ಅಪೊಸ್ತಲರ ಕೃತ್ಯಗಳು 16:36 - ಪರಿಶುದ್ದ ಬೈಬಲ್36 ಸೆರೆಮನೆಯ ಅಧಿಕಾರಿಯು ಪೌಲನಿಗೆ, “ನಮ್ಮ ನಾಯಕರು ನಿಮ್ಮನ್ನು ಬಿಡುಗಡೆ ಮಾಡಬೇಕೆಂದು ಸೈನಿಕರ ಮೂಲಕ ಹೇಳಿ ಕಳುಹಿಸಿದ್ದಾರೆ. ಈಗ ನೀವು ಸಮಾಧಾನದಿಂದ ಹೋಗಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಸೆರೆಮನೆಯ ಯಜಮಾನನು ಈ ಮಾತನ್ನು ಪೌಲನಿಗೆ ತಿಳಿಸಿ; “ಅಧಿಕಾರಿಗಳು ನಿಮ್ಮನ್ನು ಬಿಟ್ಟುಬಿಡಬೇಕೆಂದು ಹೇಳಿಕಳುಹಿಸಿದ್ದಾರೆ, ಆದುದರಿಂದ ಈಗ ನೀವು ಸಮಾಧಾನದಿಂದ ಹೊರಟುಹೋಗಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಸೆರೆಮನೆಯ ಅಧಿಕಾರಿ ಪೌಲನ ಬಳಿಗೆ ಬಂದು, “ನ್ಯಾಯಾಧಿಪತಿಗಳು ನಿಮ್ಮನ್ನು ಬಿಡುಗಡೆಮಾಡುವಂತೆ ಹೇಳಿಕಳುಹಿಸಿದ್ದಾರೆ; ನೀವು ನೆಮ್ಮದಿಯಿಂದ ಹೊರಟುಹೋಗಬಹುದು,” ಎಂದು ವರದಿಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಸೆರೇಯಜಮಾನನು ಈ ಮಾತನ್ನು ಪೌಲನಿಗೆ ತಿಳಿಸಿ - ಅಧಿಪತಿಗಳು ನಿಮ್ಮನ್ನು ಬಿಟ್ಟುಬಿಡಬೇಕೆಂದು ಹೇಳಿಕಳುಹಿಸಿದ್ದಾರೆ, ಆದದರಿಂದ ಈಗ ನೀವು ಸಮಾಧಾನದಿಂದ ಹೊರಟುಹೋಗಿರಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಸೆರೆಮನೆಯ ಅಧಿಕಾರಿ ಪೌಲನಿಗೆ, “ನಿನ್ನನ್ನು ಸೀಲನನ್ನು ಬಿಟ್ಟುಬಿಡಲು ನ್ಯಾಯಾಧಿಪತಿಗಳು ಕಳುಹಿಸಿದ್ದಾರೆ. ಈಗ ನೀವು ಸಮಾಧಾನದಿಂದ ಹೋಗಬಹುದು,” ಎಂದು ಪ್ರಕಟಿಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್36 ತನ್ನಾ ಬಂಧಿಖಾನ್ಯಾಚ್ಯಾ ಅಧಿಕಾರಿನ್ ಪಾವ್ಲುಕ್ ಅನಿ ಸಿಲಾಸಾಕ್ ಅಮ್ಚ್ಯಾ ಮುಖಂಡಾನಿ ಸೈನಿಕಾಕ್ನಾ ತುಮ್ಕಾ ಸುಟ್ಕಾ ಕರುಚೆ ಮನುನ್ ಸಾಂಗುನ್ ಧಾಡ್ಲಾ ತುಮಿ ಸಮಾಧಾನಾನ್ ಜಾವಾ ಮನುನ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿ |