Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 17:5 - ಪರಿಶುದ್ದ ಬೈಬಲ್‌

5 ಆದರೆ ನಂಬದೆಹೋದ ಯೆಹೂದ್ಯರು ಅಸೂಯೆಗೊಂಡರು. ಅವರು ಪಟ್ಟಣದಲ್ಲಿದ್ದ ಕೆಲವು ಕೆಡುಕರಿಗೆ ಹಣಕೊಟ್ಟು ಕರೆದುಕೊಂಡು ಬಂದರು. ಈ ಕೆಡುಕರು ಅನೇಕ ಜನರನ್ನು ಒಟ್ಟುಗೂಡಿಸಿ, ಪಟ್ಟಣದಲ್ಲಿ ಗಲಭೆ ಮಾಡಿದರು. ಜನರು ಪೌಲ ಸೀಲರನ್ನು ಹುಡುಕುತ್ತಾ ಯಾಸೋನನ ಮನೆಗೆ ಹೋದರು. ಅವರು ಪೌಲ ಸೀಲರನ್ನು ಜನರ ಮುಂದೆ ಹೊರಗೆ ಎಳೆದುಕೊಂಡು ಬರಬೇಕೆಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಂಬದಿರುವ ಯೆಹೂದ್ಯರು ಹೊಟ್ಟೆಕಿಚ್ಚುಪಟ್ಟು ಪೇಟೆಯಲ್ಲಿ ತಿರುಗಾಡುವ ಕೆಲವು ಪುಂಡರನ್ನು ಕರೆದುಕೊಂಡು ಬಂದು ಗುಂಪು ಕೂಡಿಸಿ ಊರಲ್ಲಿ ಗದ್ದಲ ಎಬ್ಬಿಸಿ ಪೌಲ ಮತ್ತು ಸೀಲರನ್ನು ಪಟ್ಟಣದ ಸಭೆ ಎದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯನ್ನು ಮುತ್ತಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆದರೆ ಯೆಹೂದ್ಯರು ಮತ್ಸರದಿಂದ ಕೂಡಿ, ಪುಂಡಪೋಕರಿಗಳನ್ನು ಎತ್ತಿಕಟ್ಟಿ, ಒಂದು ಗುಂಪನ್ನು ಕೂಡಿಸಿದರು. ಪಟ್ಟಣದಲ್ಲೆಲ್ಲಾ ದೊಂಬಿ ಎಬ್ಬಿಸಿದರು. ಪೌಲ ಮತ್ತು ಸೀಲರನ್ನು ಜನರ ಮುಂದೆ ಎಳೆದುತರುವ ಉದ್ದೇಶದಿಂದ ಅವರನ್ನು ಹುಡುಕುತ್ತಾ ಯಾಸೋನ ಎಂಬವನ ಮನೆಯನ್ನು ಮುತ್ತಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೆಹೂದ್ಯರು ಹೊಟ್ಟೇಕಿಚ್ಚುಪಟ್ಟು ಪೇಟೆಯಲ್ಲಿ ತಿರುಗಾಡುವ ಕೆಲವು ಪೋಕರನ್ನು ಕರೆದುಕೊಂಡು ಬಂದು ಗುಂಪುಕೂಡಿಸಿ ಊರಲ್ಲಿ ಗದ್ದಲ ಎಬ್ಬಿಸಿ ಪೌಲ ಸೀಲರನ್ನು ಪಟ್ಟಣದ ಸಭೆಗೆದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯ ಮೇಲೆ ಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆದರೆ ಯೆಹೂದ್ಯರು ಮತ್ಸರದಿಂದ ಕೂಡಿ, ಬೀದಿಗಳಲ್ಲಿ ತಿರುಗಾಡುವ ಕೆಲವು ದುಷ್ಟವ್ಯಕ್ತಿಗಳನ್ನು ಕೂಡಿಸಿ ಪಟ್ಟಣದಲ್ಲಿ ಗಲಭೆ ಎಬ್ಬಿಸಿದರು. ಜನಸಮೂಹದ ಮುಂದೆ ಪೌಲ, ಸೀಲರನ್ನು ಎಳೆದು ತರುವಂತೆ ಅವರನ್ನು ಹುಡುಕುತ್ತಾ ಯಾಸೋನ ಎಂಬುವನ ಮನೆಯನ್ನು ಮುತ್ತಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಖರೆ ಜುದೆವಾಂಚ್ಯಾ ಲೊಕಾಕ್ನಿ ಹೆ ಬಗುನ್ ಕುಸ್ಡೆಪಾನ್ ಹೊಲೆ, ತೆನಿ ಶಾರಾತ್ಲ್ಯಾ ಥೊಡ್ಯಾ ಪಿಧುಡ್ಯಾ ಲೊಕಾಕ್ನಿ ಪೈಸೆ ದಿವ್ನ್ ಬಲ್ವುನ್ ಹಾನುನ್ ಥೈ ಧಾಂದಲ್ ಉಟ್ವುಲ್ಯಾನಿ, ತಿ ಲೊಕಾ ಪಾವ್ಲುಕ್ ಅನಿ ಸಿಲಾಸಾಕ್ ಹುಕ್ಡುನ್ಗೆತ್ ಯೊಸೊನಾಚ್ಯಾ ಘರಾಕ್ ಜಾವ್ನ್ ತೆಂಕಾ ವಡುನ್ ಲೊಕಾಂಚ್ಯಾ ಫಿಡ್ಯಾತ್ ಹಾನುಚೆ ಮನುನ್ ಕರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 17:5
26 ತಿಳಿವುಗಳ ಹೋಲಿಕೆ  

ನಾವು ಅಹಂಕಾರಿಗಳಾಗಬಾರದು, ಒಬ್ಬರನ್ನೊಬ್ಬರು ಕೆಣಕುವವರಾಗಬಾರದು, ಒಬ್ಬರಮೇಲೊಬ್ಬರು ಮತ್ಸರ ಉಳ್ಳವರಾಗಬಾರದು.


ಆದರೆ ಪೌಲನು ಬೆರೋಯದಲ್ಲಿ ದೇವರ ವಾಕ್ಯವನ್ನು ಹೇಳುತ್ತಿದ್ದಾನೆ ಎಂಬ ವಾರ್ತೆಯನ್ನು ಕೇಳಿದ ಥೆಸಲೋನಿಕದ ಯೆಹೂದ್ಯರು ಬೆರೋಯಕ್ಕೂ ಬಂದು ಅಲ್ಲಿಯ ಜನರನ್ನು ಗಲಿಬಿಲಿಗೊಳಿಸಿ ಗಲಭೆ ಮಾಡಿದರು.


ಮತ್ಸರ, ಕುಡಿಕತನ ಮತ್ತು ಸ್ವೇಚ್ಫಾಚಾರದ ಕೂಟ, ಮೊದಲಾದವುಗಳೇ. ನಾನು ನಿಮ್ಮನ್ನು ಮೊದಲು ಎಚ್ಚರಿಸಿದಂತೆ ಈಗಲೂ ಎಚ್ಚರಿಸುತ್ತೇನೆ. ಇಂಥವುಗಳನ್ನು ಮಾಡುವ ಜನರು ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲ.


ನನ್ನ ಸಹೋದ್ಯೋಗಿಯಾದ ತಿಮೊಥೆಯನು ಮತ್ತು ನನ್ನ ಸಂಬಂಧಿಕರಾದ ಲೂಕ್ಯ, ಯಾಸೋನ ಮತ್ತು ಸೋಸಿಪತ್ರ ನಿಮಗೆ ವಂದನೆ ತಿಳಿಸಿದ್ದಾರೆ.


ಯಾಸೋನನು ಇವರನ್ನು ತನ್ನ ಮನೆಯಲ್ಲಿ ಇರಿಸಿಕೊಂಡಿದ್ದಾನೆ. ಇವರೆಲ್ಲರೂ ಸೀಸರನ ಕಾನೂನುಗಳನ್ನು ಉಲ್ಲಂಘಿಸುತ್ತಾರೆ ಮತ್ತು ‘ಯೇಸು’ ಎಂಬ ಮತ್ತೊಬ್ಬ ರಾಜನಿರುವನೆಂದು ಹೇಳುತ್ತಾರೆ” ಎಂದು ಕೂಗಿ ಹೇಳಿದರು.


ಆದರೆ ಯೆಹೂದ್ಯರಲ್ಲಿ ನಂಬದೆ ಹೋದ ಕೆಲವರು ಯೆಹೂದ್ಯರಲ್ಲದವರನ್ನು ಪ್ರಚೋಧಿಸಿ ಸಹೋದರರ ವಿರುದ್ಧ ಜನರನ್ನು ಎಬ್ಬಿಸಿದರು.


ನೀವಿನ್ನೂ ಆತ್ಮಿಕರಾಗಿಲ್ಲ. ನಿಮ್ಮ ನಡುವೆ ಹೊಟ್ಟೆಕಿಚ್ಚಿದೆ; ವಾಗ್ವಾದಗಳಿವೆ; ಜಗಳಗಳಿವೆ. ನೀವು ಆತ್ಮಿಕರಲ್ಲವೆಂಬುದನ್ನು ಇವು ಸೂಚಿಸುತ್ತವೆ. ನೀವು ಲೋಕದ ಜನರಂತೆಯೇ ವರ್ತಿಸುತ್ತಿದ್ದೀರಿ.


ನಾನು ಇದನ್ನು ಯಾಕೆ ಹೇಳುತ್ತಿದ್ದೇನೆಂದರೆ, ಇಂದಿನ ಗಲಭೆಯನ್ನು ಕಂಡ ಕೆಲವು ಜನರು ನಾವು ದಂಗೆ ಏಳುತ್ತಿದ್ದೇವೆಂದು ಹೇಳುವ ಸಾಧ್ಯತೆಯಿದೆ. ನಾವು ಈ ಗಲಭೆಯನ್ನು ಸಮರ್ಥಿಸಿಕೊಳ್ಳಲಾಗುವುದಿಲ್ಲ. ಯಾಕೆಂದರೆ ಈ ಸಭೆಗೆ ಸರಿಯಾದ ಕಾರಣವೇ ಇಲ್ಲ” ಎಂದು ಹೇಳಿದನು.


ಅಖಾಯ ನಾಡಿಗೆ ಗಲ್ಲಿಯೋನನು ರಾಜ್ಯಪಾಲನಾದಾಗ ಕೆಲವು ಯೆಹೂದ್ಯರು ಪೌಲನಿಗೆ ವಿರೋಧವಾಗಿ ಸೇರಿಬಂದರು. ಅವರು ಪೌಲನನ್ನು ನ್ಯಾಯಾಲಯಕ್ಕೆ ಕರದೊಯ್ದು,


ಬಳಿಕ ಕೆಲವು ಯೆಹೂದ್ಯರು ಅಂತಿಯೋಕ್ಯದಿಂದ ಮತ್ತು ಇಕೋನಿಯದಿಂದ ಬಂದು ಪೌಲನಿಗೆ ವಿರೋಧವಾಗಿ ಜನರನ್ನು ಹುರಿದುಂಬಿಸಿ ಪೌಲನಿಗೆ ಕಲ್ಲೆಸೆದು, ಅವನು ಸತ್ತನೆಂದು ಭಾವಿಸಿ ಪಟ್ಟಣದಿಂದ ಹೊರಗೆ ಎಳೆದುಹಾಕಿದರು.


ಇದನ್ನು ಕಂಡ ಯೆಹೂದ್ಯರಿಗೆ ಬಹಳ ಅಸೂಯೆಯಾಯಿತು. ಅವರು ಪೌಲನ ಮಾತುಗಳನ್ನು ಕಟುವಾಗಿ ದೂಷಿಸಿ ಅವುಗಳಿಗೆ ವಿರೋಧವಾಗಿ ವಾದಿಸಿದರು.


ಜನರು ಹೊಟ್ಟೆಕಿಚ್ಚಿನಿಂದ ಯೇಸುವನ್ನು ತನಗೆ ಒಪ್ಪಿಸಿದ್ದಾರೆಂಬುದು ಪಿಲಾತನಿಗೆ ಗೊತ್ತಿತ್ತು.


ಶೆಕೆಮಿನ ಹಿರಿಯರು ಅಬೀಮೆಲೆಕನಿಗೆ ಎಪ್ಪತ್ತು ಬೆಳ್ಳಿಯ ನಾಣ್ಯಗಳನ್ನು ಕೊಟ್ಟರು. ಆ ಬೆಳ್ಳಿಯು ಬಾಳ್‌ಬೆರೀತನ ಗುಡಿಗೆ ಸೇರಿತ್ತು. ಕೆಲವು ಗಂಡಸರನ್ನು ಕೂಲಿಗೆ ತೆಗೆದುಕೊಳ್ಳಲು ಅವನು ಈ ಬೆಳ್ಳಿಯನ್ನು ಬಳಸಿಕೊಂಡನು. ಈ ಗಂಡಸರು ಅಯೋಗ್ಯರೂ ದುಷ್ಟರೂ ಆಗಿದ್ದರು. ಅವರು ಅಬೀಮೆಲೆಕನ ಹಿಂಬಾಲಕರಾಗಿದ್ದರು.


ಪವಿತ್ರ ಗ್ರಂಥವು ಅರ್ಥವಿಲ್ಲದ್ದೆಂದು ಯೋಚಿಸುವಿರಾ? “ದೇವರು ನಮ್ಮಲ್ಲಿ ಇರಿಸಿರುವ ಆತ್ಮದ ಅಪೇಕ್ಷೆಯೇನೆಂದರೆ, ನಾವು ಆತನಿಗೋಸ್ಕರ ಮಾತ್ರ ಇರಬೇಕೆಂದಷ್ಟೆ” ಎಂದು ಪವಿತ್ರ ಗ್ರಂಥವು ಹೇಳುತ್ತದೆ.


“ಈ ಪಿತೃಗಳು ಯೋಸೇಫನ (ಅವರು ತಮ್ಮ) ಮೇಲೆ ಹೊಟ್ಟೆಕಿಚ್ಚುಪಟ್ಟರು. ಅವರು ಯೋಸೇಫನನ್ನು ಈಜಿಪ್ಟಿನ ಜನರಿಗೆ ಗುಲಾಮನನ್ನಾಗಿ ಮಾರಿದರು. ಆದರೆ ದೇವರು ಯೋಸೇಫನೊಂದಿಗೆ ಇದ್ದನು.


ಮನಶ್ಯಾಂತಿಯುಳ್ಳವನ ದೇಹವು ಆರೋಗ್ಯದಿಂದಿರುವುದು. ಹೊಟ್ಟೆಕಿಚ್ಚು ದೇಹಕ್ಕೆ ಕಾಯಿಲೆಯನ್ನು ಬರಮಾಡುವುದು.


ಅವರು ನನ್ನ ಬಗ್ಗೆ ಬಹಿರಂಗ ಸ್ಥಳಗಳಲ್ಲಿ ಮಾತಾಡುವರು. ಕುಡುಕರು ನನ್ನ ವಿಷಯದಲ್ಲಿ ಹಾಡನ್ನು ರಚಿಸುವರು.


ಆದರೆ ನಾನು ಆಪತ್ತಿನಲ್ಲಿದ್ದಾಗ ಅವರು ನನ್ನನ್ನು ಗೇಲಿಮಾಡಿದರು, ಅವರು ನನ್ನ ನಿಜವಾದ ಸ್ನೇಹಿತರಲ್ಲ; ಅವರ ಪರಿಚಯವೂ ನನಗಿರಲಿಲ್ಲ. ಅವರು ನನ್ನ ಸುತ್ತಲೂ ಸೇರಿಬಂದು ನನ್ನ ಮೇಲೆ ಆಕ್ರಮಣ ಮಾಡಿದರು.


ಆದರೆ ದೇವರೇ, ನೀನು ಅವರನ್ನು ಶಿಕ್ಷಿಸಿದರೆ ಅವರು ಅದನ್ನು ನೋಡುವರು. ನಿನ್ನ ಜನರ ಮೇಲೆ ನಿನಗಿರುವ ಗಾಢಪ್ರೀತಿಯನ್ನು ಆ ದುಷ್ಟಜನರು ನೋಡಲಿ. ಆಗ ಅವರು ಅವಮಾನ ಹೊಂದುವರು. ನಿನ್ನ ಶತ್ರುಗಳು ತಮ್ಮ ದುಷ್ಟತನದ ಬೆಂಕಿಯಲ್ಲಿಯೇ ಸುಟ್ಟುಹೋಗುವರು.


ಆದರೆ ಅವರು ಪೌಲ ಸೀಲರನ್ನು ಅಲ್ಲಿ ಕಾಣಲಿಲ್ಲ. ಆದ್ದರಿಂದ ಅವರು ಯಾಸೋನನನ್ನೂ ಕೆಲವು ವಿಶ್ವಾಸಿಗಳನ್ನೂ ನಗರಾಧಿಕಾರಿಗಳ ಮುಂದೆ ಎಳೆದುಕೊಂಡು ಬಂದು, “ಈ ಜನರು (ಪೌಲ ಸೀಲರು) ಪ್ರಪಂಚದ ಎಲ್ಲಾ ಕಡೆಗಳಲ್ಲೂ ಗಲಭೆಯನ್ನು ಉಂಟುಮಾಡಿ ಈಗ ಇಲ್ಲಿಗೂ ಬಂದಿದ್ದಾರೆ!


ಅವರು ಯಾಸೋನನಿಂದಲೂ ಇತರ ವಿಶ್ವಾಸಿಗಳಿಂದಲೂ ಜಾಮೀನು ತೆಗೆದುಕೊಂಡು ಅವರನ್ನು ಬಿಡುಗಡೆ ಮಾಡಿದರು.


ಅನೇಕ ಪ್ರಯಾಣಗಳನ್ನು ಮಾಡಿದೆನು. ನದಿಗಳಿಂದಲೂ ಕಳ್ಳರಿಂದಲೂ ನನ್ನ ಸ್ವಂತ ಜನರಾದ ಯೆಹೂದ್ಯರಿಂದಲೂ ಮತ್ತು ಯೆಹೂದ್ಯರಲ್ಲದವರಿಂದಲೂ ಅಪಾಯಕ್ಕೀಡಾಗಿದ್ದೆನು. ಪಟ್ಟಣಗಳಲ್ಲಿಯೂ ಜನರು ವಾಸವಾಗಿಲ್ಲದ ಸ್ಥಳಗಳಲ್ಲಿಯೂ ಸಮುದ್ರಗಳಲ್ಲಿಯೂ ಸುಳ್ಳುಸಹೋದರರ ಮಧ್ಯದಲ್ಲಿಯೂ ಅಪಾಯಕ್ಕೀಡಾಗಿದ್ದೆನು.


ನೀವು ನಮ್ಮನ್ನೂ ಪ್ರಭುವನ್ನೂ ಅನುಸರಿಸಿದಿರಿ; ಬಹಳ ಹಿಂಸೆಯನ್ನು ಅನುಭವಿಸಿದಿರಿ; ನಮ್ಮ ಉಪದೇಶವನ್ನು ನೀವು ಸಂತಸದಿಂದ ಒಪ್ಪಿಕೊಂಡಿರಿ. ಪವಿತ್ರಾತ್ಮನೇ ನಿಮಗೆ ಆ ಸಂತಸವನ್ನು ನೀಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು