Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 19:12 - ಪರಿಶುದ್ದ ಬೈಬಲ್‌

12 ಪೌಲನ ಕರವಸ್ತ್ರಗಳನ್ನು ಮತ್ತು ಬಟ್ಟೆಗಳನ್ನು ಕೆಲವರು ತೆಗೆದುಕೊಂಡು ಹೋಗಿ ರೋಗಿಗಳ ಮೇಲೆ ಹಾಕುತ್ತಿದ್ದರು. ಆ ಕೂಡಲೇ ರೋಗಿಗಳು ಗುಣಹೊಂದುತ್ತಿದ್ದರು. ದೆವ್ವಗಳಿಂದ ಪೀಡಿತರಾಗಿದ್ದವರನ್ನು ದೆವ್ವಗಳು ಬಿಟ್ಟುಹೋಗುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಜನರು ಅವನ ಮೈಮೇಲಿನಿಂದ ಕೈವಸ್ತ್ರಗಳನ್ನೂ, ರುಮಾಲುಗಳನ್ನೂ ತಂದು ರೋಗಿಗಳ ಮೇಲೆ ಹಾಕಲು ಅವರ ರೋಗಗಳು ವಾಸಿಯಾದವು, ದುರಾತ್ಮಗಳೂ ಬಿಟ್ಟುಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅವನು ಬಳಸಿದ ಕರವಸ್ತ್ರಗಳನ್ನೂ ಉಡುವಸ್ತ್ರಗಳನ್ನೂ ಜನರು ತೆಗೆದುಕೊಂಡು ಹೋಗಿ ವ್ಯಾಧಿಸ್ಥರಿಗೆ ಮುಟ್ಟಿಸಿದ್ದೇ, ಅವರ ವ್ಯಾಧಿಗಳು ಗುಣವಾಗುತ್ತಿದ್ದವು; ದೆವ್ವಗಳು ಬಿಟ್ಟುಹೋಗುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಜನರು ಅವನ ಮೈಮೇಲಿನಿಂದ ಕೈವಸ್ತ್ರಗಳನ್ನೂ ಉಡಿವಸ್ತ್ರಗಳನ್ನೂ ತಂದು ರೋಗಿಗಳ ಮೇಲೆ ಹಾಕಲು ಅವರವರ ರೋಗಗಳು ವಾಸಿಯಾದವು, ದೆವ್ವಗಳೂ ಬಿಟ್ಟುಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಹೀಗೆ ಪೌಲನನ್ನು ಮುಟ್ಟಿದ ಕೈವಸ್ತ್ರಗಳನ್ನೂ ಉಡುಪುಗಳನ್ನೂ ತೆಗೆದುಕೊಂಡುಹೋಗಿ ರೋಗಿಗಳಿಗೆ ಮುಟ್ಟಿಸಿದಾಗ ಅವರು ರೋಗಗಳಿಂದ ವಾಸಿಯಾಗುತ್ತಿದ್ದರು ಹಾಗೂ ಅವರಲ್ಲಿಯ ದುರಾತ್ಮಗಳು ಬಿಟ್ಟು ಹೋಗುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ತಸೆ ಹೊವ್ನ್ ಲೊಕಾಕ್ನಿ ತೆಚ್ಯಾ ಹಾತಿತ್ಲೊ ಟವಾಲೊ ನಾ ತರ್ ಕಾಮ್ ಕರ್‍ತಾನಾ ನೆಸ್ತಲಿ ವೈಲಿ ಅಂಗಿ ನ್ಹೆವ್ನ್ ಶಿಕ್ ಹೊತ್ತ್ಯಾ ಲೊಕಾಂಚ್ಯಾ ವರ್‍ತಿ ಘಾಲ್ತಾನಾ ತೆಂಕಾ ಗುನ್ ಹೊಲೆ, ಅನಿ ಗಿರೆ ಸೊಡುನ್ ಗೆಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 19:12
5 ತಿಳಿವುಗಳ ಹೋಲಿಕೆ  

ಹೀಗಿರಲು, ಪೇತ್ರನು ದಾರಿಯಲ್ಲಿ ಹೋಗುತ್ತಾನೆಂಬ ಸುದ್ದಿಯನ್ನು ಕೇಳಿದ ಜನರು ಕಾಯಿಲೆಯವರನ್ನು ಬೀದಿಗಳಿಗೆ ಹೊತ್ತುಕೊಂಡು ಬಂದು ಹಾಸಿಗೆ ಮತ್ತು ಡೋಲಿಗಳ ಮೇಲೆ ಮಲಗಿಸುತ್ತಿದ್ದರು. ಪೇತ್ರನ ನೆರಳು ಬಿದ್ದರೆ ಸಾಕು, ಕಾಯಿಲೆಯವರು ಗುಣಮುಖರಾಗುತ್ತಾರೆಂದು ಜನರು ಯೋಚಿಸಿಕೊಂಡಿದ್ದರು.


ನಂಬುವವರಾದರೋ ಅದ್ಭುತಕಾರ್ಯಗಳನ್ನು ಮಾಡುವರು. ಅವರು ನನ್ನ ಹೆಸರಿನ ಮೂಲಕ ದೆವ್ವಗಳನ್ನು ಬಿಡಿಸುವರು. ತಾವೆಂದೂ ಕಲಿತಿಲ್ಲದ ಭಾಷೆಗಳಲ್ಲಿ ಮಾತನಾಡುವರು.


ಯೇಸುವಿನ ವಿಷಯವಾದ ಸುದ್ದಿಯು ಸಿರಿಯ ದೇಶದಲ್ಲೆಲ್ಲಾ ಹರಡಿತು. ಜನರು ಕಾಯಿಲೆಯವರನ್ನೆಲ್ಲ ಯೇಸುವಿನ ಬಳಿಗೆ ತಂದರು. ಅವರು ನಾನಾ ವಿಧವಾದ ವ್ಯಾಧಿಗಳಿಂದ ಮತ್ತು ನೋವಿನಿಂದ ಬಾಧೆಪಡುತ್ತಿದ್ದರು. ಕೆಲವರು ತೀವ್ರವಾದ ನೋವಿನಿಂದ ನರಳುತ್ತಿದ್ದರು. ಕೆಲವರು ದೆವ್ವಗಳಿಂದ ಪೀಡಿತರಾಗಿದ್ದರು. ಕೆಲವರು ಮೂರ್ಛಾರೋಗಿಗಳಾಗಿದ್ದರು. ಕೆಲವರು ಪಾರ್ಶ್ವವಾಯು ರೋಗಿಗಳಾಗಿದ್ದರು. ಯೇಸು ಇವರನ್ನೆಲ್ಲಾ ಗುಣಪಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು