Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 16:33 - ಪರಿಶುದ್ದ ಬೈಬಲ್‌

33 ಆಗ ಮಧ್ಯರಾತ್ರಿ ಕಳೆದಿತ್ತು. ಆದರೂ ಅವನು ಪೌಲ ಸೀಲರನ್ನು ಕರೆದೊಯ್ದು ಅವರ ಗಾಯಗಳನ್ನು ತೊಳೆದನು. ಬಳಿಕ ಅವನು ಮತ್ತು ಅವನ ಮನೆಯವರೆಲ್ಲರೂ ದೀಕ್ಷಾಸ್ನಾನ ಮಾಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಆ ಮೇಲೆ ಅವನು ರಾತ್ರಿಯ ಅದೇ ಗಳಿಗೆಯಲ್ಲಿ ಅವರನ್ನು ಕರೆದುಕೊಂಡು ಹೋಗಿ ಅವರ ಗಾಯಗಳನ್ನು ತೊಳೆದು ಕೂಡಲೆ ತಾನೂ ತನ್ನವರೆಲ್ಲರ ಸಹಿತವಾಗಿ ದೀಕ್ಷಾಸ್ನಾನ ಮಾಡಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ರಾತ್ರಿಯ ವೇಳೆಯಲ್ಲೇ ಸೆರೆಮನೆಯ ಅಧಿಕಾರಿ ಅವರನ್ನು ಕರೆದುಕೊಂಡು ಹೋಗಿ ಅವರ ಗಾಯಗಳನ್ನು ತೊಳೆದನು. ಅನಂತರ ಅವನೂ ಅವನ ಕುಟುಂಬದವರೂ ದೀಕ್ಷಾಸ್ನಾನವನ್ನು ಪಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಅವರನ್ನು ಕರಕೊಂಡುಹೋಗಿ ಅವರ ಗಾಯಗಳನ್ನು ತೊಳೆದು ಕೂಡಲೆ ತಾನು ತನ್ನವರೆಲ್ಲರ ಸಹಿತವಾಗಿ ದೀಕ್ಷಾಸ್ನಾನಮಾಡಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಆ ಅಧಿಕಾರಿ, ರಾತ್ರಿಯ ಅದೇ ಗಳಿಗೆಯಲ್ಲಿ ಪೌಲ, ಸೀಲರನ್ನು ಕರೆದುಕೊಂಡು ಹೋಗಿ, ಅವರ ಗಾಯಗಳನ್ನು ತೊಳೆದನು. ಆಮೇಲೆ ಅವನೂ ಅವನ ಮನೆಯವರೆಲ್ಲರೂ ದೀಕ್ಷಾಸ್ನಾನವನ್ನು ಹೊಂದಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ತನ್ನಾ ಅರ್ದಿರಾತ್ ಕಳದಲ್ಲೊ ಯೆಳ್ ಹೊಲ್ಲೊ, ಪಾವ್ಲುಕ್ ಅನಿ ಸಿಲಾಸಾಕ್ ಬಲ್ವುನ್ ನ್ಹೆವ್ನ್ ಅಧಿಕಾರಿನ್ ತೆಂಚಿ ದುಖ್ಖಾ ಸಗ್ಳಿ ಧುವ್ನ್ ತೆಚ್ಯಾ ಮಾನಾ ಅಪ್ಲ್ಯಾ ಘರಾತ್ಲ್ಯಾ ಸಗ್ಳ್ಯಾ ಲೊಕಾಕ್ನಿ ಘೆವ್ನ್ ತೆಂಚ್ಯಾಕ್ನಾ ಬಾಲ್ತಿಮ್ ಕರ್ಸುನ್ ಘೆಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 16:33
14 ತಿಳಿವುಗಳ ಹೋಲಿಕೆ  

(ಸ್ತೆಫನನ ಮನೆಯವರಿಗಲ್ಲದೆ ಬೇರೆ ಯಾರಿಗೂ ದೀಕ್ಷಾಸ್ನಾನ ಮಾಡಿಸಿದಂತೆ ನನಗೆ ತೋರುವುದಿಲ್ಲ.)


ಆಕೆ ಮತ್ತು ಆಕೆಯ ಮನೆಯಲ್ಲಿ ವಾಸವಾಗಿದ್ದ ಎಲ್ಲಾ ಜನರು ದೀಕ್ಷಾಸ್ನಾನ ಮಾಡಿಸಿಕೊಂಡರು. ಆಕೆಯು, “ನಾನು ಪ್ರಭು ಯೇಸುವಿನಲ್ಲಿ ನಿಜವಾದ ವಿಶ್ವಾಸಿಯೆಂದು ನೀವು ಯೋಚಿಸುವುದಾಗಿದ್ದರೆ, ನನ್ನ ಮನೆಗೆ ಬಂದು ತಂಗಿರಿ” ಎಂದು ಕೇಳಿಕೊಂಡು ನಮ್ಮನ್ನು ಒತ್ತಾಯ ಮಾಡಿದಳು.


ಸುಮಾರು ಮಧ್ಯರಾತ್ರಿಯಲ್ಲಿ ಪೌಲ ಸೀಲರು ಪ್ರಾರ್ಥನೆ ಮಾಡುತ್ತಾ ದೇವರಿಗೆ ಸ್ತುತಿಗೀತೆಗಳನ್ನು ಹಾಡುತ್ತಾ ಇದ್ದರು. ಇತರ ಕೈದಿಗಳೆಲ್ಲರೂ ಆಲಿಸುತ್ತಿದ್ದರು.


ನನ್ನ ಸಹೋದರ ಸಹೋದರಿಯರೇ, ನೀವು ಸ್ವತಂತ್ರರಾಗಬೇಕೆಂದು ದೇವರು ನಿಮ್ಮನ್ನು ಕರೆದಿದ್ದಾನೆ. ಆದರೆ ಪಾಪಮಯವಾದ ನಿಮ್ಮ ಸ್ವಭಾವವನ್ನು ಮೆಚ್ಚಿಸುವುದಕ್ಕಾಗಿ ನಿಮ್ಮ ಸ್ವತಂತ್ರವನ್ನು ನೆಪಮಾಡಿಕೊಳ್ಳಬೇಡಿ. ಆದರೆ ಪ್ರೀತಿಯಿಂದ ಒಬ್ಬರ ಸೇವೆಯನ್ನೊಬ್ಬರು ಮಾಡಿರಿ.


ಒಬ್ಬನು ಕ್ರಿಸ್ತ ಯೇಸುವಿನಲ್ಲಿರುವಾಗ ಸುನ್ನತಿ ಹೊಂದಿದ್ದಾನೋ ಇಲ್ಲವೋ ಎಂಬುದು ಮುಖ್ಯವಲ್ಲ. ಮುಖ್ಯವಾದದ್ದೇನೆಂದರೆ ಪ್ರೀತಿಯಿಂದ ಕಾರ್ಯನಡೆಸುವ ನಂಬಿಕೆ.


ಬಳಿಕ ಸೆರೆಮನೆಯ ಅಧಿಕಾರಿಗೆ, “ಅವರನ್ನು ಬಹು ಎಚ್ಚರಿಕೆಯಿಂದ ಕಾಯಿರಿ!” ಎಂದು ಆಜ್ಞಾಪಿಸಿದರು.


ಯೇಸು, “ಈ ಮನುಷ್ಯನು ಒಳ್ಳೆಯವನೇ ಸರಿ. ಇವನು ನಿಜವಾಗಿಯೂ ಅಬ್ರಹಾಮನ ಕುಟುಂಬಕ್ಕೆ ಸೇರಿದ್ದಾನೆ. ಇಂದೇ ಈ ಮನೆಗೆ ರಕ್ಷಣೆ ಆಯಿತು.


ಯೆಹೋವನ ಚಿತ್ತಕ್ಕನುಸಾರವಾಗಿ ಜೀವಿಸುವವನು ತನ್ನ ವೈರಿಗಳೊಡನೆಯೂ ಸಮಾಧಾನದಿಂದಿರುವನು.


ಜನರು ತಾವು ಮಾಡಿದ ಪಾಪಗಳನ್ನು ಒಪ್ಪಿಕೊಂಡ ಮೇಲೆ ಯೋಹಾನನು ಅವರಿಗೆ ಜೋರ್ಡನ್ ನದಿಯಲ್ಲಿ ದೀಕ್ಷಾಸ್ನಾನ ಕೊಡುತ್ತಿದ್ದನು.


ಅವನಿಗೂ ಅವನ ಮನೆಯವರೆಲ್ಲರಿಗೂ ಪ್ರಭುವಿನ ಸಂದೇಶವನ್ನು ತಿಳಿಸಿದರು.


ಆ ನೀರು ಈಗ ನಿಮ್ಮನ್ನು ರಕ್ಷಿಸುತ್ತಿರುವ ದೀಕ್ಷಾಸ್ನಾನದಂತಿದೆ. ದೀಕ್ಷಾಸ್ನಾನವು ಮೈಕೊಳೆಯನ್ನು ತೊಳೆಯುವಂಥದ್ದಲ್ಲ. ಅದು ಪರಿಶುದ್ಧ ಹೃದಯ ಬೇಕೆಂದು ವಿಜ್ಞಾಪಿಸಿಕೊಳ್ಳುವಂಥದಾಗಿದೆ. ಯೇಸು ಕ್ರಿಸ್ತನು ಸಾವಿನಿಂದ ಎದ್ದುಬಂದದ್ದರಿಂದ ಅದು ನಿಮ್ಮನ್ನು ರಕ್ಷಿಸುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು