Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 18:17 - ಪರಿಶುದ್ದ ಬೈಬಲ್‌

17 ಬಳಿಕ ಅವರೆಲ್ಲರೂ ಸೋಸ್ಥೆನನನ್ನು ಹಿಡಿದುಕೊಂಡು ನ್ಯಾಯಾಲಯದ ಮುಂದೆಯೇ ಹೊಡೆದರು. (ಸೋಸ್ಥೆನನು ಆಗ ಸಭಾಮಂದಿರದ ಅಧ್ಯಕ್ಷನಾಗಿದ್ದನು.) ಆದರೆ ಗಲ್ಲಿಯೋನ ಅದನ್ನು ತನ್ನ ಗಮನಕ್ಕೆ ತೆಗೆದುಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆಗ ಜನರೆಲ್ಲರು ಸಭಾಮಂದಿರದ ಅಧ್ಯಕ್ಷನಾದ ಸೋಸ್ಥೆನನನ್ನು ಹಿಡಿದುಕೊಂಡು ನ್ಯಾಯಸ್ಥಾನದ ಮುಂದೆಯೇ ಹೊಡೆದರು. ಗಲ್ಲಿಯೋನನು ಅವುಗಳಲ್ಲಿ ಒಂದನ್ನೂ ಲಕ್ಷ್ಯಕ್ಕೆ ತೆಗೆದುಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆಗ ಅವರೆಲ್ಲರೂ ಪ್ರಾರ್ಥನಾಮಂದಿರದ ಅಧ್ಯಕ್ಷ ಸೋಸ್ಥೆನನನ್ನು ಬಂಧಿಸಿ, ನ್ಯಾಯಸ್ಥಾನದ ಮುಂದೆಯೇ ಹೊಡೆದರು. ಗಲ್ಲಿಯೋ ಇದೊಂದನ್ನೂ ಲಕ್ಷಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆಗ ಜನರೆಲ್ಲರು ಸಭಾಮಂದಿರದ ಅಧ್ಯಕ್ಷನಾದ ಸೋಸ್ಥೆನನನ್ನು ಹಿಡಿದುಕೊಂಡು ನ್ಯಾಯಸ್ಥಾನದ ಮುಂದೆಯೇ ಹೊಡೆದರು. ಗಲ್ಲಿಯೋನನು ಅವುಗಳಲ್ಲಿ ಒಂದನ್ನೂ ಲಕ್ಷ್ಯಕ್ಕೆ ತರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆದರೆ ಅವರು ಸಭಾಮಂದಿರದ ಅಧಿಕಾರಿ ಸೋಸ್ಥೆನನನ್ನು ಹಿಡಿದು ನ್ಯಾಯಸ್ಥಾನದ ಎದುರಿನಲ್ಲಿಯೇ ಹೊಡೆದರು. ಗಲ್ಲಿಯೋನನು ಅವುಗಳಲ್ಲಿ ಒಂದನ್ನೂ ಲಕ್ಷಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಮಾನಾಸರ್ ತೆನಿ ಸಗ್ಳೆ ಸೊಸ್ಥೆನ್ ಮನ್ತಲ್ಯಾ ಸಿನಾಗೊಚ್ಯಾ ಅದಿಕಾರಿಕ್ ಧರುನ್ ಘೆವ್ನ್ ಇಚಾರ್ನಿ ಕರ್ತಲ್ಯಾಚ್ಯಾ ಇದ್ರಾಕ್, ಮಾರ್‍ಲ್ಯಾನಿ, ಹೊಲ್ಯಾರ್ ಗಲ್ಲಿಯೊನ್ ಮನ್ತಲ್ಯಾನ್ ತೆ ಕಾಯ್ಬಿ ಲೆಕ್ಕಾತ್ ಧರುಕ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 18:17
7 ತಿಳಿವುಗಳ ಹೋಲಿಕೆ  

ಪೌಲನು ಬರೆಯುತ್ತಿರುವ ಪತ್ರ. ಕ್ರಿಸ್ತ ಯೇಸುವಿನ ಅಪೊಸ್ತಲನಾಗುವುದಕ್ಕೆ ನಾನು ದೇವರ ಚಿತ್ತಾನುಸಾರವಾಗಿ ಕರೆಯುಲ್ಪಟ್ಟೆನು. ನಾನು ಈ ಪತ್ರವನ್ನು ಕ್ರಿಸ್ತನಲ್ಲಿ ನಮ್ಮ ಸಹೋದರನಾದ ಸೊಸ್ಥೆನನೊಂದಿಗೆ ಬರೆಯುತ್ತಿದ್ದೇನೆ.


ನಾವಾದರೋ, ಶಿಲುಬೆಗೇರಿಸಲ್ಪಟ್ಟ ಕ್ರಿಸ್ತನ ಕುರಿತಾಗಿ ಬೋಧಿಸುತ್ತೇವೆ. ಇದು ಯೆಹೂದ್ಯರಿಗೆ ದೊಡ್ಡ ಸಮಸ್ಯೆಯಾಗಿದೆ; ಯೆಹೂದ್ಯರಲ್ಲದ ಜನರಿಗೆ ಮೂರ್ಖತನದಂತೆ ತೋರುತ್ತದೆ.


ಯೇಸು ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದಿದ್ದಾನೆ ಎಂಬ ಸಂಗತಿಯನ್ನು ಕೇಳಿದ ಆ ಜನರಲ್ಲಿ ಕೆಲವರು ಅಪಹಾಸ್ಯಮಾಡಿದರು. ಇತರರು, “ಈ ವಿಷಯದ ಬಗ್ಗೆ ನೀನು ಇನ್ನೊಮ್ಮೆ ಹೇಳಬಹುದು, ಆಗ ಕೇಳುತ್ತೇವೆ” ಎಂದು ಹೇಳಿದರು.


ಅಂದವಾದ ಪಾತ್ರೆಗಳಲ್ಲಿ ದ್ರಾಕ್ಷಾರಸ ಕುಡಿಯುವಿರಿ. ಉತ್ತಮವಾದ ಸುಗಂಧತೈಲವನ್ನು ಉಪಯೋಗಿಸುವಿರಿ. ಯೋಸೇಫನ ಕುಟುಂಬದ ನಾಶನದ ಬಗ್ಗೆಯೂ ನೀವು ಬೇಸರಗೊಳ್ಳಲಿಲ್ಲ.


ಪಿಲಾತನು ನ್ಯಾಯಸ್ಥಾನದಲ್ಲಿ ಕುಳಿತುಕೊಂಡಿದ್ದಾಗ ಅವನ ಪತ್ನಿಯು ಒಂದು ಸಂದೇಶವನ್ನು ಕಳುಹಿಸಿದ್ದಳು. “ಆ ಮನುಷ್ಯನಿಗೆ ಏನನ್ನೂ ಮಾಡಬೇಡ. ಅವನು ತಪ್ಪಿತಸ್ಥನಲ್ಲ. ಆತನ ನಿಮಿತ್ತ ಕಳೆದ ರಾತ್ರಿ ಕನಸಿನಲ್ಲಿ ಬಹಳ ಸಂಕಟಪಟ್ಟಿದ್ದೇನೆ” ಎಂಬುದೇ ಆ ಸಂದೇಶ.


ಸಭಾಮಂದಿರದ ಅಧಿಕಾರಿಯೊಬ್ಬನು ಆ ಸ್ಥಳಕ್ಕೆ ಬಂದನು. ಅವನ ಹೆಸರು ಯಾಯಿರ. ಅವನು ಯೇಸುವನ್ನು ಕಂಡು, ಆತನ ಮುಂದೆ ಅಡ್ಡಬಿದ್ದು ನಮಸ್ಕರಿಸಿ,


ಕ್ರಿಸ್ಪನು ಸಭಾಮಂದಿರದ ಅಧ್ಯಕ್ಷನಾಗಿದ್ದನು. ಕ್ರಿಸ್ಪನು ಮತ್ತು ಅವನ ಮನೆಯಲ್ಲಿ ವಾಸವಾಗಿದ್ದ ಎಲ್ಲಾ ಜನರು ಪ್ರಭುವಿನಲ್ಲಿ ನಂಬಿಕೆಯಿಟ್ಟರು. ಕೊರಿಂಥದಲ್ಲಿ ಇತರ ಅನೇಕ ಜನರು ಪೌಲನಿಗೆ ಕಿವಿಗೊಟ್ಟರು ಮತ್ತು ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು