ಅಪೊಸ್ತಲರ ಕೃತ್ಯಗಳು 16:14 - ಪರಿಶುದ್ದ ಬೈಬಲ್14 ಅಲ್ಲಿ ಲಿಡಿಯಾ ಎಂಬ ಒಬ್ಬ ಹೆಂಗಸಿದ್ದಳು. ಆಕೆಯು ಥುವತೈರ ಪಟ್ಟಣದವಳು. ಕೆನ್ನೇರಳೆ ಬಣ್ಣದ ಬಟ್ಟೆಗಳನ್ನು ಮಾರುವುದು ಆಕೆಯ ಕಸುಬಾಗಿತ್ತು. ಆಕೆಯು ನಿಜ ದೇವರನ್ನು ಆರಾಧಿಸುತ್ತಿದ್ದಳು. ಪೌಲನ ಮಾತನ್ನು ಲಿಡಿಯಾ ಆಲಿಸುತ್ತಿದ್ದಳು. ಪ್ರಭುವು ಆಕೆಯ ಹೃದಯವನ್ನು ತೆರೆದನು. ಪೌಲನು ಹೇಳಿದ ಸಂಗತಿಗಳನ್ನು ಆಕೆ ನಂಬಿಕೊಂಡಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನಮ್ಮ ಮಾತುಗಳನ್ನು ಕೇಳಿದವರಲ್ಲಿ ಲುದ್ಯಳೆಂಬ ಒಬ್ಬ ಸ್ತ್ರೀಯು ಇದ್ದಳು. ಆಕೆ ಧೂಮ್ರ (ನೇರಳೆ) ಬಣ್ಣದ ವಸ್ತ್ರಗಳನ್ನು ಮಾರುವವಳೂ, ಥುವತೈರ ಎಂಬ ಊರಿನವಳೂ, ದೈವಭಕ್ತಳೂ ಆಗಿದ್ದಳು. ಪೌಲನು ಹೇಳುವ ಮಾತುಗಳಿಗೆ ಗಮನಕೊಡುವುದಕ್ಕಾಗಿ ಕರ್ತನು ಆಕೆಯ ಹೃದಯವನ್ನು ತೆರೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ನಮ್ಮ ಬೋಧನೆಯನ್ನು ಕೇಳಿದ ಆ ಮಹಿಳೆಯರಲ್ಲಿ ಲಿಡಿಯ ಎಂಬವಳು ಒಬ್ಬಳು. ಈಕೆ ಥುವತೈರ ಎಂಬ ಊರಿನವಳು; ಪಟ್ಟೆಪೀತಾಂಬರಗಳ ವ್ಯಾಪಾರಿ ಹಾಗೂ ದೇವಭಕ್ತೆ. ಪೌಲನ ಬೋಧನೆಗೆ ಕಿವಿಗೊಟ್ಟು ಗ್ರಹಿಸುವಂತೆ ಪ್ರಭು ಆಕೆಯ ಹೃದಯವನ್ನು ತೆರೆದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನಮ್ಮ ಮಾತುಗಳನ್ನು ಕೇಳಿದವರಲ್ಲಿ ಲುದ್ಯಳೆಂಬ ಒಬ್ಬ ಸ್ತ್ರೀಯು ಇದ್ದಳು. ಆಕೆ ಧೂಮ್ರವರ್ಣದ ವಸ್ತ್ರಗಳನ್ನು ಮಾರುವವಳೂ ಥುವತೈರ ಎಂಬ ಊರಿನವಳೂ ದೇವಭಕ್ತಳೂ ಆಗಿದ್ದಳು. ಪೌಲನು ಹೇಳಿದ ಮಾತುಗಳಿಗೆ ಲಕ್ಷ್ಯಕೊಡುವದಕ್ಕೆ ಕರ್ತನು ಆಕೆಯ ಹೃದಯವನ್ನು ತೆರೆದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಅವರಲ್ಲಿ ಒಬ್ಬ ಮಹಿಳೆಯ ಹೆಸರು ಲುದ್ಯ ಎಂದಿತ್ತು. ಆಕೆ ಥುವತೈರ ಊರಿನವಳೂ ಕೆನ್ನೀಲಿ ಬಣ್ಣದ ಬಟ್ಟೆಗಳ ವ್ಯಾಪಾರಿಯೂ ದೇವರನ್ನು ಆರಾಧಿಸುವವಳೂ ಆಗಿದ್ದಳು. ಪೌಲನು ಹೇಳಿದ್ದನ್ನು ಲಕ್ಷ್ಯಕೊಡುವಂತೆ ಕರ್ತ ಯೇಸು ಆಕೆಯ ಹೃದಯವನ್ನು ತೆರೆದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ಥೈ ಥುವತೈರ್ ಮನ್ತಲ್ಯಾ ಶಾರಾತ್ಲಿ ಲಿಡಿಯಾ ಮನ್ತಲಿ ಎಕ್ ಬಾಯ್ಕೊ ಮಾನುಸ್ ಹೊತ್ತಿ, ಝಾಂಬ್ಳ್ಯಾ ಬನ್ನಾಚೆ ಕಪ್ಡೆ ಇಕ್ತಲೆ ತಿಜೆ ಕಾಮ್ ಹೊಲ್ಲೆ, ತಿ ಖರ್ಯ್ಯಾ ದೆವಾಕ್ ಆರಾಧನ್ ಕರ್‍ತಲಿ ಹೊಲ್ಲಿ , ತಿ ಪಾವ್ಲುಚಿ ಬೊಲ್ನಿಯಾ ಆಯ್ಕುನ್ಗೆತ್ ಹೊತ್ತಿ, ತನ್ನಾ ಧನಿಯಾನ್ ತಿಜೊ ಮನ್ ಉಗಡ್ಲ್ಯಾನ್, ಅನಿ ತಿನೆ ಪಾವ್ಲು ಸಾಂಗ್ತಲ್ಯಾ ಬೊಲ್ನಿಯಾಕ್ನಿ ವಿಶ್ವಾಸ್ ಕರ್‍ಲಿನ್. ಅಧ್ಯಾಯವನ್ನು ನೋಡಿ |