Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 17:31 - ಪರಿಶುದ್ದ ಬೈಬಲ್‌

31 ಪ್ರಪಂಚದ ಜನರೆಲ್ಲರಿಗೂ ನ್ಯಾಯತೀರಿಸುವುದಕ್ಕಾಗಿ ದೇವರು ಒಂದು ದಿನವನ್ನು ಗೊತ್ತುಪಡಿಸಿದ್ದಾನೆ. ಅಂದು ನ್ಯಾಯತೀರಿಸುವುದಕ್ಕಾಗಿ ಆತನು ಒಬ್ಬ ವ್ಯಕ್ತಿಯನ್ನು ಬಹುಕಾಲದ ಹಿಂದೆಯೇ ಆರಿಸಿಕೊಂಡಿದ್ದಾನೆ. ಇದನ್ನು ಎಲ್ಲರಿಗೂ ಖಚಿತಪಡಿಸುವುದಕ್ಕಾಗಿ ಆ ವ್ಯಕ್ತಿಯನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಏಕೆಂದರೆ, ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವುದಕ್ಕೆ ಒಂದು ದಿನವನ್ನು ಗೊತ್ತು ಮಾಡಿದ್ದಾನೆ. ಅವನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ಇದನ್ನು ನಂಬುವುದಕ್ಕೆ ಎಲ್ಲರಿಗೂ ದೃಷ್ಟಾಂತವನ್ನು ಕೊಟ್ಟಿದ್ದಾನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಏಕೆಂದರೆ, ಅವರು ಒಂದು ದಿನವನ್ನು ಗೊತ್ತುಮಾಡಿದ್ದಾರೆ; ಆ ದಿನದಂದು ತಾವು ನೇಮಿಸಿದ ಒಬ್ಬ ವ್ಯಕ್ತಿಯ ಮುಖಾಂತರ ಇಡೀ ಜಗತ್ತಿಗೆ ನ್ಯಾಯನಿರ್ಣಯ ಮಾಡುವರು. ಇದನ್ನು ಎಲ್ಲರಿಗೂ ಖಚಿತಪಡಿಸಲೆಂದೇ ಆ ವ್ಯಕ್ತಿಯನ್ನು ಮರಣದಿಂದ ಪುನರುತ್ಥಾನಗೊಳಿಸಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಯಾಕಂದರೆ ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವದಕ್ಕೆ ಒಂದು ದಿವಸವನ್ನು ಗೊತ್ತುಮಾಡಿದ್ದಾನೆ. ಅವನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ಇದನ್ನು ನಂಬುವದಕ್ಕೆ ಎಲ್ಲರಿಗೂ ಆಧಾರ ಕೊಟ್ಟಿದ್ದಾನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಏಕೆಂದರೆ ದೇವರು ನೇಮಿಸಿದ ಒಬ್ಬರ ಮುಖಾಂತರ ಇಡೀ ಜಗತ್ತಿಗೆ ನೀತಿಗನುಸಾರವಾಗಿ ನ್ಯಾಯತೀರ್ಪು ಮಾಡುವ ಒಂದು ದಿನವನ್ನು ನೇಮಕ ಮಾಡಿದ್ದಾರೆ. ಇದನ್ನು ಎಲ್ಲರಿಗೂ ಖಚಿತ ಪಡಿಸಲೆಂದೇ ಆ ಒಬ್ಬರನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ಜಗಾತ್ಲ್ಯಾ ಹರ್ ಎಕ್ಲ್ಯಾಕ್ಬಿ ಝಡ್ತಿ ಕರುಕ್ ಮನುನ್ ದೆವಾನ್ ದಿಸ್ ವಳಕ್ ಕರುನ್ ಥವಲ್ಲೊ ಹಾಯ್, ತ್ಯಾ ದಿಸಾ ಝಡ್ತಿ ಕರುಕ್ ಮನುನ್ ತೆನಿ ಲೈ ಯೆಳಾಚ್ಯಾ ಅದ್ದಿಚ್ ಎಕ್ ಮಾನ್ಸಾಕ್ ಎಚುನ್ ಘೆಟಲ್ಲೆ ಹಾಯ್, ತೆ ಖರೆ ಕರುಕ್ ಸಾಟ್ನಿ ತೆಕಾ ಮರ್ನಾಕ್ನಾ ಝಿತ್ತೊ ಕರುನ್ ಉಟ್ವುಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 17:31
32 ತಿಳಿವುಗಳ ಹೋಲಿಕೆ  

ಈಗಿರುವ ಆಕಾಶಕ್ಕೂ ಭೂಮಿಗೂ ಅದೇ ದೇವರ ವಾಕ್ಯವು ಆಧಾರವಾಗಿದೆ. ಆಕಾಶ ಮತ್ತು ಭೂಮಿಗಳು ಬೆಂಕಿಯಿಂದ ನಾಶಗೊಳ್ಳಲು ಇಡಲ್ಪಟ್ಟಿವೆ. ದೇವರಿಗೆ ವಿರುದ್ಧವಾಗಿರುವ ಜನರೆಲ್ಲರಿಗೆ ಆಗುವ ನ್ಯಾಯತೀರ್ಪಿನ ದಿನಕ್ಕಾಗಿಯೂ ನಾಶನಕ್ಕಾಗಿಯೂ ಭೂಮ್ಯಾಕಾಶಗಳು ಇಡಲ್ಪಟ್ಟಿವೆ.


ಮನುಷ್ಯರ ಅಂತರಂಗದಲ್ಲಿರುವ ರಹಸ್ಯ ಸಂಗತಿಗಳಿಗೆ ದೇವರು ತೀರ್ಪುಮಾಡುವ ದಿನದಂದು ಇವುಗಳೆಲ್ಲಾ ನೆರವೇರುವವು. ದೇವರು ಯೇಸು ಕ್ರಿಸ್ತನ ಮೂಲಕ ಜನರಿಗೆ ತೀರ್ಪು ಮಾಡುತ್ತಾನೆ ಎಂಬುದಾಗಿ ಸುವಾರ್ತೆಯು ತಿಳಿಸುತ್ತದೆ. ನಾನು ಜನರಿಗೆ ತಿಳಿಸುವುದು ಆ ಸುವಾರ್ತೆಯನ್ನೇ.


ನಾವೆಲ್ಲರೂ ನ್ಯಾಯ ವಿಚಾರಣೆಗಾಗಿ ಕ್ರಿಸ್ತನ ಮುಂದೆ ನಿಂತುಕೊಳ್ಳಲೇಬೇಕು. ಪ್ರತಿಯೊಬ್ಬನು ಇಹಲೋಕದ ದೇಹದಲ್ಲಿ ವಾಸವಾಗಿದ್ದಾಗ ಮಾಡಿದ ಒಳ್ಳೆಯದಕ್ಕಾಗಲಿ ಕೆಟ್ಟದಕ್ಕಾಗಲಿ ಪ್ರತಿಫಲವನ್ನು ಹೊಂದುವನು.


ಯೆಹೋವನ ಎದುರಿನಲ್ಲಿ ಹಾಡಿರಿ, ಯಾಕೆಂದರೆ ಆತನು ಭೂಲೋಕವನ್ನು ಆಳಲು ಬರುತ್ತಿದ್ದಾನೆ. ಆತನು ಪ್ರಪಂಚವನ್ನು ನ್ಯಾಯವಾಗಿ ಆಳುತ್ತಾನೆ. ಆತನು ಜನರನ್ನು ನೀತಿಯಿಂದ ಆಳುತ್ತಾನೆ.


ಆತನು ಭೂನಿವಾಸಿಗಳಿಗೆಲ್ಲಾ ನ್ಯಾಯವಾಗಿ ತೀರ್ಪುಮಾಡುವನು. ಆತನು ಜನಾಂಗಗಳಿಗೆಲ್ಲಾ ಯಥಾರ್ಥವಾಗಿ ತೀರ್ಪುಮಾಡುವನು.


ಆದ್ದರಿಂದ ಸರಿಯಾದ ಸಮಯಕ್ಕಿಂತ ಮೊದಲೇ ತೀರ್ಪುಮಾಡಬೇಡಿ. ಪ್ರಭುವು ಬರುವ ತನಕ ಕಾದುಕೊಂಡಿರಿ. ಕತ್ತಲೆಯಲ್ಲಿ ಅಡಗಿಕೊಂಡಿರುವವುಗಳ ಮೇಲೆ ಆತನು ಬೆಳಕನ್ನು ಬೆಳಗಿಸುವನು. ಮನುಷ್ಯರ ಹೃದಯಗಳ ರಹಸ್ಯವಾದ ಉದ್ದೇಶಗಳನ್ನು ಆತನು ಬಹಿರಂಗಪಡಿಸುವನು. ಆಗ ಪ್ರತಿಯೊಬ್ಬನಿಗೂ ಬರತಕ್ಕ ಹೊಗಳಿಕೆಯು ದೇವರಿಂದಲೇ ಬರುವುದು.


ನೀವು ಕಠಿಣರಾಗಿದ್ದೀರಿ ಮತ್ತು ಮೊಂಡರಾಗಿದ್ದೀರಿ. ಮಾರ್ಪಾಟಾಗಲು ನಿಮಗೆ ಇಷ್ಟವಿಲ್ಲ. ಆದ್ದರಿಂದ ನಿಮಗೆ ಬರಲಿರುವ ದಂಡನೆಯನ್ನು ನೀವು ಹೆಚ್ಚುಹೆಚ್ಚು ಮಾಡಿಕೊಳ್ಳುತ್ತಿದ್ದೀರಿ. ದೇವರು ತನ್ನ ಕೋಪವನ್ನು ತೋರಿಸುವ ದಿನದಲ್ಲಿ ನಿಮಗೆ ಆ ದಂಡನೆಯಾಗುವುದು. ಆ ದಿನದಲ್ಲಿ ದೇವರ ನ್ಯಾಯವಾದ ತೀರ್ಪುಗಳನ್ನು ಜನರು ನೋಡುವರು.


ನಜರೇತಿನ ಯೇಸು ಕ್ರಿಸ್ತನ ಹೆಸರಿನಿಂದ ಈ ಮನುಷ್ಯನಿಗೆ ಗುಣವಾಯಿತೆಂಬುದನ್ನು ನೀವು ಮತ್ತು ಯೆಹೂದ್ಯರೆಲ್ಲರು ತಿಳಿದುಕೊಳ್ಳಬೇಕೆಂದು ನಾನು ಬಯಸುತ್ತೇನೆ! ನೀವು ಯೇಸುವನ್ನು ಶಿಲುಬೆಗೇರಿಸಿದಿರಿ. ದೇವರು ಆತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು. ಈ ಮನುಷ್ಯನು ಕುಂಟನಾಗಿದ್ದನು, ಆದರೆ ಈಗ ಇವನು ಗುಣಹೊಂದಿದ್ದಾನೆ ಮತ್ತು ಯೇಸುವಿನ ಹೆಸರಿನಿಂದ ನಿಮ್ಮ ಮುಂದೆ ನಿಂತುಕೊಳ್ಳಲು ಶಕ್ತನಾಗಿದ್ದಾನೆ!


ಯಾಕೆಂದರೆ ಲೋಕವನ್ನು ಆಳಲು ಯೆಹೋವನು ಬರುತ್ತಿದ್ದಾನೆ. ಆತನು ಲೋಕವನ್ನು ನ್ಯಾಯ ನೀತಿಗಳಿಂದ ಆಳುವನು.


ಜೀವಂತರಾಗಿರುವ ಜನರಿಗೂ ಸತ್ತುಹೋಗಿರುವ ಜನರಿಗೂ ನ್ಯಾಯತೀರಿಸುವಾತನು ಕ್ರಿಸ್ತ ಯೇಸುವೇ. ಆತನು ತನ್ನ ರಾಜ್ಯವನ್ನು ಹೊಂದಿದ್ದಾನೆ. ಆತನು ಮತ್ತೆ ಬರುವನು. ಆದ್ದರಿಂದ ಯೇಸು ಕ್ರಿಸ್ತನ ಮತ್ತು ದೇವರ ಸನ್ನಿಧಿಯಲ್ಲಿ ನಾನು ನಿನಗೆ ಆಜ್ಞಾಪಿಸುವುದೇನೆಂದರೆ,


ನ್ಯಾಯವಿಚಾರಣೆಯ ದಿನದಲ್ಲಿ ಈ ಊರಿನ ಗತಿಯು ಸೊದೋಮ್ ಮತ್ತು ಗೊಮೋರಗಳಿಗಿಂತ ಬಹಳ ಕೆಟ್ಟದ್ದಾಗಿರುವುದು ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಆದ್ದರಿಂದ ದೇವರು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದು ಯೇಸುವನ್ನೇ ಹೊರತು ದಾವೀದನನ್ನಲ್ಲ! ಇದಕ್ಕೆ ನಾವೆಲ್ಲರೂ ಸಾಕ್ಷಿಗಳಾಗಿದ್ದೇವೆ. ನಾವು ಆತನನ್ನು ಕಂಡೆವು!


ಎಪಿಕೊರಿಯಾ ಮತ್ತು ಸ್ತೋಯಿಕ ತತ್ವಶಾಸ್ತ್ರಜ್ಞರಲ್ಲಿ ಕೆಲವರು ಅವನೊಂದಿಗೆ ವಾದಿಸಿದರು. ಅವರಲ್ಲಿ ಕೆಲವರು, “ಈ ಮನುಷ್ಯನಿಗೆ ತಾನು ಯಾವುದರ ಬಗ್ಗೆ ಮಾತಾಡುತ್ತಿದ್ದೇನೆ ಎಂಬುದೇ ನಿಜವಾಗಿಯೂ ತಿಳಿದಿಲ್ಲ. ಅವನು ಏನು ಹೇಳಲು ಪ್ರಯತ್ನಿಸುತ್ತಿದ್ದಾನೆ?” ಎಂದರು. ಯೇಸುವು ಸತ್ತವರೊಳಗಿಂದ ಜೀವಂತನಾಗಿ ಎದ್ದುಬಂದಿದ್ದಾನೆ ಎಂಬ ಸುವಾರ್ತೆಯನ್ನು ಪೌಲನು ಅವರಿಗೆ ಹೇಳುತ್ತಿದ್ದನು. ಆದ್ದರಿಂದ ಅವರು, “ಕೆಲವು ಬೇರೆ ದೇವರುಗಳ ಬಗ್ಗೆ ಅವನು ನಮಗೆ ಹೇಳುತ್ತಿರುವಂತೆ ತೋರುತ್ತಿದೆ” ಎಂದರು.


ದೇವರ ರಾಜ್ಯದ ಶುಭವಾರ್ತೆಯನ್ನು ಲೋಕದಲ್ಲೆಲ್ಲಾ ಪ್ರತಿ ಜನಾಂಗಕ್ಕೂ ಸಾರಲಾಗುವುದು. ಆಗ ಅಂತ್ಯವು ಬರುತ್ತದೆ.


ಮನುಷ್ಯಕುಮಾರನು ದೇವರ ಯೋಜನೆಗನುಸಾರವಾಗಿ ಮರಣಹೊಂದುವನು. ಆದರೆ ಮನುಷ್ಯಕುಮಾರನನ್ನು ಕೊಲ್ಲುವುದಕ್ಕೆ ಒಪ್ಪಿಸಿಕೊಡುವ ವ್ಯಕ್ತಿಗೆ ಬಹಳ ಕೇಡಾಗುವುದು” ಎಂದು ಹೇಳಿದನು.


ಮತ್ತು ಎಲ್ಲಾ ಜನರಿಗೆ ತೀರ್ಪುಮಾಡುವ ಅಧಿಕಾರವನ್ನು ತಂದೆಯು ಮಗನಿಗೂ ಕೊಟ್ಟಿದ್ದಾನೆ. ಏಕೆಂದರೆ ಆ ಮಗನು ಮನುಷ್ಯಕುಮಾರನಾಗಿದ್ದಾನೆ.


ನನ್ನಲ್ಲಿ ನಂಬಿಕೆ ಇಡದಿರುವವನಿಗೆ ಮತ್ತು ನಾನು ಹೇಳುವುದನ್ನು ತಿರಸ್ಕರಿಸುವವನಿಗೆ ತೀರ್ಪುಮಾಡುವಂಥದ್ದು ನಾನು ಆಡಿದ ಮಾತುಗಳೇ. ಅಂತಿಮ ದಿನದಂದು ಅವೇ ಅವನಿಗೆ ತೀರ್ಪುಮಾಡುತ್ತವೆ.


ನಾನು ತಂದೆಯ ಬಳಿಗೆ ಹೋಗುವುದರಿಂದ ನೀತಿಯ ವಿಷಯವಾಗಿಯೂ ಆತನು ಜನರಿಗೆ ನಿರೂಪಿಸುವನು. ಇನ್ನು ಮೇಲೆ ನೀವು ನನ್ನನ್ನು ನೋಡುವುದಿಲ್ಲ.


ಆದರೆ ಅವರು ಪೌಲ ಸೀಲರನ್ನು ಅಲ್ಲಿ ಕಾಣಲಿಲ್ಲ. ಆದ್ದರಿಂದ ಅವರು ಯಾಸೋನನನ್ನೂ ಕೆಲವು ವಿಶ್ವಾಸಿಗಳನ್ನೂ ನಗರಾಧಿಕಾರಿಗಳ ಮುಂದೆ ಎಳೆದುಕೊಂಡು ಬಂದು, “ಈ ಜನರು (ಪೌಲ ಸೀಲರು) ಪ್ರಪಂಚದ ಎಲ್ಲಾ ಕಡೆಗಳಲ್ಲೂ ಗಲಭೆಯನ್ನು ಉಂಟುಮಾಡಿ ಈಗ ಇಲ್ಲಿಗೂ ಬಂದಿದ್ದಾರೆ!


ಯೇಸು ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದಿದ್ದಾನೆ ಎಂಬ ಸಂಗತಿಯನ್ನು ಕೇಳಿದ ಆ ಜನರಲ್ಲಿ ಕೆಲವರು ಅಪಹಾಸ್ಯಮಾಡಿದರು. ಇತರರು, “ಈ ವಿಷಯದ ಬಗ್ಗೆ ನೀನು ಇನ್ನೊಮ್ಮೆ ಹೇಳಬಹುದು, ಆಗ ಕೇಳುತ್ತೇವೆ” ಎಂದು ಹೇಳಿದರು.


ಆ ಸಮಯದಲ್ಲಿ ನಮಗೆ ದೀಕ್ಷಾಸ್ನಾನ, ಹಸ್ತಾರ್ಪಣ, ಸತ್ತವರ ಪುನರುತ್ಥಾನ ಮತ್ತು ನಿತ್ಯವಾದ ನ್ಯಾಯತೀರ್ಪು ಇವುಗಳನ್ನು ಕುರಿತು ಬೋಧಿಸಲಾಯಿತು. ಆದರೆ ಈಗ ನಾವು ಪೂರ್ಣ ತಿಳುವಳಿಕೆಗೆ ಹೋಗುವುದು ಅಗತ್ಯವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು