Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 19:16 - ಪರಿಶುದ್ದ ಬೈಬಲ್‌

16 ಬಳಿಕ ದೆವ್ವಪೀಡಿತನಾಗಿದ್ದ ಆ ಮನುಷ್ಯನು ಈ ಯೆಹೂದ್ಯರ ಮೇಲೆ ಹಾರಿಬಿದ್ದನು. ಅವನು ಅವರಿಗಿಂತ ಹೆಚ್ಚು ಬಲವುಳ್ಳವನಾಗಿದ್ದನು. ಅವನು ಅವರಿಗೆ ಹೊಡೆದು ಅವರ ಬಟ್ಟೆಗಳನ್ನು ಹರಿದು ಹಾಕಿದನು. ಅವರು ಆ ಮನೆಯಿಂದ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಮತ್ತು ದುರಾತ್ಮ ಹಿಡಿದಿದ್ದ ಆ ಮನುಷ್ಯನು ಅವರ ಮೇಲೆ ಹಾರಿ ಬಿದ್ದು, ಅವರನ್ನೂ ಸೋಲಿಸಿ ಸದೆಬಡಿದಿದ್ದರಿಂದ ಅವರು ಗಾಯಗೊಂಡು ಬೆತ್ತಲೆಯಾಗಿ ಆ ಮನೆಯೊಳಗಿಂದ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅಲ್ಲದೆ ದೆವ್ವ ಹಿಡಿದಿದ್ದ ಮನುಷ್ಯನು ಅವರ ಮೇಲೆ ಹಾರಿಬಿದ್ದು, ಅಪ್ಪಳಿಸಿ, ಅವರೆಲ್ಲರನ್ನೂ ಅಧೀನಪಡಿಸಿದನು. ಅವರು ಗಾಯಗೊಂಡು, ನಗ್ನರಾಗಿ, ಆ ಮನೆಯಿಂದ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಮತ್ತು ದೆವ್ವಹಿಡಿದಿದ್ದ ಆ ಮನುಷ್ಯನು ಅವರ ಮೇಲೆ ಹಾರಿ ಬಿದ್ದು ಅವರಿಬ್ಬರನ್ನೂ ಸೋಲಿಸಿ ಬಲಾತ್ಕರಿಸಿದ್ದರಿಂದ ಅವರು ಬೆತ್ತಲೆಯಾಗಿಯೂ ಗಾಯವುಳ್ಳವರಾಗಿಯೂ ಆ ಮನೆಯೊಳಗಿಂದ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ದುರಾತ್ಮ ಪೀಡಿತ ಮನುಷ್ಯನು ಅವರ ಮೇಲೆ ಹಾರಿಬಿದ್ದು, ಅವರೆಲ್ಲರಿಗಿಂತಲೂ ಹೆಚ್ಚು ಬಲಗೊಂಡು ಅವರನ್ನು ಬಡಿದು ಗಾಯಗೊಳಿಸಲು, ಅವರು ನಗ್ನರಾಗಿಯೇ ಮನೆಬಿಟ್ಟು ಹೊರಗೆ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಖರೆ ಮ್ಹಾರು ಧರಲ್ಯಾ ಮಾನ್ಸಾನ್ ತೆಂಕಾ ಧರುನ್ ತೆಂಚೆ ಕಪ್ಡೆ ಪಿಂಜುನ್ ತುಕ್ಡೆ ಕರ್‍ಲ್ಯಾನ್ ಅನಿ ಘರಾತ್ನಾ ಪಳುನ್ ಗೆಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 19:16
8 ತಿಳಿವುಗಳ ಹೋಲಿಕೆ  

ಆಗ ಜನರು ನಡೆದ ಸಂಗತಿಯನ್ನು ನೋಡಲು ಯೇಸುವಿನ ಬಳಿಗೆ ಬಂದರು. ಅನೇಕ ದೆವ್ವಗಳಿಂದ ಪೀಡಿತನಾಗಿದ್ದ ಮನುಷ್ಯನು ಬಟ್ಟೆ ಹಾಕಿಕೊಂಡು ಅಲ್ಲಿ ಕುಳಿತಿರುವುದನ್ನು ಅವರು ಕಂಡರು. ಅವನು ಮತ್ತೆ ಸ್ವಸ್ಥ ಬುದ್ಧಿಯುಳ್ಳವನಾಗಿದ್ದನು. ಆ ಜನರು ಅವನನ್ನು ನೋಡಿ ಹೆದರಿದರು.


ಅದನ್ನು ನೋಡಲು ಜನರೆಲ್ಲರೂ ಯೇಸುವಿದ್ದಲ್ಲಿಗೆ ಬಂದರು. ಆ ಮನುಷ್ಯನು ಯೇಸುವಿನ ಪಾದಗಳ ಬಳಿಯಲ್ಲಿ ಕುಳಿತಿದ್ದುದನ್ನು ಅವರು ನೋಡಿದರು. ಅವನು ಬಟ್ಟೆಗಳನ್ನು ಹಾಕಿಕೊಂಡಿದ್ದನು; ಸ್ವಸ್ಥಬುದ್ಧಿಯುಳ್ಳವನಾಗಿದ್ದನು. ದೆವ್ವಗಳು ಅವನನ್ನು ಬಿಟ್ಟುಹೋಗಿದ್ದವು. ಜನರಿಗೆ ಭಯವಾಯಿತು.


ಅವನು ಜಿಗಿದು, ತನ್ನ ಪಾದಗಳ ಮೇಲೆ ನಿಂತುಕೊಂಡು ನಡೆಯತೊಡಗಿದನು. ಅವನೂ ಅವರೊಂದಿಗೆ ದೇವಾಲಯಕ್ಕೆ ಹೋದನು. ಅವನು ನಡೆಯುತ್ತಾ ಜಿಗಿಯುತ್ತಾ ದೇವರನ್ನು ಕೊಂಡಾಡುತ್ತಿದ್ದನು.


ಆದರೆ ಒಂದು ಸಲ ದೆವ್ವವೊಂದು ಅವರಿಗೆ, “ನನಗೆ ಯೇಸುವೂ ಗೊತ್ತು ಪೌಲನೂ ಗೊತ್ತು. ಆದರೆ ನೀವು ಯಾರು?” ಎಂದು ಪ್ರತ್ಯುತ್ತರ ಕೊಟ್ಟಿತು.


ಎಫೆಸದಲ್ಲಿದ್ದ ಯೆಹೂದ್ಯರು ಮತ್ತು ಗ್ರೀಕರು ಇದನ್ನು ಕೇಳಿ ಭಯಗ್ರಸ್ತರಾದರು ಮತ್ತು ಪ್ರಭು ಯೇಸುವಿನ ಹೆಸರನ್ನು ಸನ್ಮಾನಿಸಿದರು.


ಈ ಸುಳ್ಳುಬೋಧಕರು ಆ ಜನರಿಗೆ ಸ್ವಾತಂತ್ರ್ಯವನ್ನು ಕೊಡುವುದಾಗಿ ವಾಗ್ದಾನ ಮಾಡುತ್ತಾರೆ. ಆದರೆ ಈ ಸುಳ್ಳುಬೋಧಕರೇ ಸ್ವತಂತ್ರರಾಗದೆ ನಾಶವಾಗುವಂಥ ಸಂಗತಿಗಳಿಗೆ ಗುಲಾಮರಾಗಿದ್ದಾರೆ. ಒಬ್ಬನು ಯಾವುದಕ್ಕೆ ಸೋತುಹೋಗಿದ್ದಾನೋ ಅದಕ್ಕೆ ಗುಲಾಮನಾಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು