Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 18:1 - ಪರಿಶುದ್ದ ಬೈಬಲ್‌

1 ತರುವಾಯ ಪೌಲನು ಅಥೆನ್ಸನ್ನು ಬಿಟ್ಟು ಕೊರಿಂಥ ಪಟ್ಟಣಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇದಾದ ಮೇಲೆ ಪೌಲನು ಅಥೇನೆಯನ್ನು ಬಿಟ್ಟು ಕೊರಿಂಥಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇದಾದ ಮೇಲೆ ಪೌಲನು ಅಥೆನ್ಸ್ ಅನ್ನು ಬಿಟ್ಟು ಕೊರಿಂಥಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇದಾದ ಮೇಲೆ ಪೌಲನು ಅಥೇನೆಯನ್ನು ಬಿಟ್ಟು ಕೊರಿಂಥಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇದಾದನಂತರ, ಪೌಲನು ಅಥೇನೆಯನ್ನು ಬಿಟ್ಟು ಕೊರಿಂಥ ಪಟ್ಟಣಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಮಾನಾ ಪಾವ್ಲು ಅಥೆನ್ಸ್ ಸೊಡುನ್ ಕೊರಿಂಥಾ ಮನ್ತಲ್ಯಾ ಶಾರಾಕ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 18:1
10 ತಿಳಿವುಗಳ ಹೋಲಿಕೆ  

ಕ್ರಿಸ್ತ ಯೇಸುವಿನಲ್ಲಿ ಪವಿತ್ರರಾಗಿ ಮಾಡಲ್ಪಟ್ಟಿರುವ ಕೊರಿಂಥದ ದೇವರ ಸಭೆಯವರಿಗೆ ಈ ಪತ್ರವನ್ನು ಬರೆಯುತ್ತಿದ್ದೇನೆ. ನೀವು ದೇವರ ಪವಿತ್ರ ಜನರಾಗುವುದಕ್ಕೆ ಕರೆಯಲ್ಪಟ್ಟಿದ್ದೀರಿ. ಪ್ರಭುವಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಂಬಿಕೆ ಇಡುವ ಎಲ್ಲಾ ಜನರೊಂದಿಗೆ ನೀವು ಕರೆಯಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನು ಅವರಿಗೂ ನಮಗೂ ಪ್ರಭುವಾಗಿದ್ದಾನೆ.


ಎರಸ್ತನು ಕೊರಿಂಥದಲ್ಲಿ ನೆಲಸಿದನು. ತ್ರೊಫಿಮನು ಅಸ್ವಸ್ಥನಾಗಿದ್ದುದರಿಂದ ನಾನು ಅವನನ್ನು ಮಿಲೇತದಲ್ಲಿ ಇರಿಸಬೇಕಾಯಿತು.


ಅಪೊಲ್ಲೋಸನು ಕೊರಿಂಥ ಪಟ್ಟಣದಲ್ಲಿದ್ದಾಗ ಪೌಲನು ಎಫೆಸ ಪಟ್ಟಣಕ್ಕೆ ಪ್ರಯಾಣ ಮಾಡುತ್ತಾ ದಾರಿಯಲ್ಲಿ ಸಿಕ್ಕಿದ ಕೆಲವು ಊರುಗಳನ್ನು ಸಂದರ್ಶಿಸಿದನು. ಅವನು ಎಫೆಸ ಪಟ್ಟಣವನ್ನು ತಲುಪಿದಾಗ, ಕೆಲವು ಮಂದಿ ಶಿಷ್ಯರನ್ನು ಕಂಡು,


ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು ಬರೆಯುವ ಪತ್ರ. ನಾನು ದೇವರ ಚಿತ್ತಾನುಸಾರ ಅಪೊಸ್ತಲನಾಗಿದ್ದೇನೆ. ಕೊರಿಂಥದಲ್ಲಿರುವ ದೇವರ ಸಭೆಯವರಿಗೂ ಇಡೀ ಅಖಾಯ ಸೀಮೆಯಲ್ಲಿರುವ ದೇವಜನರೆಲ್ಲರಿಗೂ ನಾನು ಈ ಪತ್ರವನ್ನು ಕ್ರಿಸ್ತನಲ್ಲಿ ನಮ್ಮ ಸಹೋದರನಾದ ತಿಮೊಥೆಯನೊಡನೆ ಸೇರಿ ಬರೆಯುತ್ತಿದ್ದೇನೆ.


ನಿಮ್ಮನ್ನು ಶಿಕ್ಷಿಸುವುದಕ್ಕಾಗಲಿ ನೋಯಿಸುವುದಕ್ಕಾಗಲಿ ನನಗೆ ಇಷ್ಟವಿರಲಿಲ್ಲ. ಆದಕಾರಣ ನಾನು ನಿಮ್ಮ ಬಳಿಗೆ ಹಿಂತಿರುಗಿ ಬರಲಿಲ್ಲ. ಇದು ಸತ್ಯ. ಇದಕ್ಕೆ ದೇವರೇ ಸಾಕ್ಷಿ.


ಪೌಲನೊಂದಿಗೆ ಹೋದ ವಿಶ್ವಾಸಿಗಳು ಅವನನ್ನು ಅಥೆನ್ಸ್ ಪಟ್ಟಣಕ್ಕೆ ಕರೆದುಕೊಂಡು ಹೋದರು. ಈ ಸಹೋದರರು ಪೌಲನಿಂದ ಸೀಲ ತಿಮೊಥೆಯರಿಗೆ ಒಂದು ಸಂದೇಶವನ್ನು ತೆಗೆದುಕೊಂಡು ಹಿಂತಿರುಗಿ ಬಂದರು. “ಸಾಧ್ಯವಾದಷ್ಟು ಬೇಗನೆ ನನ್ನ ಬಳಿಗೆ ಬನ್ನಿರಿ” ಎಂಬುದೇ ಆ ಸಂದೇಶ.


ಪೌಲನು ಅಥೆನ್ಸಿನಲ್ಲಿ ಸೀಲ ತಿಮೊಥೆಯರಿಗಾಗಿ ಎದುರು ನೋಡುತ್ತಿದ್ದನು. ಆ ಪಟ್ಟಣದ ಎಲ್ಲೆಲ್ಲಿಯೂ ವಿಗ್ರಹಗಳಿರುವುದನ್ನು ಕಂಡು ಅವನ ಮನಸ್ಸು ನೊಂದುಹೋಯಿತು.


ಕ್ರಿಸ್ಪನು ಸಭಾಮಂದಿರದ ಅಧ್ಯಕ್ಷನಾಗಿದ್ದನು. ಕ್ರಿಸ್ಪನು ಮತ್ತು ಅವನ ಮನೆಯಲ್ಲಿ ವಾಸವಾಗಿದ್ದ ಎಲ್ಲಾ ಜನರು ಪ್ರಭುವಿನಲ್ಲಿ ನಂಬಿಕೆಯಿಟ್ಟರು. ಕೊರಿಂಥದಲ್ಲಿ ಇತರ ಅನೇಕ ಜನರು ಪೌಲನಿಗೆ ಕಿವಿಗೊಟ್ಟರು ಮತ್ತು ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡರು.


ಕೊರಿಂಥದಲ್ಲಿರುವ ನಿಮ್ಮೊಂದಿಗೆ ಬಿಚ್ಚುಮನಸ್ಸಿನಿಂದ ಮಾತಾಡಿದ್ದೇವೆ. ನಮ್ಮ ಹೃದಯಗಳನ್ನು ನಿಮ್ಮ ಮುಂದೆ ತೆರೆದಿಟ್ಟಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು