Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 18:14 - ಪರಿಶುದ್ದ ಬೈಬಲ್‌

14 ಪೌಲನು ಮಾತಾಡುವುದಕ್ಕೆ ಸಿದ್ಧನಾಗಿದ್ದನು. ಆದರೆ ಗಲ್ಲಿಯೋನ ಯೆಹೂದ್ಯರಿಗೆ, “ಯೆಹೂದ್ಯರೇ, ಅಪರಾಧವಾಗಲಿ ದುಷ್ಕೃತ್ಯವಾಗಲಿ ನಡೆದಿದ್ದರೆ ನಾನು ನಿಮ್ಮ ದೂರು ಕೇಳುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಪೌಲನು ಪ್ರತಿವಾದ ಮಾಡಬೇಕೆಂದಿದ್ದಾಗ ಗಲ್ಲಿಯೋನನು ಯೆಹೂದ್ಯರಿಗೆ; “ಎಲೈ ಯೆಹೂದ್ಯರೇ, ಅನ್ಯಾಯವು, ದುಷ್ಕರ್ಮವು ಇಂಥದೇನಾದರೂ ಇದ್ದಪಕ್ಷಕ್ಕೆ ನಾನು ನಿಮ್ಮ ಮಾತನ್ನು ಸಹನೆಯಿಂದ ಕೇಳುವುದು ನ್ಯಾಯವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಪೌಲನು ಮಾತನಾಡಬೇಕೆಂದಿರುವಾಗ, ಗಲ್ಲಿಯೋ ಯೆಹೂದ್ಯರನ್ನು ಸಂಬೋಧಿಸಿ, “ಯೆಹೂದ್ಯರೇ, ಅನ್ಯಾಯವಾಗಲಿ, ಅಕ್ರಮವಾಗಲಿ ನಡೆದಿದ್ದ ಪಕ್ಷದಲ್ಲಿ, ನಿಮ್ಮ ಅಪಾದನೆಗಳನ್ನು ತಾಳ್ಮೆಯಿಂದ ಕೇಳಬೇಕಾದುದು ಸರಿಯಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಪೌಲನು ಪ್ರತಿವಾದ ಮಾಡಬೇಕೆಂದಿದ್ದಾಗ ಗಲ್ಲಿಯೋನನು ಯೆಹೂದ್ಯರಿಗೆ - ಎಲೈ ಯೆಹೂದ್ಯರೇ, ಅನ್ಯಾಯವು ದುಷ್ಕಾರ್ಯವು ಇಂಥದೇನಾದರೂ ಇದ್ದ ಪಕ್ಷಕ್ಕೆ ನಾನು ನಿಮ್ಮ ಮಾತನ್ನು ಸಹನದಿಂದ ಕೇಳುವದು ನ್ಯಾಯವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಪೌಲನು ಮಾತನಾಡಬೇಕೆಂದಿದ್ದಾಗ, ಗಲ್ಲಿಯೋನನು ಯೆಹೂದ್ಯರಿಗೆ, “ಯೆಹೂದ್ಯರೇ, ಅಪರಾಧ ಇಲ್ಲವೆ ದುಷ್ಕಾರ್ಯದ ಬಗ್ಗೆ ನಿಮಗೇನಾದರು ಹೇಳುವುದು ಇದ್ದರೆ, ಅದನ್ನು ಸಹನೆಯಿಂದ ಕೇಳುವುದು ನನಗೆ ಯೋಗ್ಯವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಪಾವ್ಲುನ್ ಬೊಲುಚೆ ಮನುನ್ ತಯಾರ್ ಹೊವ್ನ್ಗೆತ್ ರ್‍ಹಾತಾನಾಚ್ ಗೆಲ್ಲಿಯೊನ್ ಜುದೆವಾಂಚ್ಯಾ ಲೊಕಾಕ್ನಿ, ಹೊ ಮಾನುಸ್ ಎಕ್ ಎಳಾರ್ ಚುಕ್ ಕರಲ್ಲೊ ಅನಿ ಮೊಟೊ ಅಪರಾದ್ ಕರಲ್ಲೊ ಹೊಲ್ಲ್ಯಾರ್ ಮಿಯಾ ಹೆ ಜವಾಬ್ದಾರಿನ್ ಆಯ್ಕುಕ್ ಹೊಯ್ ಹೊತ್ತೆ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 18:14
17 ತಿಳಿವುಗಳ ಹೋಲಿಕೆ  

ಅವನು ಜನರೆಲ್ಲರಂತೆ ದುರ್ಬಲನಾಗಿರುವುದರಿಂದ ಅರ್ಥಮಾಡಿಕೊಳ್ಳದ ಮತ್ತು ದಾರಿತಪ್ಪಿದ ಜನರ ವಿಷಯದಲ್ಲಿ ತಾಳ್ಮೆಯಿಂದ ಸಹಿಸಿಕೊಳ್ಳಲು ಶಕ್ತನಾಗಿದ್ದಾನೆ.


ಯೇಸುವಿನ ಬಗ್ಗೆ ನಾವು ಬೋಧಿಸಿದ ಸಂಗತಿಗಳಿಗೆ ಭಿನ್ನವಾದಂಥ ಸಂಗತಿಗಳನ್ನು ಬೋಧಿಸುವ ಬೋಧಕರು ನಿಮ್ಮ ಬಳಿಗೆ ಬಂದು ಬೋಧಿಸಿದರೂ ನೀವು ತಾಳ್ಮೆಯಿಂದಿರುತ್ತೀರಿ. ನೀವು ನಮ್ಮಿಂದ ಸ್ವೀಕರಿಸಿಕೊಂಡ ಪವಿತ್ರಾತ್ಮನಿಗೂ ಸುವಾರ್ತೆಗೂ ಭಿನ್ನವಾದ ಆತ್ಮವನ್ನೂ ಸುವಾರ್ತೆಯನ್ನೂ ಸ್ವೀಕರಿಸಿಕೊಳ್ಳಲು ಬಹು ಇಷ್ಟವುಳ್ಳವರಾಗಿದ್ದೀರಿ. ಆದ್ದರಿಂದ ನೀವು ನಮ್ಮ ವಿಷಯದಲ್ಲಿ ತಾಳ್ಮೆಯಿಂದಿರಬೇಕು.


