Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 19:2 - ಪರಿಶುದ್ದ ಬೈಬಲ್‌

2 “ನೀವು ನಂಬಿಕೊಂಡಾಗ ಪವಿತ್ರಾತ್ಮನನ್ನು ಹೊಂದಿಕೊಂಡಿರಾ?” ಎಂದು ಕೇಳಿದನು. ಆ ಶಿಷ್ಯರು ಅವನಿಗೆ, “ಪವಿತ್ರಾತ್ಮನು ಇದ್ದಾನೆ ಎಂಬುದನ್ನು ನಾವು ಇದುವರೆಗೆ ಕೇಳಿಯೂ ಇಲ್ಲ!” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನೀವು ನಂಬಿದಾಗ ಪವಿತ್ರಾತ್ಮವರವನ್ನು ಹೊಂದಿದಿರೋ?” ಎಂದು ಅವರನ್ನು ಕೇಳಲು ಅವರು ಅವನಿಗೆ; “ಇಲ್ಲ, ಪವಿತ್ರಾತ್ಮವರವು ಉಂಟೆಂಬುದನ್ನೇ ನಾವು ಕೇಳಿಲ್ಲ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನೀವು ವಿಶ್ವಾಸಿಸಿದಾಗ ಪವಿತ್ರಾತ್ಮ ಅವರನ್ನು ಪಡೆದಿರೋ?’ ಎಂದು ಕೇಳಿದನು. ಅದಕ್ಕೆ ಅವರು, “ಪವಿತ್ರಾತ್ಮ ಎಂಬವರು ಇದ್ದಾರೆಂದು ನಾವು ಕೇಳಿಯೇ ಇಲ್ಲ,” ಎಂದು ಉತ್ತರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀವು ನಂಬಿದಾಗ ಪವಿತ್ರಾತ್ಮವರವನ್ನು ಹೊಂದಿದಿರೋ ಎಂದು ಅವರನ್ನು ಕೇಳಲು ಅವರು ಅವನಿಗೆ - ಇಲ್ಲ, ಪವಿತ್ರಾತ್ಮವರವು ಉಂಟೆಂಬದನ್ನೇ ನಾವು ಕೇಳಲಿಲ್ಲ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ನೀವು ವಿಶ್ವಾಸವನ್ನಿಟ್ಟಾಗ ಪವಿತ್ರಾತ್ಮರನ್ನು ಪಡೆದುಕೊಂಡಿರೋ?” ಎಂದು ಪ್ರಶ್ನೆ ಮಾಡಿದನು. ಅದಕ್ಕೆ ಅವರು, “ಇಲ್ಲ, ಪವಿತ್ರಾತ್ಮ ಇದ್ದಾರೆಂಬುದನ್ನು ನಾವು ಕೇಳಿಯೇ ಇಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತುಮಿ ವಿಶ್ವಾಸ್ ಕರಲ್ಲ್ಯಾ ತನ್ನಾ ಪವಿತ್ರ್ ಆತ್ಮ್ಯಾಕ್ ಘೆಟ್ಲ್ಯಾಶಿ ಕಾಯ್? ಮನುನ್ ಇಚಾರ್ತಾನಾ ತೆನಿ “ನಾ ಅಮಿ ಪವಿತ್ರ್ ಆತ್ಮ್ಯಾಚ್ಯಾ ವಿಶಯಾತ್ ಅಜುನ್ ಪತರ್ ಆಯ್ಕುಕ್ ನಾತ್!” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 19:2
12 ತಿಳಿವುಗಳ ಹೋಲಿಕೆ  

ದೇವರು ಪವಿತ್ರಾತ್ಮನನ್ನು ಕೊಡುವುದು ನೀವು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲೋ? ದೇವರು ಮಹತ್ಕಾರ್ಯಗಳನ್ನು ಮಾಡುವುದು ನೀವು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲೋ? ಇಲ್ಲ! ಸುವಾರ್ತೆಯನ್ನು ಕೇಳಿ ಅದನ್ನು ನಂಬಿಕೊಂಡದ್ದರಿಂದ ದೇವರು ನಿಮಗೆ ಪವಿತ್ರಾತ್ಮನನ್ನು ಕೊಡುತ್ತಾನೆ ಮತ್ತು ಮಹತ್ಕಾರ್ಯಗಳನ್ನು ಮಾಡುತ್ತಾನೆ.


ನಿಮ್ಮ ದೇಹವು ಪವಿತ್ರಾತ್ಮನಿಗೆ ಆಲಯವಾಗಿದೆ ಎಂಬುದು ನಿಮಗೆ ಗೊತ್ತಿದೆ. ಆತನು ನಿಮ್ಮೊಳಗಿದ್ದಾನೆ. ನೀವು ದೇವರಿಂದ ಆತನನ್ನು ಹೊಂದಿಕೊಂಡಿರಿ. ನೀವು ನಿಮ್ಮ ಸ್ವಂತ ಸ್ವತ್ತುಗಳಲ್ಲ.


ಯೇಸು ತನ್ನನ್ನು ನಂಬಿದವರು ಹೊಂದಲಿರುವ ಪವಿತ್ರಾತ್ಮನನ್ನು ಕುರಿತು ಹೇಳಿದನು. ಆತನು ಇನ್ನೂ ತನ್ನ ಮಹಿಮೆಯನ್ನು ಹೊಂದಿಲ್ಲದಿದ್ದ ಕಾರಣ ಪವಿತ್ರಾತ್ಮನು ಇನ್ನೂ ಬಂದಿರಲಿಲ್ಲ.


ಇದನ್ನು ಕೇಳಿದಾಗ ಆ ಶಿಷ್ಯರು ಪ್ರಭುವಾದ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡರು.


ಪೇತ್ರನು ಇನ್ನೂ ಹೀಗೆ ಹೇಳುತ್ತಿರುವಾಗಲೇ, ಅವನ ಉಪದೇಶವನ್ನು ಕೇಳುತ್ತಿದ್ದವರ ಮೇಲೆ ಪವಿತ್ರಾತ್ಮನು ಇಳಿದು ಬಂದನು.


‘ದೇವರು ಹೀಗೆನ್ನುತ್ತಾನೆ: ಕೊನೆಯ ದಿನಗಳಲ್ಲಿ, ನಾನು ನನ್ನ ಆತ್ಮವನ್ನು ಎಲ್ಲಾ ಜನರ ಮೇಲೆ ಸುರಿಸುವೆನು. ನಿಮ್ಮ ಗಂಡುಮಕ್ಕಳು, ಹೆಣ್ಣುಮಕ್ಕಳು ಪ್ರವಾದಿಸುವರು. ನಿಮ್ಮ ಯುವಜನರು ದರ್ಶನಗಳನ್ನು ಕಾಣುವರು. ನಿಮ್ಮ ವಯೋವೃದ್ಧರು ವಿಶೇಷ ಕನಸುಗಳನ್ನು ಕಾಣುವರು.


ಆ ವರೆಗೂ ಸಮುವೇಲನಿಗೆ ಯೆಹೋವನ ಅನುಭವವಿರಲಿಲ್ಲ; ಯೆಹೋವನು ಅವನೊಂದಿಗೆ ನೇರವಾಗಿ ಮಾತಾಡಿರಲಿಲ್ಲ.


ನಾನು ನಿಮ್ಮನ್ನು ನೋಡಲು, ನಿಮ್ಮನ್ನು ಬಲಗೊಳಿಸಲು, ನಿಮಗೆ ಆತ್ಮಿಕ ಉಡುಗೊರೆಯನ್ನು ಕೊಡಲು ಅತ್ಯಾಸಕ್ತಿ ಉಳ್ಳವನಾಗಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು