ಅಪೊಸ್ತಲರ ಕೃತ್ಯಗಳು 17:18 - ಪರಿಶುದ್ದ ಬೈಬಲ್18 ಎಪಿಕೊರಿಯಾ ಮತ್ತು ಸ್ತೋಯಿಕ ತತ್ವಶಾಸ್ತ್ರಜ್ಞರಲ್ಲಿ ಕೆಲವರು ಅವನೊಂದಿಗೆ ವಾದಿಸಿದರು. ಅವರಲ್ಲಿ ಕೆಲವರು, “ಈ ಮನುಷ್ಯನಿಗೆ ತಾನು ಯಾವುದರ ಬಗ್ಗೆ ಮಾತಾಡುತ್ತಿದ್ದೇನೆ ಎಂಬುದೇ ನಿಜವಾಗಿಯೂ ತಿಳಿದಿಲ್ಲ. ಅವನು ಏನು ಹೇಳಲು ಪ್ರಯತ್ನಿಸುತ್ತಿದ್ದಾನೆ?” ಎಂದರು. ಯೇಸುವು ಸತ್ತವರೊಳಗಿಂದ ಜೀವಂತನಾಗಿ ಎದ್ದುಬಂದಿದ್ದಾನೆ ಎಂಬ ಸುವಾರ್ತೆಯನ್ನು ಪೌಲನು ಅವರಿಗೆ ಹೇಳುತ್ತಿದ್ದನು. ಆದ್ದರಿಂದ ಅವರು, “ಕೆಲವು ಬೇರೆ ದೇವರುಗಳ ಬಗ್ಗೆ ಅವನು ನಮಗೆ ಹೇಳುತ್ತಿರುವಂತೆ ತೋರುತ್ತಿದೆ” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಇದಲ್ಲದೆ ಎಪಿಕೂರಿಯನ್ನರು, ಸ್ತೋಯಿಕರು ಎಂಬ ತತ್ವವಿಚಾರಕರಲ್ಲಿ ಕೆಲವರು ಅವನ ಸಂಗಡ ಚರ್ಚೆಮಾಡಿದರು. ಅವರಲ್ಲಿ ಕೆಲವರು; “ಈ ವಾಚಾಳಿ ಏನು ಹೇಳ ಬೇಕೆಂದಿದ್ದಾನೆ?” ಅಂದರು. ಅವನು ಯೇಸುವಿನ ವಿಷಯವಾಗಿ ಮತ್ತು ಸತ್ತವರು ಎದ್ದು ಬರುವರೆಂಬುದರ ಕುರಿತು ಸಾರುತ್ತಿದ್ದುದರಿಂದ; “ಇವನು ಅನ್ಯದೇಶದ ದೇವರುಗಳನ್ನು ಪ್ರಚಾರಮಾಡುವವನಾಗಿ ಕಂಡುಬರುತ್ತಾನೆಂದು” ಬೇರೆ ಕೆಲವರು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಕೆಲವು ಎಪಿಕೂರಿಯ ಮತ್ತು ಸ್ತೋಯಿಕ ತತ್ವಶಾಸ್ತ್ರಜ್ಞರೂ ಕೂಡ ಅವನೊಡನೆ ವಾದಿಸಿದರು. ಕೆಲವರು “ಈ ಬಾಯಿಬಡುಕ ಹೇಳುವುದಾದರೂ ಏನು?” ಎಂದರು. ಪೌಲನು ಯೇಸುಸ್ವಾಮಿಯ ವಿಷಯವಾಗಿಯೂ ಪುನರುತ್ಥಾನದ ವಿಷಯವಾಗಿಯೂ ಬೋಧಿಸುತ್ತಿದ್ದುದರಿಂದ ಮತ್ತೆ ಕೆಲವರು ‘ಇವನು ವಿದೇಶೀಯ ದೇವರುಗಳ ಬಗ್ಗೆ ಮಾತನಾಡುವಂತೆ ಕಾಣುತ್ತದೆ,’ ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಇದಲ್ಲದೆ ಎಪಿಕೂರಿಯರು ಸ್ತೋಯಿಕರು ಎಂಬ ತತ್ವವಿಚಾರಕರಲ್ಲಿ ಕೆಲವರು ಅವನ ಸಂಗಡ ಚರ್ಚೆಮಾಡಿದರು. ಅವರಲ್ಲಿ ಕೆಲವರು - ಈ ಮಾತಾಳಿ ಏನು ಹೇಳಬೇಕೆಂದಿದ್ದಾನೆ? ಅಂದರು. ಅವನು ಯೇಸುವಿನ ವಿಷಯವಾಗಿಯೂ ಸತ್ತವರು ಎದ್ದುಬರುವರೆಂಬುವ ವಿಷಯವಾಗಿಯೂ ಸಾರುತ್ತಿದ್ದದರಿಂದ - ಇವನು ಅನ್ಯದೇಶದ ದೈವಗಳನ್ನು ಪ್ರಸಿದ್ಧಿಪಡಿಸುವವನಾಗಿ ತೋರುತ್ತಾನೆಂದು ಬೇರೆ ಕೆಲವರು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆದರೆ ಎಪಿಕೂರಿಯರು ಹಾಗೂ ಸ್ತೋಯಿಕರು ಎಂಬ ತತ್ವಜ್ಞಾನಿಗಳಲ್ಲಿ ಸಹ ಕೆಲವರು ಅವನೊಂದಿಗೆ ವಾಗ್ವಾದ ಮಾಡಲು ಪ್ರಾರಂಭಿಸಿ, “ಈ ಬಾಯಿಬಡುಕ ಏನು ಹೇಳಬೇಕೆಂದಿದ್ದಾನೆ?” ಎಂದರು. ಇನ್ನೂ ಕೆಲವರು, “ಅವನು ವಿದೇಶದ ದೇವರುಗಳ ಬಗ್ಗೆ ಪ್ರಸ್ತಾಪಿಸುವಂತೆ ತೋರುತ್ತದೆ,” ಎಂದರು. ಏಕೆಂದರೆ ಅವನು ಯೇಸುವನ್ನು ಮತ್ತು ಪುನರುತ್ಥಾನವನ್ನು ಕುರಿತ ಸುವಾರ್ತೆ ಸಾರುತ್ತಿದ್ದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ಎಪಿ ಕೊರಿಯಾ ಅನಿ ಸ್ಥೊಯಿಕ್ ತತ್ವ್ ಜ್ಞಾನಿತ್ನಿ ಥೊಡ್ಯಾ ಲೊಕಾನಿ ಪಾವ್ಲು ವಾಂಗ್ಡಾ ವಾದ್ ಕರುನ್, ಹ್ಯೊ ಮಾನುಸ್ ದುಶ್ರ್ಯಾ ದೆಶಾಚ್ಯಾ ದೆವಾಚ್ಯಾ ವಿಶಯಾತ್ ಬೊಲುಲ್ಲಾ ಮಟ್ಲ್ಯಾನಿ, ಕಶ್ಯಾಕ್ ಮಟ್ಲ್ಯಾರ್, ತೊ ಜೆಜುಚ್ಯಾ ಪರ್ತುನ್ ಝಿತ್ತೊ ಹೊತಲ್ಯಾ ವಿಶಯಾತ್ ಬೊಲುಲಾಗಲ್ಲೊ. ಅಧ್ಯಾಯವನ್ನು ನೋಡಿ |
ಆದರೆ ಕೆಲವು ಯೆಹೂದ್ಯರು ಬಂದು ಅವನೊಂದಿಗೆ ವಾದಿಸಿದರು. ಈ ಯೆಹೂದ್ಯರು ಸಭಾಮಂದಿರಕ್ಕೆ ಸೇರಿದವರು. ಅದಕ್ಕೆ “ಬಿಡುಗಡೆ ಹೊಂದಿದವರ ಸಭಾಮಂದಿರ” ಎಂದು ಕರೆಯುತ್ತಿದ್ದರು. (ಸಿರೇನ್ ಮತ್ತು ಅಲೆಕ್ಸಾಂಡ್ರಿಯದಿಂದ ಬಂದ ಯೆಹೂದ್ಯರಿಗೋಸ್ಕರವಾಗಿಯೂ ಈ ಸಭಾಮಂದಿರವಿತ್ತು.) ಸಿಲಿಸಿಯ ಮತ್ತು ಏಷ್ಯಾದಿಂದ ಬಂದ ಯೆಹೂದ್ಯರೂ ಅವರೊಂದಿಗಿದ್ದರು. ಅವರೆಲ್ಲರೂ ಬಂದು ಅವನೊಂದಿಗೆ ವಾದಮಾಡಿದರು.