸುದೀರ್ಘ ಮಾತುಕತೆಗಳಿಂದ ಭಕ್ತರಲ್ಲಿ ಧೈರ್ಯಸ್ಥೈರ್ಯವನ್ನು ಉಂಟುಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಯೂದನೂ ಸೀಲನೂ ತಾವೇ ಪ್ರವಾದಿಗಳಾಗಿದ್ದದರಿಂದ ಸಹೋದರರನ್ನು ಅನೇಕ ಮಾತುಗಳಿಂದ ಪ್ರಬೋಧಿಸಿ ದೃಢಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಯೂದ ಮತ್ತು ಸೀಲರು ಸ್ವತಃ ಪ್ರವಾದಿಗಳಾಗಿದ್ದುದರಿಂದ ಅಲ್ಲಿದ್ದ ವಿಶ್ವಾಸಿಗಳನ್ನು ಅನೇಕ ಬುದ್ಧಿವಾದಗಳಿಂದ ಬಲಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ಜುದ್ ಅನಿ ಸಿಲಾಸ್ ಮನ್ತಲೆ ಪ್ರವಾದಿ ಹೊವ್ನ್ ಹೊತ್ತೆ, ತೆನಿ ಭಾವಾಕ್ನಿ ಅನಿ ಭೆನಿಯಾಕ್ನಿ ಲೈ ಸಂಗ್ತಿಯಾ ಸಾಂಗುನ್ ಉಮ್ಮೆದ್ ಭರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 15:32
39 ತಿಳಿವುಗಳ ಹೋಲಿಕೆ  

ಬಾರ್ನಬನು ಒಳ್ಳೆಯ ಮನುಷ್ಯನಾಗಿದ್ದನು. ಅವನು ಪವಿತ್ರಾತ್ಮಭರಿತನಾಗಿದ್ದನು ಮತ್ತು ಪೂರ್ಣನಂಬಿಕೆಯುಳ್ಳವನಾಗಿದ್ದನು. ಬಾರ್ನಬನು ಅಂತಿಯೋಕ್ಯಕ್ಕೆ ಹೋದಾಗ, ದೇವರು ಆ ಜನರನ್ನು ಅಧಿಕವಾಗಿ ಆಶೀರ್ವದಿಸಿರುವುದನ್ನು ಕಂಡನು. ಇದರಿಂದ ಬಾರ್ನಬನಿಗೆ ತುಂಬಾ ಸಂತೋಷವಾಯಿತು. ಅಂತಿಯೋಕ್ಯದಲ್ಲಿದ್ದ ವಿಶ್ವಾಸಿಗಳನ್ನೆಲ್ಲ ಅವನು ಪ್ರೋತ್ಸಾಹಿಸಿದನು. ಅವನು ಅವರಿಗೆ, “ನಿಮ್ಮ ನಂಬಿಕೆಯನ್ನು ಎಂದಿಗೂ ಕಳೆದುಕೊಳ್ಳಬೇಡಿ. ಪ್ರಭುವಿಗೆ ನಿಮ್ಮ ಪೂರ್ಣಹೃದಯಗಳಿಂದ ಯಾವಾಗಲೂ ವಿಧೇಯರಾಗಿರಿ” ಎಂದು ಹೇಳಿದನು. ಅನೇಕ ಜನರು ಪ್ರಭುವಾದ ಯೇಸುವಿನ ಹಿಂಬಾಲಕರಾದರು.


ಯೇಸುವಿನ ಶಿಷ್ಯರನ್ನು ಬಲಗೊಳಿಸಿ, ನಂಬಿಕೆಯಲ್ಲಿ ದೃಢವಾಗಿರಲು ಅವರಿಗೆ ಪ್ರೋತ್ಸಾಹಿಸಿದರು, “ನಾವು ದೇವರ ರಾಜ್ಯಕ್ಕೆ ಅನೇಕ ಕಷ್ಟಗಳ ಮೂಲಕ ಹೋಗಬೇಕಾಗಿದೆ” ಎಂದು ಬೋಧಿಸಿದರು.


ಅಂತಿಯೋಕ್ಯದ ಸಭೆಯಲ್ಲಿ ಕೆಲವು ಪ್ರವಾದಿಗಳು ಮತ್ತು ಉಪದೇಶಕರಿದ್ದರು. ಅವರು ಯಾರೆಂದರೆ: ಬಾರ್ನಬ, ಸಿಮೆಯೋನ್ (ಇವನನ್ನು ನೀಗರ್ ಎಂತಲೂ ಕರೆಯುತ್ತಿದ್ದರು.) ಲೂಸಿಯಸ್ (ಸಿರೇನ್ ಪಟ್ಟಣದವನು) ಮೆನಹೇನ (ಹೆರೋದ ರಾಜನೊಂದಿಗೆ ಬೆಳೆದವನು) ಮತ್ತು ಸೌಲ.


ನಾನು ಈ ಕಿರುಪತ್ರವನ್ನು ಸಿಲ್ವಾನನ ನೆರವಿನಿಂದ ಬರೆದೆನು. ಅವನು ಕ್ರಿಸ್ತನಲ್ಲಿ ನಂಬಿಗಸ್ತನಾದ ಸಹೋದರನೆಂಬುದು ನನಗೆ ತಿಳಿದಿದೆ. ನಾನು ನಿಮ್ಮನ್ನು ಸಂತೈಸಲು ಮತ್ತು ಪ್ರೋತ್ಸಾಹಿಸಲು ಈ ಪತ್ರವನ್ನು ಬರೆದೆನು. ಇದುವೇ ದೇವರ ನಿಜವಾದ ಕೃಪೆ ಎಂಬುದನ್ನು ನಿಮಗೆ ತಿಳಿಸಬೇಕೆಂಬುದೇ ನನ್ನ ಅಪೇಕ್ಷೆಯಾಗಿತ್ತು. ಆ ಕೃಪೆಯಲ್ಲಿ ಸ್ಥಿರತೆಯಿಂದಿರಿ.


ಹೌದು, ನೀವು ಸ್ವಲ್ಪಕಾಲ ಮಾತ್ರ ಸಂಕಟವನ್ನು ಅನುಭವಿಸುವಿರಿ. ಆದರೆ ಅನಂತರ ದೇವರು ಎಲ್ಲವನ್ನು ಸರಿಪಡಿಸುತ್ತಾನೆ. ಆತನು ನಿಮ್ಮನ್ನು ಬಲಪಡಿಸುತ್ತಾನೆ. ನೀವು ಕೆಳಕ್ಕೆ ಬೀಳದಂತೆ ಆತನು ನಿಮಗೆ ಆಧಾರವಾಗುವನು. ಎಲ್ಲರಿಗೂ ಕೃಪೆಯನ್ನು ತೋರುವ ದೇವರು ಆತನೇ. ತನ್ನ ಪ್ರಭಾವದಲ್ಲಿ ಪಾಲುಗಾರರಾಗಲು ಕ್ರಿಸ್ತನೇ ನಿಮ್ಮನ್ನು ಕರೆದನು. ಆ ಪ್ರಭಾವವು ಶಾಶ್ವತವಾದದ್ದು.


ನಿಮ್ಮ ಸಭಾಹಿರಿಯರಿಗೆ ನಾನು ಈಗ ಕೆಲವು ಮಾತುಗಳನ್ನು ಹೇಳಬೇಕಾಗಿದೆ. ನಾನೂ ಒಬ್ಬ ಹಿರಿಯನಾಗಿದ್ದೇನೆ. ನಾನು ಕ್ರಿಸ್ತನ ಬಾಧೆಗಳನ್ನು ಕಣ್ಣಾರೆ ನೋಡಿದ್ದೇನೆ. ನಮಗೆ ಪ್ರತ್ಯಕ್ಷವಾಗುವ ಪ್ರಭಾವದಲ್ಲಿ ನಾನೂ ಪಾಲುಗಾರನಾಗಿದ್ದೇನೆ.


ಸುವಾರ್ತೆಯನ್ನು ಜನರಿಗೆ ತಿಳಿಸು. ಕಾಲವು ಅನುಕೂಲವಾಗಿದ್ದರೂ ಅನಾನುಕೂಲವಾಗಿದ್ದರೂ ಬೋಧನೆಯನ್ನು ಮುಂದುವರಿಸು. ಜನರು ಮಾಡಬೇಕಾದುದನ್ನು ಅವರಿಗೆ ತಿಳಿಸು. ಅವರು ತಪ್ಪು ಮಾಡಿದಾಗ ಅದನ್ನು ಅವರಿಗೆ ತೋರಿಸಿಕೊಡು. ಅವರನ್ನು ಗದರಿಸು, ಇವುಗಳನ್ನು ಬಹಳ ತಾಳ್ಮೆಯಿಂದಲೂ ಎಚ್ಚರಿಕೆಯಿಂದಲೂ ಮಾಡು.


ಮೊಟ್ಟ ಮೊದಲನೆಯದಾಗಿ ನಾನು ನಿಮಗೆ ಹೇಳುವುದೇನೆಂದರೆ, ಎಲ್ಲಾ ಜನರಿಗಾಗಿ ದೇವರಲ್ಲಿ ಪ್ರಾರ್ಥಿಸಿರಿ, ವಿಜ್ಞಾಪಿಸಿರಿ, ಅವರ ಅಗತ್ಯಕ್ಕೆ ತಕ್ಕಂತೆ ಬಿನ್ನಹ ಮಾಡಿರಿ ಮತ್ತು ಆತನಿಗೆ ಕೃತಜ್ಞತಾಸ್ತುತಿ ಮಾಡಿರಿ.


ತಮ್ಮ ಕೆಲಸವನ್ನು ತಾವು ನೋಡಿಕೊಳ್ಳುವಂತೆ ಅವರಿಗೆ ಆಜ್ಞಾಪಿಸುತ್ತಿದ್ದೇವೆ. ಅವರೇ ದುಡಿದು ತಮ್ಮ ಆಹಾರವನ್ನು ಸಂಪಾದಿಸಿಕೊಳ್ಳಬೇಕೆಂದು ಆಜ್ಞಾಪಿಸಿ ಪ್ರಭುವಾದ ಯೇಸು ಕ್ರಿಸ್ತನಲ್ಲಿ ಬೇಡಿಕೊಳ್ಳುತ್ತೇವೆ.


ಪ್ರವಾದನೆಯನ್ನು ಹೀನೈಸಬೇಡಿ.


ಸಹೋದರ ಸಹೋದರಿಯರೇ, ಕೆಲಸ ಮಾಡದೆ ಇರುವ ಜನರಿಗೆ ಎಚ್ಚರಿಕೆ ನೀಡಬೇಕೆಂದು ನಾವು ನಿಮ್ಮನ್ನು ಕೇಳಿಕೊಳ್ಳುತ್ತೇವೆ. ಹೆದರಿಕೊಂಡಿರುವವರನ್ನು ಪ್ರೋತ್ಸಾಹಿಸಿರಿ; ಬಲಹೀನರಿಗೆ ಸಹಾಯ ಮಾಡಿ; ಎಲ್ಲರ ಜೊತೆಯಲ್ಲಿ ತಾಳ್ಮೆಯಿಂದಿರಿ;


ಸಹೋದರ ಸಹೋದರಿಯರೇ, ಈಗ ನಿಮಗೆ ಇತರ ಕೆಲವು ವಿಚಾರಗಳನ್ನು ತಿಳಿಸುತ್ತೇನೆ. ದೇವರನ್ನು ಮೆಚ್ಚಿಸಲು ಹೇಗೆ ಜೀವಿಸಬೇಕೆಂದು ನಿಮಗೆ ಕಲಿಸಿದ್ದೇವೆ. ನೀವು ಅದೇ ರೀತಿಯಲ್ಲಿ ಜೀವಿಸುತ್ತಿರುವಿರಿ. ಅದೇ ರೀತಿಯಲ್ಲಿ ಇನ್ನೂ ಹೆಚ್ಚು ಸಮರ್ಪಕವಾಗಿ ಜೀವಿಸಬೇಕೆಂದು ನಾವು ನಿಮ್ಮನ್ನು ಕ್ರಿಸ್ತನಲ್ಲಿ ಕೇಳಿಕೊಳ್ಳುತ್ತೇವೆ ಮತ್ತು ಪ್ರೋತ್ಸಾಹಿಸುತ್ತೇವೆ.


ಆದುದರಿಂದ ಅಥೆನ್ಸಿನಲ್ಲಿ ಉಳಿದುಕೊಂಡು ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಲು ತೀರ್ಮಾನಿಸಿದೆವು. ತಿಮೊಥೆಯನು ನಮ್ಮ ಸಹೋದರ. ಅವನು ದೇವರಿಗೋಸ್ಕರ ನಮ್ಮೊಡನೆ ಕೆಲಸ ಮಾಡುತ್ತಿದ್ದಾನೆ. ಕ್ರಿಸ್ತನ ವಿಷಯವಾದ ಸುವಾರ್ತೆಯನ್ನು ಜನರಿಗೆ ತಿಳಿಸಲು ಅವನು ನಮಗೆ ಸಹಾಯ ಮಾಡುತ್ತಿದ್ದಾನೆ. ನಿಮ್ಮ ನಂಬಿಕೆಯನ್ನು ಬಲಗೊಳಿಸಲು ಮತ್ತು ನಿಮ್ಮನ್ನು ಸಂತೈಸಲು ತಿಮೊಥೆಯನನ್ನು ಕಳುಹಿಸಿದ್ದೇವೆ.


ತಂದೆಯು ತನ್ನ ಸ್ವಂತ ಮಕ್ಕಳೊಡನೆ ನಡೆದುಕೊಳ್ಳುವಂತೆ ನಿಮ್ಮಲ್ಲಿ ಪ್ರತಿಯೊಬ್ಬರೊಡನೆಯೂ ನಡೆದುಕೊಂಡೆವೆಂಬುದು ನಿಮಗೆ ತಿಳಿದಿದೆ.


ಹಿಂದಿನ ಕಾಲಗಳಲ್ಲಿದ್ದ ಜನರಿಗೆ ಆ ರಹಸ್ಯಸತ್ಯವನ್ನು ಆತನು ತಿಳಿಸಲಿಲ್ಲ. ಈಗಲಾದರೊ ದೇವರು ತನ್ನ ಆತ್ಮನ ಮೂಲಕವಾಗಿ ಆ ರಹಸ್ಯಸತ್ಯವನ್ನು ತನ್ನ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ತೋರಿಸಿದ್ದಾನೆ.


ಪ್ರವಾದಿಗಳ ಜೀವಾತ್ಮಗಳು ಪ್ರವಾದಿಗಳ ಸ್ವಾಧೀನದಲ್ಲಿಯೇ ಇರುತ್ತವೆ.


ಇಬ್ಬರು ಅಥವಾ ಮೂವರು ಪ್ರವಾದಿಗಳು ಮಾತ್ರ ಮಾತಾಡಬೇಕು. ಅವರು ಹೇಳುವುದನ್ನು ಇತರರು ವಿವೇಚಿಸಬೇಕು.


ಆದರೆ ಪ್ರವಾದಿಸುವವನು ಜನರೊಂದಿಗೆ ಮಾತಾಡುತ್ತಾನೆ. ಅವನು ಜನರಿಗೆ ಶಕ್ತಿಯನ್ನು, ಪ್ರೋತ್ಸಾಹವನ್ನು ಮತ್ತು ಆದರಣೆಯನ್ನು ಕೊಡುತ್ತಾನೆ.


ಯೇಸುವು ನಿಮ್ಮನ್ನು ಕೊನೆಯವರೆಗೂ ದೃಢಪಡಿಸಿ ಕಾಪಾಡುವನು. ನಮ್ಮ ಪ್ರಭುವಾದ ಯೇಸು ಕ್ರಿಸ್ತನು ಮತ್ತೆ ಬಂದಾಗ ನೀವು ನಿರ್ದೋಷಿಗಳಾಗಿರುವಿರಿ.


ಉಪದೇಶಮಾಡುವ ವರವನ್ನು ಹೊಂದಿರುವವನು ಉಪದೇಶ ಮಾಡಬೇಕು. ಸಂತೈಸುವ ವರವನ್ನು ಹೊಂದಿರುವವನು ಬೇರೆಯವರನ್ನು ಸಂತೈಸಬೇಕು. ದಾನಮಾಡುವ ವರವನ್ನು ಹೊಂದಿರುವವನು ಉದಾರವಾಗಿ ಕೊಡಬೇಕು. ನಾಯಕತ್ವದ ವರವನ್ನು ಹೊಂದಿರುವವನು ನಾಯಕತ್ವವನ್ನು ವಹಿಸಿಕೊಂಡಿರುವಾಗ ಕಷ್ಟಪಟ್ಟು ದುಡಿಯಬೇಕು. ಕನಿಕರವನ್ನು ತೋರುವ ವರವನ್ನು ಹೊಂದಿರುವವನು ಆನಂದದಿಂದ ಆ ಕಾರ್ಯವನ್ನು ಮಾಡಬೇಕು.


ನಾವೆಲ್ಲರೂ ಬೇರೆಬೇರೆ ವರಗಳನ್ನು ಹೊಂದಿದ್ದೇವೆ. ದೇವರು ನಮಗೆ ಕೊಟ್ಟಿರುವ ಕೃಪೆಯಿಂದಲೇ ಪ್ರತಿಯೊಂದು ವರವು ಬಂದಿದೆ. ಪ್ರವಾದಿಸುವ ವರವನ್ನು ಹೊಂದಿರುವವನು ತನಗಿರುವ ನಂಬಿಕೆಯೊಂದಿಗೆ ಆ ವರವನ್ನು ಉಪಯೋಗಿಸಬೇಕು.


ಅವನು ಆ ಪ್ರದೇಶದಲ್ಲಿ ಪ್ರಯಾಣ ಮಾಡುತ್ತಾ ಅನೇಕ ಊರುಗಳಿಗೆ ಭೇಟಿನೀಡಿ, ಯೇಸುವಿನ ಶಿಷ್ಯರಿಗೆ ಅನೇಕ ಸಂಗತಿಗಳನ್ನು ತಿಳಿಸಿ ಬಲಪಡಿಸಿದನು. ಬಳಿಕ ಪೌಲನು ಗ್ರೀಸಿಗೆ (ಅಖಾಯ) ಹೋದನು.


ಅಲ್ಲಿ ಅವನು ಸ್ವಲ್ಪಕಾಲವಿದ್ದನು. ಬಳಿಕ ಅಲ್ಲಿಂದ ಹೊರಟು ಗಲಾತ್ಯ ಮತ್ತು ಫ್ರಿಜಿಯ ನಾಡುಗಳಲ್ಲಿ ಸಂಚರಿಸುತ್ತಾ ಯೇಸುವಿನ ಶಿಷ್ಯರೆಲ್ಲರನ್ನು ಬಲಪಡಿಸಿದನು.


ಪೌಲ ಸೀಲರು ಸಿರಿಯಾ ಮತ್ತು ಸಿಲಿಸಿಯ ನಾಡುಗಳಲ್ಲಿ ಹಾದು ಹೋಗುತ್ತಾ ಅಲ್ಲಿದ್ದ ಸಭೆಗಳಿಗೆ ಬಲವಾಗಿ ಬೆಳೆಯಲು ನೆರವು ನೀಡಿದರು.


ಅಪೊಸ್ತಲರು, ಹಿರಿಯರು ಮತ್ತು ಇಡೀ ಸಭೆಯವರು ಪೌಲ ಬಾರ್ನಬರೊಂದಿಗೆ ಕೆಲವು ಜನರನ್ನು ಅಂತಿಯೋಕ್ಯಕ್ಕೆ ಕಳುಹಿಸಬಯಸಿದರು. ತಮ್ಮವರೇ ಆದ ಕೆಲವರನ್ನು ಆರಿಸಿಕೊಳ್ಳಲು ಸಭೆಯು ನಿರ್ಧರಿಸಿತು. ಅವರು ಯೂದನನ್ನು (ಬಾರ್ಸಬನೆಂದೂ ಕರೆಯುತ್ತಿದ್ದರು) ಮತ್ತು ಸೀಲನನ್ನು ಆರಿಸಿಕೊಂಡರು. ಇವರು ಜೆರುಸಲೇಮಿನ ಸಭೆಯವರಲ್ಲಿ ಪ್ರಮುಖರಾಗಿದ್ದರು.


ಬಳಿಕ ಕೆಲವು ಜನರು ಜುದೇಯದಿಂದ ಅಂತಿಯೋಕ್ಯಕ್ಕೆ ಬಂದರು. “ನೀವು ಸುನ್ನತಿ ಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗುವುದಿಲ್ಲ. ಸುನ್ನತಿ ಮಾಡಿಸಿಕೊಳ್ಳಬೇಕೆಂದು ಮೋಶೆಯೇ ಹೇಳಿದ್ದಾನೆ” ಎಂದು ಅವರು ಯೆಹೂದ್ಯರಲ್ಲದ ವಿಶ್ವಾಸಿಗಳಿಗೆ ಉಪದೇಶಿಸತೊಡಗಿದರು.


ಆ ಕಾಲದಲ್ಲಿ ಕೆಲವು ಪ್ರವಾದಿಗಳು ಜೆರುಸಲೇಮಿನಿಂದ ಅಂತಿಯೋಕ್ಯಕ್ಕೆ ಹೋದರು.


ಪೇತ್ರನು ಇನ್ನೂ ಅನೇಕ ಮಾತುಗಳಿಂದ ಅವರನ್ನು ಎಚ್ಚರಿಸಿ, “ಈ ದುಷ್ಟ ಸಂತತಿಯಿಂದ ತಪ್ಪಿಸಿಕೊಳ್ಳಿ” ಎಂದು ಬೇಡಿಕೊಂಡನು.


ಆದಕಾರಣ ದೇವರ ಜ್ಞಾನವು ಹೇಳಿದ್ದೇನೆಂದರೆ, ‘ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸುವೆನು. ನನ್ನ ಕೆಲವು ಪ್ರವಾದಿಗಳು ಮತ್ತು ಅಪೊಸ್ತಲರು ಕೆಡುಕರಿಂದ ಹತರಾಗುವರು. ಬೇರೆ ಕೆಲವರು ಸಂಕಟಕ್ಕೆ ಗುರಿಯಾಗುವರು.’


ನಾನು ನಿಮಗೆ ಹೇಳುವುದೇನೆಂದರೆ, ನಿಮ್ಮ ಬಳಿಗೆ ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಉಪದೇಶಕರನ್ನೂ ಕಳುಹಿಸುತ್ತೇನೆ. ನೀವು ಅವರಲ್ಲಿ ಕೆಲವರನ್ನು ಕೊಲ್ಲುವಿರಿ; ಇನ್ನು ಕೆಲವರನ್ನು ಶಿಲುಬೆಗೇರಿಸುವಿರಿ; ಇತರ ಕೆಲವರನ್ನು ನಿಮ್ಮ ಸಭಾಮಂದಿರಗಳಲ್ಲಿ ಹೊಡೆಯುವಿರಿ; ನೀವು ಅವರನ್ನು ಊರಿಂದ ಊರಿಗೆ ಅಟ್ಟಿಬಿಡುವಿರಿ.


“ಮೇದ್ಯಯನಾದ ದಾರ್ಯಾವೆಷನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ಪಾರಸಿಯ ರಾಜ್ಯದ ದಿವ್ಯಪಾಲಕನ ವಿರುದ್ಧದ ಹೋರಾಟದಲ್ಲಿ ನಾನು ಮಿಕಾಯೇಲನಿಗೆ ಬೆಂಬಲ ಕೊಟ್ಟೆನು.


ಅಂತೆಯೇ ಸಭೆಯು ಇವರನ್ನು ಕಳುಹಿಸಿತು. ಇವರು ಫೆನಿಷ್ಯ ಮತ್ತು ಸಮಾರ್ಯದ ಮಾರ್ಗವಾಗಿ ಪ್ರಯಾಣಮಾಡಿದರು. ಯೆಹೂದ್ಯರಲ್ಲದ ಜನರು ನಿಜದೇವರ ಕಡೆಗೆ ತಿರುಗಿಕೊಂಡಿದ್ದರ ಬಗ್ಗೆ ಈ ನಾಡುಗಳಲ್ಲಿ ವಿವರಿಸಿದರು. ಇದನ್ನು ಕೇಳಿ ಸಹೋದರರಿಗೂ ಬಹಳ ಸಂತೋಷವಾಯಿತು.


ಆದ್ದರಿಂದ ನಾವು ಯೂದನನ್ನು ಮತ್ತು ಸೀಲನನ್ನು ಅವರೊಂದಿಗೆ ಕಳುಹಿಸಿದ್ದೇವೆ. ಕೆಳಕಂಡ ಸಂಗತಿಗಳನ್ನೆಲ್ಲ ಅವರು ನಿಮಗೆ ತಿಳಿಸುವರು.


ವಿಶ್ವಾಸಿಗಳು ಅದನ್ನು ಓದಿ ಬಹು ಸಂತೋಷಪಟ್ಟರು. ಆ ಪತ್ರವು ಅವರನ್ನು ಸಂತೈಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು