ಅಪೊಸ್ತಲರ ಕೃತ್ಯಗಳು 17:28 - ಪರಿಶುದ್ದ ಬೈಬಲ್28 ನಾವು ಆತನೊಂದಿಗೆ ವಾಸಿಸುತ್ತೇವೆ, ನಡೆಯುತ್ತೇವೆ, ಇರುತ್ತೇವೆ. ನಿಮ್ಮವರೇ ಆದ ಕೆಲವು ಲೇಖಕರು, ‘ನಾವು ಆತನ ಸಂತಾನದವರೇ’ ಎಂದು ಹೇಳಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಏಕೆಂದರೆ ಆತನಲ್ಲಿಯೇ ನಾವು ಜೀವಿಸುತ್ತೇವೆ, ಚಲಿಸುತ್ತೇವೆ ಮತ್ತು ಇರುತ್ತೇವೆ. ನಿಮ್ಮ ಕವಿಗಳಲ್ಲಿ ಕೆಲವರು, ‘ನಾವು ಆತನ ಸಂತಾನದವರೇ’ ಎಂದು ಹೇಳಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಏಕೆಂದರೆ, ‘ನಾವು ಜೀವಿಸುವುದೂ ಚಲಿಸುವುದೂ ಇರುವುದೂ ಅವರಲ್ಲೇ’; ನಿಮ್ಮ ಕವಿಗಳಲ್ಲೇ ಕೆಲವರು ಹೇಳಿರುವಂತೆ, ‘ನಾವು ನಿಜವಾಗಿ ದೇವರ ಮಕ್ಕಳು.’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಆತನಲ್ಲಿಯೇ ನಾವು ಜೀವಿಸುತ್ತೇವೆ, ಚಲಿಸುತ್ತೇವೆ, ಇರುತ್ತೇವೆ. ನಿಮ್ಮ ಕವಿಗಳಲ್ಲಿಯೂ ಕೆಲವರು - ನಾವು ಆತನ ಸಂತಾನದವರೇ ಎಂಬದಾಗಿ ಹೇಳಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಏಕೆಂದರೆ, ‘ನಾವು ಜೀವಿಸುವುದೂ ಚಲಿಸುವುದೂ ಇರುವುದೂ ದೇವರಲ್ಲಿಯೇ.’ ನಿಮ್ಮ ಕವಿಗಳಲ್ಲಿ ಕೆಲವರು ಹೇಳಿರುವಂತೆ, ‘ನಾವು ನಿಜಕ್ಕೂ ದೇವರ ಮಕ್ಕಳೇ ಆಗಿದ್ದೇವೆ.’ ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್28 ಅಮಿ ತೆಚ್ಯಾ ವಾಂಗ್ಡಾ ವಸ್ತಿ ಕರ್ತಾಂವ್ , ಚಲ್ತಾಂವ್ ಅನಿ ಚಿಗರ್ತಾಂವ್, ತುಮ್ಚ್ಯಾತ್ಲ್ಯಾ ಉಲ್ಲ್ಯಾ ಗಿತಾ ಲಿವ್ತಲ್ಯಾ ಮಾನ್ಸಾನಿ ಅಮಿ ತೆಚಿ ಪೊರಾ ಮನುನ್ ಸಾಂಗ್ಲಾತ್. ಅಧ್ಯಾಯವನ್ನು ನೋಡಿ |
ಇಲ್ಲ, ನೀನು ನಮ್ರನಾಗಿರಲಿಲ್ಲ. ಅದಕ್ಕೆ ಪ್ರತಿಯಾಗಿ ನೀನು ಪರಲೋಕದೊಡೆಯನಿಗೆ ವಿರುದ್ಧವಾಗಿ ನಡೆದುಕೊಂಡೆ. ಯೆಹೋವನ ಆಲಯದಿಂದ ಕುಡಿಯುವ ಪಾತ್ರೆಗಳನ್ನು ತರಬೇಕೆಂದು ಆಜ್ಞಾಪಿಸಿದೆ. ನೀನು ಮತ್ತು ನಿನ್ನ ಅಧಿಕಾರಿಗಳು, ನಿನ್ನ ಪತ್ನಿಯರು ಮತ್ತು ನಿನ್ನ ಉಪಪತ್ನಿಯರು ಆ ಪಾತ್ರೆಗಳಲ್ಲಿ ದ್ರಾಕ್ಷಾರಸವನ್ನು ಕುಡಿದಿರಿ. ನೀನು ಬೆಳ್ಳಿ, ಬಂಗಾರ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಸ್ತುತಿಸಿದೆ. ಅವುಗಳಿಗೆ ನೋಡುವ, ಕೇಳಿಸಿಕೊಳ್ಳುವ ಅಥವಾ ಸ್ತೋತ್ರವನ್ನು ತಿಳಿದುಕೊಳ್ಳುವ ಸಾಮರ್ಥ್ಯವಿಲ್ಲ. ಆದರೆ ನಿನ್ನ ಜೀವದ ಮೇಲೆಯೂ ನಿನ್ನ ಆಗುಹೋಗುಗಳ ಮೇಲೆಯೂ ಅಧಿಕಾರವುಳ್ಳ ದೇವರನ್ನು ನೀನು ಸ್ತುತಿಸಲಿಲ್ಲ.