Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 17:12 - ಪರಿಶುದ್ದ ಬೈಬಲ್‌

12 ಈ ಯೆಹೂದ್ಯರಲ್ಲಿ ಅನೇಕರು ನಂಬಿದರು. ಅತಿ ಪ್ರಮುಖರಾದ ಗ್ರೀಕ್ ಸ್ತ್ರೀಯರು ಮತ್ತು ಪುರುಷರು ನಂಬಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಹೀಗಿರಲಾಗಿ ಅವರಲ್ಲಿ ಕುಲೀನರಾದ ಅನೇಕ ಗ್ರೀಕ್ ಹೆಂಗಸರು, ಗಂಡಸರು ನಂಬಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅವರಲ್ಲಿ ಅನೇಕರು ವಿಶ್ವಾಸಿಗಳಾದರು. ಅನೇಕ ಗ್ರೀಕ್ ಕುಲೀನ ಸ್ತ್ರೀಯರೂ ಪುರುಷರೂ ವಿಶ್ವಾಸಿಗಳಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಹೀಗಿರಲಾಗಿ ಅವರಲ್ಲಿ ಬಹಳ ಮಂದಿ ನಂಬಿದರು; ಅದಲ್ಲದೆ ಕುಲೀನರಾದ ಗ್ರೀಕ್‍ಹೆಂಗಸರಲ್ಲಿಯೂ ಗಂಡಸರಲ್ಲಿಯೂ ಅನೇಕರು ನಂಬಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆದ್ದರಿಂದ ಅವರಲ್ಲಿ ಅನೇಕರು ವಿಶ್ವಾಸ ಹೊಂದಿದರು. ಅನೇಕ ಗ್ರೀಕ್ ಪುರುಷರೂ ಪ್ರಮುಖ ಸ್ತ್ರೀಯರೂ ವಿಶ್ವಾಸವನ್ನಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಹ್ಯಾ ಜುದೆವಾಂತ್ನಿ ಲೈ ಲೊಕಾನಿ ವಿಶ್ವಾಸ್ ಕರ್‍ಲ್ಯಾನಿ, ತ್ಯಾತುರ್ರ್ಬಿ ಲೈ ಪ್ರಮುಖ್ ಹೊವ್ನ್ ಹೊತ್ತ್ಯಾ ಗ್ರಿಕಾಂಚ್ಯಾ ಬಾಯ್ಕಾಮಾನ್ಸಾನಿ ಅನಿ ಘೊವ್ಮಾನ್ಸಾನಿ ದೆವಾಚೆರ್ ವಿಶ್ವಾಸ್ ಕರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 17:12
13 ತಿಳಿವುಗಳ ಹೋಲಿಕೆ  

ಪ್ರತಿಯೊಂದನ್ನು ಸ್ಪಷ್ಟವಾಗಿ ತೋರಿಸುವಂಥದ್ದೇ ಬೆಳಕು. ಆದ್ದರಿಂದಲೇ ಹೀಗೆ ಬರೆದದೆ: “ನಿದ್ರೆಮಾಡುವವನೇ, ಎಚ್ಚರವಾಗು! ಸತ್ತವರನ್ನು ಬಿಟ್ಟು ಎದ್ದೇಳು, ಕ್ರಿಸ್ತನು ನಿನ್ನ ಮೇಲೆ ಪ್ರಕಾಶಿಸುವನು.”


ಆದರೆ ಯೆಹೂದ್ಯರು ಕೆಲವು ಧಾರ್ಮಿಕ ಸ್ತ್ರೀಯರನ್ನೂ ನಗರದ ನಾಯಕರನ್ನೂ ಪ್ರಚೋಧಿಸಿ, ಪೌಲ ಬಾರ್ನಬರ ಮೇಲೆ ಅವರು ಕೋಪಗೊಳ್ಳುವಂತೆಯೂ ಅವರಿಗೆ ವಿರೋಧಿಗಳಾಗುವಂತೆಯೂ ಮಾಡಿ ಪೌಲ ಬಾರ್ನಬರನ್ನು ಪಟ್ಟಣದಿಂದ ಹೊರಗಟ್ಟಿಸಿದರು.


ಸಹೋದರ ಸಹೋದರಿಯರೇ, ದೇವರು ನಿಮ್ಮನ್ನು ಕರೆದಾಗ ನೀವು ಹೇಗಿದ್ದಿರಿ ಎಂದು ಜ್ಞಾಪಿಸಿಕೊಳ್ಳಿರಿ. ಲೋಕದ ಎಣಿಕೆಯಲ್ಲಿ ನಿಮ್ಮಲ್ಲಿ ಅನೇಕರು ಜ್ಞಾನಿಗಳಾಗಿರಲಿಲ್ಲ; ಅಧಿಕಾರಿಗಳಾಗಿರಲಿಲ್ಲ; ಪ್ರಾಮುಖ್ಯವಾದ ಕುಟುಂಬಗಳಿಗೆ ಸೇರಿದವರಾಗಿರಲಿಲ್ಲ.


ಪೌಲ ಬಾರ್ನಬರು ಇಕೋನಿಯಾ ಪಟ್ಟಣಕ್ಕೆ ಹೋದರು. (ಪ್ರತಿಯೊಂದು ಪಟ್ಟಣದಲ್ಲಿಯೂ ಅವರು ಮಾಡುತ್ತಿದ್ದಂತೆ) ಇಲ್ಲಿಯೂ ಯೆಹೂದ್ಯರ ಸಭಾಮಂದಿರದೊಳಗೆ ಹೋಗಿ ಜನರಿಗೆ ಬೋಧಿಸಿದರು. ಪೌಲ ಬಾರ್ನಬರ ಅಮೋಘ ಬೋಧನೆಯನ್ನು ಕೇಳಿ ಅನೇಕ ಯೆಹೂದ್ಯರು ಮತ್ತು ಗ್ರೀಕರು ನಂಬಿಕೊಂಡರು.


ಆದ್ದರಿಂದ ಎಲ್ಲಾ ನೀಚತನವನ್ನೂ ದುಷ್ಟತನವನ್ನೂ ನಿಮ್ಮ ಜೀವನದಿಂದ ದೂರತಳ್ಳಿರಿ. ನಿಮ್ಮ ಹೃದಯದಲ್ಲಿ ಬೇರೂರಿರುವ ದೇವರ ವಾಕ್ಯವನ್ನು ದೀನತೆಯಿಂದ ಒಪ್ಪಿಕೊಳ್ಳಿರಿ. ಅದು ನಿಮ್ಮ ಆತ್ಮಗಳನ್ನು ರಕ್ಷಿಸುತ್ತದೆ.


ಐಶ್ವರ್ಯವಂತನಾಗಿರುವ ವಿಶ್ವಾಸಿಯೂ ಹೆಮ್ಮೆಪಡಬೇಕು. ಏಕೆಂದರೆ ಆತ್ಮಿಕ ವಿಷಯದಲ್ಲಿ ಅವನಿಗಿರುವ ಬಡತನವನ್ನು ದೇವರು ಅವನಿಗೆ ತೋರಿಸಿಕೊಟ್ಟಿದ್ದಾನೆ. ಐಶ್ವರ್ಯವಂತನು ಹುಲ್ಲಿನ ಹೂವಿನಂತೆ ಗತಿಸುವನು.


ಆದರೆ ಪೌಲ ಬಾರ್ನಬರು ಬಹು ಧೈರ್ಯದಿಂದ ಮಾತಾಡಿ, “ನಾವು ದೇವರ ಸಂದೇಶವನ್ನು ಯೆಹೂದ್ಯರಾದ ನಿಮಗೆ ಮೊದಲು ಹೇಳಬೇಕು. ಆದರೆ ನೀವು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ಎಣಿಸಿಕೊಂಡು ತಿರಸ್ಕರಿಸುತ್ತಿದ್ದೀರಿ. ಆದ್ದರಿಂದ ನಾವು ಅನ್ಯಧರ್ಮದವರ ಬಳಿಗೆ ಹೋಗುತ್ತೇವೆ!


ದೇವರು ಅಪೇಕ್ಷಿಸುವುದನ್ನು ಮಾಡಬಯಸುವವನಿಗೆ ನನ್ನ ಉಪದೇಶವು ದೇವರಿಂದ ಬಂದದ್ದೇ ಹೊರತು ನನ್ನ ಸ್ವಂತದ್ದಲ್ಲವೆಂದು ಗೊತ್ತಾಗುವುದು.


ಅರಿಮಥಾಯ ಊರಿನ ಯೋಸೇಫ ಎಂಬವನು ಪಿಲಾತನ ಬಳಿಗೆ ಹೋಗಿ, ಯೇಸುವಿನ ದೇಹವನ್ನು ತನಗೆ ಕೊಡಬೇಕೆಂದು ಧೈರ್ಯದಿಂದ ಕೇಳಿದನು. ಯೋಸೇಫನು ಯೆಹೂದ್ಯರ ಸಮಿತಿಯಲ್ಲಿ ಒಬ್ಬ ಮುಖ್ಯ ಸದಸ್ಯನಾಗಿದ್ದನು. ದೇವರರಾಜ್ಯ ಬರಲೆಂದು ಬಯಸಿದ ಜನರಲ್ಲಿ ಇವನೂ ಒಬ್ಬನಾಗಿದ್ದನು.


ಅವರು ದೇವರನ್ನು ಕೊಂಡಾಡುತ್ತಿದ್ದರು ಮತ್ತು ಜನರೆಲ್ಲರೂ ಅವರನ್ನು ಇಷ್ಟಪಡುತ್ತಿದ್ದರು. ಪ್ರತಿದಿನವೂ ಹೆಚ್ಚುಹೆಚ್ಚು ಜನರು ರಕ್ಷಣೆ ಹೊಂದುತ್ತಿದ್ದರು; ಪ್ರಭುವು ಅವರನ್ನೆಲ್ಲಾ ವಿಶ್ವಾಸಿಗಳ ಸಭೆಗೆ ಸೇರಿಸುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು