ಅಪೊಸ್ತಲರ ಕೃತ್ಯಗಳು 18:8 - ಪರಿಶುದ್ದ ಬೈಬಲ್8 ಕ್ರಿಸ್ಪನು ಸಭಾಮಂದಿರದ ಅಧ್ಯಕ್ಷನಾಗಿದ್ದನು. ಕ್ರಿಸ್ಪನು ಮತ್ತು ಅವನ ಮನೆಯಲ್ಲಿ ವಾಸವಾಗಿದ್ದ ಎಲ್ಲಾ ಜನರು ಪ್ರಭುವಿನಲ್ಲಿ ನಂಬಿಕೆಯಿಟ್ಟರು. ಕೊರಿಂಥದಲ್ಲಿ ಇತರ ಅನೇಕ ಜನರು ಪೌಲನಿಗೆ ಕಿವಿಗೊಟ್ಟರು ಮತ್ತು ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಸಭಾಮಂದಿರದ ಅಧ್ಯಕ್ಷನಾದ ಕ್ರಿಸ್ಪನು ತನ್ನ ಮನೆಯವರೆಲ್ಲರ ಸಹಿತ ಕರ್ತನಲ್ಲಿ ನಂಬಿಕೆಯಿಟ್ಟನು. ಮತ್ತು ಕೊರಿಂಥದವರಲ್ಲಿ ಅನೇಕ ಜನರು ಪೌಲನ ಬೋಧನೆಯನ್ನು ಕೇಳಿ ವಿಶ್ವಾಸವಿಟ್ಟು ದೀಕ್ಷಾಸ್ನಾನ ಮಾಡಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಪ್ರಾರ್ಥನಾಮಂದಿರದ ಅಧ್ಯಕ್ಷ ಕ್ರಿಸ್ಪ ಎಂಬವನೂ ಅವನ ಮನೆಯವರೆಲ್ಲರೂ ಪ್ರಭುವಿನಲ್ಲಿ ವಿಶ್ವಾಸವಿಟ್ಟರು. ಕೊರಿಂಥದ ಇನ್ನೂ ಅನೇಕ ಜನರು ಪೌಲನ ಬೋಧನೆಯನ್ನು ಕೇಳಿ ವಿಶ್ವಾಸವಿಟ್ಟರು ಮತ್ತು ದೀಕ್ಷಾಸ್ನಾನ ಪಡೆದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಸಭಾಮಂದಿರದ ಅಧ್ಯಕ್ಷನಾದ ಕ್ರಿಸ್ಪನು ತನ್ನ ಮನೆಯವರೆಲ್ಲರ ಸಹಿತ ಕರ್ತನಲ್ಲಿ ನಂಬಿಕೆಯಿಟ್ಟನು. ಮತ್ತು ಕೊರಿಂಥದವರಲ್ಲಿ ಅನೇಕರು ಕೇಳಿ ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಸಭಾಮಂದಿರದ ನಾಯಕ ಕ್ರಿಸ್ಪ ಎಂಬುವನು ತನ್ನ ಮನೆಯವರೆಲ್ಲರೊಂದಿಗೆ ಕರ್ತ ಯೇಸುವಿನಲ್ಲಿ ವಿಶ್ವಾಸವನ್ನಿಟ್ಟನು. ಪೌಲನ ಬೋಧನೆ ಕೇಳಿದ ಕೊರಿಂಥದವರಲ್ಲಿ ಇನ್ನೂ ಅನೇಕರು ವಿಶ್ವಾಸವನ್ನಿಟ್ಟು ದೀಕ್ಷಾಸ್ನಾನ ಪಡೆದುಕೊಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಕ್ರಿಸ್ಪಸ್ ಮನ್ತಲೊ ಎಕ್ ಮಾನುಸ್ ಸಿನಾಗೊಚೊ ಅದಿಕಾರಿ ಹೊಲ್ಲೊ, ಅನಿ ತೆಚ್ಯಾ ಘರಾತ್ ಹೊತ್ತಿ ಸಗ್ಳ್ಯಾ ಲೊಕಾನಿ ಧನಿಯಾಚೆರ್ ವಿಶ್ವಾಸ್ ಥವ್ಲ್ಯಾನಿ, ಕೊರಿಂಥ್ ಮನ್ತಲ್ಯಾ ಗಾಂವಾತ್ ಪಾವ್ಲುನ್ ಸಾಂಗಲ್ಲಿ ಬರಿ ಖಬರ್ ಆಯ್ಕಲ್ಯಾ ಲೈ ಲೊಕಾನಿ ವಿಶ್ವಾಸ್ ಕರುನ್ ಬಾಲ್ತಿಮ್ ಘೆಟ್ಲ್ಯಾನಿ. ಅಧ್ಯಾಯವನ್ನು ನೋಡಿ |
“ನೀವು ಯೆಹೋವನ ಸೇವೆಮಾಡಲು ಇಷ್ಟಪಡದಿದ್ದರೆ ಯಾರ ಸೇವೆಯನ್ನು ಮಾಡಬೇಕೆಂದಿದ್ದೀರಿ? ಈ ಹೊತ್ತೇ ಆರಿಸಿಕೊಳ್ಳಿರಿ. ನಿಮ್ಮ ಪೂರ್ವಿಕರು ಯೂಫ್ರೇಟೀಸ್ ನದಿಯ ಆಚೆ ಇದ್ದಾಗ ಪೂಜಿಸುತ್ತಿದ್ದ ದೇವರುಗಳ ಸೇವೆಮಾಡುವಿರೋ ಅಥವಾ ಈ ಪ್ರದೇಶದಲ್ಲಿದ್ದ ಅಮೋರಿಯರ ದೇವತೆಗಳ ಸೇವೆಮಾಡುವಿರೋ ಎಂಬುದನ್ನು ನೀವು ಇಂದು ನಿರ್ಧರಿಸಬೇಕು. ಆಯ್ಕೆ ನಿಮಗೆ ಬಿಟ್ಟಿದ್ದು. ಆದರೆ ನಾನು ಮತ್ತು ನನ್ನ ಕುಟುಂಬದವರು ಯೆಹೋವನನ್ನೇ ಸೇವಿಸುತ್ತೇವೆ” ಅಂದನು.