ಅಪೊಸ್ತಲರ ಕೃತ್ಯಗಳು 15:4 - ಪರಿಶುದ್ದ ಬೈಬಲ್4 ಪೌಲ ಬಾರ್ನಬರು ಮತ್ತು ಇತರರು ಜೆರುಸಲೇಮನ್ನು ತಲುಪಿದರು. ಅಪೊಸ್ತಲರು, ಹಿರಿಯರು ಮತ್ತು ಸಭೆಯವರು ಇವರನ್ನು ಸ್ವಾಗತಿಸಿದರು. ದೇವರು ತಮ್ಮೊಂದಿಗಿದ್ದು ಮಾಡಿದ ಎಲ್ಲಾ ಕಾರ್ಯಗಳ ಬಗ್ಗೆ ಪೌಲ ಬಾರ್ನಬರು ಮತ್ತು ಇತರರು ವಿವರಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವರು ಯೆರೂಸಲೇಮಿಗೆ ಬಂದ ಮೇಲೆ ಸಭೆಯವರೂ ಅಪೊಸ್ತಲರೂ ಸಭೆಯ ಹಿರಿಯರೂ ಅವರನ್ನು ಸೇರಿಸಿಕೊಂಡಾಗ ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳನ್ನೆಲ್ಲಾ ಅವರಿಗೆ ವಿವರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಪೌಲ, ಬಾರ್ನಬ ಮತ್ತು ಸಂಗಡಿಗರು ಜೆರುಸಲೇಮಿಗೆ ಆಗಮಿಸಿದಾಗ, ಅಲ್ಲಿಯ ಕ್ರೈಸ್ತಸಭೆ ಪ್ರೇಷಿತರ ಹಾಗೂ ಪ್ರಮುಖರ ಸಮೇತ ಅವರನ್ನು ಸ್ವಾಗತಿಸಿತು. ಆಗ ಅವರು, ದೇವರು ತಮ್ಮೊಡನೆ ಇದ್ದು, ಸಾಧಿಸಿದ ಎಲ್ಲಾ ಕಾರ್ಯಗಳನ್ನು ವರದಿಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅವರು ಯೆರೂಸಲೇವಿುಗೆ ಬಂದ ಮೇಲೆ ಸಭೆಯವರೂ ಅಪೊಸ್ತಲರೂ ಸಭೆಯ ಹಿರಿಯರೂ ಅವರನ್ನು ಸೇರಿಸಿಕೊಂಡಾಗ ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳನ್ನೆಲ್ಲಾ ಅವರಿಗೆ ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅವರು ಯೆರೂಸಲೇಮನ್ನು ತಲುಪಿದಾಗ, ಸಭೆಯವರು, ಅಪೊಸ್ತಲರು ಹಾಗೂ ಹಿರಿಯರು ಅವರನ್ನು ಸ್ವಾಗತಿಸಿದರು. ದೇವರು ತಮ್ಮ ಮುಖಾಂತರವಾಗಿ ಮಾಡಿದ್ದನ್ನು ಅವರು ತಿಳಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ಪಾವ್ಲು ಬಾರ್ನಾಬಾಸ್ ಅನಿ ಉಲ್ಲಿ ಲೊಕಾ ಜೆರುಜಲೆಮಾಕ್ ಅಪೊಸ್ತಲಾನಿ, ಜಾಂನ್ತ್ಯಾ ಲೊಕಾನಿ ಅನಿ ತಾಂಡ್ಯಾಚ್ಯಾ ಲೊಕಾನಿ ತೆಂಕಾ ಸ್ವಾಗತ್ ಕರ್‍ಲ್ಯಾನಿ, ತೆನಿ ಸಗ್ಳ್ಯಾನಿ ದೆವಾನ್ ಅಪ್ಲ್ಯಾ ವಾಂಗ್ಡಾ ಕರಲ್ಲ್ಯಾ ಬರ್‍ಯಾ ಕಾಮಾಂಚ್ಯಾ ವಿಶಯಾತ್ ಥೈತ್ಲ್ಯಾ ಲೊಕಾಕ್ನಿ ಸಾಂಗ್ಲ್ಯಾನಿ. ಅಧ್ಯಾಯವನ್ನು ನೋಡಿ |
ಅಪೊಲ್ಲೋಸನು ಅಖಾಯ ಪ್ರಾಂತ್ಯಕ್ಕೆ ಹೋಗಲು ಅಪೇಕ್ಷಿಸಿದಾಗ ಎಫೆಸದ ಸಹೋದರರು ಅವನನ್ನು ಪ್ರೋತ್ಸಾಹಿಸಿದರು. ಅಲ್ಲದೆ ಅಖಾಯದಲ್ಲಿದ್ದ ಯೇಸುವಿನ ಶಿಷ್ಯರಿಗೆ ಅವರು ಪತ್ರವನ್ನು ಬರೆದು, ಅಪೊಲ್ಲೋಸನನ್ನು ಸ್ವೀಕರಿಸಿಕೊಳ್ಳಬೇಕೆಂದು ಅವರನ್ನು ಕೇಳಿಕೊಂಡರು. ಅಖಾಯದಲ್ಲಿ ಈ ಶಿಷ್ಯರು ದೇವರ ಕೃಪೆಯಿಂದಾಗಿ ಯೇಸುವಿನಲ್ಲಿ ನಂಬಿಕೆಯಿಟ್ಟಿದ್ದರು. ಅಪೊಲ್ಲೋಸನು ಅಲ್ಲಿಗೆ ಹೋಗಿ ಅವರಿಗೆ ಬಹಳ ನೆರವು ನೀಡಿದನು.