18 ಪೌಲನು ಅನೇಕ ದಿನಗಳವರೆಗೆ ಸಹೋದರರೊಂದಿಗೆ ಇದ್ದನು. ಬಳಿಕ ಅವನು ಅಲ್ಲಿಂದ ಸಿರಿಯಕ್ಕೆ ನೌಕಾಯಾನ ಮಾಡಿದನು. ಪ್ರಿಸ್ಕಿಲ್ಲ ಮತ್ತು ಅಕ್ವಿಲ ಸಹ ಅವನೊಂದಿಗಿದ್ದರು. ಕೆಂಖ್ರೆ ಎಂಬ ಸ್ಥಳದಲ್ಲಿ ಪೌಲನು ತನ್ನ ತಲೆಕೂದಲನ್ನು ಕತ್ತರಿಸಿಕೊಂಡನು. ಅವನು ದೇವರಿಗೆ ಹರಕೆಯನ್ನು ಮಾಡಿಕೊಂಡಿದ್ದನೆಂಬುದನ್ನು ಅದು ಸೂಚಿಸುತ್ತಿತ್ತು.
18 ಪೌಲನು ಇನ್ನು ಅನೇಕ ದಿನಗಳ ಕಾಲ ಅಲ್ಲಿದ್ದ ಅನಂತರ ಸಹೋದರರಿಂದ ಅಪ್ಪಣೆತೆಗೆದುಕೊಂಡು ತನಗೆ ದೀಕ್ಷೆ ಇದ್ದುದರಿಂದ ಕೆಂಖ್ರೆಯ ಪಟ್ಟಣದಲ್ಲಿ ಕ್ಷೌರಮಾಡಿಸಿಕೊಂಡು ಹಡಗನ್ನು ಹತ್ತಿ ಸಿರಿಯಕ್ಕೆ ಹೊರಟನು. ಪ್ರಿಸ್ಕಿಲ್ಲಳೂ ಮತ್ತು ಅಕ್ವಿಲನೂ ಅವನ ಸಂಗಡ ಹೊರಟರು.
18 ಇದಾದ ಮೇಲೆ ಪೌಲನು ಕೊರಿಂಥದಲ್ಲಿ ಅನೇಕ ದಿನ ಇದ್ದನು. ಅನಂತರ ಭಕ್ತವಿಶ್ವಾಸಿಗಳನ್ನು ಬೀಳ್ಕೊಟ್ಟು ಅಕ್ವಿಲ ಮತ್ತು ಪ್ರಿಸ್ಸಿಲರೊಡನೆ ಸಿರಿಯಕ್ಕೆ ನೌಕಾಯಾನ ಹೊರಟನು. ತಾನು ಮಾಡಿದ್ದ ಹರಕೆಯ ಪ್ರಕಾರ ಕೆಂಖ್ರೆಯೆಂಬ ಸ್ಥಳದಲ್ಲಿ ಮುಂಡನ ಮಾಡಿಸಿಕೊಂಡನು.
18 ಪೌಲನು ಇನ್ನು ಅನೇಕ ದಿವಸ ಅಲ್ಲಿದ್ದ ಮೇಲೆ ಸಹೋದರರಿಂದ ಅಪ್ಪಣೆ ತೆಗೆದುಕೊಂಡು ತನಗೆ ದೀಕ್ಷೆ ಇದ್ದದರಿಂದ ಕೆಂಖ್ರೆಯದಲ್ಲಿ ಕ್ಷೌರಮಾಡಿಸಿಕೊಂಡು ಹಡಗನ್ನು ಹತ್ತಿ ಸಿರಿಯಕ್ಕೆ ಹೊರಟನು. ಪ್ರಿಸ್ಕಿಲ್ಲಳೂ ಅಕ್ವಿಲನೂ ಅವನ ಸಂಗಡ ಹೊರಟರು.
18 ಇನ್ನು ಕೆಲವು ದಿನ ಪೌಲನು ಅಲ್ಲಿಯೇ ಉಳಿದುಕೊಂಡನು. ಅನಂತರ ಸಹೋದರರಿಂದ ಅಪ್ಪಣೆ ತೆಗೆದುಕೊಂಡು ಕೆಂಖ್ರೆಯ ಎಂಬ ಸ್ಥಳದಲ್ಲಿ ತಲೆ ಕೂದಲನ್ನು ಕ್ಷೌರಮಾಡಿಸಿಕೊಂಡು ತಾನು ಹೊತ್ತ ಹರಕೆ ಪೂರೈಸಿದ ಮೇಲೆ ಸಿರಿಯಕ್ಕೆ ನೌಕೆ ಪ್ರಯಾಣಮಾಡಿದನು. ಪ್ರಿಸ್ಕಿಲ್ಲ ಮತ್ತು ಅಕ್ವಿಲರು ಅವನ ಜೊತೆಯಲ್ಲಿ ಹೊರಟರು.
ನೀನು ಅವರನ್ನು ನಿನ್ನೊಂದಿಗೆ ಕರೆದುಕೊಂಡು ಹೋಗಿ ಅವರ ಶುದ್ಧಾಚಾರದ ಸಂಪ್ರದಾಯದಲ್ಲಿ ಭಾಗವಹಿಸು. ಅವರ ಖರ್ಚುವೆಚ್ಚನ್ನೆಲ್ಲ ಕೊಡು. ಬಳಿಕ ಅವರು ತಮ್ಮ ತಲೆಬೋಳಿಸಿಕೊಳ್ಳಲಿ. ನೀನು ಹೀಗೆ ಮಾಡಿದರೆ, ನಿನ್ನ ಬಗ್ಗೆ ಅವರು ಕೇಳಿದ ಸಂಗತಿಗಳು ಸತ್ಯವಲ್ಲವೆಂದು ಅವರೆಲ್ಲರಿಗೂ ಮನದಟ್ಟಾಗುವುದು. ಸ್ವತಃ ನೀನೇ ಮೋಶೆಯ ಧರ್ಮಶಾಸ್ತ್ರಕ್ಕೆ ವಿಧೇಯನಾಗುತ್ತಿರುವುದನ್ನು ಅವರೆಲ್ಲರೂ ಕಣ್ಣಾರೆ ಕಾಣುವರು.
ಯೆಹೂದ್ಯರನ್ನು ರಕ್ಷಣಾಮಾರ್ಗಕ್ಕೆ ತರಲು ಅವರಿಗೆ ಯೆಹೂದ್ಯನಂತಾದೆನು. ನಾನು ಧರ್ಮಶಾಸ್ತ್ರಕ್ಕೆ ಅಧೀನನಾಗಿಲ್ಲದಿದ್ದರೂ ಧರ್ಮಶಾಸ್ತ್ರಕ್ಕೆ ಅಧೀನರಾಗಿರುವ ಜನರನ್ನು ರಕ್ಷಣಾಮಾರ್ಗಕ್ಕೆ ತರಬೇಕೆಂದು ಧರ್ಮಶಾಸ್ತ್ರಕ್ಕೆ ಅಧೀನನಾದೆನು.
ಕೊರಿಂಥದಲ್ಲಿ ಪೌಲನು ಅಕ್ವಿಲ ಎಂಬ ಯೆಹೂದ್ಯನನ್ನು ಕಂಡನು. ಅಕ್ವಿಲನು ಪೊಂತ ಎಂಬ ನಾಡಿನವನು. ಆದರೆ ಅಕ್ವಿಲ ಮತ್ತು ಅವನ ಹೆಂಡತಿ ಪ್ರಿಸ್ಕಿಲ್ಲ ಇಟಲಿಯಿಂದ ಕೊರಿಂಥಕ್ಕೆ ಇತ್ತೀಚಿಗೆ ಬಂದಿದ್ದರು. ಎಲ್ಲಾ ಯೆಹೂದ್ಯರು ರೋಮನ್ನು ಬಿಟ್ಟುಹೋಗಬೇಕೆಂದು ಕ್ಲಾಡಿಯಸನು ಆಜ್ಞಾಪಿಸಿದ್ದರಿಂದ ಅವರು ಇಟಲಿಯನ್ನು ಬಿಟ್ಟುಬಂದಿದ್ದರು. ಪೌಲನು ಅಕ್ವಿಲ ಮತ್ತು ಪ್ರಿಸ್ಕಿಲ್ಲರನ್ನು ಭೇಟಿಯಾಗಲು ಹೋದನು.
ಸಭೆಯು ಇವರ ಕೈಯಲ್ಲಿ ಪತ್ರವನ್ನು ಕಳುಹಿಸಿಕೊಟ್ಟಿತು. ಆ ಪತ್ರದಲ್ಲಿ ಹೀಗೆ ಬರೆದಿತ್ತು: ಅಂತಿಯೋಕ್ಯ ಪಟ್ಟಣದಲ್ಲಿಯೂ ಸಿರಿಯ ಮತ್ತು ಸಿಲಿಸಿಯ ನಾಡುಗಳಲ್ಲಿಯೂ ಇರುವ ಯೆಹೂದ್ಯರಲ್ಲದ ಸಹೋದರರಿಗೆಲ್ಲಾ, ನಿಮ್ಮ ಸಹೋದರರಾದ ಅಪೊಸ್ತಲರೂ ಹಿರಿಯರೂ ಬರೆಯುವುದೇನೆಂದರೆ: ಪ್ರಿಯ ಸಹೋದರರೇ,
ನಾವು ಸೈಪ್ರಸ್ ದ್ವೀಪದ ಸಮೀಪದಲ್ಲಿ ನೌಕಾಯಾನ ಮಾಡಿದೆವು. ಅದು ನಮ್ಮ ಉತ್ತರದಿಕ್ಕಿನಲ್ಲಿ ಕಾಣುತ್ತಿತ್ತು. ಆದರೆ ನಾವು ಹಡಗನ್ನು ಅಲ್ಲಿ ನಿಲ್ಲಿಸದೆ ಸಿರಿಯ ದೇಶಕ್ಕೆ ಪ್ರಯಾಣ ಮಾಡಿ ಟೈರ್ ಪಟ್ಟಣದಲ್ಲಿ ಹಡಗನ್ನು ನಿಲ್ಲಿಸಿದೆವು. ಯಾಕೆಂದರೆ ಹಡಗಿನಿಂದ ಸರಕನ್ನು ಇಳಿಸಬೇಕಾಗಿತ್ತು.
ಅಪೊಲ್ಲೋಸನು ಸಭಾಮಂದಿರದಲ್ಲಿ ಬಹು ಧೈರ್ಯವಾಗಿ ಮಾಡಿದ ಉಪದೇಶವನ್ನು ಕೇಳಿದ ಪ್ರಿಸ್ಕಿಲ್ಲ ಮತ್ತು ಅಕ್ವಿಲ ಅವನನ್ನು ತಮ್ಮ ಮನೆಗೆ ಕರೆದುಕೊಂಡು ಹೋಗಿ, ದೇವರ ಮಾರ್ಗವನ್ನು ಆಳವಾಗಿ ಗ್ರಹಿಸಿಕೊಳ್ಳಲು ನೆರವು ನೀಡಿದರು.
ಯೇಸುವಿನ ವಿಷಯವಾದ ಸುದ್ದಿಯು ಸಿರಿಯ ದೇಶದಲ್ಲೆಲ್ಲಾ ಹರಡಿತು. ಜನರು ಕಾಯಿಲೆಯವರನ್ನೆಲ್ಲ ಯೇಸುವಿನ ಬಳಿಗೆ ತಂದರು. ಅವರು ನಾನಾ ವಿಧವಾದ ವ್ಯಾಧಿಗಳಿಂದ ಮತ್ತು ನೋವಿನಿಂದ ಬಾಧೆಪಡುತ್ತಿದ್ದರು. ಕೆಲವರು ತೀವ್ರವಾದ ನೋವಿನಿಂದ ನರಳುತ್ತಿದ್ದರು. ಕೆಲವರು ದೆವ್ವಗಳಿಂದ ಪೀಡಿತರಾಗಿದ್ದರು. ಕೆಲವರು ಮೂರ್ಛಾರೋಗಿಗಳಾಗಿದ್ದರು. ಕೆಲವರು ಪಾರ್ಶ್ವವಾಯು ರೋಗಿಗಳಾಗಿದ್ದರು. ಯೇಸು ಇವರನ್ನೆಲ್ಲಾ ಗುಣಪಡಿಸಿದನು.
ಅಪೊಲ್ಲೋಸನು ಅಖಾಯ ಪ್ರಾಂತ್ಯಕ್ಕೆ ಹೋಗಲು ಅಪೇಕ್ಷಿಸಿದಾಗ ಎಫೆಸದ ಸಹೋದರರು ಅವನನ್ನು ಪ್ರೋತ್ಸಾಹಿಸಿದರು. ಅಲ್ಲದೆ ಅಖಾಯದಲ್ಲಿದ್ದ ಯೇಸುವಿನ ಶಿಷ್ಯರಿಗೆ ಅವರು ಪತ್ರವನ್ನು ಬರೆದು, ಅಪೊಲ್ಲೋಸನನ್ನು ಸ್ವೀಕರಿಸಿಕೊಳ್ಳಬೇಕೆಂದು ಅವರನ್ನು ಕೇಳಿಕೊಂಡರು. ಅಖಾಯದಲ್ಲಿ ಈ ಶಿಷ್ಯರು ದೇವರ ಕೃಪೆಯಿಂದಾಗಿ ಯೇಸುವಿನಲ್ಲಿ ನಂಬಿಕೆಯಿಟ್ಟಿದ್ದರು. ಅಪೊಲ್ಲೋಸನು ಅಲ್ಲಿಗೆ ಹೋಗಿ ಅವರಿಗೆ ಬಹಳ ನೆರವು ನೀಡಿದನು.