Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 18:6 - ಪರಿಶುದ್ದ ಬೈಬಲ್‌

6 ಆದರೆ ಯೆಹೂದ್ಯರು ಪೌಲನ ಉಪದೇಶವನ್ನು ತಿರಸ್ಕರಿಸಿ ದೂಷಣೆ ಮಾಡಿದರು. ಆದ್ದರಿಂದ ಪೌಲನು ತನ್ನ ಬಟ್ಟೆಗಳ ಧೂಳನ್ನು ಝಾಡಿಸಿ ಯೆಹೂದ್ಯರಿಗೆ, “ನೀವು ರಕ್ಷಣೆ ಹೊಂದದಿದ್ದರೆ, ಅದು ನಿಮ್ಮ ಸ್ವಂತ ತಪ್ಪು. ನನ್ನಿಂದ ಸಾಧ್ಯವಾದದ್ದನ್ನೆಲ್ಲ ನಾನು ಮಾಡಿದ್ದೇನೆ. ಇನ್ನು ಮೇಲೆ ನಾನು ಯೆಹೂದ್ಯರಲ್ಲದ ಜನರ ಬಳಿಗೆ ಹೋಗುತ್ತೇನೆ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವರು ಎದುರಿಸಿ, ದೂಷಿಸಲಾಗಿ ಅವನು ತನ್ನ ವಸ್ತ್ರಗಳನ್ನು ಝಾಡಿಸಿ ಅವರಿಗೆ; “ನಿಮ್ಮ ನಾಶನಕ್ಕೆ ನೀವೇ ಹೊಣೆ. ನಾನು ಶುದ್ಧನು. ನಾನು ಇಂದಿನಿಂದ ಅನ್ಯಜನರ ಬಳಿಗೆ ಹೋಗುತ್ತೇನೆ” ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆದರೆ ಆ ಯೆಹೂದ್ಯರು ಅವನನ್ನು ಪ್ರತಿಭಟಿಸಿ ದೂಷಿಸಿದರು. ಆಗ ಪೌಲನು ತನ್ನ ಹೊದಿಕೆಯನ್ನು ಒದರಿ, “ನಿಮ್ಮ ವಿನಾಶಕ್ಕೆ ನೀವೇ ಹೊಣೆ; ಅದಕ್ಕೆ ನಾನು ಬಾಧ್ಯನಲ್ಲ. ಇಂದಿನಿಂದ ನಾನು ಅನ್ಯಧರ್ಮೀಯರ ಕಡೆಗೆ ಹೋಗುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವರು ಎದುರಿಸಿ ದೂಷಿಸಲಾಗಿ ಅವನು ತನ್ನ ವಸ್ತ್ರಗಳನ್ನು ಝಾಡಿಸಿ ಅವರಿಗೆ - ನಿಮ್ಮ ನಾಶನಕ್ಕೆ ನೀವೇ ಹೊಣೆ. ನಾನು ಇಂದಿನಿಂದ ಶುದ್ಧಮನಸ್ಸುಳ್ಳವನಾಗಿ ಅನ್ಯಜನರ ಬಳಿಗೆ ಹೋಗುತ್ತೇನೆ ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದರೆ ಯೆಹೂದ್ಯರು ಪೌಲನನ್ನು ವಿರೋಧಿಸಿ ದೂಷಿಸಿದಾಗ, ಅವನು ಅವರನ್ನು ಪ್ರತಿಭಟಿಸುವಂತೆ ತನ್ನ ಬಟ್ಟೆಗಳನ್ನು ಝಾಡಿಸಿ, “ನಿಮ್ಮ ರಕ್ತವು ನಿಮ್ಮ ತಲೆಯ ಮೇಲೆ ಇರಲಿ. ನಿಮ್ಮ ವಿನಾಶಕ್ಕೆ ನೀವೇ ಹೊಣೆ. ಅದಕ್ಕೆ ನಾನು ಜವಾಬ್ದಾರನಲ್ಲ, ಇಂದಿನಿಂದ ನಾನು ಶುದ್ಧಮನಸ್ಸುಳ್ಳವನಾಗಿ ಯೆಹೂದ್ಯರಲ್ಲದವರ ಬಳಿಗೆ ಹೋಗುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಹೊಲ್ಯಾರ್ ಜುದೆವಾಂಚ್ಯಾ ಲೊಕಾನಿ ಪಾವ್ಲುಚಿ ಶಿಕಾಪಾ ಸಗ್ಳಿ ತಿರಸ್ಕಾರ್ ಕರ್‍ಲ್ಯಾನಿ, ಅನಿ ಗಾಳಿಯಾ ದಿಲ್ಯಾನಿ, ತೆಚಾ ಸಾಟ್ನಿ ಪಾವ್ಲುನ್ ಅಪ್ನಾಚಿ ಫಾಳಿಯಾಂಚಿ ಧುಳ್ ಝಾಡ್ಸುನ್ ಜುದೆವಾಂಚ್ಯಾ ಲೊಕಾಕ್ನಿ “ತುಮ್ಚೊ ನಾಸ್ ಹೊವ್ಕ್ ಮಿಯಾ ಜವಾಬ್ದಾರಿ ನ್ಹಯ್ ತುಮಿಚ್ ಕಾರನ್ ಹೆಜಾ ಮಾನಾ ಮಿಯಾ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾ ಜಗ್ಗೊಳ್ ಜಾತಾ!” ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 18:6
37 ತಿಳಿವುಗಳ ಹೋಲಿಕೆ  

ಜನರು ಅದನ್ನು ಕೇಳಿದರೂ ಅಲಕ್ಷ್ಯ ಮಾಡಿದಾಗ ಶತ್ರುವು ಬಂದು ಅವರನ್ನು ಸೆರೆಹಿಡಿದು ಕೈದಿಗಳನ್ನಾಗಿ ಮಾಡಿ ಕೊಂಡೊಯ್ಯುವನು. ಆಗ ಅವರ ಮರಣಕ್ಕೆ ಅವರೇ ಕಾರಣರಾಗುವರು.


ಆ ಕೆಟ್ಟ ಮಗನಿಂದ ಯಾರಾದರೂ ಸಾಲ ತೆಗೆದುಕೊಂಡಿದ್ದರೆ ಅವನು ಅವರಿಂದ ಬಡ್ಡಿಯನ್ನು ಕಡ್ಡಾಯವಾಗಿ ವಸೂಲು ಮಾಡಿದ್ದಿರಬಹುದು. ಹೀಗಿರುವದರಿಂದ ಆ ಕೆಟ್ಟ ಮಗನು ಹೆಚ್ಚುಕಾಲ ಬದುಕುವುದಿಲ್ಲ. ಅವನು ಭಯಂಕರ ಕೃತ್ಯಗಳನ್ನು ಮಾಡಿರುವದರಿಂದ ಕೊಲ್ಲಲ್ಪಡುವನು. ಅವನ ಮರಣಕ್ಕೆ ಅವನೇ ಜವಾಬ್ದಾರನು.


ನಂತರ ನಾನು ನನ್ನ ಉಡುಪಿನ ನೆರಿಗೆಯನ್ನು ಝಾಡಿಸಿ, “ತಾನು ಮಾಡಿದ ಪ್ರತಿಜ್ಞೆಯಂತೆ ನಡೆಯದವನನ್ನು ದೇವರು ಅವನ ಮನೆಯಿಂದ ಝಾಡಿಸಿಬಿಡಲಿ; ಅವನು ತಾನು ಗಳಿಸಿದ್ದೆಲ್ಲವನ್ನು ಕಳೆದುಕೊಳ್ಳಲಿ” ಎಂದು ಹೇಳಿದಾಗ ಜನರೆಲ್ಲರೂ “ಆಮೆನ್” ಅಂದರು; ಯೆಹೋವನನ್ನು ಸ್ತುತಿಸಿದರು. ತಾವು ಮಾಡಿದ ಪ್ರತಿಜ್ಞೆಯಂತೆ ನಡೆದುಕೊಂಡರು.


ಆದ್ದರಿಂದ ಪೌಲ ಬಾರ್ನಬರು ಅವರ ವಿರೋಧವಾಗಿ ತಮ್ಮ ಕಾಲಿನ ಧೂಳನ್ನು ಝಾಡಿಸಿ, ಇಕೋನಿಯಾ ಪಟ್ಟಣಕ್ಕೆ ಹೋದರು.


ನೀವು ಅಸಹ್ಯಕರವಾದ ನಿರರ್ಥಕಗೋಷ್ಠಿಗಳನ್ನು ಮಾಡದಿರುವುದನ್ನು ಕಂಡ ಅವಿಶ್ವಾಸಿಗಳು ನಿಮ್ಮ ವಿಷಯದಲ್ಲಿ ಆಶ್ಚರ್ಯಪಡುವರು. ಆದ್ದರಿಂದಲೇ ಅವರು ನಿಮ್ಮ ಬಗ್ಗೆ ಕೆಟ್ಟ ಸಂಗತಿಗಳನ್ನು ಹೇಳುವರು.


ಆ ಊರಿನ ಜನರು ನಿಮ್ಮನ್ನು ಸ್ವಾಗತಿಸದಿದ್ದರೆ, ಆ ಊರಿನ ಹೊರಗೆ ಹೋಗಿ ನಿಮ್ಮ ಪಾದಗಳಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ. ಅದು ಅವರಿಗೆ ಎಚ್ಚರಿಕೆಯಾಗಿರುವುದು.”


ಜನರೆಲ್ಲರೂ, “ಅವನ ಸಾವಿಗೆ ನಾವೇ ಜವಾಬ್ದಾರರು. ಅವನ ಸಾವಿಗೆ ಏನಾದರೂ ದಂಡನೆಯಿದ್ದರೆ ಅದನ್ನು ನಾವು ಮತ್ತು ನಮ್ಮ ಮಕ್ಕಳು ಅನುಭವಿಸುತ್ತೇವೆ” ಎಂದು ಉತ್ತರಕೊಟ್ಟರು.


ನೀವು ಕ್ರಿಸ್ತನನ್ನು ಅನುಸರಿಸುತ್ತಿರುವುದರ ನಿಮಿತ್ತವಾಗಿ ನಿಮ್ಮ ಬಗ್ಗೆ ಜನರು ಕೆಟ್ಟದ್ದನ್ನು ನುಡಿದರೆ ನೀವು ಭಾಗ್ಯವಂತರಾಗಿದ್ದೀರಿ. ತೇಜೋಮಯವಾದ ಆತ್ಮನು ನಿಮ್ಮಲ್ಲಿ ನೆಲೆಗೊಂಡಿದ್ದಾನೆ. ಆತನು ದೇವರಾತ್ಮನಾಗಿದ್ದಾನೆ.


ಅವನು ತನ್ನೊಂದಿಗೆ ಸಮ್ಮತಿಸದಿರುವ ಜನರಿಗೆ ಸಾತ್ವಿಕ ರೀತಿಯಲ್ಲಿ ಉಪದೇಶ ಮಾಡಬೇಕು. ಅವರು ಸತ್ಯವನ್ನು ಅಂಗೀಕರಿಸಿಕೊಳ್ಳುವಂತೆ ದೇವರು ಅವರ ಹೃದಯಗಳನ್ನು ಪರಿವರ್ತಿಸಬಲ್ಲನು.


ದೇವರು ಕೇವಲ ಯೆಹೂದ್ಯರ ದೇವರಲ್ಲ. ಆತನು ಯೆಹೂದ್ಯರಲ್ಲದವರಿಗೂ ಸಹ ದೇವರಾಗಿದ್ದಾನೆ.


“ದೇವರು ತನ್ನ ರಕ್ಷಣೆಯನ್ನು ಯೆಹೂದ್ಯರಲ್ಲದವರಿಗೆ ಕಳುಹಿಸಿದ್ದಾನೆ. ಅವರು ಅದಕ್ಕೆ ಕಿವಿಗೊಡುವರು. ಯೆಹೂದ್ಯರಾದ ನಿಮಗೆ ಇದು ತಿಳಿದಿರಲಿ!”


ನಾನು ಜನರಿಗೆ, ‘ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿರಿ’ ಎಂತಲೂ ಅವರಿಗಾಗಿರುವ ಮಾನಸಾಂತರವನ್ನು ಯೋಗ್ಯವಾದ ಕಾರ್ಯಗಳ ಮೂಲಕ ತೋರ್ಪಡಿಸಬೇಕೆಂತಲೂ ಹೇಳಿದೆನು. ಮೊದಲನೆಯದಾಗಿ ದಮಸ್ಕಕ್ಕೂ ಬಳಿಕ ಜೆರುಸಲೇಮಿಗೂ ಜುದೇಯದ ಪ್ರತಿಯೊಂದು ಭಾಗಕ್ಕೂ ಹೋಗಿ ಅಲ್ಲಿರುವ ಜನರಿಗೆ ಈ ಸಂಗತಿಗಳನ್ನು ತಿಳಿಸಿದೆನು. ಅಲ್ಲದೆ ಯೆಹೂದ್ಯರಲ್ಲದ ಜನರ ಬಳಿಗೂ ಹೋದೆನು.


ಪ್ರತಿಯೊಂದು ಸಭಾಮಂದಿರದಲ್ಲಿಯೂ ನಾನು ಅವರನ್ನು ದಂಡಿಸಿದೆನು. ಯೇಸುವಿನ ವಿರುದ್ಧ ದೂಷಣೆಯ ಮಾತುಗಳನ್ನು ಅವರ ಬಾಯಿಂದ ಹೊರಡಿಸಲು ನಾನು ಪ್ರಯತ್ನಿಸಿದೆನು. ಆ ವಿಶ್ವಾಸಿಗಳ ಮೇಲೆ ಬಹುಕೋಪವುಳ್ಳವನಾಗಿದ್ದು ಅವರನ್ನು ಹುಡುಕಿಹುಡುಕಿ ಹಿಂಸಿಸುವುದಕ್ಕಾಗಿ ವಿದೇಶದ ಪಟ್ಟಣಗಳಿಗೂ ಹೋದೆನು.


ಅಂತೆಯೇ ಸೇವಕರು ಬೀದಿಬೀದಿಗಳಿಗೆ ಹೋಗಿ ತಾವು ಕಂಡ ಜನರನ್ನೆಲ್ಲಾ ಒಳ್ಳೆಯವರು, ಕೆಟ್ಟವರು ಎನ್ನದೆ ಒಟ್ಟುಗೂಡಿಸಿ ಊಟ ಸಿದ್ಧವಾಗಿದ್ದ ಸ್ಥಳಕ್ಕೆ ಕರೆತಂದರು. ಆ ಸ್ಥಳವು ಜನರಿಂದ ತುಂಬಿಹೋಯಿತು.


ಒಂದು ಮನೆಯವರು ಅಥವಾ ಒಂದು ಊರಿನವರು ನಿಮ್ಮನ್ನು ಸ್ವಾಗತಿಸದಿದ್ದರೆ ಇಲ್ಲವೇ ನಿಮ್ಮ ಮಾತನ್ನು ಕೇಳದಿದ್ದರೆ ನೀವು ಆ ಸ್ಥಳವನ್ನು ಬಿಟ್ಟುಹೋಗುವಾಗ, ನಿಮ್ಮ ಕಾಲಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ.


ಅವರು ಹಲವಾರು ವಿಧದಲ್ಲಿ ಆತನನ್ನು ದೂಷಿಸಿ ನಿಂದಿಸಿದರು.


“ಆದ್ದರಿಂದ ನಾನು ನಿಮಗೆ ಹೇಳುವುದೇನೆಂದರೆ, ದೇವರ ರಾಜ್ಯವು ನಿಮ್ಮಿಂದ ತೆಗೆದುಹಾಕಲ್ಪಟ್ಟು ಆ ರಾಜ್ಯದಲ್ಲಿ ದೇವರ ಇಷ್ಟಕ್ಕನುಸಾರವಾದ ಕಾರ್ಯಗಳನ್ನು ಮಾಡುವವರಿಗೆ ಕೊಡಲ್ಪಡುವುದು.


ಅನೇಕ ಜನರು ಪೂರ್ವ ಮತ್ತು ಪಶ್ಚಿಮ ದಿಕ್ಕುಗಳಿಂದ ಬರುತ್ತಾರೆ. ಅವರು ಪರಲೋಕರಾಜ್ಯದಲ್ಲಿ ಅಬ್ರಹಾಮ, ಇಸಾಕ, ಯಾಕೋಬ ಇವರ ಸಂಗಡ ಕುಳಿತುಕೊಂಡು ಊಟಮಾಡುತ್ತಾರೆ.


“ಯಾವನಾದರೂ ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ಶಪಿಸಿದರೆ, ಅವನಿಗೆ ಮರಣಶಿಕ್ಷೆಯಾಗಬೇಕು. ಅವನು ತನ್ನ ತಂದೆತಾಯಿಗಳನ್ನು ಶಪಿಸಿದನು. ಅವನ ಮರಣಕ್ಕೆ ಅವನೇ ಜವಾಬ್ದಾರನಾಗಿದ್ದಾನೆ.


ನೀನು ನಿನ್ನ ಹಸ್ತಗಳನ್ನು ಯಾರ ಮೇಲಾದರೂ ಇಟ್ಟು ಅವನನ್ನು ಸಭಾಹಿರಿಯನನ್ನಾಗಿ ನೇಮಿಸುವುದಕ್ಕಿಂತ ಮೊದಲೇ ಗಮನವಿಟ್ಟು ಆಲೋಚನೆಮಾಡು. ಇತರ ಜನರ ಪಾಪಗಳಲ್ಲಿ ಪಾಲುಗಾರನಾಗದೆ ಶುದ್ಧನಾಗಿರು.


ಅವರನ್ನು ಕೊಂದ ಅಪರಾಧವು ಯೋವಾಬನ ಮೇಲೆಯೂ ಅವನ ಕುಟುಂಬದ ಮೇಲೆಯೂ ಶಾಶ್ವತವಾಗಿರಲಿ. ಆದರೆ ದಾವೀದನನ್ನೂ ಅವನ ಸಂತತಿಯವರನ್ನೂ ಅವನ ಸಿಂಹಾಸನವನ್ನೂ ಯೆಹೋವನು ಶಾಶ್ವತವಾಗಿ ಆಶೀರ್ವದಿಸಲಿ” ಎಂದು ಹೇಳಿದನು.


“‘ಆದರೆ ವೈರಿಯು ಬರುವಂತದ್ದನ್ನು ಆ ಕಾವಲುಗಾರನು ಕಂಡರೂ, ಜನರನ್ನು ಎಚ್ಚರಿಸಲು ತುತ್ತೂರಿಯನ್ನು ಊದದಿದ್ದರೆ ವೈರಿಯು ಅವರನ್ನು ಸೆರೆಹಿಡಿದು ಕೈದಿಗಳನ್ನಾಗಿ ಮಾಡಿ ಕೊಂಡೊಯ್ಯುವನು. ಆ ಮನುಷ್ಯನು ಪಾಪಮಾಡಿದ್ದರಿಂದ ಆ ಶಿಕ್ಷೆಯು ಅವನಿಗೆ ದೊರಕಿತು. ಆದರೆ, ಕಾವಲುಗಾರನು ಕೂಡಾ ಅವನ ಮರಣಕ್ಕೆ ಕಾರಣನಾಗುವನು.’


ಯೆಹೂದ್ಯ ಯಾಜಕರು ಮತ್ತು ನಾಯಕರು, “ಅವನು ಖಂಡಿತವಾಗಿ ಆ ದುಷ್ಟಜನರನ್ನು ಕೊಂದು ಸುಗ್ಗಿಕಾಲದಲ್ಲಿ ತನ್ನ ಪಾಲನ್ನು ತನಗೆ ಕೊಡುವ ರೈತರಿಗೆ ಅದನ್ನು ಗುತ್ತಿಗೆಗೆ ಕೊಡುತ್ತಾನೆ” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು