ಅಪೊಸ್ತಲರ ಕೃತ್ಯಗಳು 18:23 - ಪರಿಶುದ್ದ ಬೈಬಲ್23 ಅಲ್ಲಿ ಅವನು ಸ್ವಲ್ಪಕಾಲವಿದ್ದನು. ಬಳಿಕ ಅಲ್ಲಿಂದ ಹೊರಟು ಗಲಾತ್ಯ ಮತ್ತು ಫ್ರಿಜಿಯ ನಾಡುಗಳಲ್ಲಿ ಸಂಚರಿಸುತ್ತಾ ಯೇಸುವಿನ ಶಿಷ್ಯರೆಲ್ಲರನ್ನು ಬಲಪಡಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಪೌಲನು ಅಂತಿಯೋಕ್ಯದಲ್ಲಿ ಕೆಲವು ಕಾಲ ಇದ್ದು ಪುನಃ ಅಲ್ಲಿಂದ ಹೊರಟು ಕ್ರಮವಾಗಿ ಗಲಾತ್ಯ ಸೀಮೆಯಲ್ಲಿಯೂ, ಫ್ರುಗ್ಯದಲ್ಲಿಯೂ ಸಂಚಾರಮಾಡುತ್ತಾ ಶಿಷ್ಯರೆಲ್ಲರನ್ನು ದೃಢಪಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಅಲ್ಲಿ ಕೆಲಕಾಲವಿದ್ದು ಪುನಃ ಹೊರಟು ಗಲಾತ್ಯ ಮತ್ತು ಫ್ರಿಜಿಯ ಪ್ರದೇಶಗಳಲ್ಲಿ ಸಂಚರಿಸುತ್ತಾ ಭಕ್ತರೆಲ್ಲರನ್ನು ದೃಢಪಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಪೌಲನು ಅಂತಿಯೋಕ್ಯದಲ್ಲಿ ಕೆಲವು ಕಾಲ ಇದ್ದು ತಿರಿಗಿ ಹೊರಟು ಕ್ರಮವಾಗಿ ಗಲಾತ್ಯ ಸೀಮೆಯಲ್ಲಿಯೂ ಫ್ರೂಗ್ಯದಲ್ಲಿಯೂ ಸಂಚಾರಮಾಡುತ್ತಾ ಶಿಷ್ಯರೆಲ್ಲರನ್ನು ದೃಢಪಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಅಲ್ಲಿ ಸ್ವಲ್ಪ ಸಮಯ ಕಳೆದನಂತರ ಅವನು ಅಲ್ಲಿಂದ ಹೊರಟು ಕ್ರಮವಾಗಿ ಗಲಾತ್ಯ ಮತ್ತು ಫ್ರುಗ್ಯ ಪ್ರದೇಶದಲ್ಲೆಲ್ಲಾ ಸಂಚರಿಸುತ್ತಾ ಶಿಷ್ಯರಲ್ಲಿ ವಿಶ್ವಾಸವನ್ನು ಬಲಪಡಿಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ಮನಾ ತೊ ಉಲ್ಲೊ ಯೆಳ್ ಥೈ ರಾವ್ನ್ ಜಾತಾನಾ ಗಲಾತ್ಯಾ ಅನಿ ಪಿರ್ಗಿಯಾತ್ನಾ ಫಿರುನ್ಗೆತ್ ಸಗ್ಳ್ಯಾ ವಿಶ್ವಾಸಿ ಲೊಕಾಕ್ನಿ ಘಟ್ ಕರ್‍ಲ್ಯಾನ್. ಅಧ್ಯಾಯವನ್ನು ನೋಡಿ |
ಆದುದರಿಂದ ಅಥೆನ್ಸಿನಲ್ಲಿ ಉಳಿದುಕೊಂಡು ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಲು ತೀರ್ಮಾನಿಸಿದೆವು. ತಿಮೊಥೆಯನು ನಮ್ಮ ಸಹೋದರ. ಅವನು ದೇವರಿಗೋಸ್ಕರ ನಮ್ಮೊಡನೆ ಕೆಲಸ ಮಾಡುತ್ತಿದ್ದಾನೆ. ಕ್ರಿಸ್ತನ ವಿಷಯವಾದ ಸುವಾರ್ತೆಯನ್ನು ಜನರಿಗೆ ತಿಳಿಸಲು ಅವನು ನಮಗೆ ಸಹಾಯ ಮಾಡುತ್ತಿದ್ದಾನೆ. ನಿಮ್ಮ ನಂಬಿಕೆಯನ್ನು ಬಲಗೊಳಿಸಲು ಮತ್ತು ನಿಮ್ಮನ್ನು ಸಂತೈಸಲು ತಿಮೊಥೆಯನನ್ನು ಕಳುಹಿಸಿದ್ದೇವೆ.