ಅಪೊಸ್ತಲರ ಕೃತ್ಯಗಳು 18:21 - ಪರಿಶುದ್ದ ಬೈಬಲ್21 ಪೌಲನು ಅವರಿಗೆ, “ದೇವರು ಬಯಸುವುದಾದರೆ, ನಾನು ನಿಮ್ಮ ಬಳಿಗೆ ಮತ್ತೆ ಬರುತ್ತೇನೆ” ಎಂದು ಹೇಳಿ ಅಲ್ಲಿಂದ ಹೊರಟನು. ಹೀಗೆ ಪೌಲನು ಎಫೆಸದಿಂದ ನೌಕಾಯಾನ ಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 “ದೇವರ ಚಿತ್ತವಾದರೆ ಪುನಃ ನಿಮ್ಮ ಬಳಿಗೆ ಬರುತ್ತೇನೆಂದು” ಹೇಳಿ ಅವರ ಅಪ್ಪಣೆ ತೆಗೆದುಕೊಂಡು ಹೊರಟುಹೋದನು. ಅನಂತರ ಎಫೆಸದಿಂದ ಸಮುದ್ರಪ್ರಯಾಣ ಮಾಡಿ ಕೈಸರೈಯದಲ್ಲಿ ಇಳಿದು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಅವರನ್ನು ಬೀಳ್ಕೊಡುತ್ತಾ, “ದೇವರ ಚಿತ್ತವಾದರೆ ನಾನು ನಿಮ್ಮಲ್ಲಿಗೆ ಮರಳಿ ಬರುತ್ತೇನೆ,” ಎಂದು ಹೇಳಿ ಎಫೆಸದಿಂದ ಸಮುದ್ರ ಪ್ರಯಾಣಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ದೇವರ ಚಿತ್ತವಾದರೆ ತಿರಿಗಿ ನಿಮ್ಮ ಬಳಿಗೆ ಬರುತ್ತೇನೆಂದು ಹೇಳಿ ಅವರ ಅಪ್ಪಣೆ ತೆಗೆದುಕೊಂಡು ಹೋದನು. ಆಮೇಲೆ ಎಫೆಸದಿಂದ ಸಮುದ್ರಪ್ರಯಾಣ ಮಾಡಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆದರೆ ಅವನು ಅಲ್ಲಿಂದ ಹೊರಟು ಹೋಗಲಿಕ್ಕಿದ್ದಾಗ, “ದೇವರ ಚಿತ್ತವಾದರೆ, ನಾನು ಹಿಂದಿರುಗಿ ಬರುವೆ,” ಎಂದನು. ಆಮೇಲೆ ಎಫೆಸದಿಂದ ನೌಕೆಯಲ್ಲಿ ಪ್ರಯಾಣಮಾಡಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ಹೆಚ್ಯಾ ಬದ್ಲಾಕ್ ತೆನಿ ಜಾತಾನಾ ತೆಂಕಾ ದೆವಾಚೊ ಮನ್ ರ್‍ಹಾಲ್ಯಾರ್, ಮಿಯಾ ಪರ್ತುನ್ ತುಮ್ಚ್ಯಾಕ್ಡೆ ಯೆತಾ ಮನುನ್ ಸಾಂಗುನ್ ಢೊನಾತ್ನಾ ಸಮುಂದರಾಚ್ಯಾ ವಾಟೆನ್ ಎಫೆಸಾಕ್ ಗೆಲೊ. ಅಧ್ಯಾಯವನ್ನು ನೋಡಿ |