ನಾನು ಸ್ವಲ್ಪ ಬುದ್ಧಿಹೀನನಾಗಿರುವಾಗಲೂ ನೀವು ನನ್ನ ವಿಷಯದಲ್ಲಿ ತಾಳ್ಮೆಯಿಂದಿರಬೇಕೆಂದು ಅಪೇಕ್ಷಿಸುತ್ತೇನೆ. ಆದರೆ ನೀವು ಈಗಾಗಲೇ ನನ್ನ ವಿಷಯದಲ್ಲಿ ತಾಳ್ಮೆಯಿಂದಿದ್ದೀರಿ.


ಸರಿಯಾದದ್ದನ್ನು ಮಾಡುವ ಜನರಿಗೆ ಅಧಿಕಾರಿಗಳ ಭಯವಿರುವುದಿಲ್ಲ. ಆದರೆ ಕೆಟ್ಟದ್ದನ್ನು ಮಾಡುವ ಜನರಿಗೆ ಅಧಿಕಾರಿಗಳ ಭಯವಿರುತ್ತದೆ. ನೀವು ಅಧಿಕಾರಿಗಳಿಗೆ ಭಯಪಡದವರಾಗಿರಬೇಕೆಂದು ಅಪೇಕ್ಷಿಸುತ್ತೀರೋ? ಹಾಗಾದರೆ ನೀವು ಸರಿಯಾದದ್ದನ್ನೇ ಮಾಡಿರಿ. ಆಗ ಅಧಿಕಾರಿಗಳು ನಿಮ್ಮನ್ನು ಹೊಗಳುವರು.


ಆದರೆ ಇವನ ವಿಷಯದಲ್ಲಿ ಸೀಸರನಿಗೆ ಬರೆಯಲು ನಿರ್ದಿಷ್ಟವಾದ ಅಪರಾಧವೇನೂ ನನಗೆ ತೋರುತ್ತಿಲ್ಲ. ಆದ್ದರಿಂದ ನಾನು ಇವನನ್ನು ನಿಮ್ಮೆಲ್ಲರ ಮುಂದೆಯೂ ವಿಶೇಷವಾಗಿ ರಾಜನಾದ ಅಗ್ರಿಪ್ಪನ ಮುಂದೆಯೂ ತಂದಿದ್ದೇನೆ. ಆದ್ದರಿಂದ ನೀವು ಇವನನ್ನು ಪ್ರಶ್ನಿಸಿ ಇವನ ಬಗ್ಗೆ ಸೀಸರನಿಗೆ ಬರೆಯಲು ಏನಾದರೂ ವಿಷಯವುನ್ನು ಕೊಡಬಲ್ಲಿರೆಂದು ನಿರೀಕ್ಷಿಸುತ್ತೇನೆ.


ಪೌಲನು, “ಇಲ್ಲ, ನಾನು ತಾರ್ಸದ ಯೆಹೂದ್ಯನು. ತಾರ್ಸವು ಸಿಲಿಸಿಯ ದೇಶದಲ್ಲಿದೆ. ನಾನು ಆ ಪ್ರಮುಖ ನಗರದ ಪ್ರಜೆ. ದಯವಿಟ್ಟು ಜನರೊಂದಿಗೆ ಮಾತಾಡಲು ನನಗೆ ಅಪ್ಪಣೆಯಾಗಲಿ” ಎಂದು ಹೇಳಿದನು.


ಮರಳುಗಾಡಿನಲ್ಲಿ ನಲವತ್ತು ವರ್ಷಗಳ ಕಾಲ ಅವರನ್ನು ಸಹಿಸಿಕೊಂಡನು.


ಯೇಸು, “ವಿಶ್ವಾಸವಿಲ್ಲದ ಸಂತಾನವೇ, ನಾನು ನಿಮ್ಮೊಡನೆ ಇನ್ನೆಷ್ಟು ಕಾಲ ಇರಲಿ? ಇನ್ನೆಷ್ಟು ಕಾಲ ಸಹಿಸಿಕೊಳ್ಳಲಿ? ಆ ಹುಡುಗನನ್ನು ನನ್ನ ಬಳಿಗೆ ತನ್ನಿರಿ!” ಎಂದು ಉತ್ತರಿಸಿದನು.


ಆಗ ಯೇಸು ಜನರಿಗೆ ಈ ಉಪದೇಶ ಮಾಡಿದನು:


ಅವನಿಗೆ, “ನೀನು ಸೈತಾನನ ಮಗ! ಪ್ರತಿಯೊಂದು ಒಳ್ಳೆಯದಕ್ಕೂ ನೀನು ಶತ್ರು! ನೀನು ದುಷ್ಟತಂತ್ರಗಳಿಂದಲೂ ಸುಳ್ಳುಗಳಿಂದಲೂ ತುಂಬಿದವನಾಗಿರುವೆ. ಪ್ರಭುವಿನ ಸತ್ಯಗಳನ್ನು ಸುಳ್ಳುಗಳನ್ನಾಗಿ ಪರಿವರ್ತಿಸಲು ನೀನು ಯಾವಾಗಲೂ ಪ್ರಯತ್ನಿಸುತ್ತಿರುವೆ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು