Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 16:16 - ಪರಿಶುದ್ದ ಬೈಬಲ್‌

16 ಒಂದು ಸಲ, ನಾವು ಪ್ರಾರ್ಥನಾಸ್ಥಳಕ್ಕೆ ಹೋಗುತ್ತಿದ್ದಾಗ ಒಂದು ಸಂಗತಿ ಸಂಭವಿಸಿತು. ದಾಸಿಯೊಬ್ಬಳು ನಮ್ಮನ್ನು ಎದುರುಗೊಂಡಳು. ಆಕೆಯಲ್ಲಿ ವಿಶೇಷವಾದ ಆತ್ಮವಿತ್ತು. ಆ ಆತ್ಮದ ಶಕ್ತಿಯಿಂದ ಅವಳು ಮುಂದೆ ಸಂಭವಿಸುವ ಸಂಗತಿಗಳ ಬಗ್ಗೆ ಹೇಳುತ್ತಿದ್ದಳು. ಇದರ ಮೂಲಕವಾಗಿ ಆಕೆ ತನ್ನ ಯಜಮಾನರಿಗೆ ಬಹಳ ಹಣವನ್ನು ಗಳಿಸಿ ಕೊಡುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಬಳಿಕ ಪ್ರಾರ್ಥನೆ ನಡೆಯುವ ಆ ಸ್ಥಳಕ್ಕೆ ನಾವು ಹೋಗುತ್ತಿರುವಾಗ ಗಾರುಡಗಾತಿಯಾದ ಒಬ್ಬ ದಾಸಿಯು ನಮ್ಮೆದುರಿಗೆ ಬಂದಳು. ಅವಳು ಕಣಿ ಹೇಳುವುದರಿಂದ ಅವಳ ಯಜಮಾನರಿಗೆ ಬಹು ಆದಾಯವಾಗುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಒಂದು ದಿನ ನಾವು ಪ್ರಾರ್ಥನಾ ಸ್ಥಳಕ್ಕೆ ಹೋಗುತ್ತಿದ್ದೆವು. ಗಾರುಡಗಾತಿಯಾದ ಒಬ್ಬ ದಾಸಿ ನಮ್ಮನ್ನು ಎದುರುಗೊಂಡಳು. ಆ ಹುಡುಗಿ ಕಣಿಶಕುನ ಹೇಳಿ ತನ್ನ ಯಜಮಾನನಿಗೆ ತುಂಬಾ ಹಣ ಸಂಪಾದಿಸುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಬಳಿಕ ಪ್ರಾರ್ಥನೆ ನಡೆಯುವ ಆ ಸ್ಥಳಕ್ಕೆ ನಾವು ಹೋಗುತ್ತಿರುವಾಗ ಗಾರುಡಗಾತಿಯಾದ ಒಬ್ಬ ದಾಸಿಯು ನಮ್ಮೆದುರಿಗೆ ಬಂದಳು. ಅವಳು ಕಣಿ ಹೇಳುವದರಿಂದ ಅವಳ ಯಜಮಾನರಿಗೆ ಬಹು ಆದಾಯವಾಗುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಒಂದು ದಿನ ನಾವು ಪ್ರಾರ್ಥನೆಯ ಸ್ಥಳಕ್ಕೆ ಹೋಗುತ್ತಿದ್ದೆವು, ಆಗ ಭವಿಷ್ಯ ಹೇಳುವ ದುರಾತ್ಮವುಳ್ಳ ದಾಸಿಯೊಬ್ಬಳು ನಮ್ಮನ್ನು ಭೇಟಿಯಾದಳು. ಭವಿಷ್ಯ ಹೇಳುವುದರಿಂದ ಆಕೆ ತನ್ನ ಯಜಮಾನನಿಗೆ ಬಹಳ ಹಣ ಸಂಪಾದಿಸುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಎಗ್ದಾ ಅಮಿ ಮಾಗ್ನಿ ಕರ್‍ತಲ್ಯಾ ಜಾಗ್ಯಾಕ್ ಜಾತಾನಾ ಎಕ್ ಸಂಗತ್ ಹೊಲಿ, ಎಕ್ ದಾಸಿ ಅಮ್ಕಾ ಭೆಟ್ಲಿ ತಿಜ್ಯಾಕ್ಡೆ ಎಕ್ ವಿಶೆಸ್ ಆತ್ಮೊ ಹೊತ್ತೊ, ತ್ಯಾ ಆತ್ಮ್ಯಾಚ್ಯಾ ಬಳಾನ್ ತಿ ಫಿಡೆ ಹೊತಲೆ ಹೊತ್ತ್ಯಾಚ್ಯಾ ವಿಶಯಾತ್ ಸಾಂಗಿತ್ ಹೊತ್ತಿ, ತಸೆ ಕರುನ್ ತಿ ಅಪ್ಲ್ಯಾ ಯಜಮಾನಾಕ್ ಲೈ ಪೈಸೆ ಕರುನ್ ದಿತ್ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 16:16
21 ತಿಳಿವುಗಳ ಹೋಲಿಕೆ  

“ಸಲಹೆಗಾಗಿ, ಸತ್ತವರಲ್ಲಿ ವಿಚಾರಿಸುವವರ ಮತ್ತು ಬೇತಾಳಿಕರ ಬಳಿಗೆ ಹೋಗಬೇಡಿರಿ. ಅವರು ನಿಮ್ಮನ್ನು ಕೇವಲ ಅಶುದ್ಧರನ್ನಾಗಿ ಮಾಡುವರು. ನಾನೇ ನಿಮ್ಮ ದೇವರಾದ ಯೆಹೋವನು!


ಕೆಲವರು, “ಏನು ಮಾಡಬೇಕೆಂದು ಕಣಿಹೇಳುವವರನ್ನೂ ಬೇತಾಳಿಕರನ್ನೂ ವಿಚಾರಿಸು” ಎಂದು ಹೇಳುತ್ತಾರೆ. (ಕಣಿಹೇಳುವವರು ತಾವು ಮಂತ್ರಶಕ್ತಿಯುಳ್ಳವರೆಂದು ಜನರಿಗೆ ತೋರಿಸಲು ಪಕ್ಷಿಗಳು ಮಾಡುವ ಶಬ್ದವನ್ನು ಬಾಯಿಂದ ಮಾಡಿ ತಮಗೆ ರಹಸ್ಯಗಳು ಗೊತ್ತಿವೆ ಎಂದು ತೋರಿಸಿಕೊಳ್ಳುತ್ತಾರೆ.) ನಾನು ಹೇಳುವುದೇನೆಂದರೆ, “ಜನರು ಸಹಾಯಕ್ಕಾಗಿ ದೇವರನ್ನೇ ಕೇಳಿಕೊಳ್ಳಬೇಕು. ಆ ಕಣಿಹೇಳುವವರೂ ಬೇತಾಳಿಕರೂ ತಾವು ಏನು ಮಾಡಬೇಕೆಂದು ಸತ್ತವರನ್ನು ವಿಚಾರಿಸುವರು. ಜೀವಿಸುವವರು ಸತ್ತವರನ್ನು ಯಾಕೆ ವಿಚಾರಿಸಬೇಕು?”


ಸುಳ್ಳುದೇವರುಗಳ ಆರಾಧನೆ, ಮಾಟಮಂತ್ರ, ದ್ವೇಷ, ಜಗಳ, ಹೊಟ್ಟೆಕಿಚ್ಚು, ಕಡುಕೋಪ, ಸ್ವಾರ್ಥ, ಸಿಟ್ಟು, ಕಕ್ಷಭೇದ,


ಸೌಲನು ಯೆಹೋವನಿಗೆ ಅವಿಧೇಯನಾಗಿದ್ದರಿಂದ ಸತ್ತನು. ಅವನು ಯೆಹೋವನ ಮಾತನ್ನು ಕೇಳದೆ ಹೋದನು.


ಕಡೆಯದಾಗಿ, ಸೌಲನು ತನ್ನ ಸೇನಾಧಿಪತಿಗಳಿಗೆ, “ಸತ್ತವರ ಆತ್ಮಗಳೊಂದಿಗೆ ಮಾತನಾಡಬಲ್ಲ ಒಬ್ಬ ಮಾಂತ್ರಿಕ ಹೆಂಗಸನ್ನು ಕಂಡುಹಿಡಿಯಿರಿ. ಈ ಯುದ್ಧದಲ್ಲಿ ಏನಾಗುವುದೆಂಬುದನ್ನು ನಾನು ಹೋಗಿ ಅವಳನ್ನು ಕೇಳುತ್ತೇನೆ” ಎಂದು ಹೇಳಿದನು. ಅವನ ಅಧಿಕಾರಿಗಳು, “ಏಂದೋರಿನಲ್ಲಿ ಒಬ್ಬ ಬೇತಾಳಿಕಳಿದ್ದಾಳೆ” ಎಂದು ಉತ್ತರಿಸಿದರು.


ಹಣದಾಸೆಯು ಎಲ್ಲಾ ವಿಧವಾದ ಕೆಟ್ಟತನಕ್ಕೆ ಮೂಲವಾಗುತ್ತದೆ. ಕೆಲವು ಜನರು ಹೆಚ್ಚುಹೆಚ್ಚು ಹಣವನ್ನು ಗಳಿಸಿಕೊಳ್ಳುವುದಕ್ಕಾಗಿ ಸತ್ಯೋಪದೇಶವನ್ನು ತೊರೆದುಬಿಟ್ಟಿದ್ದಾರೆ. ಆದರೆ ಅವರು ತಮ್ಮನ್ನು ತಾವೇ ಹೆಚ್ಚು ವೇದನೆಗೆ ಗುರಿಪಡಿಸಿಕೊಂಡಿದ್ದಾರೆ.


ಯನ್ನ ಮತ್ತು ಯಂಬ್ರರನ್ನು ನೆನಪುಮಾಡಿಕೊ. ಅವರು ಮೋಶೆಯನ್ನು ವಿರೋಧಿಸಿದರು. ಈ ಜನರೂ ಅವರಂತೆಯೇ. ಅವರು ಸತ್ಯವನ್ನು ವಿರೋಧಿಸುತ್ತಾರೆ. ಆ ಜನರ ಆಲೋಚನೆಗಳೆಲ್ಲ ಗಲಿಬಿಲಿಗೊಂಡಿವೆ. ಅವರು ನಂಬಿಕೆಯನ್ನು ಅನುಸರಿಸುವ ತಮ್ಮ ಪ್ರಯತ್ನದಲ್ಲಿ ಸೋತುಹೋಗಿದ್ದಾರೆ.


ಹೀಗೆ ಆಕೆ ಅನೇಕ ದಿನಗಳವರೆಗೆ ಮಾಡಿದಳು. ಇದರಿಂದ ಬೇಸರಗೊಂಡ ಪೌಲನು ಹಿಂತಿರುಗಿ, ಆ ಆತ್ಮಕ್ಕೆ, “ಅವಳನ್ನು ಬಿಟ್ಟು ಹೋಗಬೇಕೆಂದು ಯೇಸು ಕ್ರಿಸ್ತನ ಹೆಸರಿನಲ್ಲಿ ನಿನಗೆ ಆಜ್ಞಾಪಿಸುತ್ತೇನೆ!” ಎಂದು ಹೇಳಿದನು. ಆ ಕೂಡಲೇ ಆ ಆತ್ಮವು ಹೊರಬಂದಿತು.


ನದಿಯ ಸಮೀಪದಲ್ಲಿ ವಿಶೇಷವಾದ ಪ್ರಾರ್ಥನಾ ಸ್ಥಳವನ್ನು ನಾವು ಕಾಣಬಹುದೆಂದು ಆಲೋಚಿಸಿಕೊಂಡು ಸಬ್ಬತ್ ದಿನದಂದು ನದಿಯ ಬಳಿಗೆ ಹೋಗಲು ನಗರದ್ವಾರದಿಂದ ಹೊರಗೆ ಹೋದೆವು. ಕೆಲವು ಸ್ತ್ರೀಯರು ಅಲ್ಲಿ ಸೇರಿ ಬಂದಿದ್ದರು. ಆದ್ದರಿಂದ ನಾವು ಕುಳಿತುಕೊಂಡು ಅವರೊಂದಿಗೆ ಮಾತಾಡಿದೆವು.


ಸಮುವೇಲನು ಮರಣಹೊಂದಿದನು. ಸಮುವೇಲನ ಮರಣಕ್ಕಾಗಿ ಇಸ್ರೇಲರೆಲ್ಲಾ ತಮ್ಮ ಸಂತಾಪವನ್ನು ಸೂಚಿಸಿದರು. ಅವರು ಸಮುವೇಲನನ್ನು ಅವನ ಊರಾದ ರಾಮದಲ್ಲಿ ಸಮಾಧಿಮಾಡಿದರು. ಸೌಲನು ಈ ಮೊದಲು, ಸತ್ತವರ ಆತ್ಮದೊಂದಿಗೆ ಮಾತನಾಡುವವರನ್ನೂ ಜ್ಯೋತಿಷಿಗಳನ್ನೂ ಬಲಾತ್ಕಾರದಿಂದ ಇಸ್ರೇಲಿನಿಂದ ಓಡಿಸಿದ್ದನು.


ಆ ಸುಳ್ಳುಬೋಧಕರಿಗೆ ಬೇಕಾಗಿರುವುದು ಕೇವಲ ನಿಮ್ಮ ಹಣವಷ್ಟೆ. ಆದ್ದರಿಂದ ಅವರು ನಿಜವಲ್ಲದ ಸಂಗತಿಗಳನ್ನು ನಿಮಗೆ ಹೇಳಿ ನಿಮ್ಮನ್ನು ಬಳಸಿಕೊಳ್ಳುತ್ತಾರೆ. ಆದರೆ ಬಹಳ ಹಿಂದಿನಿಂದಲೇ ಆ ಸುಳ್ಳುಬೋಧಕರ ವಿರುದ್ಧವಾದ ತೀರ್ಪು ಸಿದ್ಧವಾಗಿದೆ. ಅವರನ್ನು ನಾಶಪಡಿಸುವಾತನಿಂದ (ದೇವರಿಂದ) ಅವರು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ.


ಅಲ್ಲಿ ದೇಮೇತ್ರಿಯನೆಂಬ ಒಬ್ಬ ವ್ಯಕ್ತಿಯಿದ್ದನು. ಅವನು ಅಕ್ಕಸಾಲಿಗನಾಗಿದ್ದನು. ಅರ್ತೆಮಿ ದೇವತೆಯ ಗುಡಿಯಾಕಾರದಲ್ಲಿ ಬೆಳ್ಳಿಯಿಂದ ಚಿಕ್ಕಚಿಕ್ಕ ಗುಡಿಗಳನ್ನು ಅವನು ತಯಾರಿಸುತ್ತಿದ್ದನು. ಈ ಕಸುಬನ್ನು ಮಾಡುತ್ತಿದ್ದ ಜನರು ಬಹಳವಾಗಿ ಹಣ ಸಂಪಾದಿಸಿದರು.


“ಸತ್ತವರಲ್ಲಿ ವಿಚಾರಿಸುವವರ ಮತ್ತು ಬೇತಾಳಿಕರ ಬಳಿಗೆ ಹೋಗುವ ಯಾವುದೇ ವ್ಯಕ್ತಿಯಾದರೂ ಸರಿಯೇ ಅವನಿಗೆ ನಾನು ವಿರುದ್ಧವಾಗಿರುವೆನು. ಆ ವ್ಯಕ್ತಿ ನನಗೆ ಅಪನಂಬಿಗಸ್ತನಾಗಿದ್ದಾನೆ. ಆದ್ದರಿಂದ ನಾನು ಅವನನ್ನು ಅವನ ಕುಲದಿಂದ ತೆಗೆದುಹಾಕುವೆನು.


“ಸತ್ತವರಲ್ಲಿ ವಿಚಾರಿಸುವವರು ಅಥವಾ ಬೇತಾಳಿಕರು, ಪುರುಷರಾಗಲಿ ಸ್ತ್ರೀಯರಾಗಲಿ ಆಗಿದ್ದರೂ, ಅವರಿಗೆ ಮರಣಶಿಕ್ಷೆಯಾಗಬೇಕು. ಜನರು ಅವರನ್ನು ಕಲ್ಲೆಸೆದು ಕೊಲ್ಲಬೇಕು. ಅವರ ಮರಣಕ್ಕೆ ಅವರೇ ಜವಾಬ್ದಾರರಾಗಿದ್ದಾರೆ.”


ಮನಸ್ಸೆಯು ತನ್ನ ಮಗನನ್ನು ಆಹುತಿಕೊಟ್ಟು ಅವನನ್ನು ಯಜ್ಞವೇದಿಕೆಯ ಮೇಲೆ ಹೋಮಮಾಡಿದನು. ಮನಸ್ಸೆಯು ಭವಿಷ್ಯತ್ಕಾಲವನ್ನು ಅರಿಯಲು ಅನೇಕ ಮಾರ್ಗಗಳಲ್ಲಿ ಪ್ರಯತ್ನಿಸುತ್ತಿದ್ದನು. ಅವನು ಪ್ರೇತಾತ್ಮಗಳನ್ನು ವಶಪಡಿಸಿಕೊಂಡಿರುವ ಮಾಂತ್ರಿಕರನ್ನು ಮತ್ತು ತಾಂತ್ರಿಕರನ್ನು ಭೇಟಿಮಾಡಿದನು. ಯೆಹೋವನು ಕೆಟ್ಟದ್ದೆಂದು ಹೇಳಿದ ಅನೇಕಾನೇಕ ಕಾರ್ಯಗಳನ್ನು ಮನಸ್ಸೆಯು ಮಾಡಿದನು. ಯೆಹೋವನು ಕೋಪಗೊಳ್ಳಲು ಇದು ಕಾರಣವಾಯಿತು.


ಇದನ್ನು ಕಂಡ ಅವಳ ಯಜಮಾನರು ಈಗ ಆಕೆಯಿಂದ ಹಣಗಳಿಸಲು ಸಾಧ್ಯವಿಲ್ಲವೆಂದು ಅರಿತುಕೊಂಡರು. ಆದ್ದರಿಂದ ಅವರು ಪೌಲ ಸೀಲರನ್ನು ಹಿಡಿದು ಪಟ್ಟಣದ ನ್ಯಾಯಸ್ಥಾನಕ್ಕೆ ಎಳೆದುಕೊಂಡು ಹೋದರು. ನಗರಾಧಿಕಾರಿಗಳು ಅಲ್ಲಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು