Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 18:5 - ಪರಿಶುದ್ದ ಬೈಬಲ್‌

5 ಕೊರಿಂಥದಲ್ಲಿದ್ದ ಪೌಲನ ಬಳಿಗೆ ಸೀಲ ತಿಮೊಥೆಯರು ಮಕೆದೋನಿಯದಿಂದ ಬಂದರು. ಅನಂತರ, ಜನರಿಗೆ ಸುವಾರ್ತೆಯನ್ನು ತಿಳಿಸುವುದರಲ್ಲೇ ಪೌಲನು ತನ್ನ ಸಮಯವನ್ನೆಲ್ಲ ಕಳೆದನು. ಯೇಸುವೇ ಕ್ರಿಸ್ತನೆಂಬುದನ್ನು ಅವನು ಯೆಹೂದ್ಯರಿಗೆ ತೋರಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಸೀಲನೂ ಮತ್ತು ತಿಮೊಥೆಯನೂ ಮಕೆದೋನ್ಯದಿಂದ ಬಂದಾಗ ಪೌಲನು ದೇವರ ವಾಕ್ಯವನ್ನು ಬೋಧಿಸುವುದರಲ್ಲಿ ಅತ್ಯಾಸಕ್ತಿಯುಳ್ಳವನಾಗಿ ಯೇಸುವೇ ಕ್ರಿಸ್ತನೆಂದು ಯೆಹೂದ್ಯರಿಗೆ ಖಚಿತವಾಗಿ ಸಾಕ್ಷಿಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಸೀಲ ಮತ್ತು ತಿಮೊಥೇಯ ಮಕೆದೋನಿಯದಿಂದ ಬಂದ ಮೇಲೆ ಪೌಲನು ಶುಭಸಂದೇಶವನ್ನು ಸಾರುವುದರಲ್ಲೂ ಯೇಸುವೇ ಬರಬೇಕಾದ ಲೋಕೋದ್ಧಾರಕ ಎಂದು ಯೆಹೂದ್ಯರಿಗೆ ರುಜುವಾತುಪಡಿಸುವುದರಲ್ಲೂ ತನ್ನ ಸಮಯವನ್ನು ಕಳೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಸೀಲನೂ ತಿಮೊಥೆಯನೂ ಮಕೆದೋನ್ಯದಿಂದ ಬಂದಾಗ ಪೌಲನು ದೇವರ ವಾಕ್ಯವನ್ನು ಬೋಧಿಸುವದರಲ್ಲಿ ಅತ್ಯಾಸಕ್ತಿಯುಳ್ಳವನಾಗಿ ಯೇಸುವೇ ಬರಬೇಕಾದ ಕ್ರಿಸ್ತನೆಂದು ಯೆಹೂದ್ಯರಿಗೆ ಖಂಡಿತವಾಗಿ ಸಾಕ್ಷಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಮಕೆದೋನ್ಯದಿಂದ ಸೀಲ ಮತ್ತು ತಿಮೊಥೆ ಬಂದ ತರುವಾಯ, ಪೌಲನು ವಾಕ್ಯವನ್ನು ಬೋಧಿಸುವುದರಲ್ಲಿಯೇ ಸಮರ್ಪಿಸಿಕೊಂಡವನಾಗಿ ಯೇಸುವೇ ಕ್ರಿಸ್ತ ಎಂದು ಯೆಹೂದ್ಯರಿಗೆ ಖಚಿತವಾಗಿ ಸಾಕ್ಷಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಸಿಲಾಸ್, ತಿಮೊಥಿ ಅನಿ ಪಾವ್ಲು ಮೆಸೆದೊನಿಯಾತ್ನಾ ಯೆಲೆ, ಪಾವ್ಲುನ್ ಅಪ್ಲೊ ಯೆಳ್ ಸಗ್ಳೊ ತ್ಯಾ ಲೊಕಾಕ್ನಿ ದೆವಾಚಿ ಖಬರ್ ಕಳ್ವುನ್ ದಿಲ್ಯಾನ್, ಅನಿ ಜೆಜುಚ್ ಕ್ರಿಸ್ತ್ ಮನುನ್ ಜುದೆವಾಂಚ್ಯಾ ಮದ್ದಿ ಸಾಕ್ಷಿ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 18:5
33 ತಿಳಿವುಗಳ ಹೋಲಿಕೆ  

ಕ್ರಿಸ್ತನ ಪ್ರೀತಿಯು ನಮ್ಮನ್ನು ಒತ್ತಾಯಿಸುತ್ತದೆ. ಏಕೆಂದರೆ, ಎಲ್ಲಾ ಜನರಿಗೋಸ್ಕರವಾಗಿ ಆತನು ಸತ್ತನೆಂಬುದು ನಮಗೆ ಗೊತ್ತಿದೆ. ಆದ್ದರಿಂದ ಎಲ್ಲರೂ ಸತ್ತುಹೋದರು.


ಅವನು ಜನರೆಲ್ಲರ ಮುಂದೆ ಯೆಹೂದ್ಯರ ವಿರುದ್ಧ ಬಹು ಬಲವಾಗಿ ವಾದಿಸಿ, ಪವಿತ್ರ ಗ್ರಂಥವನ್ನು ಆಧಾರವಾಗಿ ತೆಗೆದುಕೊಂಡು ಯೇಸುವೇ ಕ್ರಿಸ್ತನೆಂಬುದನ್ನು ಸ್ಪಷ್ಟವಾಗಿ ನಿರೂಪಿಸಿದನು.


ನಿಮ್ಮ ಹೃದಯಗಳನ್ನು ಮಾರ್ಪಡಿಸಿಕೊಂಡು ದೇವರ ಕಡೆಗೆ ತಿರುಗಿಕೊಳ್ಳಬೇಕೆಂದು ನಾನು ಎಲ್ಲಾ ಜನಾಂಗಗಳವರಿಗೆ ಅಂದರೆ ಯೆಹೂದ್ಯರಿಗೂ ಮತ್ತು ಗ್ರೀಕರಿಗೂ ತಿಳಿಸಿದೆನು. ನಮ್ಮ ಪ್ರಭುವಾದ ಯೇಸುವಿನಲ್ಲಿ ನಂಬಿಕೆ ಇಡಬೇಕೆಂದು ನಾನು ಅವರೆಲ್ಲರಿಗೂ ತಿಳಿಸಿದೆನು.


ಕ್ರಿಸ್ತನು ಸತ್ತು ಸಮಾಧಿಯೊಳಗಿಂದ ಎದ್ದು ಬರಲೇಬೇಕಿತ್ತು ಎಂಬುದನ್ನು ತೋರಿಸಿಕೊಟ್ಟನು. “ನಾನು ನಿಮಗೆ ತಿಳಿಸುತ್ತಿರುವ ಈ ಯೇಸುವೇ ಕ್ರಿಸ್ತನು” ಎಂದು ಪೌಲನು ಸ್ಪಷ್ಟಪಡಿಸಿದನು.


ಆದರೆ ಸೌಲನು ಹೆಚ್ಚುಹೆಚ್ಚು ಪ್ರಬಲವಾಗಿ ಯೇಸುವೇ ಕ್ರಿಸ್ತನೆಂದು ನಿರೂಪಿಸಿದನು. ಅವನ ಆಧಾರಗಳು ಬಹು ಬಲವಾಗಿದ್ದ ಕಾರಣ ದಮಸ್ಕದ ಯೆಹೂದ್ಯರು ಅವನೊಂದಿಗೆ ವಾದ ಮಾಡಲಿಲ್ಲ.


ಆತ್ಮವು ನನ್ನನ್ನು ಅಲ್ಲಿಂದ ಎತ್ತಿಕೊಂಡು ಹೋಯಿತು. ನಾನು ಆಗ ದುಃಖಗೊಂಡು ನನ್ನ ಆತ್ಮದಲ್ಲಿ ತತ್ತರಗೊಂಡೆನು. ಆದರೆ ಯೆಹೋವನ ಶಕ್ತಿಯು ನನ್ನನ್ನು ಸಂಪೂರ್ಣವಾಗಿ ತನ್ನ ಅಧೀನಕ್ಕೆ ತೆಗೆದುಕೊಂಡಿತು.


ಒಮ್ಮೊಮ್ಮೆ ನನ್ನಷ್ಟಕ್ಕೆ ನಾನೇ ಹೇಳಿಕೊಳ್ಳುತ್ತೇನೆ, “ನಾನು ಯೆಹೋವನನ್ನೇ ಮರೆತುಬಿಡುತ್ತೇನೆ. ಆತನ ಹೆಸರಿನಲ್ಲಿ ಇನ್ನೇನೂ ಮಾತನಾಡುವುದಿಲ್ಲ” ಎಂದುಕೊಂಡರೆ ಆತನ ಸಂದೇಶವು ನನ್ನ ಅಂತರಾಳದಲ್ಲಿ ಉರಿಯುವ ಜ್ವಾಲೆಯಂತಾಗುತ್ತದೆ. ಅದು ಆಳಕ್ಕೆ ಇಳಿದು ನನ್ನ ಎಲುಬುಗಳನ್ನು ಸುಡುವಂತಾಗುತ್ತದೆ. ಯೆಹೋವನ ಸಂದೇಶವನ್ನು ನನ್ನ ಅಂತರಾಳದಲ್ಲಿ ಹಿಡಿದಿಟ್ಟುಕೊಳ್ಳಲು ಪ್ರಯತ್ನ ಮಾಡಿ ನಾನು ದಣಿಯುತ್ತೇನೆ. ಕೊನೆಗೆ ಅದನ್ನು ನನ್ನೊಳಗೆ ಇಟ್ಟುಕೊಳ್ಳಲು ಅಸಾಧ್ಯವಾಗುತ್ತದೆ.


ಯೆಹೋವನ ರೋಷವು ನನ್ನಲ್ಲಿ ತುಂಬಿತುಳುಕುತ್ತಿದೆ, ತಡೆದುತಡೆದು ನನಗೆ ಸಾಕಾಗಿದೆ. “ಬೀದಿಯಲ್ಲಾಡುವ ಮಕ್ಕಳ ಮೇಲೆ ಅದನ್ನು ಹೊಯ್ದುಬಿಡಬೇಕು. ಒಂದೆಡೆ ಸೇರುವ ತರುಣರ ಮೇಲೆ ಅದನ್ನು ಹೊಯ್ದುಬಿಡಬೇಕು. ಗಂಡಹೆಂಡತಿಯರಿಬ್ಬರನ್ನು ಅಪಹರಿಸಲಾಗುವುದು. ಮುದುಕರನ್ನೂ ಮುಪ್ಪಿನ ಮುದುಕರನ್ನೂ ಅಪಹರಿಸಲಾಗುವುದು.


ಇವೆರಡರಲ್ಲಿ ಯಾವುದನ್ನು ಆರಿಸಿಕೊಳ್ಳಬೇಕೆಂಬುದೇ ಕಷ್ಟ. ನಾನು ಈ ಜೀವಿತವನ್ನು ಬಿಟ್ಟು ಆತನೊಂದಿಗಿರಲು ಅಪೇಕ್ಷಿಸುತ್ತೇನೆ. ಅದೇ ಉತ್ತಮವಾದದ್ದು.


“ಆದ್ದರಿಂದ ಯೆಹೂದ್ಯರೆಲ್ಲರೂ ಇದನ್ನು ನಿಜವಾಗಿಯೂ ತಿಳಿದುಕೊಳ್ಳಬೇಕು. ದೇವರು ಯೇಸುವನ್ನು ಪ್ರಭುವನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆ. ನೀವು ಶಿಲುಬೆಗೇರಿಸಿದ ವ್ಯಕ್ತಿಯೇ ಆತನು!”


ನಾನು ಈ ಕಿರುಪತ್ರವನ್ನು ಸಿಲ್ವಾನನ ನೆರವಿನಿಂದ ಬರೆದೆನು. ಅವನು ಕ್ರಿಸ್ತನಲ್ಲಿ ನಂಬಿಗಸ್ತನಾದ ಸಹೋದರನೆಂಬುದು ನನಗೆ ತಿಳಿದಿದೆ. ನಾನು ನಿಮ್ಮನ್ನು ಸಂತೈಸಲು ಮತ್ತು ಪ್ರೋತ್ಸಾಹಿಸಲು ಈ ಪತ್ರವನ್ನು ಬರೆದೆನು. ಇದುವೇ ದೇವರ ನಿಜವಾದ ಕೃಪೆ ಎಂಬುದನ್ನು ನಿಮಗೆ ತಿಳಿಸಬೇಕೆಂಬುದೇ ನನ್ನ ಅಪೇಕ್ಷೆಯಾಗಿತ್ತು. ಆ ಕೃಪೆಯಲ್ಲಿ ಸ್ಥಿರತೆಯಿಂದಿರಿ.


ಆದುದರಿಂದ ಅಥೆನ್ಸಿನಲ್ಲಿ ಉಳಿದುಕೊಂಡು ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಲು ತೀರ್ಮಾನಿಸಿದೆವು. ತಿಮೊಥೆಯನು ನಮ್ಮ ಸಹೋದರ. ಅವನು ದೇವರಿಗೋಸ್ಕರ ನಮ್ಮೊಡನೆ ಕೆಲಸ ಮಾಡುತ್ತಿದ್ದಾನೆ. ಕ್ರಿಸ್ತನ ವಿಷಯವಾದ ಸುವಾರ್ತೆಯನ್ನು ಜನರಿಗೆ ತಿಳಿಸಲು ಅವನು ನಮಗೆ ಸಹಾಯ ಮಾಡುತ್ತಿದ್ದಾನೆ. ನಿಮ್ಮ ನಂಬಿಕೆಯನ್ನು ಬಲಗೊಳಿಸಲು ಮತ್ತು ನಿಮ್ಮನ್ನು ಸಂತೈಸಲು ತಿಮೊಥೆಯನನ್ನು ಕಳುಹಿಸಿದ್ದೇವೆ.


ಆ ರಾತ್ರಿ ಪೌಲನಿಗೆ ಒಂದು ದರ್ಶನವಾಯಿತು. ಈ ದರ್ಶನದಲ್ಲಿ ಮಕೆದೋನಿಯದ ನಾಡಿನಿಂದ ಬಂದ ಒಬ್ಬ ಮನುಷ್ಯನು ಅಲ್ಲಿ ನಿಂತುಕೊಂಡು, “ಮಕೆದೋನಿಯಕ್ಕೆ ಬಂದು ನಮಗೆ ಸಹಾಯಮಾಡು” ಎಂದು ಬೇಡಿಕೊಂಡನು.


ಪೌಲನು ದರ್ಬೆ ಮತ್ತು ಲುಸ್ತ್ರ ಪಟ್ಟಣಗಳಿಗೆ ಹೋದನು. ತಿಮೊಥೆ ಎಂಬ ಕ್ರಿಸ್ತನ ಶಿಷ್ಯನೊಬ್ಬನು ಅಲ್ಲಿದ್ದನು. ತಿಮೊಥೆಯನ ತಾಯಿ ಯೆಹೂದ್ಯ ವಿಶ್ವಾಸಿಯಾಗಿದ್ದಳು. ಅವನ ತಂದೆಯು ಗ್ರೀಕನಾಗಿದ್ದನು.


ಅಪೊಸ್ತಲರು, ಹಿರಿಯರು ಮತ್ತು ಇಡೀ ಸಭೆಯವರು ಪೌಲ ಬಾರ್ನಬರೊಂದಿಗೆ ಕೆಲವು ಜನರನ್ನು ಅಂತಿಯೋಕ್ಯಕ್ಕೆ ಕಳುಹಿಸಬಯಸಿದರು. ತಮ್ಮವರೇ ಆದ ಕೆಲವರನ್ನು ಆರಿಸಿಕೊಳ್ಳಲು ಸಭೆಯು ನಿರ್ಧರಿಸಿತು. ಅವರು ಯೂದನನ್ನು (ಬಾರ್ಸಬನೆಂದೂ ಕರೆಯುತ್ತಿದ್ದರು) ಮತ್ತು ಸೀಲನನ್ನು ಆರಿಸಿಕೊಂಡರು. ಇವರು ಜೆರುಸಲೇಮಿನ ಸಭೆಯವರಲ್ಲಿ ಪ್ರಮುಖರಾಗಿದ್ದರು.


“ಜನರಿಗೆ ಬೋಧಿಸಬೇಕೆಂದು ಯೇಸು ನಮಗೆ ಹೇಳಿದನು. ಜೀವಂತವಾಗಿರುವ ಜನರಿಗೂ ಮತ್ತು ಸತ್ತುಹೋಗಿರುವ ಜನರಿಗೂ ದೇವರಿಂದ ನ್ಯಾಯಾಧಿಪತಿಯಾಗಿ ಆಯ್ಕೆಯಾಗಿರುವ ವ್ಯಕ್ತಿ ತಾನೇ ಎಂಬುದನ್ನು ಜನರಿಗೆ ತಿಳಿಸಬೇಕೆಂದು ಆತನು ನಮಗೆ ಹೇಳಿದನು.


ನಾವಂತೂ ಸುಮ್ಮನಿರಲಾರೆವು. ನಾವು ಕಂಡ ಮತ್ತು ಕೇಳಿದ ಸಂಗತಿಗಳ ಬಗ್ಗೆ ಜನರಿಗೆ ಹೇಳಲೇಬೇಕು” ಎಂದು ಉತ್ತರಕೊಟ್ಟರು.


ಮತ್ತು ನೀವು ಮೊದಲಿಂದಲೂ ನನ್ನೊಂದಿಗೆ ಇದ್ದಕಾರಣ ನೀವು ಸಹ ನನ್ನ ಬಗ್ಗೆ ಜನರಿಗೆ ಹೇಳುವಿರಿ.


ಯೆಹೂದ್ಯರು ಯೇಸುವಿನ ಸುತ್ತಲೂ ನೆರೆದರು. ಅವರು ಆತನಿಗೆ, “ಇನ್ನೆಷ್ಟುಕಾಲ ನೀನು ನಿನ್ನ ಬಗ್ಗೆ ನಮ್ಮನ್ನು ಆಶ್ಚರ್ಯಗೊಳಿಸುವೆ? ನೀನು ಕ್ರಿಸ್ತನಾಗಿದ್ದರೆ, ನಮಗೆ ಸ್ಪಷ್ಟವಾಗಿ ತಿಳಿಸು” ಎಂದು ಹೇಳಿದರು.


‘ನಾನು ಕ್ರಿಸ್ತನಲ್ಲ. ಆತನಿಗಾಗಿ ಹಾದಿಯನ್ನು ಸಿದ್ಧಪಡಿಸುವುದಕ್ಕಾಗಿ ಮಾತ್ರ ಕಳುಹಿಸಲ್ಪಟ್ಟಿದ್ದೇನೆ’ ಎಂದು ನಾನು ಹೇಳಿದ್ದಕ್ಕೆ ನೀವೇ ಸಾಕ್ಷಿಗಳಾಗಿದ್ದೀರಿ.


ಮೊದಲನೆಯದಾಗಿ, ಅವನು ತನ್ನ ಅಣ್ಣನಾದ ಸೀಮೋನನನ್ನು ಕಾಣಲು ಹೋಗಿ ಅವನಿಗೆ, “ನಾವು ಮೆಸ್ಸೀಯನನ್ನು ಕಂಡುಕೊಂಡೆವು” ಎಂದು ಹೇಳಿದನು. (“ಮೆಸ್ಸೀಯ” ಅಂದರೆ “ಕ್ರಿಸ್ತನು” ಎಂದರ್ಥ.)


ನಾನು ಬೇರೊಂದು ರೀತಿಯ ದೀಕ್ಷಾಸ್ನಾನ ಹೊಂದಬೇಕು. ಅದನ್ನು ಹೊಂದುವ ತನಕ ನಾನು ಬಹಳ ತೊಂದರೆಯಲ್ಲಿದ್ದೇನೆ.


ಯೆಹೋವನ ಆತ್ಮನು ನನ್ನಲ್ಲಿ ಅಧಿಕಾರವನ್ನೂ, ಒಳ್ಳೆಯತನವನ್ನೂ ಶಕ್ತಿಯನ್ನೂ ತುಂಬಿದ್ದಾನೆ. ಯಾಕೆಂದರೆ ಯಾಕೋಬನ ಅಪರಾಧಗಳನ್ನು ಅವನಿಗೆ ತಿಳಿಸುವುದಕ್ಕಾಗಿಯಷ್ಟೇ, ಇಸ್ರೇಲಿನ ಪಾಪಗಳನ್ನು ಅವನಿಗೆ ಹೇಳುವುದಕ್ಕಾಗಿಯಷ್ಟೇ.


ನನಗೆ ಐದು ಮಂದಿ ಸಹೋದರರಿದ್ದಾರೆ. ಅವರು ಈ ಯಾತನೆಯ ಸ್ಥಳಕ್ಕೆ ಬಾರದಂತೆ ಲಾಜರನು ಅವರನ್ನು ಎಚ್ಚರಿಸಲಿ’ ಎಂದು ಹೇಳಿದನು.


ಅಲ್ಲಿಂದ ಫಿಲಿಪ್ಪಿಗೆ ಹೋದೆವು. ಅದು ಮಕೆದೋನಿಯದ ಜಿಲ್ಲೆಯಲ್ಲಿ ಮತ್ತು ರೋಮನ್ನರ ವಸಾಹತುವಿನಲ್ಲಿ ಮುಖ್ಯವಾದ ಪಟ್ಟಣವಾಗಿತ್ತು. ನಾವು ಅಲ್ಲಿ ಕೆಲವು ದಿನಗಳವರೆಗೆ ಇಳಿದುಕೊಂಡೆವು.


ಜೆರುಸಲೇಮಿನಲ್ಲಿ ತೊಂದರೆಗಳು ಮತ್ತು ಸೆರೆವಾಸವು ನನಗಾಗಿ ಕಾದಿವೆಯೆಂದು ಪವಿತ್ರಾತ್ಮನು ಪ್ರತಿಯೊಂದು ಪಟ್ಟಣದಲ್ಲಿಯೂ ನನಗೆ ಹೇಳುತ್ತಿರುವುದು ಮಾತ್ರ ಸ್ಪಷ್ಟವಾಗಿದೆ.


ನಾನು ನನ್ನ ಸ್ವಂತ ಪ್ರಾಣದ ಬಗ್ಗೆ ಚಿಂತಿಸುವುದಿಲ್ಲ. ಪ್ರಭುವಾದ ಯೇಸು ನನಗೆ ಕೊಟ್ಟಿರುವ ಕೆಲಸವನ್ನು ಪೂರೈಸುವುದೇ ನನಗೆ ಅತ್ಯಂತ ಮುಖ್ಯವಾಗಿದೆ. ದೇವರ ಕೃಪೆಯ ವಿಷಯವಾದ ಸುವಾರ್ತೆಯ ಬಗ್ಗೆ ಸಾಕ್ಷಿ ನೀಡುವುದೇ ನನ್ನ ಕೆಲಸವಾಗಿದೆ. ಆ ಕೆಲಸವನ್ನು ಮಾಡಿ ಪೂರೈಸುವುದೇ ನನ್ನ ಅಪೇಕ್ಷೆಯಾಗಿದೆ.


ಸೀಲನು, ತಿಮೊಥೆಯನು ಮತ್ತು ನಾನು ನಿಮಗೆ ಬೋಧಿಸಿದ ದೇವರ ಮಗನಾದ ಯೇಸುಕ್ರಿಸ್ತನು ಹೌದೆಂತಲೂ ಅಲ್ಲವೆಂತಲೂ ಎರಡು ರೀತಿಯಲ್ಲಿರಲಿಲ್ಲ. ಕ್ರಿಸ್ತನಲ್ಲಿ ಯಾವಾಗಲೂ ಇರುವಂಥದ್ದು “ಹೌದು” ಎಂಬುದೇ.


ನಾನು ನಿಮ್ಮಲ್ಲಿದ್ದಾಗ ನನ್ನ ಯಾವ ಕೊರತೆಯಲ್ಲಿಯೂ ನಿಮಗೆ ತೊಂದರೆ ಕೊಡಲಿಲ್ಲ. ಮಕೆದೋನಿಯದಿಂದ ಬಂದಿದ್ದ ಸಹೋದರರು ನನಗೆ ಬೇಕಾಗಿದ್ದದ್ದನ್ನೆಲ್ಲ ಕೊಟ್ಟರು. ನಾನು ನಿಮಗೆ ಯಾವ ರೀತಿಯಲ್ಲಿಯೂ ಭಾರವಾಗದಂತೆ ನೋಡಿಕೊಂಡೆನು. ಇನ್ನು ಮುಂದೆಯೂ ನಾನು ನಿಮಗೆ ಭಾರವಾಗಿರುವುದಿಲ್ಲ.


ಆದರೆ ತಿಮೊಥೆಯನು ನಿಮ್ಮಿಂದ ನಮ್ಮ ಬಳಿಗೆ ಹಿಂತಿರುಗಿ ಬಂದಾಗ, ನಿಮ್ಮ ನಂಬಿಕೆಯ ಮತ್ತು ಪ್ರೀತಿಯ ಬಗ್ಗೆ ಶುಭವಾರ್ತೆಯನ್ನು ನಮಗೆ ಹೇಳಿದನು. ನೀವು ಯಾವಾಗಲೂ ನಮ್ಮನ್ನು ಜ್ಞಾಪಿಸಿಕೊಳ್ಳುವಿರೆಂತಲೂ ನಮ್ಮನ್ನು ಮತ್ತೆ ನೋಡಲು ಅತ್ಯಾಸೆಯಿಂದ ಇದ್ದೀರೆಂತಲೂ ಅವನು ನಮಗೆ ತಿಳಿಸಿದನು. ಅದೇ ರೀತಿಯಲ್ಲಿ ನಾವೂ ನಿಮ್ಮನ್ನು ನೋಡಲು ಅತ್ಯಾಸೆಯಿಂದ ಇದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು