ಅಪೊಸ್ತಲರ ಕೃತ್ಯಗಳು 19:19 - ಪರಿಶುದ್ದ ಬೈಬಲ್19 ವಿಶ್ವಾಸಿಗಳಲ್ಲಿ ಕೆಲವರು ಮಂತ್ರಗಳನ್ನು ಮಾಡುತ್ತಿದ್ದರು. ಈ ವಿಶ್ವಾಸಿಗಳು ತಮ್ಮ ಮಂತ್ರ ಪುಸ್ತಕಗಳನ್ನು ತೆಗೆದುಕೊಂಡು ಬಂದು ಜನರೆಲ್ಲರ ಮುಂದೆ ಅವುಗಳನ್ನು ಸುಟ್ಟುಹಾಕಿದರು. ಈ ಪುಸ್ತಕಗಳ ಬೆಲೆಯು ಸುಮಾರು ಐವತ್ತು ಸಾವಿರ ಬೆಳ್ಳಿನಾಣ್ಯಗಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಇದಲ್ಲದೆ ಮಾಟ ಮಂತ್ರಗಳನ್ನು ನಡಿಸಿದವರಲ್ಲಿ ಅನೇಕರು ತಮ್ಮ ಮಾಟಮಂತ್ರಗಳ ಪುಸ್ತಕಗಳನ್ನು ತಂದು, ಕೂಡಿಸಿ ಎಲ್ಲರ ಮುಂದೆ ಸುಟ್ಟುಬಿಟ್ಟರು. ಅವುಗಳ ಮೌಲ್ಯವನ್ನು ಲೆಕ್ಕಮಾಡಿ ಐವತ್ತು ಸಾವಿರ ಬೆಳ್ಳಿ ನಾಣ್ಯ ಆಯಿತೆಂದು ತಿಳಿದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಮಾಯಮಂತ್ರಮಾಡುತ್ತಿದ್ದ ಅನೇಕರು ತಮ್ಮ ಪುಸ್ತಕಗಳನ್ನು ತೆಗೆದುಕೊಂಡು ಬಂದು ಅವುಗಳನ್ನು ಎಲ್ಲರ ಮುಂದೆ ಸುಟ್ಟುಹಾಕಿದರು. ಆ ಪುಸ್ತಕಗಳ ಬೆಲೆಯನ್ನು ಎಣಿಕೆಮಾಡಿದಾಗ ಅದರ ಮೊತ್ತ ಐವತ್ತು ಸಾವಿರ ಬೆಳ್ಳಿನಾಣ್ಯಗಳಷ್ಟಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಇದಲ್ಲದೆ ಮಾಟ ಮಂತ್ರಗಳನ್ನು ನಡಿಸಿದವರಲ್ಲಿ ಅನೇಕರು ತಮ್ಮ ಪುಸ್ತಕಗಳನ್ನು ತಂದು ಕೂಡಿಸಿ ಎಲ್ಲರ ಮುಂದೆ ಸುಟ್ಟುಬಿಟ್ಟರು. ಅವುಗಳ ಕ್ರಯವನ್ನು ಲೆಕ್ಕಮಾಡಿ ಐವತ್ತು ಸಾವಿರ ಬೆಳ್ಳೀ ನಾಣ್ಯ ಆಯಿತೆಂದು ತಿಳಿದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಮಾಟಮಂತ್ರ ಮಾಡುತ್ತಿದ್ದವರು ತಮ್ಮ ಗ್ರಂಥಗಳನ್ನು ತೆಗೆದುಕೊಂಡು ಬಂದು ಎಲ್ಲರ ಮುಂದೆ ಸುಟ್ಟು ಹಾಕಿದರು. ಅವುಗಳ ಒಟ್ಟು ಮೌಲ್ಯ ಐವತ್ತು ಸಾವಿರ ಬೆಳ್ಳಿನಾಣ್ಯಗಳಷ್ಟಾಯಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ತವ್ಡೆ ನಸ್ತಾನಾ ಮೊಡಿ ಮಂತ್ರಾ ಕರ್ತಲ್ಯಾ ಲೊಕಾನಿ ಅನಿ ಥೈ ಹೊತ್ತ್ಯಾ ವಿಶ್ವಾಸಿ ಲೊಕಾನಿ ಅಪ್ಲಿ ಮೊಡಿಯಾಂಚಿ ಪುಸ್ತಕಾ ಹಾನುನ್ ಲೊಕಾಂಚ್ಯಾ ಇದ್ರಾಕ್ ತೆ ಜಾಳ್ವುನ್ ಟಾಕ್ಲ್ಯಾನಿ, ತ್ಯಾ ಪುಸ್ತಕಾಂಚಿ ಕಿಮ್ಮತ್ ಮೆಜುನ್ ಬಗಲ್ಲ್ಯಾ ತನ್ನಾ ಪನ್ನಾಸ್ ಹಜಾರ್ ಚಾಂದಿಚೆ ಪೈಸೆ ಹೊವ್ನ್ ಹೊತ್ತೆ. ಅಧ್ಯಾಯವನ್ನು ನೋಡಿ |
ಕೆಲವರು, “ಏನು ಮಾಡಬೇಕೆಂದು ಕಣಿಹೇಳುವವರನ್ನೂ ಬೇತಾಳಿಕರನ್ನೂ ವಿಚಾರಿಸು” ಎಂದು ಹೇಳುತ್ತಾರೆ. (ಕಣಿಹೇಳುವವರು ತಾವು ಮಂತ್ರಶಕ್ತಿಯುಳ್ಳವರೆಂದು ಜನರಿಗೆ ತೋರಿಸಲು ಪಕ್ಷಿಗಳು ಮಾಡುವ ಶಬ್ದವನ್ನು ಬಾಯಿಂದ ಮಾಡಿ ತಮಗೆ ರಹಸ್ಯಗಳು ಗೊತ್ತಿವೆ ಎಂದು ತೋರಿಸಿಕೊಳ್ಳುತ್ತಾರೆ.) ನಾನು ಹೇಳುವುದೇನೆಂದರೆ, “ಜನರು ಸಹಾಯಕ್ಕಾಗಿ ದೇವರನ್ನೇ ಕೇಳಿಕೊಳ್ಳಬೇಕು. ಆ ಕಣಿಹೇಳುವವರೂ ಬೇತಾಳಿಕರೂ ತಾವು ಏನು ಮಾಡಬೇಕೆಂದು ಸತ್ತವರನ್ನು ವಿಚಾರಿಸುವರು. ಜೀವಿಸುವವರು ಸತ್ತವರನ್ನು ಯಾಕೆ ವಿಚಾರಿಸಬೇಕು?”