Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 15:33 - ಪರಿಶುದ್ದ ಬೈಬಲ್‌

33 ಯೂದ ಸೀಲರು ಸ್ವಲ್ಪಕಾಲ ಅಲ್ಲಿದ್ದು ಸಹೋದರರಿಂದ ಸಮಾಧಾನವೆಂಬ ಆಶೀರ್ವಾದವನ್ನು ಪಡೆದುಕೊಂಡರು. ಬಳಿಕ ಅವರು ತಮ್ಮನ್ನು ಕಳುಹಿಸಿಕೊಟ್ಟಿದ್ದ ಜೆರುಸಲೇಮಿನ ಸಹೋದರರ ಬಳಿಗೆ ಹಿಂತಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಅಲ್ಲಿ ಕೆಲವು ಕಾಲ ಕಳೆದ ನಂತರ ತಮ್ಮನ್ನು ಕಳುಹಿಸಿದವರ ಬಳಿಗೆ ಪುನಃ ಹೋಗುವುದಕ್ಕೆ ಸಹೋದರರಿಂದ ಅಪ್ಪಣೆ ತೆಗೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಕೆಲವು ದಿನಗಳಾದ ಮೇಲೆ ಅಲ್ಲಿಯ ಭಕ್ತರನ್ನು ಬೀಳ್ಕೊಟ್ಟು ತಮ್ಮನ್ನು ಕಳುಹಿಸಿದವರ ಬಳಿಗೆ ಹಿಂದಿರುಗಲು ಸಿದ್ಧರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಅಲ್ಲಿ ಕೆಲವು ಕಾಲ ಕಳೆದನಂತರ ತಮ್ಮನ್ನು ಕಳುಹಿಸಿದ್ದವರ ಬಳಿಗೆ ತಿರಿಗಿ ಹೋಗುವದಕ್ಕೆ ಸಹೋದರರಿಂದ ಅಪ್ಪಣೆ ತೆಗೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಅವರು ಕೆಲವು ದಿನಗಳು ಇದ್ದ ನಂತರ ಅಲ್ಲಿಯ ವಿಶ್ವಾಸಿಗಳನ್ನು ಬೀಳ್ಕೊಟ್ಟು ತಮ್ಮನ್ನು ಕಳುಹಿಸಿಕೊಟ್ಟವರ ಬಳಿಗೆ ಹಿಂದಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ಜುದ್ ಅನಿ ಸಿಲಾಸ್ ಥೈಚ್ ರಾವ್ನ್, ಭಾವಾ ಅನಿ ಭೆನಿಯಾನಿ ಸಮಾಧಾನಾಚೊ ಆಶಿರ್ವಾದ್ ದಿವ್ನ್ ಧಾಡ್ಲ್ಯಾನಿ ಅನಿ ತೆನಿ ತೆಂಕಾ ಧಾಡುನ್ ದಿಲ್ಲ್ಯಾಂಚ್ಯಾಕ್ಡೆ ಗೆಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 15:33
9 ತಿಳಿವುಗಳ ಹೋಲಿಕೆ  

ಆದ್ದರಿಂದ ನಿಮ್ಮಲ್ಲಿ ಯಾರೂ ಅವನನ್ನು ತಿರಸ್ಕರಿಸಬಾರದು. ಅವನನ್ನು ನನ್ನ ಬಳಿಗೆ ಸಮಾಧಾನದಿಂದ ಕಳುಹಿಸಿಕೊಡಿರಿ. ಅವನು ಸಹೋದರರೊಂದಿಗೆ ಬರುವುದನ್ನು ನಾನು ಎದುರು ನೋಡುತ್ತಿದ್ದೇನೆ.


ರಹಾಬಳೆಂಬ ವೇಶ್ಯೆಯು ಇಸ್ರೇಲಿನ ಗೂಢಚಾರರನ್ನು ಬರಮಾಡಿಕೊಂಡು, ಅವರನ್ನು ಸ್ನೇಹಿತರಂತೆ ನೋಡಿಕೊಂಡಳು. ನಂಬಲೊಲ್ಲದ ಜನರನ್ನು ಕೊಂದಾಗ ಅವಳನ್ನು ಕೊಲ್ಲದೆ ಹೋದದ್ದು ಅವಳಲ್ಲಿದ್ದ ಆ ನಂಬಿಕೆಯಿಂದಲೇ.


ಸೆರೆಮನೆಯ ಅಧಿಕಾರಿಯು ಪೌಲನಿಗೆ, “ನಮ್ಮ ನಾಯಕರು ನಿಮ್ಮನ್ನು ಬಿಡುಗಡೆ ಮಾಡಬೇಕೆಂದು ಸೈನಿಕರ ಮೂಲಕ ಹೇಳಿ ಕಳುಹಿಸಿದ್ದಾರೆ. ಈಗ ನೀವು ಸಮಾಧಾನದಿಂದ ಹೋಗಿರಿ” ಎಂದು ಹೇಳಿದನು.


ನಾವು ನಿನಗೆ ಕೇಡುಮಾಡಲಿಲ್ಲ. ಅದೇ ರೀತಿಯಲ್ಲಿ ಈಗ ನೀನೂ ನಮಗೆ ಕೇಡುಮಾಡುವುದಿಲ್ಲವೆಂದು ಪ್ರಮಾಣಮಾಡಬೇಕು. ನಾವು ನಿನ್ನನ್ನು ದೂರ ಕಳುಹಿಸಿದರೂ ಸಮಾಧಾನದಿಂದ ಕಳುಹಿಸಿಕೊಟ್ಟೆವು. ಯೆಹೋವನು ನಿನ್ನನ್ನು ಆಶೀರ್ವದಿಸಿದ್ದಾನೆ ಎಂಬುದು ಈಗ ಸ್ಪಷ್ಟವಾಗಿದೆ” ಎಂದು ಹೇಳಿದರು.


ನಿಮ್ಮ ಬಳಿಗೆ ಬರುವವನು ಈ ಉಪದೇಶವನ್ನು ಹೊಂದಿಲ್ಲದಿದ್ದರೆ ಅವನನ್ನು ನಿಮ್ಮ ಮನೆಯೊಳಗೆ ಸೇರಿಸಿಕೊಳ್ಳಬೇಡಿ. ಅವನನ್ನು ಸ್ವಾಗತಿಸಬೇಡಿ.


ಯೇಸು ಆಕೆಗೆ, “ಮಗಳೇ, ನಿನ್ನ ನಂಬಿಕೆಯಿಂದಲೇ ನಿನಗೆ ವಾಸಿಯಾಯಿತು. ಸಮಾಧಾನದಿಂದ ಹೋಗು. ನಿನಗೆ ಇನ್ನು ಮೇಲೆ ಆ ಕಾಯಿಲೆಯ ಬಾಧೆ ಇರುವುದಿಲ್ಲ” ಎಂದು ಹೇಳಿದನು.


ಬಳಿಕ ಮೋಶೆ ತನ್ನ ಮಾವನಾದ ಇತ್ರೋನನ ಬಳಿಗೆ ಹಿಂತಿರುಗಿದನು. ಮೋಶೆ ಇತ್ರೋನನಿಗೆ, “ಈಜಿಪ್ಟಿನಲ್ಲಿರುವ ನನ್ನ ಜನರ ಬಳಿಗೆ ಹೋಗಿ ಅವರು ಇನ್ನೂ ಜೀವಂತವಾಗಿದ್ದಾರೋ ಏನೋ ನೋಡುವೆನು” ಎಂದು ಹೇಳಿದನು. ಇತ್ರೋನನು ಮೋಶೆಗೆ, “ನೀನು ಸಮಾಧಾನದಿಂದ ಹೋಗಿ ಬಾ” ಎಂದು ಹೇಳಿದನು.


ಅಪೊಸ್ತಲರು, ಹಿರಿಯರು ಮತ್ತು ಇಡೀ ಸಭೆಯವರು ಪೌಲ ಬಾರ್ನಬರೊಂದಿಗೆ ಕೆಲವು ಜನರನ್ನು ಅಂತಿಯೋಕ್ಯಕ್ಕೆ ಕಳುಹಿಸಬಯಸಿದರು. ತಮ್ಮವರೇ ಆದ ಕೆಲವರನ್ನು ಆರಿಸಿಕೊಳ್ಳಲು ಸಭೆಯು ನಿರ್ಧರಿಸಿತು. ಅವರು ಯೂದನನ್ನು (ಬಾರ್ಸಬನೆಂದೂ ಕರೆಯುತ್ತಿದ್ದರು) ಮತ್ತು ಸೀಲನನ್ನು ಆರಿಸಿಕೊಂಡರು. ಇವರು ಜೆರುಸಲೇಮಿನ ಸಭೆಯವರಲ್ಲಿ ಪ್ರಮುಖರಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು